ಕೈಗೆಟುಕುವ ಬೆಲೆಯ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಖರೀದಿಗೆ ಬುಕ್ಕಿಂಗ್ ಪ್ರಾರಂಭ

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೆರಿದೆ. ಏರುತ್ತಿರುವ ಇಂಧನ ಬೆಲೆಗಳಿಂದ ಪಾರಾಗಲು ಜನರು ಪರ್ಯಾಯ ಆಯ್ಕೆಗಳನ್ನು ಹುಡುಕಲಾರಂಭಿಸಿದ್ದಾರೆ. ಇದರಿಂದ ಜನರು ಈಗ ನಿಧಾನವಾಗಿ ಎಲೆಕ್ಟ್ರಿಕ್ ಕಾರುಗಳ ಕಡೆ ಮುಖ ಮಾಡುತ್ತಿದ್ದಾರೆ.

ಕೈಗೆಟುಕುವ ಬೆಲೆಯ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಖರೀದಿಗೆ ಬುಕ್ಕಿಂಗ್ ಪ್ರಾರಂಭ

ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯನ್ನು ಪಡೆದುಕೊಳ್ಳುತ್ತಿದೆ. ಇತ್ತೀಚೆಗೆ ಹೆಚ್ಚಿನ ಗ್ರಾಹಕರು ಎಲೆಕ್ಟ್ರಿಕ್ ಕಾರುಗಳ ಕಡೆ ಮುಖ ಮಾಡುತ್ತಿದ್ದಾರೆ. ಈ ವೇಳೆ ಟಾಟಾ ಕಂಪನಿಯು ಎಲೆಕ್ಟ್ರಿಕ್ ಕಾರುಗಳ ವಿಭಾಗದಲ್ಲಿ ಪಾರುಪತ್ಯ ಮುಂದುವರೆಸಲು ಪ್ರಯತ್ನಿಸುತ್ತಿದೆ. ಸದ್ಯ ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ವಿಭಾಗದಲ್ಲಿ ಟಾಟಾ ಮೇಲುಗೈಯನ್ನು ಸಾಧಿಸಿದೆ. ಇತ್ತೀಚೆಗೆ ಸ್ವದೇಶಿ ಕಾರು ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಹೊಸ ಟಿಯಾಗೋ ಎಲೆಕ್ಟ್ರಿಕ್ ಕಾರನ್ನು ಕೂಡ ಬಿಡುಗಡೆಗೊಳಿಸಿತು.

ಕೈಗೆಟುಕುವ ಬೆಲೆಯ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಖರೀದಿಗೆ ಬುಕ್ಕಿಂಗ್ ಪ್ರಾರಂಭ

ಈ ಹೊಸ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರಿನ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.8.49 ಲಕ್ಷವಾಗಿದೆ. ಇದೀಗ ಈ ಹೊಸ ಎಲೆಕ್ಟ್ರಿಕ್ ಕಾರಿಗಾಗಿ ಬುಕ್ಕಿಂಗ್ ಪ್ರಾರಂಭವಾಗಲಿದೆ. ಆಸಕ್ತ ಗ್ರಾಹಕರು ಟಾಟಾ ಡೀಲರ್‌ಶಿಪ್‌ನಲ್ಲಿ ಮತ್ತು ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಮುಂಗಡ ಬುಕ್ ಮಾಡಬಹುದು. ಬುಕ್ಕಿಂಗ್ ಟೋಕನ್ ಮೊತ್ತ 21,000 ರೂ. ಆಗಿದೆ.

ಕೈಗೆಟುಕುವ ಬೆಲೆಯ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಖರೀದಿಗೆ ಬುಕ್ಕಿಂಗ್ ಪ್ರಾರಂಭ

ಟಾಟಾ ಮೋಟಾರ್ಸ್ ಕಂಪನಿಯು 2026ರ ವೇಳೆಗೆ ಹತ್ತು ಎಲೆಕ್ಟ್ರಿಕ್ ವಾಹನಗಳ ಪೋರ್ಟ್‌ಫೋಲಿಯೊವನ್ನು ಹೊಂದಲು ಟಾಟಾದ ಯೋಜನೆಗಳ ಭಾಗವಾಗಿದೆ. ಇದರ ನೆಟ್‌ವರ್ಕ್ ಆಗಿ 80 ಹೊಸ ನಗರಗಳನ್ನು ಪ್ರವೇಶಿಸಿದೆ. 165ಕ್ಕೂ ಹೆಚ್ಚು ನಗರಗಳಿಗೆ ವಿಸ್ತರಿಸಲಾಗಿದೆ.

