Just In
Don't Miss!
- News
ಜಾತಿ ನಿಂದನೆ ಪ್ರಕರಣ: ಬಸವರಾಜ ಹೊರಟ್ಟಿ ವಿರುದ್ಧ ತನಿಖಾ ವರದಿ ಸಲ್ಲಿಕೆ
- Sports
ಐರ್ಲೆಂಡ್ನ ಹ್ಯಾರಿ ಟೆಕ್ಟರ್ಗೆ ಬ್ಯಾಟ್ ಗಿಫ್ಟ್ ನೀಡಿದ ಹಾರ್ದಿಕ್ ಪಾಂಡ್ಯ
- Movies
ಸಿಧು ಮೂಸೆವಾಲಾ ಹಾಡಿದ್ದ ಕೊನೆಯ ಹಾಡು ಬಿಡುಗಡೆ ಆದ ಮೂರೇ ದಿನಕ್ಕೆ ಡಿಲೀಟ್!
- Lifestyle
ನಿಮ್ಮಿಬ್ಬರ ಸಂಬಂಧ ಹೀಗಿದ್ದರೆ ಒಟ್ಟಿಗಿದ್ದು ಪಡುವ ನರಕಕ್ಕಿಂತ ಗುಡ್ಬೈ ಹೇಳುವುದೇ ಬೆಸ್ಟ್!
- Finance
ಜೂ.27ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Education
UAS Dharwad Recruitment 2022 : ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ಜು.2ಕ್ಕೆ ನೇರ ಸಂದರ್ಶನ
- Technology
‘ಫಾಸ್ಟ್ಯಾಗ್' ನಲ್ಲಿರುವ ಹಣವನ್ನು ಕದಿಯಬಹುದಾ? ವೈರಲ್ ವೀಡಿಯೊದ ಅಸಲಿಯತೆ ಏನು?
- Travel
ನಾಡ ಹಬ್ಬ ಮೈಸೂರು ದಸರಾ - ನವರಾತ್ರಿ ಉತ್ಸವ 2022
ಜಾಹೀರಾತು ಚಿತ್ರಿಕರಣದ ವೇಳೆ ಕಾಣಿಸಿಕೊಂಡ ಮಾರುತಿ ವ್ಯಾಗನ್ಆರ್ ಫೇಸ್‌ಲಿಫ್ಟ್ ಕಾರು
ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಮಾದರಿಗಳನ್ನು ಬಿಡುಗಡೆಗೊಳಿಲು ಸಜ್ಜಾಗುತ್ತಿದೆ. ಇದರಲ್ಲಿ ಫೇಸ್‌ಲಿಫ್ಟ್‌ಗಳು, ಹೊಸ ತಲೆಮಾರಿನ ಆವೃತ್ತಿಗಳು ಮತ್ತು ಹೊಸ ಕಾರುಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿಯ ಹೆಚ್ಚು ಜನಪ್ರಿಯವಾದ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್ ಮಿಡ್-ಲೈಫ್ ನವೀಕರಣವನ್ನು ಸ್ವೀಕರಿಸುತ್ತಿದೆ. ಈ ಹೊಸ ಮಾದರಿಯ ಬಗ್ಗೆ ಹೆಚ್ಚಿನ ಮಾಹಿತಿಗಳು ಬಹಿರಂಗವಾಗಿಲ್ಲ. ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ವ್ಯಾಗನ್‍ಆರ್ ಸುಮಾರು ಎರಡು ದಶಕಗಳಿಂದ ಮಾರಾಟದಲ್ಲಿದೆ. ಈ ವ್ಯಾಗನ್‍ಆರ್ ಹ್ಯಾಚ್‌ಬ್ಯಾಕ್ ಅನ್ನು ಮೊದಲ ಬಾರಿಗೆ ದೇಶದಲ್ಲಿ ಪ್ರಾರಂಭಿಸಿದಾಗಿನಿಂದಲೂ ಕೂಡ ಉತ್ತಮ ಬೇಡಿಕೆಯಿಂದ ಮಾರಾಟವಾಗುತ್ತಿದೆ. ಈಗ ಮೂರನೇ ತಲೆಮಾರಿನ ರೂಪದಲ್ಲಿ ಮಾರಾಟ ಮಾಡಲಾಗುತ್ತಿದೆ.

