ಪ್ರತಿ ಚಾರ್ಜ್‌ಗೆ 461 ಕಿ.ಮೀ ಮೈಲೇಜ್ ನೀಡುವ 2022ರ ಎಂಜಿ ಜೆಡ್ಎಸ್ ಇವಿ ಕಾರು ಬಿಡುಗಡೆ

ಎಂಜಿ ಮೋಟಾರ್ ಇಂಡಿಯಾ ಕಂಪನಿಯು ತನ್ನ ನವೀಕೃತ ಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ವಿಸ್ತರಿತ ಬ್ಯಾಟರಿ ಪ್ಯಾಕ್ ಸೇರಿದಂತೆ ಹಲವು ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಪ್ರತಿ ಚಾರ್ಜ್‌ಗೆ 461 ಕಿ.ಮೀ ಮೈಲೇಜ್ ನೀಡುವ 2022ರ ಎಂಜಿ ಜೆಡ್ಎಸ್ ಇವಿ ಕಾರು ಬಿಡುಗಡೆ

ಭಾರತದಲ್ಲಿ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯನ್ನು 2019ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿದ ನಂತರ ಎಂಜಿ ಮೋಟಾರ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿದ್ದು, ಇದೀಗ 2022ರ ಮಾದರಿಯೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಪ್ರತಿ ಚಾರ್ಜ್‌ಗೆ 461 ಕಿ.ಮೀ ಮೈಲೇಜ್ ನೀಡುವ 2022ರ ಎಂಜಿ ಜೆಡ್ಎಸ್ ಇವಿ ಕಾರು ಬಿಡುಗಡೆ

2022ರ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯು ಈ ಹಿಂದಿನಂತೆ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 21,99,800 ರಿಂದ ಟಾಪ್ ಎಂಡ್ ಮಾದರಿಯು ರೂ. 25,88,000 ಬೆಲೆ ಹೊಂದಿದೆ.

ಪ್ರತಿ ಚಾರ್ಜ್‌ಗೆ 461 ಕಿ.ಮೀ ಮೈಲೇಜ್ ನೀಡುವ 2022ರ ಎಂಜಿ ಜೆಡ್ಎಸ್ ಇವಿ ಕಾರು ಬಿಡುಗಡೆ

ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯು ವಿಸ್ತರಿತ ಬ್ಯಾಟರಿ ಪ್ಯಾಕ್ ಮತ್ತು ಸುಧಾರಿತ ಕಾರ್ ಕನೆಕ್ಟ್ ಫೀಚರ್ಸ್‌ಗಳೊಂದಿಗೆ 2021 ಮಾದರಿಗಿಂತ ರೂ. 60 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿದ್ದು, ಬೆಲೆ ಏರಿಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ ಸಾಕಷ್ಟು ಹೊಸ ತಾಂತ್ರಿಕ ಸೌಲಭ್ಯಗಳನ್ನು ಒದಗಿಸಲಾಗಿದೆ.

ಪ್ರತಿ ಚಾರ್ಜ್‌ಗೆ 461 ಕಿ.ಮೀ ಮೈಲೇಜ್ ನೀಡುವ 2022ರ ಎಂಜಿ ಜೆಡ್ಎಸ್ ಇವಿ ಕಾರು ಬಿಡುಗಡೆ

ಎಂಜಿ ಮೋಟಾರ್ ಕಂಪನಿಯು ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯಲ್ಲಿ ಈ ಹಿಂದೆ ಪ್ರತಿ ಚಾರ್ಜ್‌ಗೆ 419 ಕಿ.ಮೀ ಒದಗಿಸುತ್ತಿದ್ದ 44.5 kWh ಬ್ಯಾಟರಿ ಪ್ಯಾಕ್ ಅನ್ನು 50.3 kWh ಅಡ್ವಾನ್ಸ್ ಬ್ಯಾಟರಿ ಪ್ಯಾಕ್‌ಗೆ ಉನ್ನತೀಕರಿಸಿದ್ದು, ಹೊಸ ಬ್ಯಾಟರಿ ಪ್ಯಾಕ್ ಪ್ರತಿ ಚಾರ್ಜ್‌ಗೆ ಗರಿಷ್ಠ 461 ಕಿ.ಮೀ ಮೈಲೇಜ್ ನೀಡುತ್ತದೆ.

