ಹೊಸ ಸುರಕ್ಷಾ ಸೌಲಭ್ಯಗಳನ್ನು ಹೊಂದಿರುವ 2022ರ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಬಿಡುಗಡೆ

ದೇಶಿಯ ಮಾರುಕಟ್ಟೆಯಲ್ಲಿನ ಪ್ರಯಾಣಿಕರ ಕಾರು ಮಾರಾಟ ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಮಾರುತಿ ಸುಜುಕಿ ಕಂಪನಿಯು ತನ್ನ ಪ್ರಮುಖ ಕಾರುಗಳ 2022ರ ಮಾದರಿಗಳನ್ನು ಬಿಡುಗಡೆ ಮಾಡಿದ್ದು, ಇದೀಗ ಕಂಪನಿಯು ಎಸ್-ಪ್ರೆಸ್ಸೊ ಹೊಸ ಆವೃತ್ತಿಯನ್ನು ಬಿಡುಗಡೆ ಮಾಡಿದೆ.

ಹೊಸ ಸುರಕ್ಷಾ ಸೌಲಭ್ಯಗಳನ್ನು ಹೊಂದಿರುವ 2022ರ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಬಿಡುಗಡೆ

ಹೊಸ ಎಸ್-ಪ್ರೆಸ್ಸೊ ಮಾದರಿಯು ಪ್ರಮುಖ ಆರು ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.25 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 5.99 ಲಕ್ಷ ಬೆಲೆ ಹೊಂದಿದ್ದು, ಹೊಸ ಮಾದರಿಯು ಈ ಬಾರಿ ಹಲವಾರು ಹೊಸ ಫೀಚರ್ಸ್ ಸೇರಿದಂತೆ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಪಡೆದುಕೊಂಡಿದೆ.

ಹೊಸ ಸುರಕ್ಷಾ ಸೌಲಭ್ಯಗಳನ್ನು ಹೊಂದಿರುವ 2022ರ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಬಿಡುಗಡೆ

ಕೈಗೆಟುಕುವ ಬೆಲೆಯೊಂದಿಗೆ ಎಂಟ್ರಿ ಲೆವಲ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಹೊಂದಿರುವ ಎಸ್-ಪ್ರೆಸ್ಸೊ ಮಾದರಿಯು ಎಸ್‌ಯುವಿ ವೈಶಿಷ್ಟ್ಯತೆಯೊಂದಿಗೆ ಹ್ಯಾಚ್‌ಬ್ಯಾಕ್ ಮಾದರಿಗಳಿಂತಲೂ ವಿಭಿನ್ನವಾದ ವಿನ್ಯಾಸ ಹೊಂದಿದ್ದು, ಇದೀಗ ಹೊಸ ಮಾದರಿಯೊಂದಿಗೆ ಕಂಪನಿಯು ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಿದೆ.

ಹೊಸ ಸುರಕ್ಷಾ ಸೌಲಭ್ಯಗಳನ್ನು ಹೊಂದಿರುವ 2022ರ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಬಿಡುಗಡೆ

ಹಾರ್ಟ್‌ಟೆಕ್ ಪ್ಲ್ಯಾಟ್‌ಫಾರ್ಮ್ ಅಡಿ ನಿರ್ಮಾಣಗೊಂಡಿರುವ ಹೊಸಕಾರು ಮಾದರಿಯು ಈ ಬಾರಿ ಹೊಸ ತಲೆಮಾರಿನ ವೈಶಿಷ್ಟ್ಯತೆಯ ಕೆ10ಸಿ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, ಇದು ಐಡಲ್ ಸ್ಟಾರ್ಟ್/ಸ್ಟಾಪ್ ಸೌಲಭ್ಯದೊಂದಿಗೆ ಹೆಚ್ಚಿನ ಮಟ್ಟದ ಇಂಧನ ದಕ್ಷತೆಯನ್ನು ಖಾತ್ರಿಪಡಿಸುತ್ತದೆ.

