ಅತ್ಯಧಿಕ ಮೈಲೇಜ್ ಪ್ರೇರಿತ 2022ರ ಜೆಡ್ಎಸ್ ಇವಿ ಅನಾವರಣಗೊಳಿಸಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ನವೀಕೃತ ಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ 2022ರ ಮಾದರಿಯ ತಾಂತ್ರಿಕ ಮಾಹಿತಿಯನ್ನು ಬಹಿರಂಗಪಡಿಸಿದೆ.

ಅತ್ಯಧಿಕ ಮೈಲೇಜ್ ಪ್ರೇರಿತ 2022ರ ಜೆಡ್ಎಸ್ ಇವಿ ಅನಾವರಣಗೊಳಿಸಿದ ಎಂಜಿ ಮೋಟಾರ್

ಪ್ರಸ್ತುತ ಕಾರು ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುತ್ತಿರುವ ಭಾರತದ ಕೆಲವೇ ವಾಹನ ತಯಾರಕ ಕಂಪನಿಗಳಲ್ಲಿ ಎಂಜಿ ಮೋಟಾರ್ಸ್ ಕೂಡಾ ಒಂದಾಗಿದ್ದು, ಬ್ರಿಟಿಷ್ ಕಾರ್ ಬ್ರಾಂಡ್ ಈಗ ತನ್ನ ಜನಪ್ರಿಯ ಜೆಡ್ಎಸ್ ಇವಿ ಮಾದರಿಯನ್ನು ಮಹತ್ವದ ಬದಲಾವಣೆಗಳೊಂದಿಗೆ ನವೀಕರಿಸಿ ಭಾರತದಲ್ಲಿ ಪರಿಚಯಿಸುತ್ತಿದೆ.

ಅತ್ಯಧಿಕ ಮೈಲೇಜ್ ಪ್ರೇರಿತ 2022ರ ಜೆಡ್ಎಸ್ ಇವಿ ಅನಾವರಣಗೊಳಿಸಿದ ಎಂಜಿ ಮೋಟಾರ್

2022ರ ಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯಲ್ಲಿ ಕಂಪನಿಯು ಬಾಹ್ಯ ವಿನ್ಯಾಸದಲ್ಲಿ ಕೆಲವೇ ಕೆಲವು ಬದಲಾವಣೆಗಳನ್ನು ಪರಿಚಯಿಸಿದ್ದು, ಹೊಸ ಕಾರಿನಲ್ಲಿ ಮಹತ್ವದ ಬದಲಾವಣೆ ಅಂದರೆ ಅದು ನವೀಕರಿಸಿದ ಬ್ಯಾಟರಿ ಪ್ಯಾಕ್ ಗಮನಸೆಳೆಯಲಿದೆ.

ಅತ್ಯಧಿಕ ಮೈಲೇಜ್ ಪ್ರೇರಿತ 2022ರ ಜೆಡ್ಎಸ್ ಇವಿ ಅನಾವರಣಗೊಳಿಸಿದ ಎಂಜಿ ಮೋಟಾರ್

ಸದ್ಯ ಮಾರುಕಟ್ಟೆಯಲ್ಲಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು 44.5 kWh ಬ್ಯಾಟರಿ ಪ್ಯಾಕ್ ಮೂಲಕ ಪ್ರತಿ ಚಾರ್ಚ್‌ಗೆ 419 ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಮರ್ಥ್ಯ ಹೊಂದಿದ್ದು, 2022ರ ಮಾದರಿಯಲ್ಲಿ ಕಂಪನಿಯು 51 kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡುತ್ತಿದೆ.

ಅತ್ಯಧಿಕ ಮೈಲೇಜ್ ಪ್ರೇರಿತ 2022ರ ಜೆಡ್ಎಸ್ ಇವಿ ಅನಾವರಣಗೊಳಿಸಿದ ಎಂಜಿ ಮೋಟಾರ್

51 kWh ಬ್ಯಾಟರಿ ಪ್ಯಾಕ್ ಮೂಲಕ ಹೊಸ ಕಾರಿನ ಮೈಲೇಜ್ ರೇಂಜ್ ಇದೀಗ ಪ್ರತಿ ಚಾರ್ಜ್‌ಗೆ 480 ಕಿ.ಮೀ ಗೆ ಹೆಚ್ಚಳವಾಗಿದ್ದು, ಮೈಲೇಜ್ ಹೆಚ್ಚಳದೊಂದಿಗೆ ಕಾರಿನ ಪರ್ಫಾಮೆನ್ಸ್ ಕೂಡಾ ಸಾಕಷ್ಟು ಸುಧಾರಣೆಗೊಂಡಿರುವುದು ಎಲೆಕ್ಟ್ರಿಕ್ ಎಸ್‌ಯುವಿ ಪ್ರಿಯರನ್ನು ಸೆಳೆಯಲಿದೆ.

