ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ಇದೇ ತಿಂಗಳು 21ರಂದು ಬಿಡುಗಡೆಯಾಗಲಿರುವ ಹೊಸ ಎಕ್ಸ್ಎಲ್6
ಮಾರುತಿ ಸುಜುಕಿ(Maruti Suzuki) ಕಂಪನಿಯು ಇದೇ ತಿಂಗಳು 21ರಂದು ತನ್ನ ಜನಪ್ರಿಯ ಎಂಪಿವಿ ಕಾರು ಮಾದರಿಯಾದ ಎಕ್ಸ್ಎಲ್6 2022ರ ಆವೃತ್ತಿಯನ್ನು ಬಿಡುಗಡೆಗೆ ಸಜ್ಜಾಗುತ್ತಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮಾದರಿಯಾಗಿರಲಿದೆ.

2022ರ ಎಕ್ಸ್ಎಲ್6 ಮಾದರಿಯು ಎರ್ಟಿಗಾ ಮಾದರಿಯೆಂತೆ ಹಲವಾರು ಹೊಸ ಸೌಲಭ್ಯಗಳೊಂದಿಗೆ ಹಲವು ಹೊಸ ಪ್ರೀಮಿಯಂ ಫೀಚರ್ಸ್ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಖರೀದಿಗಾಗಿ ಕಂಪನಿಯು ಈಗಾಗಲೇ ರೂ.11 ಸಾವಿರ ಮುಂಗಡದೊಂದಿಗೆ ಬುಕಿಂಗ್ ಆರಂಭಿಸಿದೆ.

ಹೊಸ ಎಕ್ಸ್ಎಲ್6 ಮಾದರಿಯ ಹೊಸ ಟೀಸರ್ ಬಿಡುಗಡೆಯ ಮೂಲಕ ಹಲವು ಮಾಹಿತಿಗಳನ್ನು ಹಂಚಿಕೊಂಡಿರುವ ಮಾರುತಿ ಸುಜುಕಿ ಕಂಪನಿಯು ಮತ್ತಷ್ಟು ಪ್ರೀಮಿಯಂ ಮಾದರಿಯಾಗಿ ಬಿಡುಗಡೆಗೊಳಿಸುವ ಸುಳಿವು ನೀಡಿದೆ.

2022ರ ಎಕ್ಸ್ಎಲ್6 ಮಾದರಿಯನ್ನು ಕಂಪನಿಯು ಈ ಹಿಂದಿನಂತೆಯೇ ಪ್ರಮುಖ ವೆರಿಯೆಂಟ್‌ಗಳಲ್ಲಿ ಪರಿಚಯಿಸುತ್ತಿದ್ದು, ಜೆಟಾ ಮತ್ತು ಅಲ್ಫಾ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿರುವ ಹೊಸ ಕಾರು ಎರಡು ವೆರಿಯೆಂಟ್‌ಗಳಲ್ಲೂ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರಲಿವೆ.

ಇದರೊಂದಿಗೆ 2022ರ ಆವೃತ್ತಿಯಲ್ಲಿ ಕಂಪನಿಯು ವಿವಿಧ ಪ್ರೀಮಿಯಂ ಫೀಚರ್ಸ್ ಜೊತೆ ಪರಿಷ್ಕತ ಎಂಜಿನ್ ಜೋಡಣೆ ಮಾಡುತ್ತಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ 1.5 ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್ ಬದಲಾಗಿ 1.5 ಲೀಟರ್ ಕೆ15ಸಿ ಡ್ಯುಯಲ್‌ಜೆಟ್ ಪೆಟ್ರೋಲ್ ಮಾದರಿಯನ್ನು ಅಳವಡಿಸುತ್ತಿದೆ.

ಹೊಸ ಪೆಟ್ರೋಲ್ ಎಂಜಿನ್ ಮಾದರಿಯು ಹಳೆಯ ಮಾದರಿಗಿಂತಲೂ ಹೆಚ್ಚುವರಿಯಾಗಿ 10 ಬಿಎಚ್‌ಪಿ ಉತ್ಪಾದನೆಯೊಂದಿಗೆ ಇಂಧನದಲ್ಲೂ ಉತ್ತಮ ದಕ್ಷತೆ ಹೊಂದಿದ್ದು, ಹೊಸ ಎಂಜಿನ್ ಮಾದರಿಯು 113.4 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದೆ.

103.5 ಬಿಎಚ್‌ಪಿ ಉತ್ಪಾದಿಸುವ 1.5 ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್ ಮಾದರಿಗಿಂತಲೂ ಕೆ15ಸಿ ಡ್ಯುಯಲ್‌ಜೆಟ್ ಪೆಟ್ರೋಲ್ ಹೆಚ್ಚು ಶಕ್ತಿಶಾಲಿಯಾಗಿದ್ದು, ಹೊಸ ಎಂಜಿನ್ ಮಾದರಿಯನ್ನು ಕೇವಲ ಎರ್ಟಿಗಾ ಮಾದರಿಯಲ್ಲಿ ಅಲ್ಲದೆ ಮಾರ್ಟಿಗಾ ಮುಂದುವರಿದ ಆವೃತ್ತಿ ಎಕ್ಸ್ಎಲ್6 ಮಾದರಿಯು ಸಹ ಅಳವಡಿಸಲಾಗುತ್ತಿದೆ.