2022ರ ಮಾರುತಿ ವ್ಯಾಗನ್ಆರ್ ಫೇಸ್‌ಲಿಫ್ಟ್ ಅನ್ನು ಮುಂಬರುವ ವಾರಗಳಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ, ಏಕೆಂದರೆ ನವೀಕರಿಸಿದ ಮಾದರಿಯು ಟಿವಿ ಜಾಹೀರಾತು ಚಿತ್ರಿಕರಣದ(ಟಿವಿಸಿ) ವೇಳೆ ಕಾಣಿಸಿಕೊಂಡಿದೆ.ಈ 2022ರ ಮಾರುತಿ ವ್ಯಾಗನ್ಆರ್ ಫೇಸ್‌ಲಿಫ್ಟ್ ಪ್ರಮುಖ ವಿನ್ಯಾಸ ಬದಲಾವಣೆಗಳನ್ನು ಸ್ವೀಕರಿಸುವುದಿಲ್ಲ ಎಂದು ಸ್ಪೈ ಚಿತ್ರಗಳು ಬಹಿರಂಗಪಡಿಸುತ್ತವೆ.

ನವೀಕರಿಸಿದ ಮಾದರಿಯಲ್ಲಿ ಗೋಚರಿಸುವ ಏಕೈಕ ಸೇರ್ಪಡೆಗಳೆಂದರೆ ಬ್ಲ್ಯಾಕ್ ರೂಫ್ ಮತ್ತು ಹೊಸ ಬ್ಲ್ಯಾಕ್ ಅಲಾಯ್ ವ್ಹೀಲ್ ಗಳು ಮತ್ತು ಮಾರುತಿ ಟಾಲ್-ಬಾಯ್ ಹ್ಯಾಚ್‌ಬ್ಯಾಕ್‌ಗೆ ಹೊಸ ಬಣ್ಣದ ಆಯ್ಕೆಗಳನ್ನು ಸೇರಿಸಬಹುದು.

ಕ್ಯಾಬಿನ್ ಚಿತ್ರಗಳು ಇನ್ನೂ ಬಹಿರಂಗಗೊಳ್ಳಬೇಕಿದೆ. 2022ರ ಮಾರುತಿ ವ್ಯಾಗನ್ಆರ್ ಫೇಸ್‌ಲಿಫ್ಟ್ ಹೊಸ ಅಪ್ಹೋಲ್ಸ್ಟರಿಯನ್ನು ಪಡೆಯುವ ನಿರೀಕ್ಷೆಯಿದೆ. ಆದರೆ ಅದರ ಡ್ಯಾಶ್‌ಬೋರ್ಡ್ ವಿನ್ಯಾಸದಲ್ಲಿ ಯಾವುದೇ ಬದಲಾವಣೆಗಳನ್ನು ಪಡೆಯುವ ಸಾಧ್ಯತೆಯಿಲ್ಲ. ವಾಹನವು AMT ರೂಪಾಂತರಗಳೊಂದಿಗೆ ಹಿಲ್ ಹೋಲ್ಡ್ ಅಸಿಸ್ಟ್ ಮತ್ತು ಎಂಜಿನ್ ಐಡಲ್ ಸ್ಟಾರ್ಟ್ ಸ್ಟಾಪ್ ಸಿಸ್ಟಮ್ ಅನ್ನು ಪಡೆಯಬಹುದು.

ಇನ್ನು ಈ ಕಾರಿನಲ್ಲಿ Apple CarPlay ಮತ್ತು Android Auto ಬೆಂಬಲದೊಂದಿಗೆ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಮುಂದುವರಿಸಬಹುದು. ಉಳಿದಂತೆ ವ್ಯಾಗನ್ಆರ್ ಫೇಸ್‌ಲಿಫ್ಟ್ ಮಾದರಿಯ ಬಗ್ಗೆ ಹೆಚ್ಚಿನ ಮಾಹಿತಿಗಳು ಬಹಿರಂಗಗೊಂಡಿಲ್ಲ.

ವ್ಯಾಗನ್ಆರ್ ಫೇಸ್‌ಲಿಫ್ಟ್ ಮಾದರಿಯ ಎಂಜಿನ್ ನಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ. ಮಾರುತಿ ಸುಜುಕಿ ವ್ಯಾಗನ್ಆರ್ ಕಾರನ್ನು ಅದೇ 1.0-ಲೀಟರ್ ಮತ್ತು 1.2-ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಗಳ ಆಯ್ಕೆಯಲ್ಲಿ ಮಾರಾಟ ಮಾಡಲಾಗುತ್ತದೆ. ಎಸ್-ಸಿಎನ್‌ಜಿ ಮಾದರಿಯಲ್ಲಿ 1.0-ಲೀಟರ್ 3-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಇದು 58 ಬಿಹೆಚ್‌ಪಿ ಮತ್ತು 78 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ಜೋಡಿಸಲಾಗಿದೆ. ಇದನ್ನು ಎಲ್ಎಕ್ಸ್ಐ ಮತ್ತು ಎಲ್ಎಕ್ಸ್ಐ(ಒ) ರೂಪಾಂತರಗಳಲ್ಲಿ ಮಾರಾಟ ಮಾಡಲಾಗುತ್ತಿದೆ.