ಕೈಗೆಟುಕುವ ಬೆಲೆಯ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಖರೀದಿಗೆ ಬುಕ್ಕಿಂಗ್ ಪ್ರಾರಂಭ

ಈ ಹೊಸ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು IP67-ರೇಟೆಡ್ 24 kWh ಮತ್ತು 19.2 kWh ಬ್ಯಾಟರಿ ಪ್ಯಾಕ್‌ಗಳನ್ನು ಅಳವಡಿಸಲಾಗಿದೆ. ಮೊದಲನೆಯದು 315 ಕಿ.ಮೀ ರೇಂಜ್ ಅನ್ನು ನೀಡಿದರೆ, ಎರಡನೆಯದು ಸಿಂಗಲ್ ಚಾರ್ಜ್‌ನಲ್ಲಿ 250 ಕಿ.ಮೀ ರೇಂಜ್ ಅನ್ನು ನೀಡಲಾಗುತ್ತದೆ.

ಕೈಗೆಟುಕುವ ಬೆಲೆಯ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಖರೀದಿಗೆ ಬುಕ್ಕಿಂಗ್ ಪ್ರಾರಂಭ

ಕೊಡುಗೆಯನ್ನು ಹೆಚ್ಚು ಆಕರ್ಷಕವಾಗಿಸಲು, ಟಾಟಾ ಎಲೆಕ್ಟ್ರಿಕ್ ಹ್ಯಾಚ್ ಅನ್ನು ಎಂಟು ವರ್ಷ ಅಥವಾ 1.60 ಲಕ್ಷ ಕಿಮೀ ವಾರಂಟಿಯೊಂದಿಗೆ (ಯಾವುದು ಮೊದಲು ಬರುತ್ತದೆಯೋ ಅದು) ಬ್ಯಾಟರಿ ಮತ್ತು ಎಲೆಕ್ಟ್ರಿಕ್ ಮೋಟರ್ ಬರುತ್ತದೆ. ಹೆಚ್ಚಿನ ಅನುಕೂಲಕ್ಕಾಗಿ, ನಾಲ್ಕು ಚಾರ್ಜಿಂಗ್ ಆಯ್ಕೆಗಳು ಕೂಡ ಲಭ್ಯವಿರಲಿದೆ.

ಕೈಗೆಟುಕುವ ಬೆಲೆಯ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಖರೀದಿಗೆ ಬುಕ್ಕಿಂಗ್ ಪ್ರಾರಂಭ

ಈ ಹೊಸ ಟಿಯಾಗೋ ಎಲೆಕ್ಟ್ರಿಕ್ ಕಾರಿನಲ್ಲಿ 3.3 kW ಎಸಿ ಚಾರ್ಜ್ ಮತ್ತು 7.2 kW ಎಸಿ ಚಾರ್ಜ್ ಸೌಲಭ್ಯಗಳನ್ನು ಆಯ್ಕೆ ರೂಪದಲ್ಲಿ ನೀಡಲಾಗಿದೆ. 7.2 kW ಎಸಿ ಚಾರ್ಜ್ ಸೌಲಭ್ಯದ ಮೂಲಕ 3 ಗಂಟೆ 36 ನಿಮಿಷಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಅನ್ನು ಮಾಡಬಹುದಾಗಿದೆ. 50kW ಸಾಮರ್ಥ್ಯದ ಡಿಸಿ ಫಾಸ್ಟ್ ಚಾರ್ಜಿಂಗ್ ಕೇಂದ್ರಗಳಲ್ಲಿ ಚಾರ್ಜ್ ಮಾಡಿದ್ದಲ್ಲಿ ಕೇವಲ 57 ನಿಮಿಷಗಳಲ್ಲಿ ಸೊನ್ನೆಯಿಂದ ನೂರರಷ್ಟು ಚಾರ್ಜ್ ಮಾಡಬಹುದು.

ಕೈಗೆಟುಕುವ ಬೆಲೆಯ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಖರೀದಿಗೆ ಬುಕ್ಕಿಂಗ್ ಪ್ರಾರಂಭ