ಹೊಸ ಸುರಕ್ಷಾ ಸೌಲಭ್ಯಗಳನ್ನು ಹೊಂದಿರುವ 2022ರ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಬಿಡುಗಡೆ

ಐಡಲ್ ಸ್ಟಾರ್ಟ್/ಸ್ಟಾಪ್ ಸೌಲಭ್ಯವು ಟ್ರಾಫಿಕ್ ದಟ್ಟಣೆಯಲ್ಲಿ ಕಾರು ನಿಲುಗಡೆ ಸಂದರ್ಭದಲ್ಲಿ 30 ಸೆಕೆಂಡುಗಳಿಗೂ ಹೆಚ್ಚು ಕಾಲ ಕಾರು ನಿಲುಗಡೆ ಮಾಡಿದ್ದಲ್ಲಿ ಎಂಜಿನ್ ಅನ್ನು ಆಟೋಮ್ಯಾಟಿಕ್ ಆಗಿ ನಿಷ್ಕ್ರಿಯಗೊಳಿಸುವ ಮೂಲಕ ಇಂಧನ ವ್ಯರ್ಥವಾಗುವುದನ್ನು ತಡೆಯುತ್ತದೆ.

ಹೊಸ ಸುರಕ್ಷಾ ಸೌಲಭ್ಯಗಳನ್ನು ಹೊಂದಿರುವ 2022ರ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಬಿಡುಗಡೆ

ಈ ಮೂಲಕ ಹೊಸ ಕಾರು ಮಾದರಿಯು ಬೆಸ್ಟ್ ಇನ್ ಸೆಗ್ಮೆಂಟ್ ಮೈಲೇಜ್ ಖಾತ್ರಿಪಡಿಸಲಿದ್ದು, ಮ್ಯಾನುವಲ್ ಮತ್ತು ಎಜಿಎಸ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಇದು ಪ್ರತಿ ಲೀಟರ್‌ಗೆ 25.3 ಕಿ.ಮೀ ಮೈಲೇಜ್ ನೀಡುತ್ತದೆ.

ಹೊಸ ಸುರಕ್ಷಾ ಸೌಲಭ್ಯಗಳನ್ನು ಹೊಂದಿರುವ 2022ರ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಬಿಡುಗಡೆ

ಹಾಗೆಯೇ ಹೊಸ ಕಾರಿನಲ್ಲಿರುವ ಹೊಸ ತಾಂತ್ರಿಕ ಸೌಲಭ್ಯಗಳು ಗಮನಸೆಳೆಯಲಿದ್ದು, ಹೊಸ ಕಾರಿನ ಮುಂಭಾಗದಲ್ಲಿರುವ ಟ್ವಿನ್ ಚೆಂಬರ್ ಹೆಡ್‌ಲ್ಯಾಂಪ್, ಸ್ಪೋಟಿಯಾಗಿರುವ ಫ್ರಂಟ್ ಫಾಸಿಯಾ ಆಕರ್ಷಕವಾಗಿವೆ.

ಹೊಸ ಸುರಕ್ಷಾ ಸೌಲಭ್ಯಗಳನ್ನು ಹೊಂದಿರುವ 2022ರ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಬಿಡುಗಡೆ

ಹೊರಭಾಗದಲ್ಲಿನ ಬದಲಾವಣೆ ಜೊತೆಗೆ ಕಾರಿನ ಒಳಭಾಗದಲ್ಲೂ ಕೆಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ನೀಡಲಾಗಿದ್ದು, ಡೈನಾಮಿಕ್ ಸೆಂಟರ್ ಕನ್ಸೊಲ್ ಜೊತೆ ಸ್ಮಾರ್ಟ್ ಪ್ಲೇ ಬೋರ್ಡ್ ನೀಡಲಾಗಿದೆ. ಜೊತೆಗೆ ಹೊಸ ಕಾರಿನಲ್ಲಿ ಈ ಬಾರಿ ಎಲೆಕ್ಟ್ರಿಕ್ ಅಡ್ಜೆಸ್ಟ್ ಹೊಂದಿರುವ ರಿಯಲ್ ವ್ಯೂ ಮಿರರ್, ಸ್ಟಿರಿಂಗ್ ಮೌಂಟೆಡ್ ಆಡಿಯೋ ಮತ್ತು ವಾಯ್ಸ್ ಕನ್ಸೊಲ್ ನೀಡಲಾಗಿದ್ದು, ಹಿಂಬದಿಯ ಸವಾರರಿಗೆ ಅರಾಮದಾಯಕ ಪ್ರಯಾಣಕ್ಕಾಗಿ ಉತ್ತಮವಾದ ಲೆಗ್‌ರೂಂ ಜೊತೆಗೆ ಹೆಚ್ಚಿನ ಲಗೇಜ್ ತುಂಬಲು ವಿಸ್ತರಿತ ಬೂಟ್ ಸ್ಪೆಸ್ ನೀಡಿದೆ.

