ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kodiaq ಫೇಸ್‌ಲಿಫ್ಟ್ ಎಸ್‍ಯುವಿ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಸ್ಕೋಡಾ ತನ್ನ ಬಹುನಿರೀಕ್ಷಿತ 2022ರ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಸ್ಕೋಡಾ ಕೊಡಿಯಾಕ್ (Skoda Kodiaq ) ಎಸ್‍ಯುವಿಯು ಪ್ರಮುಖ ನವೀಕರಣಗಳೊಂದಿಗೆ ಮಾರುಕಟ್ಟೆಯನ್ನು ಪ್ರವೇಶಿಸಲಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kodiaq ಫೇಸ್‌ಲಿಫ್ಟ್ ಎಸ್‍ಯುವಿ

2022ರ ಸ್ಕೋಡಾ ಕೊಡಿಯಾಕ್ ಎಸ್‍ಯುವಿಯು 2022ರ ಜನವರಿ 10 ರಂದು ಬಿಡುಗಡೆಯಾಗಲಿದೆ. ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತದಲ್ಲಿ ಸಂಪೂರ್ಣವಾಗಿ ನಾಕ್ಡ್ ಡೌನ್ (CKD) ಘಟಕವಾಗಿ ನೀಡಲಾಗುವುದು. ಸ್ಕೋಡಾ ಆಟೋ ತನ್ನ ಹೊಸ ಕೊಡಿಯಾಕ್ ಎಸ್‍ಯುವಿಯ ಉತ್ಪಾದನೆಯನ್ನು ಫೋಕ್ಸ್‌ವ್ಯಾಗನ್ ಇಂಡಿಯಾದ ಮಹಾರಾಷ್ಟ್ರದ ಔರಂಗಾಬಾದ್ ಮೂಲದ ಘಟಕದಲ್ಲಿ ಜೋಡಿಸಲಾಗುತ್ತಿದೆರಿನ. ಬಿಎಸ್ 6 ಆವೃತ್ತಿಯು ಟರ್ಬೊ ಪೆಟ್ರೋಲ್ ಎಂಜಿನ್‌ನೊಂದಿಗೆ ಸ್ಟ್ಯಾಂಡರ್ಡ್ ಆಗಿ ಬರುತ್ತಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kodiaq ಫೇಸ್‌ಲಿಫ್ಟ್ ಎಸ್‍ಯುವಿ

ಸ್ಕೋಡಾ ಕಂಪನಿಯು ಕೊಡಿಯಾಕ್ ಎಸ್‍ಯುವಿಯನ್ನು ಮೊದಲ ಬಾರಿಗೆ 2016ರಲ್ಲಿ ಪರಿಚಯಿಸಲಾಯಿತು ಮತ್ತು ಕಳೆದ 5 ವರ್ಷಗಳಲ್ಲಿ ಪ್ರಪಂಚದಾದ್ಯಂತ 6 ಲಕ್ಷಕ್ಕೂ ಹೆಚ್ಚು ಯುನಿಟ್ ಗಳನ್ನು ಮಾರಾಟ ಮಾಡಲಾಗಿತ್ತು. ಈ ಹೊಸ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷದಲ್ಲ ಬಿಡುಗಡೆಗೊಳಿಸಲು ಯೋಜಿಸಲಾಗಿತ್ತು.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kodiaq ಫೇಸ್‌ಲಿಫ್ಟ್ ಎಸ್‍ಯುವಿ

ಆದರೆ ಕರೋನಾ ಆರ್ಭಟ ಮತ್ತು ಸೆಮಿಕಂಡಕ್ಟರ್ ಚಿಪ್‌ಗಳ ಕೊರತೆಯಿಂದ ಉಂಟಾದ ಅನಿರೀಕ್ಷಿತ ಸಂದರ್ಭಗಳಿಂದಾಗಿ ವಿಳಂಬವಾಗಿದೆ. ಈ ಸ್ಕೋಡಾ ಕೊಡಿಯಾಕ್ ಎಸ್‍ಯುವಿಯು ಎಸ್ಇ, ಎಸ್ಇ ಎಲ್, ಸ್ಪೋರ್ಟಿ ಲೈನ್ ಮತ್ತು ಎಲ್&ಕೆ ಎಂಬ ರೂಪಾಂತರಗಳಲ್ಲಿ ಲಭ್ಯವಿರಲಿದೆ,

