Just In
Don't Miss!
- News
ಪಲ್ಲವಿ ಡೇ ಬಳಿಕ ಮತ್ತೊಬ್ಬ ಯುವ ರೂಪದರ್ಶಿ ಆತ್ಮಹತ್ಯೆ
- Sports
ಮಹಿಳಾ ಟಿ20 ಚಾಲೆಂಜ್: ವೆಲಾಸಿಟಿ ವಿರುದ್ಧ ಗೆದ್ದ ಟ್ರೈಲ್ಬ್ಲೇಜರ್ಸ್, ಆದ್ರೂ ಫೈನಲ್ ಮಿಸ್
- Finance
ಮೇ 26ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
ಬಾಲಕೃಷ್ಣ 107ನೇ ಸಿನಿಮಾದ ಟೈಟಲ್ 'ಜೈ ಬಾಲಯ್ಯ'
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಬಿಡುಗಡೆ! ವಿಶೇಷತೆ ಏನು?
- Lifestyle
ಕಿಚನ್ ಟಿಪ್ಸ್: ಫ್ರಿಡ್ಜ್ನಲ್ಲಿ ಆಹಾರಗಳನ್ನು ಹೀಗೆ ಇಟ್ಟರೆ ಆರೋಗ್ಯಕ್ಕೆ ಕುತ್ತು ಎಚ್ಚರ..!
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅತ್ಯಧಿಕ ಮೈಲೇಜ್ ಜೊತೆ ಪ್ರೀಮಿಯಂ ಫೀಚರ್ಸ್ ಹೊಂದಿರುವ 2022ರ ಬಲೆನೊ ರಿವ್ಯೂ ವಿಡಿಯೋ
ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾರಾಟ ವಿಭಾಗದಲ್ಲಿ ಅಗ್ರಸ್ಥಾನ ಹೊಂದಿರುವ ಮಾರುತಿ ಸುಜುಕಿ ಬಲೆನೊ ಮಾದರಿಯು ಇದೀಗ 2022ರ ಆವೃತ್ತಿಯೊಂದಿಗೆ ಮತ್ತಷ್ಟು ಹೊಸ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಈ ಹಿಂದಿನ ಮಾದರಿಗಿಂತಲೂ ಹೆಚ್ಚು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಬಲೆನೊ ಕುರಿತಾಗಿ ಈ ರಿವ್ಯೂ ವಿಡಿಯೋದಲ್ಲಿ ಸಂಪೂರ್ಣ ಮಾಹಿತಿ ಹಂಚಿಕೊಳ್ಳಲಾಗಿದೆ.
2015ರಲ್ಲಿ ಮೊದಲ ಬಾರಿಗೆ ಬಿಡುಗಡೆಯಾದ ನಂತರ ಇದುವರೆಗೆ ಹಲವಾರು ಬದಲಾವಣೆಗಳೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿಯಲ್ಲಿರುವ ಹೊಸ ಕಾರು ಇದುವರೆಗೆ ಬರೋಬ್ಬರಿ 9 ಲಕ್ಷ ಯುನಿಟ್ ಮಾರಾಟ ದಾಖಲೆ ಹೊಂದಿದ್ದು, ಇದೀಗ 2022ರ ಮಾದರಿಯು ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಗೊಂಡಿರುವುದು ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.
ಹೊಸ ಬಲೆನೊ ಹ್ಯಾಚ್‌ಬ್ಯಾಕ್ ಕಾರು ಮಾದರಿಯು ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.35 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.49 ಲಕ್ಷ ಬೆಲೆ ಹೊಂದಿದ್ದು, ಸಿಗ್ಮಾ, ಡೆಲ್ಟಾ, ಜೆಟಾ ಮತ್ತು ಅಲ್ಫಾ ಎಂಬ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.
