ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಟಾಟಾ ಹ್ಯಾರಿಯರ್

ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ತನ್ನ ಕಾರು ಉತ್ಪನ್ನಗಳಲ್ಲಿ ಹಲವಾರು ಮಹತ್ವದ ಬದಲಾವಣೆಗಳನ್ನು ಪರಿಚಯಿಸಿದ್ದು, ಕಂಪನಿಯು ಶೀಘ್ರದಲ್ಲಿಯೇ ಉನ್ನತೀಕರಿಸಿದ 2022ರ ಹ್ಯಾರಿಯರ್ ಮಾದರಿಯನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿದೆ.

ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಟಾಟಾ ಹ್ಯಾರಿಯರ್

ಹೊಸ ಹ್ಯಾರಿಯರ್ ಕಾರು ಮಾದರಿಯು ಈ ಬಾರಿ ಉನ್ನತೀಕರಿಸಿದ ಫೀಚರ್ಸ್‌ಗಳೊಂದಿಗೆ ಹಲವಾರು ಬದಲಾವಣೆಗಳನ್ನು ಪಡೆದುಕೊಳ್ಳಲಿದ್ದು, ಪ್ರಮುಖ ಫೀಚರ್ಸ್‌ಗಳನ್ನು ಕಂಪನಿಯು ಈ ಬಾರಿ ಎಲ್ಲಾ ವೆರಿಯೆಂಟ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡುವ ಸಾಧ್ಯತೆಗಳಿವೆ. ಪ್ರಮುಖ ಪ್ರೀಮಿಯಂ ಫೀಚರ್ಸ್‌ಗಳಲ್ಲಿ ಏರ್ ಪ್ಯೂರಿಫೈರ್ ಕೂಡಾ ಸೇರ್ಪಡೆಗೊಳಿಸಲಾಗುತ್ತಿದ್ದು, ಇದರ ಇನ್ನು ಹಲವು ಪ್ರೀಮಿಯಂ ಸೌಲಭ್ಯಗಳನ್ನು ನೀಡುವ ಸುಳಿವು ನೀಡಿದೆ.

ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಟಾಟಾ ಹ್ಯಾರಿಯರ್

2019 ಆರಂಭದಲ್ಲಿ ಬಿಎಸ್-4 ಮಾದರಿಯೊಂದಿಗೆ ಬಿಡುಗಡೆಯಾಗಿದ್ದ ಹ್ಯಾರಿಯರ್ ಕಾರು ಮಾದರಿಯು 2020 ಮಧ್ಯಂತರದಲ್ಲಿ ಬಿಎಸ್-6 ಆವೃತ್ತಿಯೊಂದಿಗೆ ಉನ್ನತೀಕರಣಗೊಂಡಿತ್ತು. ಬಿಎಸ್-4 ಮಾದರಿಯೊಂದಿಗೆ ಕನಿಷ್ಠ ಬೇಡಿಕೆ ಹೊಂದಿದ್ದ ಹ್ಯಾರಿಯರ್ ಕಾರು ಮಾದರಿಯು ಬಿಎಸ್-6 ಮಾದರಿಯ ಬಿಡುಗಡೆಯ ನಂತರ ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ.

ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಟಾಟಾ ಹ್ಯಾರಿಯರ್

ಬಿಎಸ್-4 ಮಾದರಿಯೊಂದಿಗೆ ಕೇವಲ 17 ಸಾವಿರ ಯುನಿಟ್ ಮಾರಾಟಗೊಂಡಿದ್ದ ಹ್ಯಾರಿಯರ್ ಕಾರು ಮಾದರಿಯು ಬಿಎಸ್-6 ಎಂಜಿನ್‌ನೊಂದಿಗೆ ಉನ್ನತೀಕರಣಗೊಂಡ ನಂತರ ಸುಮಾರು 50 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಿದೆ. ಇದೀಗ 2022ರ ಮಾದರಿಯಲ್ಲಿ ಮತ್ತಷ್ಟು ಹೊಸ ಬದಲಾವಣೆಗಳೊಂದಿಗೆ ಗ್ರಾಹಕರನ್ನು ಸೆಳೆಯಲು ಸಜ್ಜುಗೊಳ್ಳುತ್ತಿದ್ದು, ಹೊಸ ಬದಲಾವಣೆ ತಕ್ಕಂತೆ ತುಸು ದುಬಾರಿಯಾಗಲಿದೆ.

ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಟಾಟಾ ಹ್ಯಾರಿಯರ್

ಇದರೊಂದಿಗೆ ಕಂಪನಿಯು ಮುಂಬರುವ ದಿನಗಳಲ್ಲಿ 2022ರ ಮಾದರಿಗಾಗಿ ಹೆಚ್ಚುವರಿ ಬಣ್ಣಗಳನ್ನು ನೀಡಲು ಯೋಜಿಸಿದ್ದು, ಹೊಸ ಮಾದರಿಗಳ ಮೂಲಕ ಟಾಟಾ ಕಂಪನಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದೆ.

ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಟಾಟಾ ಹ್ಯಾರಿಯರ್

ಇದರ ಜೊತೆಗೆ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಹ್ಯಾರಿಯರ್ ಮತ್ತು ಸಫಾರಿ ಕಾರು ಮಾದರಿಗಾಗಿ ಪೆಟ್ರೋಲ್ ಎಂಜಿನ್ ಮಾದರಿಯನ್ನು ಬಿಡುಗಡೆಗೊಳಿಸಲಾಗುತ್ತಿದ್ದು, ಸದ್ಯ ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಟಾಟಾ ಕಂಪನಿಯು ಹೊಸ ಮಾದರಿಗಳನ್ನು 2022ರ ಮಾದರಿಗಳಲ್ಲಿ ಬಿಡುಗಡೆ ಮಾಡಬಹುದಾಗಿದೆ.

ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಟಾಟಾ ಹ್ಯಾರಿಯರ್

ಮೈಲೇಜ್ ವಿಚಾರವಾಗಿ ಡೀಸೆಲ್ ಎಂಜಿನ್ ಮಾದರಿಗಳು ಇಷ್ಟು ದಿನ ಹೆಚ್ಚಿನ ಬೇಡಿಕೆ ಹೊಂದಿದ್ದರೂ ಡೀಸೆಲ್ ಮಾದರಿಗಿಂತಲೂ ಕಡಿಮೆ ಬೆಲೆ ಮತ್ತು ನಿರ್ವಹಣೆಯಲ್ಲೂ ಡೀಸೆಲ್ ಮಾದರಿಗಿಂತ ಕಡಿಮೆ ಖರ್ಚು ಹೊಂದಿರುವ ಪೆಟ್ರೋಲ್ ಮಾದರಿಗಳೇ ಇದೀಗ ವ್ಯಯಕ್ತಿಕ ಕಾರು ಬಳಕೆದಾರರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿವೆ.

ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಟಾಟಾ ಹ್ಯಾರಿಯರ್

ಟಾಟಾ ಕಂಪನಿಯು ಸದ್ಯ ಹ್ಯಾರಿಯರ್ ಮತ್ತು ಸಫಾರಿ ಎಸ್‌ಯುವಿಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆ ಮಾತ್ರ ನೀಡುತ್ತಿದ್ದು, ಹೊಸ ಕಾರಗಳಲ್ಲಿರುವ 2.0-ಲೀಟರ್(1,956 ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಮಾದರಿಯಲ್ಲಿ 6 ಸ್ಪೀಡ್ ಮ್ಯಾನುವಲ್ ಮತ್ತು 6 ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಆಯ್ಕೆ ಹೊಂದಿವೆ.

ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಟಾಟಾ ಹ್ಯಾರಿಯರ್

ಹೊಸ ಕಾರುಗಳು ಫ್ರಂಟ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿದ್ದು, ಡೀಸೆಲ್ ಕಾರುಗಳ ಮೇಲೆ ಹೆಚ್ಚಿನ ನಿರ್ಬಂಧಗಳನ್ನು ವಿಧಿಸುತ್ತಿರುವುದು ಕೂಡಾ ಪೆಟ್ರೋಲ್ ಕಾರುಗಳ ಬಳಕೆಯು ಹೆಚ್ಚುತ್ತಿದೆ.

ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಟಾಟಾ ಹ್ಯಾರಿಯರ್

ಇನ್ನು 2018ರ ಆಟೋ ಎಕ್ಸ್‌ಫೋದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ಹ್ಯಾರಿಯರ್ ಕಾರು ಮಾದರಿಯು 2019ರ ಜನವರಿಯಲ್ಲಿ ಅಧಿಕೃತ ಬಿಡುಗಡೆಗೊಂಡಿತ್ತು. ಹೊಸ ಕಾರು ಬಿಡುಗಡೆಯ ನಂತರ ಬೇಡಿಕೆಯಲ್ಲಿ ಏರಿಳಿತದೊಂದಿಗೆ ಇದುವರೆಗೆ 50 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟ ಗುರಿತಲುಪಿದೆ.

ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಟಾಟಾ ಹ್ಯಾರಿಯರ್

ಹ್ಯಾರಿಯರ್ ಎಸ್‌ಯುವಿ ಮಾದರಿಯು ಸದ್ಯ ಸ್ಟ್ಯಾಂಡರ್ಡ್, ಡಾರ್ಕ್, ಕಾಜಿರಂಗ ಎಡಿಷನ್‌ ಒಳಗೊಂಡಂತೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14.52 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 21.81 ಲಕ್ಷ ಬೆಲೆ ಹೊಂದಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಕಾರು ಬರೋಬ್ಬರಿ 26 ವೆರಿಯೆಂಟ್‌ಗಳನ್ನು ಪಡೆದುಕೊಂಡಿದೆ.

ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಟಾಟಾ ಹ್ಯಾರಿಯರ್

ಹ್ಯಾರಿಯರ್ ಕಾಜಿರಂಗ ಎಡಿಷನ್ ಇತ್ತೀಗಷ್ಟೇ ಕಂಪನಿಯು ಬಿಡುಗಡೆ ಮಾಡಿದ್ದು, ಹೊಸ ಎಡಿಷನ್ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 20.41 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯನ್ನು ರೂ. 21.71 ಲಕ್ಷಕ್ಕೆ ನಿಗದಿಪಡಿಸಿದೆ.

ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಟಾಟಾ ಹ್ಯಾರಿಯರ್

ಕಾಜಿರಂಗ ಆವೃತ್ತಿಗಳಿಗೆ ಮೆಟೆರಿಯಲ್ ಬ್ರೋಂಜ್ ಬಣ್ಣದ ಆಯ್ಕೆ ನೀಡಲಾಗಿದ್ದು, ಹೊಸ ಬಣ್ಣದ ಜೊತೆಗೆ ಕಾರಿನ ಹಿಂಬದಿಯ ಟೈಲ್‌ಗೇಟ್, ವ್ಹೀಲ್, ಫೆಂಡರ್‌ಗಳು ಮತ್ತು ಇಂಟಿರಿಯರ್‌ನಲ್ಲಿ ರೈನೊ ಬ್ಯಾಜ್ಡ್ ಜೊತೆಗೆ ಕಾರಿನ ಇಂಟಿರಿಯರ್‌ನಲ್ಲಿ ರೈನೊ ಮೋಟಿಫ್ ಜೋಡಿಸಲಾಗಿದೆ.

ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಟಾಟಾ ಹ್ಯಾರಿಯರ್

ಹೊಸ ಆವೃತ್ತಿಗಳು ಆಕರ್ಷಕ ಬಣ್ಣದ ಆಯ್ಕೆ ಜೊತೆಗೆ ಕೆಲವು ಕೆಲವು ಬದಲಾವಣೆಗಳನ್ನು ಪಡೆದುಕೊಂಡಿದ್ದು, ಇನ್ನುಳಿದಂತೆ ಎಲ್ಲಾ ತಾಂತ್ರಿಕ ಸೌಲಭ್ಯಗಳು ಸಾಮಾನ್ಯ ಮಾದರಿಯಲ್ಲಿರುವಂತೆಯೇ ಇರಲಿವೆ.

ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಟಾಟಾ ಹ್ಯಾರಿಯರ್

2020ರಲ್ಲಿ ಭೀಕರ ಪ್ರವಾಹದ ಪರಿಣಾಮ ಹೆಚ್ಚಿನ ಮಟ್ಟದ ಹಾನಿಗೊಳಗಾಗಿದ್ದ ಕಾಜಿರಂಗ ರಾಷ್ಟ್ರೀಯ ಉದ್ಯಾನವನವನ್ನು ಅಭಿವೃದ್ದಿ ಕಾರ್ಯಗಳಿಗೆ ಸಹಾಯಹಸ್ತ ಚಾಚಲು ವಿಶೇಷ ಕಾರು ಮಾದರಿಯನ್ನು ಅಭಿವೃದ್ದಿಪಡಿಸಿ ಹರಾಜು ಪ್ರಕ್ರಿಯೆ ನಡೆಸಲು ನಿರ್ಧರಿಸಿದ್ದು, ಹೈ ಎಂಡ್ ಮಾದರಿಗಳನ್ನು ಆಧರಿಸಿ ನಿರ್ಮಾಣವಾಗಿರುವ ಕಾಜಿರಂಗ ಆವೃತ್ತಿಗಳು ವಿಶೇಷ ಬಣ್ಣದ ಆಯ್ಕೆ ಮತ್ತು ಲೊಗೊ ಮೂಲಕ ಆಕರ್ಷಕ ವಿನ್ಯಾಸ ಹೊಂದಿವೆ.

Article Published On: Tuesday, March 22, 2022, 11:06 [IST]
English summary
New tata harrier gets air purifier as standard feature soon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+