ಬಹುಬೇಡಿಕೆಯ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ವಿತರಣೆ ಪ್ರಾರಂಭ

ಜನಪ್ರಿಯ ಮತ್ತು ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಬಹುನಿರೀಕ್ಷಿತ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತು. ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.10.45 ಲಕ್ಷವಾಗಿದೆ.

ಬಹುಬೇಡಿಕೆಯ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ವಿತರಣೆ ಪ್ರಾರಂಭ

ಇದೀಗ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ದೇಶೀಯ ಮಾರುಕಟ್ಟೆಯಲ್ಲಿ ಗ್ರ್ಯಾಂಡ್ ವಿಟಾರಾ ವಿತರಣೆಯನ್ನು ಪ್ರಾರಂಭಿಸಿದೆ ಮತ್ತು ಕರ್ನಾಟಕದ ಬಿಡದಿಯ ಟೊಯೊಟಾದ ಉತ್ಪಾದನಾ ಘಟಕದಿಂದ ಈ ಮಾದರಿಯು ಹೊರಬಂದಿದೆ. ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯ ಖರೀದಿಸಲು ಬಯಸುವ ಖರೀದಿದಾರರು ರೂ.11,000 ಮೊತ್ತವನ್ನು ಪಾವತಿಸಿ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು ಬುಕ್ ಮಾಡಬಹುದು. ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಬುಕ್ಕಿಂಗ್‌ಗಳು 57,000 ಯುನಿಟ್‌ಗಳಿಗೂ ಹೆಚ್ಚು ಪಡೆದುಕೊಂಡಿದೆ.

ಬಹುಬೇಡಿಕೆಯ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ವಿತರಣೆ ಪ್ರಾರಂಭ

ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು ಸುಜುಕಿ ತನ್ನ ಗ್ಲೋಬಲ್-ಸಿ ಪ್ಲಾಟ್‌ಫಾರ್ಮ್ ಅನ್ನು ಬಳಸಿಕೊಂಡು ಅಭಿವೃದ್ಧಿಪಡಿಸಿದೆ ಮತ್ತು ವಿನ್ಯಾಸಗೊಳಿಸಿದೆ. ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ನೆಕ್ಸಾ ಔಟ್‌ಲೆಟ್‌ಗಳ ಮೂಲಕ ಮಾತ್ರ ಮಾರಾಟ ಮಾಡಲಾಗುತ್ತದೆ. ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯನ್ನು ಆರು ವಿಭಿನ್ನ ರೂಪಾಂತರ ಹಂತಗಳಲ್ಲಿ ನೀಡಲಾಗುತ್ತದೆ.

ಬಹುಬೇಡಿಕೆಯ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ವಿತರಣೆ ಪ್ರಾರಂಭ

ಈ ಎಸ್‍ಯುವಿಯ ಇದು ಸಿಗ್ಮಾ, ಡೆಲ್ಟಾ, ಝೀಟಾ, ಝೀಟಾ+, ಆಲ್ಫಾ ಮತ್ತು ಆಲ್ಫಾ+. ಆಗಿದೆ. ಝೀಟಾ, ಝೀಟಾ+, ಆಲ್ಫಾ ಮತ್ತು ಆಲ್ಫಾ+ ರೂಪಾಂತರಗಳನ್ನು ಡ್ಯುಯಲ್-ಟೋನ್ ಬಣ್ಣ ಆಯ್ಕೆಗಳಲ್ಲಿ ಸಹ ನೀಡಲಾಗುತ್ತದೆ. ಈ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎರಡು ಪವರ್‌ಟ್ರೇನ್ ಆಯ್ಕೆಗಳಲ್ಲಿ ಲಭ್ಯವಿದೆ.

ಬಹುಬೇಡಿಕೆಯ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ವಿತರಣೆ ಪ್ರಾರಂಭ

ಇದರಲ್ಲಿ 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ ಮತ್ತು 1.5-ಲೀಟರ್ TNGA ಪೆಟ್ರೋಲ್ ಮೋಟರ್ ಸ್ಟ್ರಾಂಗ್-ಹೈಬ್ರಿಡ್ ಸಿಸ್ಟಂನೊಂದಿಗೆ ಲಭ್ಯವಿದೆ. ಈ ಎಸ್‍ಯುವಿಯ 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ 102 ಬಿಹೆಚ್‍ಪಿ ಪವರ್ ಮತ್ತು 137 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಬಹುಬೇಡಿಕೆಯ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ವಿತರಣೆ ಪ್ರಾರಂಭ