ಪ್ರತಿ ಚಾರ್ಜ್‌ಗೆ 461 ಕಿ.ಮೀ ಮೈಲೇಜ್ ನೀಡುವ 2022ರ ಎಂಜಿ ಜೆಡ್ಎಸ್ ಇವಿ ಕಾರು ಬಿಡುಗಡೆ

ಹೊಸ ಕಾರು ಮಾದರಿಯು ಹೊಸ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್ ಜೊತೆ 8 ಲೆಯರ್ ಹೆರ್ ಪಿನ್ ಎಲೆಕ್ಟ್ರಿಕ್ ಮೋಟಾರ್ ಮೂಲಕ ಅತ್ಯುತ್ತಮ ಪರ್ಫಾಮೆನ್ಸ್ ಸಹ ಖಚಿತಪಡಿಸಿದ್ದು, ಹೊಸ ಕಾರು ಕೇವಲ 8.5 ಸೆಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗಪಡೆದುಕೊಳ್ಳುವ ಮೂಲಕ 176 ಬಿಎಚ್‌ಪಿ ಉತ್ಪಾದನೆ ಮಾಡಬಲ್ಲದು.

ಪ್ರತಿ ಚಾರ್ಜ್‌ಗೆ 461 ಕಿ.ಮೀ ಮೈಲೇಜ್ ನೀಡುವ 2022ರ ಎಂಜಿ ಜೆಡ್ಎಸ್ ಇವಿ ಕಾರು ಬಿಡುಗಡೆ

ಜೊತೆಗೆ ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಆಗಿ ಅಭಿವೃದ್ದಿಗೊಂಡಿದ್ದು, ಹೊಸ ಕಾರಿನಲ್ಲಿ ಈ ಹಿಂದಿನ ರೆಡ್, ವೈಟ್ ಮತ್ತು ಪೊಲಾರ್ ವೈಟ್ ಬಣ್ಣಗಳ ಜೊತೆಗೆ ಹೊಸ ಮಾದರಿಯಲ್ಲಿ ಸಿಲ್ವರ್, ಬ್ರೌನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಪ್ರತಿ ಚಾರ್ಜ್‌ಗೆ 461 ಕಿ.ಮೀ ಮೈಲೇಜ್ ನೀಡುವ 2022ರ ಎಂಜಿ ಜೆಡ್ಎಸ್ ಇವಿ ಕಾರು ಬಿಡುಗಡೆ

ಹೊಸ ಕಾರಿನಲ್ಲಿ ಎಂಜಿ ಮೋಟಾರ್ ಕಂಪನಿಯು ಫುಲ್ ಎಲ್‌ಇಡಿ ಯುನಿಟ್ ಹೊಂದಿರುವ ಹ್ವಾಕ್ ಐ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್ ಮತ್ತು ಫಾಗ್‌ಲ್ಯಾಂಪ್ ಹೊಂದಿದ್ದು, ಹಾಗೆಯೇ ಹೊಸ ಕಾರಿನಲ್ಲಿ ಈ ಹಿಂದಿನ ಗ್ರಿಲ್ ಅನ್ನು ಬಾಡಿ ಕಲರ್ ಕವರ್ಡ್ ಪ್ಲೇಟ್ ನಿಂದ ಬದಲಾಯಿಸಲಾಗಿದೆ.

