ಪ್ರೀಮಿಯಂ ಫೀಚರ್ಸ್ ಹೊತ್ತು ಬಂದಿರುವ 2022ರ ಮಾರುತಿ ಸುಜುಕಿ ಎಕ್ಸ್ಎಲ್6 ರಿವ್ಯೂ ವಿಡಿಯೋ

ಹೊಸ ಮಾರುತಿ ಸುಜುಕಿ ಎಕ್ಸ್ಎಲ್6 ಕಾರು ಮಾದರಿಯು ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಹಲವಾರು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೊಂಡಿದ್ದು, ಹೊಸ ಕಾರಿನ ಕಾರ್ಯಕ್ಷಮತೆ ಕುರಿತಂತೆ ಪರೀಕ್ಷಿಸಲು ಕಂಪನಿಯು ಇತ್ತೀಚೆಗೆ ಡ್ರೈವ್‌ಸ್ಪಾರ್ಕ್ ತಂಡವನ್ನು ಸಹ ಆಹ್ವಾನಿಸಿತ್ತು. ಹೊಸ ಕಾರು ಈ ಹಿಂದಿನ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್‌ಗಳನ್ನು ಹೊಂದಿದ್ದು, ಹೊಸ ಕಾರಿನ ಕುರಿತಾಗಿ ಮತ್ತಷ್ಟು ಮಾಹಿತಿಯನ್ನು ಈ ವಿಡಿಯೋದಲ್ಲಿ ವೀಕ್ಷಿಸಿ.

2022ರ ಎಕ್ಸ್ಎಲ್6 ಮಾದರಿಯು ಅಲ್ಫಾ, ಜೆಟಾ, ಅಲ್ಫಾ ಪ್ಲಸ್ ವೆರಿಯೆಂಟ್‌ಗಳನ್ನು ಹೊಂದಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 11.29 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.55 ಲಕ್ಷ ಬೆಲೆ ಹೊಂದಿದೆ.

ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಎರ್ಟಿಗಾ ಮಾದರಿಯಲ್ಲಿ ನೀಡಲಾಗಿರುವ ನವೀಕೃತ ಪೆಟ್ರೋಲ್ ಎಂಜಿನ್ ಮಾದರಿಯನ್ನೇ ಇದರಲ್ಲೂ ಅಳವಡಿಸಲಾಗಿದ್ದು, ಈ ಹಿಂದಿನ 1.5 ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್ ಬದಲಾಗಿ ಸ್ಟಾರ್ಟ್/ಸ್ಟಾಪ್ ಬಟನ್ ಮತ್ತು ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.5 ಲೀಟರ್ ಕೆ15ಸಿ ಡ್ಯುಯಲ್‌ಜೆಟ್ ಪೆಟ್ರೋಲ್ ಮಾದರಿಯನ್ನು ಅಳವಡಿಸಲಾಗಿದೆ.

ಹೊಸ ಪೆಟ್ರೋಲ್ ಎಂಜಿನ್ ಮಾದರಿಯು ಹಳೆಯ ಮಾದರಿಗಿಂತಲೂ ಹೆಚ್ಚು ಇಂಧನ ದಕ್ಷತೆ ಹೊಂದಿದ್ದು, ಹೊಸ ಎಂಜಿನ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 103 ಬಿಎಚ್‌ಪಿ ಮತ್ತು 136.8 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

2022ರ ಮಾರುತಿ ಸುಜುಕಿ ಎಕ್ಸ್ಎಲ್6 ರಿವ್ಯೂ ವಿಡಿಯೋ

ಹೊಸ ಎಂಜಿನ್ ಆಯ್ಕೆಯೊಂದಿಗೆ ಎಕ್ಸ್ಎಲ್6 ಮಾದರಿಯು ಪ್ರತಿ ಲೀಟರ್ ಪೆಟ್ರೋಲ್‌ಗೆ ಮ್ಯಾನುವಲ್ ಮಾದರಿಯು 20.97 ಕಿ.ಮೀ ಮತ್ತು ಆಟೋಮ್ಯಾಟಿಕ್ ಮಾದರಿಯು 20.27 ಕಿ.ಮೀ ಮೈಲೇಜ್ ನೀಡಲಿದ್ದು, ಆಟೋಮ್ಯಾಟಿಕ್ ಮಾದರಿಗಳಲ್ಲಿ ಪ್ಯಾಡಲ್ ಶಿಫ್ಟರ್ ಬಳಕೆ ಮಾಡಲಾಗಿದೆ.

ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಆಗಿ 4 ಏರ್‌ಬ್ಯಾಗ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಇಎಸ್‌ಪಿ ಮತ್ತು ಹಿಲ್ ಹೋಲ್ಡ್ ಅಸಿಸ್ಟ್, 360 ಡಿಗ್ರಿ ವ್ಯೂ ಕ್ಯಾಮೆರಾ ಸೇರಿದಂತೆ ಪ್ರಮುಖ ಸುರಕ್ಷಾ ವೈಶಿಷ್ಟ್ಯತೆಗಳನ್ನು ಒಳಗೊಂಡಿದೆ.

Most Read Articles

Kannada
English summary
New maruti suzuki xl6 mpv kannada review
Story first published: Tuesday, April 26, 2022, 12:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X