ಇದರೊಂದಿಗೆ 5 ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಯುನಿಟ್ ನೊಂದಿಗೆ ಜೋಡಿಸಲಾಗಿದೆ. ಎಡಬ್ಲ್ಯೂಡಿ ಸಿಸ್ಟಂ ಅನ್ನು ಮ್ಯಾನುವಲ್ ರೂಪಾಂತರಗಳೊಂದಿಗೆ ಮಾತ್ರ ನೀಡಲಾಗುತ್ತದೆ. ಇಂಟೆಲಿಜೆಂಟ್ ಎಲೆಕ್ಟ್ರಿಕ್ ಹೈಬ್ರಿಡ್ ಸಿಸ್ಟಮ್ ಎಂದೂ ಕರೆಯಲ್ಪಡುವ ಸ್ಟ್ರಾಂಗ್-ಹೈಬ್ರಿಡ್ ಆವೃತ್ತಿಯು ಐಸಿಇ ಯುನಿಟ್ ಮೂಲಕ ಸಂಯೋಜಿತವಾಗಿ 115 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ.

ಬಹುಬೇಡಿಕೆಯ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ವಿತರಣೆ ಪ್ರಾರಂಭ

ಇದನ್ನು ಇ-ಸಿವಿಟಿ ಯೊಂದಿಗೆ ಮಾತ್ರ ಜೋಡಿಸಲಾಗಿದೆ. ಈ ಪವರ್‌ಟ್ರೇನ್‌ಗಾಗಿ 27.97 ಕಿ.ಮೀ ಮೈಲೇಜ್ ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಈ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು 4,345 ಎಂಎಂ ಉದ್ದ, 1,795 ಎಂಎಂ ಅಗಲ ಮತ್ತು 1,645 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್‌ಬೇಸ್ ಹೊಂದಿದೆ. ಈ 5-ಸೀಟರ್ ಎಸ್‍ಯುವಿಯು 45-ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಕ್ ಅನ್ನು ಹೊಂದಿದೆ.

ಬಹುಬೇಡಿಕೆಯ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ವಿತರಣೆ ಪ್ರಾರಂಭ

ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದು ಹೈರೈಡರ್‌ನೊಂದಿಗೆ ಕೆಲವು ಬಾಹ್ಯ ವಿಶೇಷಣಗಳನ್ನು ಹಂಚಿಕೊಂಡದೆ. ಹೈರೈಡರ್‌ನಿಂದ ಗ್ರಾಂಡ್ ವಿಟಾರಾ ದೊಡ್ಡ ವ್ಯತ್ಯಾಸವೆಂದರೆ ಅದರ ಮುಂಭಾಗದ ವಿನ್ಯಾಸ. ವಿದೇಶಿ ಮಾರುಕಟ್ಟೆಯಲ್ಲಿ ಮಾರಾಟವಾಗುವ ಸುಜುಕಿ ಎಸ್-ಕ್ರಾಸ್‌ ಮಾದರಿಗೆ ಹೋಲುವಂತಿದೆ.

ಬಹುಬೇಡಿಕೆಯ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ವಿತರಣೆ ಪ್ರಾರಂಭ

ಮಾರುತಿ ಗ್ರ್ಯಾಂಡ್ ವಿಟಾರಾ ಮುಂಭಾಗದ ಫಾಸಿಕ ದೊಡ್ಡದಾದ, ಕ್ರೋಮ್-ಲೇಪಿತ ಗ್ರಿಲ್, ಮೂರು-ಪಾಯಿಂಟ್ ಎಲ್ಇಡಿ ಡೇಟೈಮ್ ರನ್ನಿಂಗ್ ಲ್ಯಾಂಪ್‌ಗಳು, ಬಂಪರ್-ಮೌಂಟೆಡ್ ಮೈನ್ ಹೆಡ್‌ಲ್ಯಾಂಪ್ ಕ್ಲಸ್ಟರ್ ಮತ್ತು ಕ್ಲಾಡಿಂಗ್ ಅನ್ನು ಹೊಂದಿಕೊಂಡಿದೆ. ಈ ಎಸ್‍ಯುವಿಯ ಸೈಡ್ ಬಾಡಿ ಪ್ಯಾನೆಲ್‌ಗಳು, ಟೈಲ್‌ಗೇಟ್ ಮತ್ತು ಇಂಟಿಗ್ರೇಟೆಡ್ ಟೈಲ್ ಲ್ಯಾಂಪ್‌ಗಳೊಂದಿಗೆ ಹಿಂಭಾಗದ ಬಂಪರ್ ಕೂಡ ಹೈರೈಡರ್‌ಗೆ ಹೋಲುತ್ತವೆ.

