India
YouTube

ಹೊಸ ಮಾರುತಿ ಸುಜುಕಿ ಬ್ರೆಝಾ ಕಾರಿನ ವೆರಿಯೆಂಟ್ ಮತ್ತು ಫೀಚರ್ಸ್ ಮಾಹಿತಿ ಬಹಿರಂಗ

ಮಾರುತಿ ಸುಜುಕಿ ಬಹುನೀರಿಕ್ಷಿತ ಹೊಸ ತಲೆಮಾರಿನ ಬ್ರೆಝಾ ಕಾರು ಇದೇ ತಿಂಗಳು 30ರಂದು ಬಿಡುಗಡೆಯಾಗಲಿದ್ದು, ಹೊಸ ಕಾರು ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿರಲಿದೆ.

ಹೊಸ ಮಾರುತಿ ಸುಜುಕಿ ಬ್ರೆಝಾ ಕಾರಿನ ವೆರಿಯೆಂಟ್ ಮತ್ತು ಫೀಚರ್ಸ್ ಮಾಹಿತಿ ಬಹಿರಂಗ

2022ರ ಬ್ರೆಝಾ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌‌ಯುವಿ ಖರೀದಿಗಾಗಿ ಮಾರುತಿ ಸುಜುಕಿ ಕಂಪನಿಯು ಈಗಾಗಲೇ ಬುಕಿಂಗ್ ಕೂಡಾ ಆರಂಭಿಸಿದ್ದು, ಹೊಸ ಕಾರು ಮಾದರಿಯು ಈ ಹಿಂದಿನ ಮಾದರಿಯಲ್ಲಿ ವಿಟಾರಾ ಬ್ರೆಝಾ ಬ್ಯಾಡ್ಜ್ ಬದಲಾಗಿ ಇದೀಗ ಕೇವಲ ಬ್ರೆಝಾ ಬ್ಯಾಡ್ಜ್ ಮಾತ್ರ ಪಡೆದುಕೊಂಡಿದೆ. ವಿಟಾರಾ ಬ್ಯಾಡ್ಜ್ ತೆಗೆದುಹಾಕಿರುವ ಕುರಿತಾಗಿ ಯಾವುದೇ ಸ್ಪಷ್ಟ ಮಾಹಿತಿ ಇಲ್ಲವಾದರೂ ಕಂಪನಿಯು ಮುಂಬರುವ ಹೊಸ ಕಾರು ಮಾದರಿಗಾಗಿ ವಿಟಾರಾ ಬ್ಯಾಡ್ಜ್ ಬಳಕೆ ಮಾಡಬಹುದಾಗಿದೆ.

ಹೊಸ ಮಾರುತಿ ಸುಜುಕಿ ಬ್ರೆಝಾ ಕಾರಿನ ವೆರಿಯೆಂಟ್ ಮತ್ತು ಫೀಚರ್ಸ್ ಮಾಹಿತಿ ಬಹಿರಂಗ

ಸದ್ಯ ಹೊಸ ಮಾದರಿಯನ್ನು ಬ್ರೆಝಾ ಹೆಸರಿನಲ್ಲಿ ಮಾರಾಟ ಮಾಡಲು ನಿರ್ಧರಿಸಿದ್ದು, ಹೊಸ ಕಾರು ಮಾದರಿಯು ಎಂಜಿನ್ ಮತ್ತು ಗೇರ್‌ಬಾಕ್ಸ್ ಆಯ್ಕೆಗೆ ಅನುಗುಣವಾಗಿ ಎಲ್ಎಕ್ಸ್ಐ, ವಿಎಕ್ಸ್ಐ, ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ಪ್ಲಸ್ ವೆರಿಯೆಂಟ್‌ಗಳನ್ನು ಹೊಂದಿಲಿದೆ.