ಈ ಮಾರುತಿ ಸುಜುಕಿ ವ್ಯಾಗನ್ಆರ್ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ, ಇದರಲ್ಲಿ ಸುರಕ್ಷತೆಗಾಗಿ ಡ್ರೈವರ್-ಸೈಡ್ ಏರ್‌ಬ್ಯಾಗ್, ಎಬಿಎಸ್ ವಿಥ್ ಇಬಿಡಿ, ಹೈಸ್ಪೀಡ್ ಅಲರ್ಟ್, ಸೀಟ್‌ಬೆಲ್ಟ್ ರಿಮೈಂಡರ್, ರಿಯರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ಇತರ ಪೀಚರ್ ಗಳನ್ನು ಕೂಡ ಒಳಗೊಂಡಿವೆ.

ಇನ್ನು ಎಲ್‌ಎಕ್ಸ್‌ಐ(ಒ) ರೂಪಾಂತರದಲ್ಲಿ ಪ್ರಯಾಣಿಕರ ಬದಿಯ ಏರ್‌ಬ್ಯಾಗ್ ಮತ್ತು ಹೊಸ ಫೀಚರ್ ಗಳನ್ನು ಹೊಂದಿದೆ. ಇನ್ನು ಮಾರುತಿ ಸುಜುಕಿ ವ್ಯಾಗನ್ಆರ್ ಸಿಎನ್‌ಜಿ ಆವೃತ್ತಿಯು 33.54 ಕಿಮೀ ಮೈಲೇಜ್ ಅನ್ನು ನೀಡುತ್ತದೆ. ಈ ವ್ಯಾಗನ್ಆರ್ ಸಿಎನ್‌ಜಿ ಆವೃತ್ತಿಯಲ್ಲಿ ಇಂಟೆಲಿಜೆಂಟ್ ಇಂಜೆಕ್ಷನ್ ಸಿಸ್ಟಂನೊಂದಿಗೆ ಡ್ಯುಯಲ್ ಇಸಿಯುಗಳನ್ನು ಒಳಗೊಂಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಸಿಎನ್‌ಜಿ ಮಾದರಿಗಳಲ್ಲಿ ವ್ಯಾಗನ್ಆರ್ ಸಿಎನ್‌ಜಿ ಅಗ್ರಸ್ಥಾನದಲ್ಲಿದೆ.

ಇನ್ನು ಮಾರುತಿ ಸುಜುಕಿ ತನ್ನ ವ್ಯಾಗನಾರ್ ಎಕ್ಸ್‌ಟ್ರಾ ಎಡಿಷನ್ ಮಾದರಿಯನ್ನು ಕಳೆದ ವರ್ಷ ಬಿಡುಗಡೆಗೊಳಿಸಿತ್ತು. ವ್ಯಾಗನಾರ್ ಎಕ್ಸ್‌ಟ್ರಾ ಎಡಿಷನ್ ಮಾದರಿಯು ವ್ಯಾಗನಾರ್ ಕಾರಿನ ಸ್ಪೆಷಲ್ ಎಡಿಷನ್ ಆಗಿದೆ. ಹೊಸ ಮಾರುತಿ ವ್ಯಾಗನಾರ್ ಎಕ್ಸ್‌ಟ್ರಾ ಎಡಿಷನ್ ಮುಂಭಾಗ ಮತ್ತು ಹಿಂಭಾಗದ ಬಂಪರ್ ಪ್ರೊಟೆಕ್ಟರ್‌ಗಳು, ವ್ಹೀಲ್ ಆರ್ಚ್ ಕ್ಲಾಡಿಂಗ್, ಸೈಡ್ ಸ್ಕರ್ಟ್‌ಗಳು, ಬಾಡಿ ಸೈಡ್ ಮೋಲ್ಡಿಂಗ್‌ಗಳು ಮತ್ತು ಕ್ರೋಮ್ ಅಲಂಕಾರವನ್ನು ಮುಂಭಾಗ ಮತ್ತು ಹಿಂಭಾಗದಲ್ಲಿ ಹೊಂದಿದೆ,