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kodiaq ಫೇಸ್‌ಲಿಫ್ಟ್ ಎಸ್‍ಯುವಿ

ಈ ಹೊಸ ಸ್ಕೋಡಾ ಕೊಡಿಯಾಕ್ ಎಸ್‍ಯುವಿಯಲ್ಲಿ 2.0 ಲೀಟರ್ ಪೆಟ್ರೋಲ್ ಟಿಎಸ್ಐ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ ಅನ್ನು ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗುತ್ತಿದೆ, ಸ್ಕೋಡಾ ಕೊಡಿಯಾಕ್ ಮಾದರಿಯು 7-ಸೀಟರ್ ಎಸ್‍ಯುವಿಯಾಗಿದೆ. ಈ ಎಸ್‍ಯುವಿಯು 4×4 ಸಿಸ್ಟಂ ನೊಂಡಿಗೆ ಬರಲಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kodiaq ಫೇಸ್‌ಲಿಫ್ಟ್ ಎಸ್‍ಯುವಿ

ಪ್ರೀಮಿಯಂ ಮೂರು-ಸಾಲಿನ ಎಸ್‍ಯುವಿಯಲ್ಲಿನ ನವೀಕರಣಗಳು ಪ್ರಸ್ತುತ ಮಾದರಿಯಲ್ಲಿ ಸೌಂದರ್ಯವರ್ಧಕ ಮತ್ತು ವೈಶಿಷ್ಟ್ಯದ ನವೀಕರಣಗಳನ್ನು ಒಳಗೊಂಡಿರುತ್ತವೆ. ಅದರ ಬಾಹ್ಯ ವಿನ್ಯಾಸದಿಂದ ಪ್ರಾರಂಭಿಸಿ, ಹೊಸ ಕೊಡಿಯಾಕ್ ಫೇಸ್‌ಲಿಫ್ಟ್ ಮೊದಲ ಬಾರಿಗೆ ಸಮಗ್ರ ಎಲ್ಇಡಿ ಡಿಆರ್ಎಲ್ ಗಳೊಂದಿಗೆ ಎಂಬೆಡ್ ಮಾಡಲಾದ ಪೂರ್ಣ-ಎಲ್ಇಡಿ ಮ್ಯಾಟ್ರಿಕ್ಸ್ ಹೆಡ್‌ಲೈಟ್‌ಗಳನ್ನು ಪಡೆಯುತ್ತದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kodiaq ಫೇಸ್‌ಲಿಫ್ಟ್ ಎಸ್‍ಯುವಿ

ಈ ನವೀಕರಿಸಿದ ಎಸ್‍ಯುವಿಯ ಮುಂಭಾಗವು ಪರಿಷ್ಕೃತ ಸ್ಕೋಡಾ ಬಟರ್‌ಫ್ಲೈ ರೇಡಿಯೇಟರ್ ಗ್ರಿಲ್ ಮತ್ತು ಮೆಶ್-ಪ್ಯಾಟರ್ನ್ ಏರ್ ಇನ್‌ಟೇಕ್ ವೆಂಟ್‌ಗಳೊಂದಿಗೆ ರಿಪ್ರೊಫೈಲ್ಡ್ ಫ್ರಂಟ್ ಬಂಪರ್ ಅನ್ನು ಪಡೆಯುತ್ತದೆ. ಎಸ್‍ಯುವಿಯ ಬಾನೆಟ್ ವಿನ್ಯಾಸವನ್ನು ಸಹ ಸ್ವಲ್ಪಮಟ್ಟಿಗೆ ಟ್ವೀಕ್ ಮಾಡಲಾಗಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kodiaq ಫೇಸ್‌ಲಿಫ್ಟ್ ಎಸ್‍ಯುವಿ