ಹೊಸ ಮಾರುತಿ ಸುಜುಕಿ ಬ್ರೆಝಾ ಕಾರಿನ ವೆರಿಯೆಂಟ್ ಮತ್ತು ಫೀಚರ್ಸ್ ಮಾಹಿತಿ ಬಹಿರಂಗ

ಲಭ್ಯವಿರುವ ಮಾಹಿತಿಗಳ ಪ್ರಕಾರ ಹೊಸ ಕಾರಿನಲ್ಲಿ ಕಂಪನಿಯು ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.5-ಲೀಟರ್ ಕೆ15ಸಿ ಪೆಟ್ರೋಲ್ ಎಂಜಿನ್‌ ಆಯ್ಕೆ ನೀಡುತ್ತಿದ್ದು, ಎಲ್ಎಕ್ಸ್ಐ ವೆರಿಯೆಂಟ್‌ನಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೋಡಣೆ ಮಾಡಿದ್ದರೆ ಇನ್ನುಳಿದ ಎಲ್ಲಾ ವೆರಿಯೆಂಟ್‌ಗಳಲ್ಲೂ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳಿವೆ.

ಹೊಸ ಮಾರುತಿ ಸುಜುಕಿ ಬ್ರೆಝಾ ಕಾರಿನ ವೆರಿಯೆಂಟ್ ಮತ್ತು ಫೀಚರ್ಸ್ ಮಾಹಿತಿ ಬಹಿರಂಗ

ಹೊಸ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.5-ಲೀಟರ್ ಕೆ15ಸಿ ಪೆಟ್ರೋಲ್ ಎಂಜಿನ್‌ ಅನ್ನು ಮಾರುತಿ ಸುಜುಕಿ ಕಂಪನಿಯು ಈಗಾಗಲೇ 2022ರ ಎರ್ಟಿಗಾ ಮತ್ತು ಎಕ್ಸ್‌ಎಲ್6 ಮಾದರಿಗಳಲ್ಲೂ ಅಳವಡಿಸಿದ್ದು, ಇದೀಗ ಹೊಸ ಎಂಜಿನ್ ಆಯ್ಕೆಯು ಬ್ರೆಝಾ ಮಾದರಿಯಲ್ಲೂ ಅಳವಡಿಸಲಾಗುತ್ತಿದೆ.

ಹೊಸ ಮಾರುತಿ ಸುಜುಕಿ ಬ್ರೆಝಾ ಕಾರಿನ ವೆರಿಯೆಂಟ್ ಮತ್ತು ಫೀಚರ್ಸ್ ಮಾಹಿತಿ ಬಹಿರಂಗ

ಡ್ಯುಯಲ್ ಜೆಟ್ ವಿವಿಟಿ ಟೆಕ್ನಾಲಜಿ ಪ್ರೇರಣೆ ಹೊಂದಿರುವ ಹೊಸ 1.5-ಲೀಟರ್ ಕೆ15ಸಿ ಪೆಟ್ರೋಲ್ ಎಂಜಿನ್‌ ಮಾದರಿಯು 101.6 ಬಿಎಚ್‌ಪಿ ಮತ್ತು 136.8 ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಇದು ಉತ್ತಮ ಎಂಜಿನ್ ಕಾರ್ಯಕ್ಷಮತೆಯೊಂದಿಗೆ ಇಂಧನ ದಕ್ಷತೆಯಲ್ಲೂ ಗಮನಸೆಳೆಯುತ್ತದೆ.

ಹೊಸ ಮಾರುತಿ ಸುಜುಕಿ ಬ್ರೆಝಾ ಕಾರಿನ ವೆರಿಯೆಂಟ್ ಮತ್ತು ಫೀಚರ್ಸ್ ಮಾಹಿತಿ ಬಹಿರಂಗ

ಇದರೊಂದಿಗೆ ಕಂಪನಿಯು ಹೊಸ ತಲೆಮಾರಿನ ಆವೃತ್ತಿಯಲ್ಲಿ ಪೆಟ್ರೋಲ್ ಎಂಜಿನ್‌ನೊಂದಿಗೆ ಸಿಎನ್‌ಜಿ ಮಾದರಿಯನ್ನು ಪರಿಚಯಿಸುವ ಸಾಧ್ಯತೆಗಳಿದ್ದು, ಸದ್ಯಕ್ಕೆ ಪೆಟ್ರೋಲ್ ಎಂಜಿನ್ ಮಾದರಿಯನ್ನು ಮಾತ್ರ ಬಿಡುಗಡೆಗೊಳಿಸಿ ಕೆಲವು ತಿಂಗಳು ನಂತರ ಸಿಎನ್‌ಜಿ ಮಾದರಿಯನ್ನು ಬಿಡುಗಡೆ ಮಾಡಬಹುದಾಗಿದೆ.