ಪ್ರತಿ ಚಾರ್ಜ್‌ಗೆ 461 ಕಿ.ಮೀ ಮೈಲೇಜ್ ನೀಡುವ 2022ರ ಎಂಜಿ ಜೆಡ್ಎಸ್ ಇವಿ ಕಾರು ಬಿಡುಗಡೆ

ಜೊತೆಗೆ ಇನ್ ಟೆಕ್ ವಿನ್ಯಾಸವು ಸಹ ಹಳೆಯ ಮಾದರಿಗೆ ಹೋಲಿಸಿದರೆ ಒಟ್ಟಾರೆ ವಿನ್ಯಾಸವು ಏರೋಡೈನಾಮಿಕ್ ಹೆಚ್ಚು ಪರಿಣಾಮಕಾರಿಯಾಗಿ ಕಾಣಲಿದ್ದು, ಮರುವಿನ್ಯಾಸಗೊಳಿಸಿದ 17 ಇಂಚಿನ ಟೊಮ್ಹಾಕ್ ಹಬ್ ಅಲಾಯ್ ವ್ಹೀಲ್ ಗಳು ಕಾರಿನ ಹೆಚ್ಚಿನ ಆಕರ್ಷಣೆ ನೀಡುತ್ತದೆ.

ಪ್ರತಿ ಚಾರ್ಜ್‌ಗೆ 461 ಕಿ.ಮೀ ಮೈಲೇಜ್ ನೀಡುವ 2022ರ ಎಂಜಿ ಜೆಡ್ಎಸ್ ಇವಿ ಕಾರು ಬಿಡುಗಡೆ

ನವೀಕರಿಸಿದ ಎಂಜಿ ಜೆಡ್ಎಸ್ ಇವಿ ಫೇಸ್‌ಲಿಫ್ಟ್ ಮಾದರಿಯ ಕ್ಯಾಬಿನ್ ಒಳಗೂ ಕೂಡಾ ನವೀಕರಿಸಿದ ಹಲವು ಬದಲಾವಣೆಗಳಾಗಿದ್ದು, ಹೊಸ ಕಾರಿನಲ್ಲಿ ಎಂಜಿ ಐಸ್ಮಾರ್ಟ್ ಇನ್ಫೋಟೈನ್‌ಮೆಂಟ್ ಸಿಸ್ಟಂನೊಂದಿಗೆ ದೊಡ್ಡದಾದ ಪನೊರಮಿಕ್ ಸನ್‌ರೂಫ್, ಪಿಎಂ 2.5 ಫಿಲ್ಟರ್ ಹೊಂದಿರುವ ಏರ್ ಪ್ಯೂರಿಫೈಯರ್ ಹೊಂದಿದೆ.

ಪ್ರತಿ ಚಾರ್ಜ್‌ಗೆ 461 ಕಿ.ಮೀ ಮೈಲೇಜ್ ನೀಡುವ 2022ರ ಎಂಜಿ ಜೆಡ್ಎಸ್ ಇವಿ ಕಾರು ಬಿಡುಗಡೆ

ಇದರೊಂದಿಗೆ ಐಷಾರಾಮಿ ವೈಶಿಷ್ಟ್ಯಗಳೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಕಾರಿನಲ್ಲಿ ಸುಧಾರಿತ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಕೂಡಾ ಅಳವಡಿಸಿದ್ದು, 10.1 ಇಂಚಿನ ಹೆಚ್‌ಡಿ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಅತ್ಯುತ್ತಮ ಗ್ರಾಫಿಕ್ಸ್ ಮತ್ತು ಮೆನು ಲೇಔಟ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಹಾಗೂ ಆಂಡ್ರಾಯಿಡ್ ಆಟೋ ಜೋಡಣೆ ಹೊಂದಿದೆ.