ಅತ್ಯಧಿಕ ಮೈಲೇಜ್ ಪ್ರೇರಿತ 2022ರ ಜೆಡ್ಎಸ್ ಇವಿ ಅನಾವರಣಗೊಳಿಸಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಕಂಪನಿಯು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಈಗಾಗಲೇ 51 kWh ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿಯನ್ನು ಕಳೆದ ವರ್ಷದಿಂದಲೇ ಮಾರಾಟ ಮಾಡುತ್ತಿದ್ದು, ಇದೀಗ ಭಾರತದಲ್ಲೂ 2022ರ ಮಾದರಿಯೊಂದಿಗೆ ಮತ್ತಷ್ಟು ಗ್ರಾಹಕರನ್ನು ಸೆಳೆಯುವ ನೀರಿಕ್ಷೆಯಲ್ಲಿದೆ.

ಅತ್ಯಧಿಕ ಮೈಲೇಜ್ ಪ್ರೇರಿತ 2022ರ ಜೆಡ್ಎಸ್ ಇವಿ ಅನಾವರಣಗೊಳಿಸಿದ ಎಂಜಿ ಮೋಟಾರ್

ಭಾರತದಲ್ಲಿ ಸದ್ಯ ಅತಿ ಹೆಚ್ಚು ಬೇಡಿಕೆಯಲ್ಲಿರುವ ಎಲೆಕ್ಟ್ರಿಕ್ ಕಾರಗಳ ಮಾರಾಟ ಪಟ್ಟಿಯಲ್ಲಿ ಟಾಟಾ ನೆಕ್ಸಾನ್ ಇವಿ ನಂತರ ಎರಡನೇ ಸ್ಥಾನ ಕಾಯ್ದುಕೊಂಡಿರುವ ಜೆಡ್ಎಸ್ ಇವಿ ಕಾರು ತುಸು ದುಬಾರಿ ಬೆಲೆ ಹೊಂದಿದ್ದರೂ ಹೆಚ್ಚಿನ ಮೈಲೇಜ್ ರೇಂಜ್ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದೆ.

ಅತ್ಯಧಿಕ ಮೈಲೇಜ್ ಪ್ರೇರಿತ 2022ರ ಜೆಡ್ಎಸ್ ಇವಿ ಅನಾವರಣಗೊಳಿಸಿದ ಎಂಜಿ ಮೋಟಾರ್

ಇದೀಗ ಬಿಡುಗಡೆಗಾಗಿ ಸಿದ್ದವಾಗಿರುವ ಹೊಸ ಮಾದರಿಯು ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ರೇಂಜ್ ಖಾತ್ರಿಪಡಿಸಿರುವುದು ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದ್ದು, ಉನ್ನತೀಕರಿಸಿದ ಬ್ಯಾಟರಿ ಪ್ಯಾಕ್ ಜೊತೆಗೆ ಹೊಸ ಕಾರಿನಲ್ಲಿ ಇನ್ನು ಕೆಲವು ಹೆಚ್ಚುವರಿ ಫೀಚರ್ಸ್ ನೀರಿಕ್ಷಿಸಲಾಗಿದೆ.

ಅತ್ಯಧಿಕ ಮೈಲೇಜ್ ಪ್ರೇರಿತ 2022ರ ಜೆಡ್ಎಸ್ ಇವಿ ಅನಾವರಣಗೊಳಿಸಿದ ಎಂಜಿ ಮೋಟಾರ್

ನವೀಕರಿಸಿದ ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿಯ ಮುಂಭಾಗದ ಪ್ರೊಫೈಲ್ ಈ ಬಾರಿ ಗಮನಾರ್ಹ ಬದಲಾವಣೆಯನ್ನು ಪಡೆದಿದ್ದು, ಇದು ಪೆಟ್ರೋಲ್ ಚಾಲಿತ ಆಸ್ಟರ್ ನಂತೆಯೇ ಹೊಸ ವಿನ್ಯಾಸದೊಂದಿಗೆ ತೀಕ್ಷ್ಣವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳನ್ನು ಮತ್ತು ಟೈಲ್‌ಲೈಟ್‌ಗಳನ್ನು ಪಡೆದುಕೊಂಡಿದೆ.