ಹೊಸ ಮಾರುತಿ ಸುಜುಕಿ ಬ್ರೆಝಾ ಕಾರಿನ ವೆರಿಯೆಂಟ್ ಮತ್ತು ಫೀಚರ್ಸ್ ಮಾಹಿತಿ ಬಹಿರಂಗ

ಇನ್ನು ಹೊಸ ಕಾರು ಈ ಮಾದರಿಯಲ್ಲಿದ್ದ ಬಣ್ಣಗಳ ಜೊತೆಗೆ ಕೆಲವು ಹೊಸ ಬಣ್ಣದ ಆಯ್ಕೆ ಪಡೆದುಕೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ 6 ಸಿಂಗಲ್ ಟೋನ್(ಪರ್ಲ್ ಆರ್ಟಿಕ್ ವೈಟ್, ಪರ್ಲ್ ಸಿಲ್ವರ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಸಿಜ್ಲಿಂಗ್ ರೆಡ್, ಎಕ್ಸೂಬೆರೆಂಟ್ ಬ್ಲ್ಯೂ, ಪರ್ಲ್ ಬ್ರೇವ್ ಕಾಕಿ) ಮತ್ತು 3 ಡ್ಯುಯಲ್ ಟೋನ್ ಬಣ್ಣದ(ಸಿಜ್ಲಿಂಗ್ ರೆಡ್ ಮತ್ತು ಬ್ಲ್ಯಾಕ್, ವೈಟ್ ಮತ್ತು ಕಾಕಿ ಬ್ರೇವ್, ಬ್ಲ್ಯಾಕ್ ಮತ್ತು ಸಿಲ್ವರ್) ಆಯ್ಕೆ ನೀಡಲಾಗಿದೆ.

ಹೊಸ ಮಾರುತಿ ಸುಜುಕಿ ಬ್ರೆಝಾ ಕಾರಿನ ವೆರಿಯೆಂಟ್ ಮತ್ತು ಫೀಚರ್ಸ್ ಮಾಹಿತಿ ಬಹಿರಂಗ

ಹಾಗೆಯೇ ಹೊಸ ಕಾರಿನಲ್ಲಿ ನವೀಕರಣಗೊಳಿಸಲಾದ ಎಂಜಿನ್ ಉನ್ನತೀಕರಣ ಸೇರಿದಂತೆ ಬದಲಾದ ಮುಂಭಾಗದ ವಿನ್ಯಾಸದೊಂದಿಗೆ ಎಲೆಕ್ಟ್ರಿಕ್ ಸನ್‌ರೂಫ್, ಗರಿಷ್ಠ ಸುರಕ್ಷತೆಗಾಗಿ ಹೈ ಎಂಡ್ ಮಾದರಿಗಳಲ್ಲಿ 6 ಏರ್‌ಬ್ಯಾಗ್ ಜೋಡಣೆ ಹೊಂದಿರಲಿದ್ದು, ಹೊಸ ಕಾರು ಮಾರುತಿ ಸುಜುಕಿ ಕಂಪನಿಗೆ ಮತ್ತಷ್ಟು ಬೇಡಿಕೆ ತಂದುಕೊಡಲಿದೆ.

ಹೊಸ ಮಾರುತಿ ಸುಜುಕಿ ಬ್ರೆಝಾ ಕಾರಿನ ವೆರಿಯೆಂಟ್ ಮತ್ತು ಫೀಚರ್ಸ್ ಮಾಹಿತಿ ಬಹಿರಂಗ

ಜೊತೆಗೆ ಹೊಸ ಕಾರಿನಲ್ಲಿ ಪ್ಯಾಡಲ್ ಶಿಫ್ಟರ್, ಇನ್ಫೋಟೈನ್‌ಮೆಂಟ್ ಸಿಸ್ಟಮ್‌ಗಾಗಿ ದೊಡ್ಡ ಟಚ್‌ಸ್ಕ್ರೀನ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ, ಹೊಸ ಮಾದರಿಯ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ ಹೊಂದಿರಲಿದೆ.