ಈ ವ್ಯಾಗನ್‍ಆರ್ ಎಕ್ಸ್‌ಟ್ರಾ ಎಡಿಷನ್ ಮಾದರಿಯ ಒಳಭಾಗದಲ್ಲಿ ಕಾರ್ ಚಾರ್ಜರ್ ಎಕ್ಸ್‌ಟೆಂಡರ್, ಟ್ರಂಕ್ ಆರ್ಗನೈಸರ್ ಮತ್ತು ಡಿಜಿಟಲ್ ಏರ್ ಇನ್ಫ್ಲೇಟರ್ ಅನ್ನು ಹೊಂದಿರುತ್ತದೆ. ಇದರಲ್ಲಿ ಕಪ್ಪು ಬಣ್ಣದ ಬಿ-ಪಿಲ್ಲರ್, ಬಾಡಿ ಕಲರ್ ವಿಂಗ್ ಮಿರರ್ ಮತ್ತು ಡೋರ್ ಹ್ಯಾಂಡಲ್, ವೀಲ್ ಕವರ್, ಟಿಲ್ಟ್ ಅಡ್ಜಸ್ಟಬಲ್ ಸ್ಟೀರಿಂಗ್, ಪವರ್ ಅಡ್ಜಸ್ಟಬಲ್ ವಿಂಗ್ ಮಿರರ್, ಫ್ರಂಟ್ ಮತ್ತು ರಿಯರ್ ಪವರ್ ವಿಂಡೋಸ್, ಕೀಲೆಸ್ ಎಂಟ್ರಿ, 60:40 ಸ್ಪ್ಲಿಟ್ ಫೋಲ್ಡಿಂಗ್ ರಿಯರ್ ಸೀಟುಗಳು, ಬ್ಲೂಟೂತ್ ಮತ್ತು ಯುಎಸ್‌ಬಿ ಕನೆಕ್ಟಿವಿಟಿಯೊಂದಿಗೆ ರಿಯರ್ ವ್ಯೂ ಮಿರರ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಮತ್ತು ಆಡಿಯೋ ಸಿಸ್ಟಂ ಪೀಚರ್ಸ್ ಗಳನ್ನು ಹೊಂದಿವೆ

ಫೇಸ್‌ಲಿಫ್ಟ್ ಬಗ್ಗೆ ಮಾತನಾಡುತ್ತಾ, ಮಾರುತಿ ಸುಜುಕಿಯು ಬಲೆನೊ ಪ್ರೀಮಿಯಂ ಹ್ಯಾಚ್‌ಬ್ಯಾಕ್, ಸಿಯಾಜ್ ಸೆಡಾನ್, ವ್ಯಾಗನ್ಆರ್ ಹ್ಯಾಚ್‌ಬ್ಯಾಕ್ ಮತ್ತು ಎರ್ಟಿಗಾ ಮತ್ತು ಎಕ್ಸ್‌ಎಲ್ 6 ಎಂಪಿವಿಗಳಿಗೆ ಮಿಡ್-ಲೈಫ್ ನವೀಕರಣಗಳನ್ನು ನೀಡುತ್ತದೆ. ನವೀಕರಿಸಿದ ಮಾರುತಿ ಬಲೆನೊ ಒಳಗೆ ಮತ್ತು ಹೊರಗೆ ಗಮನಾರ್ಹ ಬದಲಾವಣೆಗಳಿಗೆ ಸಾಕ್ಷಿಯಾಗಲಿದೆ. ಆದರೆ ಅದರ ಎಂಜಿನ್ ಸೆಟಪ್ ಬದಲಾಗದೆ ಉಳಿಯುತ್ತದೆ. ಇದು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.

ಮಾರುತಿ ಸುಜುಕಿ ವ್ಯಾಗನಾರ್ ಕೇವಲ 30 ತಿಂಗಳಲ್ಲಿ 4 ಲಕ್ಷ ಯೂನಿಟ್‌ಗಳ ಮಾರಾಟದ ಮೈಲಿಗಲ್ಲನ್ನು ಸಾಧಿಸಿದೆ. ಈ ಮಾರಾಟದ ಅಂಕಿಅಂಶಗಳು ಕೇವಲ ಮೂರನೇ ತಲೆಮಾರಿನ ಮಾದರಿಯನ್ನು ಮಾತ್ರ ಒಳಗೊಂಡಿವೆ. ಇದರ ಪರಿಣಾಮವಾಗಿ, ವ್ಯಾಗನಾರ್ ಭಾರತೀಯ ಮಾರುಕಟ್ಟೆಯಲ್ಲಿ ಬ್ರಾಂಡ್‌ನ ಎರಡನೇ ಅತಿ ಹೆಚ್ಚು ಮಾರಾಟವಾದ ಮಾದರಿಯಾಗಿದೆ. ಶೀಘ್ರದಲ್ಲೇ ಹೊಸ ನವೀಕರಣಗಳೊಂದಿಗೆ ಮಾರುತಿ ಸುಜುಕಿ ವ್ಯಾಗನಾರ್ ಫೇಸ್‌ಲಿಫ್ಟ್ ಕಾರು ಬಿಡುಗಡೆಯಾಗುವ ಸಾಧ್ಯತೆಗಳಿದೆ.
Image Courtesy: Mantram 𝕊 𝕊𝕙𝕖𝕥𝕥𝕪