ಅತ್ಯಧಿಕ ಮೈಲೇಜ್ ಪ್ರೇರಿತ 2022ರ ಜೆಡ್ಎಸ್ ಇವಿ ಅನಾವರಣಗೊಳಿಸಿದ ಎಂಜಿ ಮೋಟಾರ್

ಹಾಗೆಯೇ ಹೊಸ ಕಾರು ಗ್ರಿಲ್ ಅನ್ನು ಕವರ್ಡ್ ಪ್ಲೇಟ್ ನಿಂದ ಬದಲಾಯಿಸಲಾಗಿದ್ದು, ಮುಂಭಾಗದ ಬಂಪರ್ ಅನ್ನು ಸಹ ನವೀಕರಿಸಲಾಗಿದೆ. ಜೊತೆಗೆ ಇನ್ ಟೆಕ್ ವಿನ್ಯಾಸವು ಸಹ ಪ್ರಸ್ತುತ ಮಾದರಿಗೆ ಹೋಲಿಸಿದರೆ ಒಟ್ಟಾರೆ ವಿನ್ಯಾಸವು ಏರೋಡೈನಾಮಿಕ್ ಹೆಚ್ಚು ಪರಿಣಾಮಕಾರಿಯಾಗಿ ಕಾಣುತ್ತದೆ.

ಅತ್ಯಧಿಕ ಮೈಲೇಜ್ ಪ್ರೇರಿತ 2022ರ ಜೆಡ್ಎಸ್ ಇವಿ ಅನಾವರಣಗೊಳಿಸಿದ ಎಂಜಿ ಮೋಟಾರ್

ಹೊಸ ಕಾರಿನ ಹಿಂದಿನ ಪ್ರೊಫೈಲ್ ಕೂಡಾ ತುಸು ಬದಲಾವಣೆ ಪಡೆದುಕೊಂಡಿದ್ದು, ಇದು ಮರುವಿನ್ಯಾಸಗೊಳಿಸಿದ 17 ಇಂಚಿನ ಅಲಾಯ್ ವ್ಹೀಲ್ ಗಳೊಂದಿಗೆ ಹೆಚ್ಚಿನ ಆಕರ್ಷಣೆ ನೀಡುತ್ತದೆ. ನವೀಕರಿಸಿದ ಎಂಜಿ ಜೆಡ್ಎಸ್ ಇವಿ ಫೇಸ್‌ಲಿಫ್ಟ್ ಮಾದರಿಯ ಕ್ಯಾಬಿನ್ ಒಳಗೂ ಕೂಡಾ ನವೀಕರಿಸಿದ ಹಲವು ಬದಲಾವಣೆಗಳಾಗಿದ್ದು, ಹೊಸ ಕಾರು ಎಂಜಿ ಐಸ್ಮಾರ್ಟ್ ಇನ್ಫೋಟೈನ್‌ಮೆಂಟ್ ಸಿಸ್ಟಂನೊಂದಿಗೆ 10.1 ಇಂಚಿನ ಡಿಸ್‌ಪ್ಲೇ, ದೊಡ್ಡದಾದ ಪನೊರಮಿಕ್ ಸನ್‌ರೂಫ್ ಅನ್ನು ಪಡೆದುಕೊಂಡಿದೆ.

ಅತ್ಯಧಿಕ ಮೈಲೇಜ್ ಪ್ರೇರಿತ 2022ರ ಜೆಡ್ಎಸ್ ಇವಿ ಅನಾವರಣಗೊಳಿಸಿದ ಎಂಜಿ ಮೋಟಾರ್

ನವೀಕರಿಸಿದ ವೈಶಿಷ್ಟ್ಯತೆಗಳಲ್ಲಿ ರಿಮೋಟ್ ಕಂಟ್ರೋಲ್‌ನೊಂದಿಗೆ ಹೆಚ್ಚಿನ ಕನೆಕ್ಟಿವಿಟಿ ಫೀಚರ್ಸ್ ಆಯ್ಕೆಗಳನ್ನು ಪಡೆಯಬಹುದಾಗಿದ್ದು, ಜೊತೆಗೆ ಹೊಸ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ವೈರ್‌ಲೆಸ್ ಚಾರ್ಜಿಂಗ್ ತಂತ್ರಜ್ಞಾನವನ್ನು ಪರಿಚಯಿಸಲಾಗಿದೆ.

