Just In
- 14 hrs ago
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- 18 hrs ago
'ಮಹೀಂದ್ರಾ ಸ್ಕಾರ್ಪಿಯೊ ಎನ್' ಈ ರೂಪಾಂತರಗಳಿಗೆ ಬರೋಬ್ಬರಿ 2 ವರ್ಷ ಕಾಯಬೇಕು..
- 1 day ago
ಭಾರತದಲ್ಲಿ ಶೀಘ್ರ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಹೀರೋ ಮೆಸ್ಟ್ರೋ Xoom: ಹೇಗಿದೆ ಗೋತ್ತಾ?
- 1 day ago
ಟಾಟಾಗೆ ಸೆಡ್ಡು ಹೊಡೆಯಲು 6 ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ
Don't Miss!
- Sports
U-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ಬಹುಮಾನ ಘೋಷಿಸಿದ ಜಯ್ ಶಾ
- Lifestyle
ಫೆಬ್ರವರಿಯಲ್ಲಿದೆ ಈ 3 ಗ್ರಹಗಳ ಸಂಚಾರ: ಈ 4 ರಾಶಿಯವರಿಗೆ ಮಂಗಳಕರ
- Movies
2023ರಲ್ಲಿ ಮೈಸೂರಿನಲ್ಲಿ ಅತಿಹೆಚ್ಚು ಗಳಿಕೆ ಮಾಡಿದ ಚಿತ್ರಗಳಿವು; ನಂಬರ್ 1 ಪಟ್ಟ ಯಾವ ಚಿತ್ರಕ್ಕೆ?
- News
Breaking: ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡಿನ ದಾಳಿ: ಆಸ್ಪತ್ರೆಯಲ್ಲಿ ಓಡಿಶಾ ಆರೋಗ್ಯ ಸಚಿವ ಸಾವು
- Finance
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿದ ಬ್ಯಾಂಕ್ ಯೂನಿಯನ್ಸ್: ಜ.31ಕ್ಕೆ ಮಹತ್ವದ ಸಭೆ
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಭಾರತದಲ್ಲಿ ಈ ಮಾರುತಿ ಸುಜುಕಿ ಎಸ್‌ಯುವಿಗೆ ಭಾರೀ ಬೇಡಿಕೆ: 87 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್
ಜನಪ್ರಿಯ ಮತ್ತು ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತು. ಈ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.10.45 ಲಕ್ಷವಾಗಿದೆ.
ಇತ್ತೀಚೆಗೆ ಬಿಡುಗಡೆಯಾದ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು ಮಾರಾಟದಲ್ಲಿ ಕಂಪನಿಗೆ ಉತ್ತಮ ಕೊಡುಗೆಯನ್ನು ನೀಡುತ್ತಿದೆ. ಇನ್ನು ಗ್ರ್ಯಾಂಡ್ ವಿಟಾರಾ ಎಸ್‍ಯುವಿಯ ವಿತರಣೆಯನ್ನು ಇತ್ತೀಚೆಗೆ ಪ್ರಾರಂಭಿಸಿತು. ಈ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು ಒಟ್ಟು 87,953 ಬುಕ್ಕಿಂಗ್ ಗಳನ್ನು ಪಡೆದುಕೊಂಡಿದೆ. ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯ ಖರೀದಿಸಲು ಬಯಸುವ ಗ್ರಾಹಕರು ರೂ.11,000 ಮೊತ್ತವನ್ನು ಪಾವತಿಸಿ ಬುಕ್ ಮಾಡಬಹುದು. ಈ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.10.45 ಲಕ್ಷವಾಗಿದೆ.
ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು ಸುಜುಕಿ ತನ್ನ ಗ್ಲೋಬಲ್-ಸಿ ಪ್ಲಾಟ್‌ಫಾರ್ಮ್ ಅನ್ನು ಬಳಸಿಕೊಂಡು ಅಭಿವೃದ್ಧಿಪಡಿಸಿದೆ ಮತ್ತು ವಿನ್ಯಾಸಗೊಳಿಸಿದೆ. ಈ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯನ್ನು ನೆಕ್ಸಾ ಔಟ್‌ಲೆಟ್‌ಗಳ ಮೂಲಕ ಮಾತ್ರ ಮಾರಾಟ ಮಾಡಲಾಗುತ್ತಿದೆ. ಈ ಎಸ್‍ಯುವಿಯನ್ನು ಆರು ವಿಭಿನ್ನ ರೂಪಾಂತರ ಹಂತಗಳಲ್ಲಿ ನೀಡಲಾಗುತ್ತದೆ. ಈ ಹೊಸ ಎಸ್‍ಯುವಿ ಸಿಗ್ಮಾ, ಡೆಲ್ಟಾ, ಝೀಟಾ, ಝೀಟಾ+, ಆಲ್ಫಾ ಮತ್ತು ಆಲ್ಫಾ+. ಆಗಿದೆ. ಝೀಟಾ, ಝೀಟಾ+, ಆಲ್ಫಾ ಮತ್ತು ಆಲ್ಫಾ+ ರೂಪಾಂತರಗಳನ್ನು ಡ್ಯುಯಲ್-ಟೋನ್ ಬಣ್ಣ ಆಯ್ಕೆಗಳಲ್ಲಿ ಸಹ ಲಭ್ಯವಿದೆ.
ಈ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು ಎರಡು ಪವರ್‌ಟ್ರೇನ್ ಆಯ್ಕೆಗಳಲ್ಲಿ ಲಭ್ಯವಿದೆ. ಈ ಎಸ್‍ಯುವಿಯು 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ ಮತ್ತು 1.5-ಲೀಟರ್ TNGA ಪೆಟ್ರೋಲ್ ಮೋಟರ್ ಸ್ಟ್ರಾಂಗ್-ಹೈಬ್ರಿಡ್ ಸಿಸ್ಟಂ ಅನ್ನು ಒಳಗೊಂಡಿದೆ. ಇದರಲ್ಲಿ 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ 102 ಬಿಹೆಚ್‍ಪಿ ಪವರ್ ಮತ್ತು 137 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಇದರೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಯುನಿಟ್ ಅನ್ನು ಜೋಡಿಸಲಾಗಿದೆ. ಇನ್ನು ಎಡಬ್ಲ್ಯೂಡಿ ಸಿಸ್ಟಂ ಅನ್ನು ಮ್ಯಾನುವಲ್ ರೂಪಾಂತರಗಳೊಂದಿಗೆ ಮಾತ್ರ ನೀಡಲಾಗುತ್ತದೆ. ಇಂಟೆಲಿಜೆಂಟ್ ಎಲೆಕ್ಟ್ರಿಕ್ ಹೈಬ್ರಿಡ್ ಸಿಸ್ಟಮ್ ಎಂದೂ ಕರೆಯಲ್ಪಡುವ ಸ್ಟ್ರಾಂಗ್-ಹೈಬ್ರಿಡ್ ಆವೃತ್ತಿಯು ಐಸಿಇ ಯುನಿಟ್ ಮೂಲಕ ಸಂಯೋಜಿತವಾಗಿ 115 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇದನ್ನು ಇ-ಸಿವಿಟಿ ಯೊಂದಿಗೆ ಮಾತ್ರ ಜೋಡಿಸಲಾಗಿದೆ. ಈ ಪವರ್‌ಟ್ರೇನ್‌ಗಾಗಿ 27.97 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.
ಈ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು 4,345 ಎಂಎಂ ಉದ್ದ, 1,795 ಎಂಎಂ ಅಗಲ ಮತ್ತು 1,645 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್‌ಬೇಸ್ ಹೊಂದಿದೆ. ಈ 5-ಸೀಟರ್ ಎಸ್‍ಯುವಿಯು 45-ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಕ್ ಹೊಂದಿದೆ. ಈ ಎಸ್‍ಯುವಿ ಮಾದರಿಯು ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದು ಹೈರೈಡರ್‌ನೊಂದಿಗೆ ಕೆಲವು ಬಾಹ್ಯ ವಿಶೇಷಣಗಳನ್ನು ಹಂಚಿಕೊಂಡದೆ. ಹೈರೈಡರ್‌ನಿಂದ ಗ್ರಾಂಡ್ ವಿಟಾರಾ ದೊಡ್ಡ ವ್ಯತ್ಯಾಸವೆಂದರೆ ಅದರ ಮುಂಭಾಗದ ವಿನ್ಯಾಸ. ವಿದೇಶಿ ಮಾರುಕಟ್ಟೆಯಲ್ಲಿ ಮಾರಾಟವಾಗುವ ಸುಜುಕಿ ಎಸ್-ಕ್ರಾಸ್ ಮಾದರಿಗೆ ಹೋಲುತ್ತಿದೆ.
