ಎಲೆಕ್ಟ್ರಿಕ್ ರೂಪದಲ್ಲಿ ಬರುತ್ತಿದೆ ಜನಪ್ರಿಯ ಟಾಟಾ ಪಂಚ್ ಕಾರು

ಭಾರತದಲ್ಲಿ ಇಂಧನ ಬೆಲೆಗಳು ಗಗನಕ್ಕೆರಿದೆ. ಏರುತ್ತಿರುವ ಇಂಧನ ಬೆಲೆಗಳಿಂದ ಪಾರಾಗಲು ಜನರು ಪರ್ಯಾಯ ಆಯ್ಕೆಗಳನ್ನು ಹುಡುಕಲಾರಂಭಿಸಿದ್ದಾರೆ. ಇದರಿಂದ ಜನರು ನಿಧಾನವಾಗಿ ಎಲೆಕ್ಟ್ರಿಕ್ ಕಾರುಗಳ ಕಡೆ ಮುಖ ಮಾಡುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳು (ಇವಿಗಳು) ಭಾರತೀಯ ಮಾರುಕಟ್ಟೆಯಲ್ಲಿ ತಿಂಗಳಿನಿಂದ ತಿಂಗಳ ಬೆಳವಣಿಗೆಯನ್ನು ಸ್ಥಿರವಾಗಿ ದಾಖಲಿಸುತ್ತಿವೆ.

ಈ ವೇಳೆ ಟಾಟಾ ಎಲೆಕ್ಟ್ರಿಕ್ ಕಾರುಗಳ ವಿಭಾಗದಲ್ಲಿ ಪಾರುಪತ್ಯ ಮುಂದುವರೆಸಲು ಪ್ರಯತ್ನಿಸುತ್ತಿದೆ. ಸದ್ಯ ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ವಿಭಾಗದಲ್ಲಿ ಟಾಟಾ ಮೇಲುಗೈಯನ್ನು ಸಾಧಿಸಿದೆ. ಟಾಟಾ ಮೋಟಾರ್ಸ್ ಪ್ರಸ್ತುತ ಎಲೆಕ್ಟ್ರಿಕ್ ಪ್ಯಾಸೆಂಜರ್ ಕಾರು ವಿಭಾಗದಲ್ಲಿ ಶೇಕಡಾ 80 ಕ್ಕಿಂತ ಹೆಚ್ಚು ಮಾರುಕಟ್ಟೆ ಪಾಲನ್ನು ಹೊಂದಿದೆ. ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಸ್ವದೇಶಿ ಟಾಟಾ ಮೋಟರ್ಸ್ ಕಂಪನಿಯು ದೇಶದಲ್ಲಿ 1 ಲಕ್ಷ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವ ಗುರಿಯನ್ನು ಹೊಂದಿದೆ.

ಎಲೆಕ್ಟ್ರಿಕ್ ರೂಪದಲ್ಲಿ ಬರುತ್ತಿದೆ ಜನಪ್ರಿಯ ಟಾಟಾ ಪಂಚ್ ಕಾರು

ಟಾಟಾ ಮೋಟಾರ್ಸ್ ಪ್ರಸ್ತುತ ಟಿಯಾಗೊ ಇವಿ, ಟಿಗೊರ್ ಇವಿ, ನೆಕ್ಸಾನ್ ಇವಿ ಪ್ರೈಮ್ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಅನ್ನು ಮಾರಾಟ ಮಾಡುತ್ತಿದೆ. ಸ್ವದೇಶಿ ವಾಹನ ತಯಾರಕರು ಪಂಚ್ ಎಲೆಕ್ಟ್ರಿಕ್ ಶೀಘ್ರದಲ್ಲೇ ತನ್ನ ಇವಿ ಫ್ಲೀಟ್‌ಗೆ ಸೇರಲಿದೆ ಎಂದು ದೃಢಪಡಿಸಿದ್ದಾರೆ. ಟಾಟಾ ಪಂಚ್ ಇವಿ ನೇರವಾಗಿ ಸಿಟ್ರನ್ eC3 ಗೆ ಪ್ರತಿಸ್ಪರ್ಧಿಯಾಗಲಿದೆ, ಇದು 2023 ರ ಮೊದಲ ತ್ರೈಮಾಸಿಕದಲ್ಲಿ ಬಿಡುಗಡೆಯಾಗಲಿದೆ. ಎಲೆಕ್ಟ್ರಿಕ್ ಪಂಚ್ ಅನ್ನು ಎರಡು ಬ್ಯಾಟರಿ ಆಯ್ಕೆಗಳೊಂದಿಗೆ ನೀಡಬಹುದು ಮತ್ತು ಸುಮಾರು 300km ನಿಂದ 350km ರೇಂಜ್ ಅನ್ನು ನೀಡಬಹುದು.