ಅತ್ಯಧಿಕ ಮೈಲೇಜ್ ಪ್ರೇರಿತ 2022ರ ಜೆಡ್ಎಸ್ ಇವಿ ಅನಾವರಣಗೊಳಿಸಿದ ಎಂಜಿ ಮೋಟಾರ್

ಇದರೊಂದಿಗೆ ಹೊಸ ಜೆಡ್ಎಸ್ ಇವಿ ಕಾರಿನಲ್ಲಿ ಎಂಜಿ ಕಂಪನಿಯು ಆಸ್ಟರ್ ಎಸ್‌ಯುವಿ ನೀಡಲಾಗಿರುವ ಭಾರತದ ಮೊದಲ ವ್ಯಯಕ್ತಿಕರಣಗೊಳಿಸಿದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸೌಲಭ್ಯವನ್ನು ಜೋಡಣೆ ಮಾಡುತ್ತಿದ್ದು, ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಹೊಸ ಕಾರಿಗೆ ಮತ್ತಷ್ಟು ಸುರಕ್ಷತೆ ನೀಡಲಿದೆ.

ಅತ್ಯಧಿಕ ಮೈಲೇಜ್ ಪ್ರೇರಿತ 2022ರ ಜೆಡ್ಎಸ್ ಇವಿ ಅನಾವರಣಗೊಳಿಸಿದ ಎಂಜಿ ಮೋಟಾರ್

ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್)ನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಫಾರ್ವಡ್ ಕೂಲಿಷನ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಲೇನ್ ಕೀಪ್ ಅಸಿಸ್ಟ್, ಲೈನ್ ಡಿಫಾರ್ಚರ್ ಪ್ರಿವೆಷನ್, ಸ್ಪೀಡ್ ವಾರ್ನಿಂಗ್, ಇಂಟೆಲಿಜೆಂಟ್ ಮೋಡ್ ಹೊಂದಿರುವ ಸ್ಪಿಡ್ ಅಸಿಸ್ಟ್ ಸಿಸ್ಟಂ, ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್‌ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್‌ಗಳಲಿವೆ.

ಅತ್ಯಧಿಕ ಮೈಲೇಜ್ ಪ್ರೇರಿತ 2022ರ ಜೆಡ್ಎಸ್ ಇವಿ ಅನಾವರಣಗೊಳಿಸಿದ ಎಂಜಿ ಮೋಟಾರ್

ಆಕ್ಟಿವ್ ಸೇಫ್ಟಿ ಫೀಚರ್ಸ್‌ಗಳಲ್ಲಿ ಎಡಿಎಎಸ್ ತಂತ್ರಜ್ಞಾನವು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸೌಲಭ್ಯವಾಗಿಯೂ ಕಾರ್ಯ ನಿರ್ವಹಣೆ ಮಾಡಲಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಆರು ಏರ್‌ಬ್ಯಾಗ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್(ಇಎಸ್‌ಪಿ), ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಹಿಲ್ ಡಿಸೆಂಟ್ ಮತ್ತು 360 ಡಿಗ್ರಿ ವ್ಯೂ ಕ್ಯಾಮೆರಾ ಸೌಲಭ್ಯಗಳಿರಲಿವೆ.

ಅತ್ಯಧಿಕ ಮೈಲೇಜ್ ಪ್ರೇರಿತ 2022ರ ಜೆಡ್ಎಸ್ ಇವಿ ಅನಾವರಣಗೊಳಿಸಿದ ಎಂಜಿ ಮೋಟಾರ್

ಹೀಗಾಗಿ 2022ರ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಹೆಚ್ಚಿನ ಮಟ್ಟದ ಮೈಲೇಜ್ ರೇಂಜ್‌ನೊಂದಿಗೆ ಸುರಕ್ಷತೆಯಲ್ಲೂ ಗಮನಸೆಳೆಯಲಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿ ಮಾದರಿಗಿಂತಲೂ ರೂ. 1.50 ಲಕ್ಷದಿಂದ ರೂ. 2 ಲಕ್ಷದ ತನಕ ಹೆಚ್ಚುವರಿ ಬೆಲೆ ಹೊಂದಬಹುದಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಜೆಡ್ಎಸ್ ಮಾದರಿಯು ವಿವಿಧ ಮಾದರಿಯೊಂದಿಗೆ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 21.49 ಲಕ್ಷದಿಂದ ರೂ. 25.18 ಲಕ್ಷ ಬೆಲೆ ಹೊಂದಿದ್ದು, ಹೊಸ ಮಾದರಿಯು ಮತ್ತಷ್ಟು ದುಬಾರಿಯಾಗಿರಲಿದೆ.

Most Read Articles

Kannada
English summary
New mg zs ev officially revealed ahead of india launch details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X