ಸೈಡ್ ಪ್ರೊಫೈಲ್ ನಲ್ಲಿ ಹೊಸ 20-ಇಂಚಿನ ಅಲಾಯ್ ವ್ಹೀಲ್ ಗಳನ್ನು ಟಾಪ್-ಎಂಡ್ ರೂಪಾಂತರಕ್ಕಾಗಿ ತೆಗೆಯಬಹುದಾದ ಕವರ್‌ಗಳೊಂದಿಗೆ ಬ್ಲ್ಯಾಕ್ -ಔಟ್ ಪಿಲ್ಲರ್‌ಗಳು ಮತ್ತು ರೂಫ್ ರೈಲ್‌ಗಳನ್ನು ಪಡೆಯುತ್ತದೆ. ಹಿಂಭಾಗದ ಕಡೆಗೆ ಚಲಿಸುವಾಗ, ಹೊಸ ಕೊಡಿಯಾಕ್ ಫೇಸ್‌ಲಿಫ್ಟ್ ಹಿಂಭಾಗದ ವಿಂಡ್‌ಶೀಲ್ಡ್‌ನ ಬದಿಗಳಲ್ಲಿ ವಿಂಗ್ಲೆಟ್‌ಗಳೊಂದಿಗೆ ಹೊಸ ಸ್ಪಾಯ್ಲರ್ ಅನ್ನು ಪಡೆಯುತ್ತದೆ,

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kodiaq ಫೇಸ್‌ಲಿಫ್ಟ್ ಎಸ್‍ಯುವಿ

ಇದು ಎಸ್‍ಯುವಿಯ ಏರೋಡೈನಾಮಿಕ್ ಗುಣಲಕ್ಷಣಗಳನ್ನು ಉತ್ತಮಗೊಳಿಸುತ್ತದೆ ಮತ್ತು 0.31 ರ ಕಡಿಮೆ ಡ್ರ್ಯಾಗ್ ಗುಣಾಂಕವನ್ನು ನೀಡುತ್ತದೆ. ಇದು ಮರುವಿನ್ಯಾಸಗೊಳಿಸಲಾದ ಸುತ್ತುವ ಎಲ್ಇಡಿ ಟೈಲ್-ಲ್ಯಾಂಪ್ಗಳು, ಪರಿಷ್ಕೃತ ಹಿಂಭಾಗದ ಬಂಪರ್ ಮತ್ತು ಅದರ ಟೈಲ್ಗೇಟ್ನಲ್ಲಿ ಸ್ಕೋಡಾ ಎಂದು ಬರೆಯಲಾಗಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kodiaq ಫೇಸ್‌ಲಿಫ್ಟ್ ಎಸ್‍ಯುವಿ

ಕ್ಯಾಬಿನ್ ಒಳಗೆ, ಕೊಡಿಯಾಕ್ ಫೇಸ್‌ಲಿಫ್ಟ್ ಅನ್ನು ಐದು ಮತ್ತು ಏಳು-ಆಸನಗಳ ಲೇಔಟ್‌ಗಳಲ್ಲಿ ನೀಡಲಾಗುವುದು, ಮೆಮೊರಿ ಕಾರ್ಯದೊಂದಿಗೆ ಮಲ್ಟಿವೇ ಎಲೆಕ್ಟ್ರಿಕ್ ಸೀಟ್ ಹೊಂದಾಣಿಕೆ, ಮತ್ತು ಮಲ್ಟಿಫಂಕ್ಷನಲ್ ಸ್ಟೀರಿಂಗ್ ವೀಲ್ ಸೇರಿವೆ. ಕ್ಯಾಬಿನ್ 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಜೊತೆಗೆ 9.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇಯನ್ನು ಹೊಂದಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kodiaq ಫೇಸ್‌ಲಿಫ್ಟ್ ಎಸ್‍ಯುವಿ