ಹೊಸ ಕಾರಿನಲ್ಲಿ ಈ ಹಿಂದಿನಂತೆಯೇ 1.2 ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದರೂ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನವನ್ನು ಕೈಬಿಡಲಾಗಿದ್ದು,ಹೊಸ ಕಾರಿನಲ್ಲಿ ಮಾರುತಿ ಸುಜುಕಿಯು ಈ ಬಾರಿ ಹಿಂದಿನ ಮಾದರಿಯಲ್ಲಿನ 4 ಸ್ಪೀಡ್ ಆಟೋ ಕನ್ವರ್ಟ್ ಗೇರ್‌ಬಾಕ್ಸ್ ಬದಲಾಗಿ 5-ಸ್ಪೀಡ್ ಆಟೋಮ್ಯಾಟಿಕ್ ಸಿವಿಟಿ ಗೇರ್‌ಬಾಕ್ಸ್ ಮತ್ತು 5 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ನೀಡಿದೆ.
ಹೊಸ ಕಾರು ಪ್ರತಿ ಲೀಟರ್ ಪೆಟ್ರೋಲ್‌ಗೆ 22.35 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಇದರ ಜೊತೆಗೆ ಹೊಸದಾಗಿ ಹೊಸ ಸಸ್ಷೆಷನ್ ಸೆಟಪ್‌ನೊಂದಿಗೆ ಹೈ ಎಂಡ್ ಮಾದರಿಯಲ್ಲಿ 14 ಇಂಚಿನ ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಜೋಡಿಸಿದೆ.
ಇದಲ್ಲದೆ ಹೊಸ ಹ್ಯಾಚ್‌ಬ್ಯಾಕ್ ಮಾದರಿಯಲ್ಲಿ ಮಾರುತಿ ಸುಜುಕಿಯು ಈ ಬಾರಿ ಹೆಚ್ಚಿನ ಸುರಕ್ಷತೆಗೆ ಒತ್ತು ನೀಡಿದ್ದು, ಹೊಸ ಸುರಕ್ಷತಾ ವೈಶಿಷ್ಟ್ಯಗಳಲ್ಲಿ 6 ಏರ್‌ಬ್ಯಾಗ್, ಹಿಲ್ ಹೋಲ್ಡ್ ಅಸಿಸ್ಟ್, ಕ್ರೂಸ್ ಕಂಟ್ರೋಲ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಎಬಿಎಸ್, ಕೀ ಲೆಸ್ ಎಂಟ್ರಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಇಎಸ್‌ಪಿ ಮತ್ತು ಇಬಿಡಿ ಸಹ ಸೇರ್ಪಡೆಯಾಗಲಿದ್ದು, ಸುಜುಕಿ ಕಾರ್ ಕನೆಕ್ಟ್ ತಂತ್ರಜ್ಞಾನದಲ್ಲೂ ಸಹ ಸುಧಾರಿತ ವೈಶಿಷ್ಟ್ಯತೆಗಳನ್ನು ಸೇರ್ಪಡೆಗೊಳಿಸಿದೆ.
ಹೊಸ ಕಾರು ಪರ್ಲ್ ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರಾಂಡ್ಯೂರ್ ಗ್ರೇ, ಸೆಲೆಸ್ಟಿಯಲ್ ಬ್ಲೂ, ಓಪ್ಯುಲೆಂಟ್ ರೆಡ್ ಮತ್ತು ಲಕ್ಸ್ ಬೀಜ್ ಎನ್ನುವ ಆರು ಬಣ್ಣಗಳ ಆಯ್ಕೆ ಹೊಂದಿದ್ದು, ಮಾರುತಿ ಸುಜುಕಿ ಕಂಪನಿಯು ಈ ಬಾರಿ ಹೊಸ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಲ್ಲಿ ಹೆಚ್ಚಿನ ಸುರಕ್ಷತೆಗೆ ಒತ್ತು ನೀಡಿರುವ ಮಹತ್ವದ ಬದಲಾಣೆಯಾಗಿದೆ.