ಮಾರುತಿ ಎಸ್‍ಯುವಿಯ ಸೈಡ್ ಬಾಡಿ ಪ್ಯಾನೆಲ್‌ಗಳು, ಟೈಲ್‌ಗೇಟ್ ಮತ್ತು ಇಂಟಿಗ್ರೇಟೆಡ್ ಟೈಲ್ ಲ್ಯಾಂಪ್‌ಗಳೊಂದಿಗೆ ಹಿಂಭಾಗದ ಬಂಪರ್ ಕೂಡ ಹೈರೈಡರ್‌ಗೆ ಹೋಲುತ್ತವೆ. ಈ ಎಸ್‍ಯುವಿಯ ಸಿ-ಪಿಲ್ಲರ್‌ನಲ್ಲಿ ಕ್ರೋಮ್ ಅಪ್ಲಿಕ್, ಅಲಾಯ್ ವ್ಹೀಲ್ ನೊಂದಿಗೆ ವಿಭಿನ್ನ ವಿನ್ಯಾಸ ಮತ್ತು ಟೈಲ್‌ಗೇಟ್‌ನಲ್ಲಿ ಪೂರ್ಣ-ಅಗಲದ ಎಲ್ಇಡಿ ಲೈಟ್ ಬಾರ್ ಕೂಡ ವಿಶಿಷ್ಟವಾಗಿದೆ, ಈ ಹೊಸ ಮಾರುತಿ ಎಸ್‍ಯುವಿ ಮಾದರಿಯ ಸೈಡ್ ಬಾಡಿ ಪ್ಯಾನೆಲ್‌ಗಳು, ಟೈಲ್‌ಗೇಟ್ ಮತ್ತು ಇಂಟಿಗ್ರೇಟೆಡ್ ಟೈಲ್ ಲ್ಯಾಂಪ್‌ಗಳೊಂದಿಗೆ ಹಿಂಭಾಗದ ಬಂಪರ್ ಕೂಡ ಹೈರೈಡರ್‌ಗೆ ಹೋಲುತ್ತವೆ.
ಈ ಎಸ್‍ಯುವಿಯ ಸಿ-ಪಿಲ್ಲರ್‌ನಲ್ಲಿ ಕ್ರೋಮ್ ಅಪ್ಲಿಕ್, ಅಲಾಯ್ ವ್ಹೀಲ್ ನೊಂದಿಗೆ ವಿಭಿನ್ನ ವಿನ್ಯಾಸ ಮತ್ತು ಟೈಲ್‌ಗೇಟ್‌ನಲ್ಲಿ ಪೂರ್ಣ-ಅಗಲದ ಎಲ್ಇಡಿ ಲೈಟ್ ಬಾರ್ ಕೂಡ ವಿಶಿಷ್ಟವಾಗಿದೆ. ಈ ಎಸ್‍ಯುವಿಯ ವೈಶಿಷ್ಟ್ಯಗಳಿಗೆ ಸಂಬಂಧಿಸಿದಂತೆ, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯ ಟಾಪ್-ಸ್ಪೆಕ್ ರೂಪಾಂತರಗಳು ಪನೋರಮಿಕ್ ಸನ್‌ರೂಫ್, 360-ಡಿಗ್ರಿ ಕ್ಯಾಮೆರಾ, ವೈರ್‌ಲೆಸ್ ಚಾರ್ಜರ್, ಆಂಬಿಯೆಂಟ್ ಲೈಟಿಂಗ್, ಕನೆಕ್ಟ್ ಕಾರ್ ಟೆಕ್, ಇಎಸ್‌ಪಿ, ಹಿಲ್-ಹೋಲ್ಡ್ ಅಸಿಸ್ಟ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಮತ್ತು ಆರು ಏರ್‌ಬ್ಯಾಗ್‌ಗಳನ್ನು ಹೊಂದಿವೆ.