ಪ್ರತಿ ಚಾರ್ಜ್‌ಗೆ 461 ಕಿ.ಮೀ ಮೈಲೇಜ್ ನೀಡುವ 2022ರ ಎಂಜಿ ಜೆಡ್ಎಸ್ ಇವಿ ಕಾರು ಬಿಡುಗಡೆ

ನವೀಕರಿಸಿದ ವೈಶಿಷ್ಟ್ಯತೆಗಳಲ್ಲಿ ರಿಮೋಟ್ ಕಂಟ್ರೋಲ್‌ನೊಂದಿಗೆ ಹೆಚ್ಚಿನ ಕನೆಕ್ಟಿವಿಟಿ ಫೀಚರ್ಸ್‌ಗಳ ಆಯ್ಕೆಗಳನ್ನು ಪಡೆಯಬಹುದಾಗಿದ್ದು, ಹೊಸ ಕಾರನಲ್ಲಿ ಕಂಪನಿಯು ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ ಹೊಂದಿರುವ ರಿಯರ್ ಎಡಿಎಎಸ್ ಜೋಡಣೆ ಮಾಡಿದೆ.

ಪ್ರತಿ ಚಾರ್ಜ್‌ಗೆ 461 ಕಿ.ಮೀ ಮೈಲೇಜ್ ನೀಡುವ 2022ರ ಎಂಜಿ ಜೆಡ್ಎಸ್ ಇವಿ ಕಾರು ಬಿಡುಗಡೆ

ರಿಯರ್ ಎಡಿಎಎಸ್‌ನಲ್ಲಿ 360 ಡಿಗ್ರಿ ಕ್ಯಾಮೆರಾ ಮೂಲಕ ಲೈನ್ ಚೇಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ರಿಯರ್ ಕ್ರಾರ್ಸ್-ಟ್ರಾಫಿಕ್ ಅಲರ್ಟ್ ಸೌಲಭ್ಯಗಳನ್ನು ಹೊಂದಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ಹಿಲ್ ಡಿಸೆಂಟ್ ಕಂಟ್ರೊಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೊಲ್, ಟೈರ್ ಪ್ರೆಷರ್ ಮಾನಿಟರಿಂಗ್ ಕಂಟ್ರೋಲ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಜೊತೆ ಆಟೋ ಹೋಲ್ಡ್ ಮತ್ತು 6 ಏರ್‌ಬ್ಯಾಗ್ ಸೌಲಭ್ಯಗಳನ್ನು ಹೊಂದಿದೆ.

ಪ್ರತಿ ಚಾರ್ಜ್‌ಗೆ 461 ಕಿ.ಮೀ ಮೈಲೇಜ್ ನೀಡುವ 2022ರ ಎಂಜಿ ಜೆಡ್ಎಸ್ ಇವಿ ಕಾರು ಬಿಡುಗಡೆ

ಇನ್ನು ಹೊಸ ಕಾರಿಗೆ ಗರಿಷ್ಠ ವಾರಂಟಿ ನೀಡಿರುವ ಎಂಜಿ ಕಂಪನಿಯು ಎಂಜಿ ಇ-ಶೀಲ್ಡ್ ಪ್ಯಾಕೇಜ್ ಅಡಿಯಲ್ಲಿ 5 ವರ್ಷಗಳ ಅನ್‌ಲಿಮಿಟೆಡ್ ವಾರಂಟಿ ಜೊತೆ 5 ವರ್ಷಗಳ ರೋಡ್‌ಸೈಡ್ ಅಸಿಸ್ಟ್, 5 ಉಚಿತ ಲೆಬರ್ ಸರ್ವಿಸ್, ಬ್ಯಾಟರಿ ಮೇಲೆ 8 ವರ್ಷ ಅಥವಾ 1.50 ಲಕ್ಷ ಕಿ.ಮೀ ಮೇಲೆ ವಾರಂಟಿ ಘೋಷಣೆ ಮಾಡಿದೆ.

Most Read Articles

Kannada
English summary
New mg zs ev launched in india at rs 21 99 lakh details
Story first published: Monday, March 7, 2022, 13:47 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X