ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ 2022ರ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ರೆನಾಲ್ಟ್ ಇಂಡಿಯಾ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳ ಹೊಸ ಆವೃತ್ತಿಗಳನ್ನು ಉನ್ನತೀಕರಿಸುತ್ತಿದ್ದು, ಕಂಪನಿಯು ಇದೀಗ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ 2022ರ ಮಾದರಿಯನ್ನು ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆ ಮಾಡಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ 2022ರ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಿಗರ್ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ಕೆಲವು ಹೆಚ್ಚುವರಿ ಫೀಚರ್ಸ್ ಹೊಂದಿದ್ದು, ಎಂಜಿನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಹೊಸ ಫೀಚರ್ಸ್‌ಗಳೊಂದಿಗೆ ಕಿಗರ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.84 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 10.40 ಲಕ್ಷ ಬೆಲೆ ಹೊಂದಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ 2022ರ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಕಿಗರ್ ಹೊಸ ಮಾದರಿಯು ಹಳೆಯ ಮಾದರಿಗಿಂತಲೂ ರೂ. 10 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿದ್ದು, ಬೆಲೆ ಏರಿಕೆಗೆ ಅನುಗುಣವಾಗಿ ಕೆಲವು ಹೊಸ ಫೀಚರ್ಸ್‌ಗಳನ್ನು ಸಹ ನೀಡಲಾಗಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ 2022ರ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಿಗರ್ ಮಾದರಿಯಲ್ಲಿ ಈ ಬಾರಿ ಹೊಸ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ನವೀಕರಿಸಿದ ಸ್ಕೀಡ್ ಪ್ಲೇಟ್ ಪಡೆದುಕೊಂಡಿದೆ. ಜೊತೆಗೆ ಹೊಸ ಕಾರಿನಲ್ಲಿ ಟರ್ಬೊ ಡಿಕಾಲ್ಸ್‌ಗಳನ್ನು ನೀಡಲಾಗಿದ್ದು, ಇದು ಕಾರಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ನೀಡಿದ್ದು, ಒಳಭಾಗದಲ್ಲೂ ಕೆಲವು ಬದಲಾವಣೆಗಳಾಗಿವೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ 2022ರ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ನೀಡಲು ಒಳಭಾಗದಲ್ಲೂ ಕೆಲವು ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ನೀಡಲಾಗಿದ್ದು, ಹೊಸದಾಗಿ ರೆಡ್ ಪೇಡ್ ಹೊಂದಿರುವ ಡ್ಯಾಶ್ ಬೋರ್ಡ್, ಪಿಎಂ2.5 ಅಡ್ವಾನ್ಸ್ ಏರ್‌ಫಿಲ್ಟರ್, ರೆಡ್ ಆಕ್ಸೆಂಟ್ ಹೊಂದಿರುವ ಸೀಟ್‌ಗಳು ಮತ್ತು ಆಯ್ಕೆ ರೂಪದಲ್ಲಿ ವೈರ್‌ಲೆಸ್ ಸ್ಮಾರ್ಟ್ ‌ಫೋನ್ ಚಾರ್ಜರ್, ಕ್ರೂಸ್ ಕಂಟ್ರೂಲ್ ಸೌಲಭ್ಯಗಳಿವೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ 2022ರ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಇದರ ಹೊರತಾಗಿ ಹೊಸ ಕಾರಿನ ಈ ಹಿಂದಿನ ಮಾದರಿಯಲ್ಲಿ ತಾಂತ್ರಿಕ ಅಂಶಗಳು ಮತ್ತು ಎಂಜಿನ್ ಆಯ್ಕೆಯನ್ನು ಮುಂದುವರಿಸಲಾಗಿದ್ದು, ಹೊಸ ಕಾರಿನಲ್ಲಿ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ 2022ರ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಎರಡು ಎಂಜಿನ್ ಮಾದರಿಗಳಲ್ಲೂ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ 2022ರ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಿಗರ್ ಕಾರು ಮಾದರಿಯು ಪರ್ಫಾಮೆನ್ಸ್ ಜೊತೆಗೆ ಎಆರ್‌ಎಐ ಟೆಸ್ಟಿಂಗ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ ಇಂಧನ ದಕ್ಷತೆಯೊಂದಿಗೆ 20.5 ಕಿ.ಮೀ ಮೈಲೇಜ್ ಸಾಧಿಸಿದೆ ಎಂದು ಕಂಪನಿಯು ಅಧಿಕೃತವಾಗಿ ಘೋಷಿಸಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ 2022ರ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರಿನ 1.0 ಲೀಟರ್ ಟರ್ಬೊ ಮ್ಯಾನುವಲ್ ಮಾದರಿಯು ಹೆಚ್ಚಿನ ಮಟ್ಟದ ಇಂಧನ ದಕ್ಷತೆ ಪಡೆದುಕೊಂಡಿದ್ದು, 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮ್ಯಾನುವಲ್ ಮಾದರಿಯು ಕೂಡಾ ಉತ್ತಮ ಇಂಧನ ದಕ್ಷತೆ ಹೊಂದಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ 2022ರ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಕಿಗರ್ ಕಾರು ಮಾದರಿಯೊಂದಿಗೆ ಪ್ಲ್ಯಾಟ್‌ಫಾರ್ಮ್ ಹಂಚಿಕೊಂಡಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ಕಿಗರ್ ಮಾದರಿಯಲ್ಲೇ ಇಂಧನ ದಕ್ಷತೆ ಹೊಂದಿದ್ದು, ಎರಡು ಮಾದರಿಗಳಲ್ಲೂ ಒಂದೇ ಮಾದರಿಯ ಎಂಜಿನ್ ಆಯ್ಕೆ ನೀಡಲಾಗಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ 2022ರ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಪ್ರತಿಸ್ಪರ್ಧಿ ಮಾದರಿಗಳಾದ ಕಿಯಾ ಸೊನೆಟ್, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಹೋಂಡಾ ಡಬ್ಲ್ಯುಆರ್-ವಿ ಮಾದರಿಗಳಿಂತಲೂ ಕಿಗರ್ ಮತ್ತು ಮ್ಯಾಗ್ನೈಟ್ ಕಾರುಗಳು ಇಂಧನ ದಕ್ಷತೆಯಲ್ಲಿ ಮುಂಚೂಣಿಯಲ್ಲಿದ್ದು, ಕಿಗರ್ ಮತ್ತು ಮ್ಯಾಗ್ನೈಟ್ ಕಾರುಗಳು ಬೆಲೆಯಲ್ಲೂ ಕೂಡಾ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಅತಿ ಕಡಿಮೆ ಬೆಲೆ ಹೊಂದಿವೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ 2022ರ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಕಿಗರ್ ಕಾರು ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಕಿಗರ್ ಕಾರು ಮಾದರಿಯು ಆಕರ್ಷಕ ಬೆಲೆಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆಯುತ್ತಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ 2022ರ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಕಿಗರ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಂತೆ ಹಲವಾರು ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿದ್ದು, ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯುತ್ತಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಂಡ 2022ರ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹಾಗೆಯೇ ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ. ಹೊಸ ಕಾರಿನಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

Most Read Articles

Kannada
English summary
New renault kiger launched in india at rs 5 84 lakh details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X