ಪಂಚ್ ಇವಿ ಇತ್ತೀಚಿನ ALFA ಮಾಡ್ಯುಲರ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ ಟಾಟಾದ ಮೊದಲ ಇವಿ ಆಗಲಿದೆ. ALFA ಪ್ಲಾಟ್‌ಫಾರ್ಮ್ ಅನೇಕ ಬಾಡಿ ಶೈಲಿಗಳು ಮತ್ತು ಎಲೆಕ್ಟ್ರಿಕ್, ICE ಮತ್ತು ಹೈಬ್ರಿಡ್ ಸೇರಿದಂತೆ ಎಂಜಿನ್ ಆಯ್ಕೆಗಳೊಂದಿಗೆ ಹೊಂದಿಕೊಳ್ಳುತ್ತದೆ. ಸ್ಟ್ಯಾಂಡರ್ಡ್ ಟಾಟಾ ಪಂಚ್ ಮೈಕ್ರೋ ಎಸ್‌ಯುವಿಯಲ್ಲಿ ಸಹ ಗರಿಷ್ಠ ಮಟ್ಟದ ಸುರಕ್ಷತಾ ರೇಟಿಂಗ್ಸ್ ಪಡೆದುಕೊಂಡಿದೆ. ಹೊಸ ಕಾರು ಮುಂಭಾಗದಲ್ಲಿ ಮಾತ್ರವಲ್ಲ ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌‌ನಲ್ಲೂ ಅತ್ಯುತ್ತಮ ವಿನ್ಯಾಸವನ್ನು ಹೊಂದಿದೆ,

ಪಂಚ್ ಮೈಕ್ರೋ ಎಸ್‌ಯುವಿಯ ಪ್ಯೂರ್ ವೆರಿಯೆಂಟ್ ಆರಂಭಿಕ ಮಾದರಿಯಾಗಿ ಮಾರಾಟಗೊಳ್ಳಲಿದ್ದರೆ ಕ್ರಿಯೆಟಿವ್ ಮಾದರಿಯು ಟಾಪ್ ಎಂಡ್ ಮಾದರಿಯಾಗಿ ಮಾರಾಟವಾಗುತ್ತಿದೆ, ಈ ಕಾರಿನ ಬೆಸ್ ರೂಪಾಂತರದಲ್ಲಿಯು ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ನೀಡಿದೆ. ಈ ಮೈಕ್ರೋ ಎಸ್‌ಯುವಿಯ ಪ್ಯೂರ್ ರೂಪಂತರದಲ್ಲಿ ಕಂಪನಿಯು ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಬ್ರೇಕ್ ಸ್ಯಾವಿ ಕಂಟ್ರೋಲ್, ಆರ್‌ಪಿಎಎಸ್, ಸೆಂಟ್ರೇಲ್ ಲಾಕಿಂಗ್ ಜೊತೆ ಕೀ, ಐಎಸಿ ಮತ್ತು ಇಎಸ್ಎಸ್ ಟೆಕ್ನಾಲಜಿಯನ್ನು ನೀಡಿದೆ..