ಇದರ ಜೊತೆಗೆ ಹೊಸ ಕಾರಿನಲ್ಲಿ ಮಾರುತಿ ಸುಜಕಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಬಹುದಾಗಿದೆ. ಕಂಪನಿಯು ಈ ಹಿಂದಿನ 4-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಮಾದರಿಯನ್ನು ಹಳೆಯ ಮಾದರಿಯಲ್ಲಿ ತೆಗೆದುಹಾಕಿದ್ದು, ಇದಕ್ಕಾಗಿಯೇ ಹೊಸ ಮಾದರಿಯು ಉತ್ತಮ ಎಂಜಿನ್ ದಕ್ಷತೆಯನ್ನು ಖಾತ್ರಿಪಡಿಸಲಿದೆ ಎನ್ನಬಹುದು.

ಮಾರುತಿ ಸುಜುಕಿಯು ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಸಿಎನ್‌ಜಿ ಮಾದರಿಯನ್ನು ಮಾತ್ರ ಮಾರಾಟ ಮಾಡುತ್ತಿದ್ದು, ಬಿಎಸ್-6 ಜಾರಿ ನಂತರ ಕಂಪನಿಯು ಎಲ್ಲಾ ಕಾರು ಮಾದರಿಗಳಲ್ಲೂ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿ ಪೆಟ್ರೋಲ್ ಮಾದರಿಗಳೊಂದಿಗೆ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಮತ್ತು ಸಿಎನ್‌ಜಿ ಆಯ್ಕೆಗಳನ್ನು ನೀಡುತ್ತಿದೆ.

ಸದ್ಯ ಎಕ್ಸ್ಎಲ್6 ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಮಾತ್ರ ನೀಡುತ್ತಿರುವ ಮಾರುತಿ ಸುಜುಕಿ ಕಂಪನಿಯು ಮುಂಬರುವ ದಿನಗಳಲ್ಲಿ ಎಕ್ಸ್ಎಲ್6 ಮಾದರಿಯ ಸಿಎನ್‌ಜಿ ರೂಪಾಂತರ ನೀಡಬಹುದಾಗಿದ್ದು, ಸದ್ಯಕ್ಕೆ ಎರ್ಟಿಗಾ ಮಾದರಿಯಲ್ಲಿ ಮಾತ್ರ ಮಾರಾಟ ಮಾಡಲು ನಿರ್ಧರಿಸಿದೆ.

ಇನ್ನು 2022ರ ಎಕ್ಸ್ಎಲ್6 ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಎಕ್ಸ್ಎಲ್6 ಮಾದರಿಗಾಗಿ ಕಂಪನಿಯು ಈ ಬಾರಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ ಸೇರಿದಂತೆ ಮರುವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ಬಂಪರ್ ಮತ್ತು ಹೆಡ್‌ಲೈಟ್ ಕ್ಲಸ್ಟರ್ ವಿನ್ಯಾಸವನ್ನು ಬದಲಾವಣೆ ಮಾಡಲಿದೆ.

ಇದರೊಂದಿಗೆ ಕಂಪನಿಯು 2022ರ ಪ್ರಮುಖ ಕಾರು ಮಾದರಿಗಳಲ್ಲಿ ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್‌ಗಳನ್ನು ನೀಡುತ್ತಿದ್ದು, ಎರ್ಟಿಗಾ ಮತ್ತು ಎಕ್ಸ್ಎಲ್6 ಮಾದರಿಗಳ ಹೈ ಎಂಡ್ ಮಾದರಿಯಲ್ಲಿ 6 ಏರ್‌ಬ್ಯಾಗ್, ಆಲ್‌ವ್ಹೀಲ್ ಡಿಸ್ಕ್ ಬ್ರೇಕ್, 360 ಡಿಗ್ರಿ ವ್ಯೂ ಕ್ಯಾಮೆರಾ ಸೇರಿದಂತೆ ಇನ್ನು ಕೆಲವು ಪ್ರಮುಖ ಸೇಫ್ಟಿ ಫೀಚರ್ಸ್ ಹೊಂದಲಿದೆ.

ಮಾರುತಿ ಎಕ್ಸ್ಎಲ್6 ಮಾದರಿಯಲ್ಲಿ ಈಗಾಗಲೇ ಸ್ವಯಂಚಾಲಿತ ಹವಾಮಾನ ನಿಯಂತ್ರಣ, ಎಲ್ಇಡಿ ಫಾಗ್ ಲ್ಯಾಂಪ್ಗಳು, ಕ್ರೂಸ್ ಕಂಟ್ರೋಲ್ ಮತ್ತು ಸ್ವಯಂ-ಫೋಲ್ಡಿಂಗ್ ORVM ಗಳನ್ನು ಹೊಂದಿದ್ದು, ಇದಲ್ಲದೆ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಎರಡನೇ ಸಾಲಿನ ಕ್ಯಾಪ್ಟನ್ ಸೀಟ್‌ಗಳಂತಹ ವೈಶಿಷ್ಟ್ಯಗಳನ್ನು ಈ ಕಾರಿನಲ್ಲಿ ಬಳಸಲಾಗಿದೆ.


Click it and Unblock the Notifications