ಬಹುಬೇಡಿಕೆಯ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ವಿತರಣೆ ಪ್ರಾರಂಭ

ಈ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯ ಸಿ-ಪಿಲ್ಲರ್‌ನಲ್ಲಿ ಕ್ರೋಮ್ ಅಪ್ಲಿಕ್, ಅಲಾಯ್ ವ್ಹೀಲ್ ನೊಂದಿಗೆ ವಿಭಿನ್ನ ವಿನ್ಯಾಸ ಮತ್ತು ಟೈಲ್‌ಗೇಟ್‌ನಲ್ಲಿ ಪೂರ್ಣ-ಅಗಲದ ಎಲ್ಇಡಿ ಲೈಟ್ ಬಾರ್ ವಿಶಿಷ್ಟವಾಗಿದೆ. ಎಸ್‍ಯುವಿಯ ಒಳಭಾಗದಲ್ಲಿ, ಗ್ರ್ಯಾಂಡ್ ವಿಟಾರಾ ಹೈರೈಡರ್‌ನಂತೆಯೇ ಕಾಣುತ್ತದೆ ಮತ್ತು ಬಣ್ಣದ ಯೋಜನೆಗಳು ಮಾತ್ರ ಪ್ರಮುಖ ವ್ಯತ್ಯಾಸವಾಗಿದೆ. ಎರಡೂ ಒಂದೇ ಸ್ಟೀಯರಿಂಗ್ ವೀಲ್ ಅನ್ನು ಪಡೆಯುತ್ತವೆ, ಹೊಸ ಮಾರುತಿ ಸುಜುಕಿ ಮಾದರಿಗಳಲ್ಲಿ ಕಂಡುಬರುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್, ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಎಲ್ಲಾ ಸ್ವಿಚ್‌ಗಿಯರ್‌ಗಳು ಎರಡೂ ಎಸ್‍ಯುವಿಗಳಲ್ಲಿ ಒಂದೇ ಆಗಿರುತ್ತವೆ.

ಬಹುಬೇಡಿಕೆಯ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ವಿತರಣೆ ಪ್ರಾರಂಭ

ಫೀಚರ್ಸ್ ಗಳಿಗೆ ಸಂಬಂಧಿಸಿದಂತೆ, ಹೊಸ ಗ್ರ್ಯಾಂಡ್ ವಿಟಾರಾದ ಟಾಪ್-ಸ್ಪೆಕ್ ರೂಪಾಂತರಗಳು ಪನೋರಮಿಕ್ ಸನ್‌ರೂಫ್, 360-ಡಿಗ್ರಿ ಕ್ಯಾಮೆರಾ, ವೈರ್‌ಲೆಸ್ ಚಾರ್ಜರ್, ಆಂಬಿಯೆಂಟ್ ಲೈಟಿಂಗ್, ಕನೆಕ್ಟ್ ಕಾರ್ ಟೆಕ್, ಇಎಸ್‌ಪಿ, ಹಿಲ್-ಹೋಲ್ಡ್ ಅಸಿಸ್ಟ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಮತ್ತು ಆರು ಏರ್‌ಬ್ಯಾಗ್‌ಗಳನ್ನು ಪಡೆಯುತ್ತವೆ.

ಬಹುಬೇಡಿಕೆಯ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ವಿತರಣೆ ಪ್ರಾರಂಭ

ಈ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿ ಎಸ್‍ಯುವಿಯಲ್ಲಿ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, 360-ಡಿಗ್ರಿ ಕ್ಯಾಮೆರಾ, HUD, Apple CarPlay ಮತ್ತು Android Auto ಜೊತೆಗೆ ಒಂಬತ್ತು-ಇಂಚಿನ SmartPlay Pro+ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪ್ಯಾಡಲ್ ಶಿಫ್ಟರ್‌ಗಳು, ಸುಜುಕಿ ಕನೆಕ್ಟ್ ಟೆಲಿಮ್ಯಾಟಿಕ್ಸ್, ಮತ್ತು ಡ್ರೈವ್ ಮೋಡ್ ಗಳನ್ನು ಒಳಗೊಂಡಿದೆ. ಈ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Image Courtesy: Rinku Jain And Nexa MP Nagar - Rajrup Motors

Most Read Articles

Kannada
English summary
New maruti suzuki grand vitara suv deliveries begin in india details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X