ಇನ್ಫೋಟೈನ್‌ಮೆಂಟ್ ಯೂನಿಟ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಮತ್ತು ಇನ್-ಬಿಲ್ಟ್ ಕನೆಕ್ಟೆಡ್ ಕಾರ್ ಟೆಕ್ ಅನ್ನು ಹೊಂದಿದೆ. ಇತರ ಗಮನಾರ್ಹ ವೈಶಿಷ್ಟ್ಯಗಳೆಂದರೆ ಎಲ್ಇಡಿ ಆಂಬಿಯೆಂಟ್ ಲೈಟಿಂಗ್, ಹೊಸ ಅಲಂಕಾರಿಕ ಸ್ಟ್ರೀಪ್ ಗಳು ಮತ್ತು ಡೋರ್ ಟ್ರಿಮ್‌ಗಳಲ್ಲಿ ವ್ಯತಿರಿಕ್ತ ಹೊಲಿಗೆ ಮತ್ತು ಆಯ್ಕೆಯ ಕ್ಯಾಂಟನ್ ಆಡಿಯೊ ಸಿಸ್ಟಮ್ ಅನ್ನು ಹೊಂದಿರುತ್ತದೆ,

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kodiaq ಫೇಸ್‌ಲಿಫ್ಟ್ ಎಸ್‍ಯುವಿ

ಇನ್ನು ಸ್ಕೋಡಾ ತನ್ನ ಬಹುನಿರೀಕ್ಷಿತ ಸ್ಲಾವಿಯಾ ಸೆಡಾನ್ ಕಾರನ್ನು ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಮುಂದಿನ ವರ್ಷದಲ್ಲಿ ಬಿಡುಗಡೆಯಾಗಲಿರುವ ಹೊಸ ಸ್ಲಾವಿಯಾ ಸೆಡಾನ್ ಹೋಂಡಾ ಸಿಟಿ ಮತ್ತು ಹ್ಯುಂಡೈ ವೆರ್ನಾ ಕಾರುಗಳಿಗೆ ಪ್ರತಿಸ್ಪರ್ಧಿಯಾಗಲಿದೆ. ಫೋಕ್ಸ್‌ವ್ಯಾಗನ್ ಗ್ರೂಪ್‌ನ ಇಂಡಿಯಾ ಪ್ಲಾನ್ 2.0 ಅಡಿಯಲ್ಲಿ ಇದು ಬ್ರಾಂಡ್‌ನ ಎರಡನೇ ಮಾದರಿಯಾಗಿದೆ, ರ‍್ಯಾಪಿಡ್ ಸೆಡಾನ್ ಅನ್ನು ಬದಲಿಸಲು ಈ ಹೊಸ ಸ್ಕೋಡಾ ಸ್ಲಾವಿಯಾ ಅನ್ನು ತರುತ್ತಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kodiaq ಫೇಸ್‌ಲಿಫ್ಟ್ ಎಸ್‍ಯುವಿ

ಇನ್ನು ಹೊಸ ಸ್ಕೋಡಾ ಕೊಡಿಯಾಕ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ, ಒಂಬತ್ತು ಏರ್‌ಬ್ಯಾಗ್‌ಗಳು, 360-ಡಿಗ್ರಿ ಕ್ಯಾಮೆರಾ ಮತ್ತು ಅಡಾಪ್ಟಿವ್ ಲೇನ್ ಅಸಿಸ್ಟ್, ಪ್ರಿಡಿಕ್ಟಿವ್ ಕ್ರೂಸ್ ಕಂಟ್ರೋಲ್ ಮತ್ತು ಹೆಚ್ಚಿನದನ್ನು ಒಳಗೊಂಡಿರುವ ಡ್ರೈವರ್ ಅಸಿಸ್ಟೆಂಟ್ ಸಿಸ್ಟಮ್‌ಗಳಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯು ಮಾದರಿಯು ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಎಸ್‌ಯುವಿಗಳಲ್ಲಿ ಕೂಡ ಒಂದಾಗಿದೆ.

Most Read Articles

Kannada
Read more on ಸ್ಕೋಡಾ skoda
English summary
New skoda kodiaq facelift suv exterior and interior features revealed launch soon details
Story first published: Tuesday, January 4, 2022, 19:42 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X