ಇದರೊಂದಿಗೆ ಫ್ರಂಟ್ ಪವರ್ ವಿಂಡೋ, ಟಿಲ್ಟ್ ಸ್ಟೀರಿಂಗ್, 90 ಡಿಗ್ರಿ ಡೋರ್ ಓಪನ್, ರಿಯರ್ ಪ್ಲ್ಯಾಟ್ ಫ್ಲೊರ್, ಬ್ಲ್ಯಾಕ್ ಒಡಿಹೆಚ್, ಹ್ಯುಮಿನಿಟಿ ಕ್ರೊಮ್ ಲೈನ್, ಪೆಟೆಂಡ್ ಬಂಪರ್, ಡೋರ್, ವೀಲ್ಹ್ ಆರ್ಚ್ ಮತ್ತು ಸಿಲ್ ಕ್ಲಾಡಿಂಗ್ ಅನ್ನು ಒಳಗೊಂಡಿದೆ, ಈ ಟಾಟಾ ಪಂಚ್ ಮೈಕ್ರೋ ಎಸ್‌ಯುವಿಯ ಹೈ ಎಂಡ್ ಮಾದರಿಯಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ಎಸ್, ಆರ್16 ಡೈಮಂಡ್ ಕಟ್ ಅಲಾಯ್ ವ್ಹೀಲ್ ಮತ್ತು ರೂಫ್ ರೈಲ್ಸ್ ಅನ್ನು ಹೊಂದಿದೆ.

ಇದರೊಂದಿಗೆ 7 ಇಂಚಿನ ಟಿಎಫ್‌ಟಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಆಟೋ ಹೆಡ್‌ಲ್ಯಾಂಪ್ ಅನ್ನು ಹೊಂದಿದೆ. ರೈನ್ ಸೆನ್ಸಿಂಗ್ ವೈಪರ್, ಆಟೋ ಫೋಡ್ಲಿಂಗ್ ರಿಯರ್ ವ್ಯೂ ಮಿರರ್, ಆಟೋಮ್ಯಾಟಿಕ್ ಎಸಿ ಕಂಟ್ರೋಲ್ ಸಿಸ್ಟಂ, ಕೂಲ್ಡ್ ಗ್ಲೊ ಬಾಕ್ಸ್, ರಿಯರ್ ವೈಪರ್ ಪ್ಲಸ್ ವಾಷ್, ರಿಯರ್ ಡಿಫಾಗರ್, ಪೆಡಲ್ ಲ್ಯಾಂಪ್ಸ್, ಹಿಂಬದಿಯ ಆಸನದಲ್ಲಿ ಆರ್ಮ್ ರೆಸ್ಟ್ ಮತ್ತು ಲೆದರ್ ಕೊಟಿಂಗ್ ಹೊಂದಿರುವ ಸ್ಟೀರಿಂಗ್ ಮತ್ತು ಗೇರ್ ನಾಬ್ ನೀಡಲಾಗಿದೆ.

ಇನ್ನು ಟಾಟಾ ಪಂಚ್ ಮೈಕ್ರೋ ಎಸ್‌ಯುವಿಯು ಟೊರಾರ್ನಾಡೊ ಬ್ಲ್ಯೂ, ಟೊಪಿಕಲ್ ಮಿಸ್ಟ್, ಡೇ ಟೋನಾ ಗ್ರೆ, ಮಿಟಿಯೊರ್ ಬ್ರೊನ್ಜ್, ಆಟೊಮಿಕ್ ಆರೇಂಜ್, ಆರ್ಕಸ್ ವೈಟ್ ಮತ್ತು ಕ್ಯಾಲಿಪ್ಸೊ ರೆಡ್ ಸೇರಿ ಪ್ರಮುಖ ಏಳು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಈ ಪಂಚ್ ಮಾದರಿಯು 3840 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1635 ಎಂಎಂ ಎತ್ತರದೊಂದಿಗೆ 2450 ಎಂಎಂ ವ್ಹೀಲ್ ಬೇಸ್ ಮತ್ತು 187 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.

Article Published On: Friday, December 23, 2022, 6:30 [IST]
English summary
New tata punch electric car coming soon details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+