ಹೊಸ ಸುರಕ್ಷಾ ಸೌಲಭ್ಯಗಳನ್ನು ಹೊಂದಿರುವ 2022ರ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಬಿಡುಗಡೆ

ಇನ್ನು ಹೊಸ ಕಾರಿನಲ್ಲಿ ಮಾರುತಿ ಸುಜುಕಿ ಕಂಪನಿಯು 11ಕ್ಕೂ ಹೆಚ್ಚು ಸುರಕ್ಷಾ ಸೌಲಭ್ಯಗಳನ್ನು ಜೋಡಣೆ ಮಾಡಿದ್ದು, ಎಸ್-ಪ್ರೆಸ್ಸೊ ಖರೀದಿದಾರರಿಗೆ ಈ ಬಾರಿ ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್ ಸೇರಿದಂತೆ ಹಲವು ಹೊಸ ಸುರಕ್ಷಾ ಸೌಲಭ್ಯಗಳನ್ನು ನೀಡಿದೆ.

ಹೊಸ ಸುರಕ್ಷಾ ಸೌಲಭ್ಯಗಳನ್ನು ಹೊಂದಿರುವ 2022ರ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಬಿಡುಗಡೆ

ಭಾರತದಲ್ಲಿ ಕಾರುಗಳ ಸುರಕ್ಷತೆಗೆ ಸಂಬಂಧಿಸಿದಂತೆ ಭಾರತ ಸರ್ಕಾರವು ಹಲವು ಹೊಸ ಮಾನದಂಡಗಳನ್ನು ಕಡ್ಡಾಯಗೊಳಿಸುತ್ತಿರುವುದರಿಂದ ಮಾರುತಿ ಸುಜುಕಿ ಕಂಪನಿಯು ತನ್ನ ಹೊಸ ಮಾದರಿಗಳಲ್ಲಿ ಇದೀಗ ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್ ನೀಡುತ್ತಿದ್ದು, ಕೆಲವು ಕಡ್ಡಾಯ ಸುರಕ್ಷಾ ಸೌಲಭ್ಯಗಳ ಪರಿಣಾಮ ಕಾರುಗಳ ಬೆಲೆ ಕೂಡಾ ಸಾಕಷ್ಟು ಹೆಚ್ಚಳವಾಗಿರುವುದು ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಬಿಳುತ್ತಿದೆ.

ಹೊಸ ಸುರಕ್ಷಾ ಸೌಲಭ್ಯಗಳನ್ನು ಹೊಂದಿರುವ 2022ರ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಬಿಡುಗಡೆ

ಮಾರುತಿ ಸುಜುಕಿ ಕಂಪನಿಯು ಬಜೆಟ್ ಬೆಲೆಯ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದ್ದರೂ ಇತ್ತೀಚೆಗೆ ಕಂಪನಿಯು ಸುರಕ್ಷಾ ಸೌಲಭ್ಯಗಳ ವಿಚಾರವಾಗಿ ಟೀಕೆಗಳಿಗೆ ಒಳಾಗಿತ್ತು. ಹೀಗಾಗಿ ಕಂಪನಿಯು ಹೊಸ ಕಾರು ಉತ್ಪಾದನೆಯಲ್ಲಿ ಪ್ರಮುಖ ಬದಲಾವಣೆಗಳೊಂದಿಗೆ 2022ರ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದೆ.

ಹೊಸ ಸುರಕ್ಷಾ ಸೌಲಭ್ಯಗಳನ್ನು ಹೊಂದಿರುವ 2022ರ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಬಿಡುಗಡೆ

2022ರ ಮಾರುತಿ ಸುಜುಕಿ ಪ್ರಮುಖ ಕಾರುಗಳಲ್ಲಿ ಎಸ್-ಪ್ರೆಸ್ಸೊ ಕೂಡಾ ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆಗೆ ಪ್ರವೇಶಿಸಿದ್ದು, ಹೊಸ ಸುರಕ್ಷಾ ಸೌಲಭ್ಯಗಳು ಗ್ರಾಹಕರ ಆಯ್ಕೆ ಮೌಲ್ಯವನ್ನು ಹೆಚ್ಚಿಸಲಿವೆ.

Most Read Articles

Kannada
English summary
New maruti s presso launched in india details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X