ಹೊಸ ಮಾರುತಿ ಸುಜುಕಿ ಬ್ರೆಝಾ ಕಾರಿನ ವೆರಿಯೆಂಟ್ ಮತ್ತು ಫೀಚರ್ಸ್ ಮಾಹಿತಿ ಬಹಿರಂಗ

ಇದರಲ್ಲದೆ 2022ರ ಬ್ರೆಝಾ ಹೆಚ್ಚು ಸುಧಾರಿತ ಕನೆಕ್ಟಿವಿಟಿ ಕಾರು ತಂತ್ರಜ್ಞಾನದೊಂದಿಗೆ ಅಭಿವೃದ್ದಿಗೊಳ್ಳುತ್ತಿದ್ದು, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಕ್ಲೈಮೇಟ್ ಕಂಟ್ರೋಲ್ ಮತ್ತು ಹೆಡ್‌ಲೈಟ್ ಕಂಟ್ರೋಲ್‌ನಂತಹ ವೈಶಿಷ್ಟ್ಯತೆಗಳು ಪಡೆಯುವ ಸಾಧ್ಯತೆಗಳಿವೆ.

ಹೊಸ ಮಾರುತಿ ಸುಜುಕಿ ಬ್ರೆಝಾ ಕಾರಿನ ವೆರಿಯೆಂಟ್ ಮತ್ತು ಫೀಚರ್ಸ್ ಮಾಹಿತಿ ಬಹಿರಂಗ

ಹೊಸ ಬ್ರೆಝಾದ ಒಳಭಾಗ ಮತ್ತು 2022 ಬಲೆನೊದ ಒಳಭಾಗದ ನಡುವೆ ಸಾಕಷ್ಟು ಹೋಲಿಕೆಗಳಿದ್ದು, ಹೊಸ ವಿಟಾರಾ ಬ್ರೆಝಾದಲ್ಲಿ ಫ್ಲಾಟ್-ಬಾಟಮ್ ಸ್ಟೀರಿಂಗ್ ವ್ಹೀಲ್, ಹಿಲ್ ಹೋಲ್ಡ್, ಕ್ರೂಸ್ ಕಂಟ್ರೋಲ್ ಮುಂತಾದ ವೈಶಿಷ್ಟ್ಯತೆಗಳೊಂದಿಗೆ 4 ಸ್ಟಾರ್ ಗ್ಲೋಬರ್ ಕ್ರ್ಯಾಶ್ ಟೆಸ್ಟಿಂಗ್ ರೇಟಿಂಗ್ಸ್ ಪಡೆದುಕೊಳ್ಳುವ ನೀರಿಕ್ಷೆಯಿದೆ.

ಹೊಸ ಮಾರುತಿ ಸುಜುಕಿ ಬ್ರೆಝಾ ಕಾರಿನ ವೆರಿಯೆಂಟ್ ಮತ್ತು ಫೀಚರ್ಸ್ ಮಾಹಿತಿ ಬಹಿರಂಗ

ಬ್ರೆಝಾ ಕಾರು ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.84 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 11.49 ಲಕ್ಷ ಬೆಲೆ ಪಡೆದುಕೊಂಡಿದ್ದು, ಹೊಸ ತಲೆಮಾರಿನ ಆವೃತ್ತಿಯು ಹಲವು ಹೊಸ ಬದಲಾವಣೆಗಳೊಂದಿಗೆ ತುಸು ದುಬಾರಿಯಾಗಿರಲಿದೆ.

ಹೊಸ ಮಾರುತಿ ಸುಜುಕಿ ಬ್ರೆಝಾ ಕಾರಿನ ವೆರಿಯೆಂಟ್ ಮತ್ತು ಫೀಚರ್ಸ್ ಮಾಹಿತಿ ಬಹಿರಂಗ

ಹೊಸ ಕಾರಿನಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿದ ನಂತರವೂ ಮಾರುತಿ ಸುಜುಕಿ ಕಂಪನಿಯು ಬ್ರೆಝಾ ಖರೀದಿದಾರರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ತಲೆಮಾರಿನ ಆವೃತ್ತಿಯು ಹೊಸ ಬದಲಾವಣೆಗಳೊಂದಿಗೆ ಪ್ರತಿಸ್ಪರ್ಧಿ ಮಾದರಿಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.

Most Read Articles

Kannada
English summary
New maruti suzuki brezza variant levels engine details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X