ಇನ್ನು 15ಎಎಂಪಿ ಹೋಂ ಚಾರ್ಜರ್ ಮೂಲಕ ಚಾರ್ಜ್‌ ಮಾಡಿದ್ದಲ್ಲಿ ಕನಿಷ್ಠ 15ರಿಂದ 18 ಗಂಟೆ ತೆಗೆದುಕೊಳ್ಳುತ್ತದೆ. ಸ್ವದೇಶಿ ತಯಾರಕರ ಟಾಟಾ ಹೇಳುವಂತೆ ಟಿಯಾಗೋ ಎಲೆಕ್ಟ್ರಿಕ್ ಕಾರು 1,000 ರೂ. 1,100 ಕಿಮೀ ಚಾಲನೆಗೆ ಇದು ಹೆಚ್ಚು ಆಕರ್ಷಕವಾದ ಪ್ರತಿಪಾದನೆಯಾಗಿದೆ ಮತ್ತು 250 ಕಿಮೀಗೆ 20 ಯೂನಿಟ್‌ಗಳ ಬಳಕೆಯೊಂದಿಗೆ, ನೀವು ಪ್ರತಿ ಕಿ.ಮೀ.ಗೆ 60 ಪೈಸೆ ವೆಚ್ಚವಾಗುತ್ತದೆ ಎಂದು ವರದಿಗಳಾಗಿದೆ.

ಕೈಗೆಟುಕುವ ಬೆಲೆಯ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಖರೀದಿಗೆ ಬುಕ್ಕಿಂಗ್ ಪ್ರಾರಂಭ

ಈ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರಿನ ಹೆಡ್‌ಲೈಟ್ ಸುತ್ತಲೂ ಬ್ಲ್ಯೂ ಹೈಲೈಟ್ಸ್ ನೀಡಲಾಗಿದ್ದು, ಕಾರಿನ ಒಳಭಾಗದ ವಿನ್ಯಾಸದಲ್ಲೂ ಕೆಲವು ಹೊಸ ಫೀಚರ್ಸ್ ಹೊರತುಪಡಿಸಿ ಸಾಮಾನ್ಯ ಮಾದರಿಯಂತೆಯೇ ಆಕರ್ಷಣೆಯಾಗಿದೆ. ಎಲೆಕ್ಟ್ರಿಕ್ ಮಾದರಿಯಾಗಿ ಗುರುತಿಸಲು ಬ್ಲ್ಯೂ ಆಕ್ಸೆಂಟ್ ಸಹಕಾರಿಯಾಗಿದ್ದು, ಗೇರ್ ಸ್ಥಾನದಲ್ಲಿ ಇದೀಗ ಡ್ರೈವ್ ಮೋಡ್ ಡಯಲ್ ಅನ್ನು ಹೊಂದಿದೆ.

ಕೈಗೆಟುಕುವ ಬೆಲೆಯ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಖರೀದಿಗೆ ಬುಕ್ಕಿಂಗ್ ಪ್ರಾರಂಭ

ಈ ಹೊಸ ಟಿಯಾಗೋ ಎಲೆಕ್ಟ್ರಿಕ್ ಕಾರಿನಲ್ಲಿ 7 ಇಂಚಿನ ಇನ್ಪೋಟೈನ್‌ಮೆಂಟ್ ಡಿಸ್‌ಪ್ಲೇ, ಅಂಡ್ರಾಯಿಡ್ ಮತ್ತು ಆಟೋ ಕಾರ್ ಪ್ಲೇ, 8 ಸ್ಪೀಕರ್ಸ್ ಹರ್ಮನ್ ಆಡಿಯೋ ಸಿಸ್ಟಂ, ಜೆಡ್ ಕನೆಕ್ಟ್ ಟೆಲಿಮ್ಯಾಟಿಕ್ ಸಿಸ್ಟಂ ಅಳವಡಿಸಲಾಗಿದೆ ಪ್ರೀಮಿಯಂ ಅನುಭವಕ್ಕಾಗಿ ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ರೈನ್ ಸೆನ್ಸಿಂಗ್ ವೈಪರ್ಸ್, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್, ಸ್ಟಾರ್ಟ್ ಮತ್ತು ಸ್ಟಾಪ್ ಪುಶ್ ಬಟನ್ ಅನ್ನು ಹೊಂದಿದೆ.

ಕೈಗೆಟುಕುವ ಬೆಲೆಯ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಖರೀದಿಗೆ ಬುಕ್ಕಿಂಗ್ ಪ್ರಾರಂಭ

ಸುರಕ್ಷತೆಗಾಗಿ ಈ ಹೊಸ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, 4 ಏರ್‌ಬ್ಯಾಗ್, ಕ್ರೂಸ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಸೀಟ್ ಬೆಲ್ಟ್ ರಿಮೆಂಡರ್ ಅನ್ನು ನೀಡಿದೆ. ಗ್ರಾಹಕರು ಈ ಹೊಸ ಕಾರನ್ನು ಟೀಲ್ ಬ್ಲ್ಯೂ, ಡೇ ಟೋನಾ ಗ್ರೇ, ಪ್ರಿಸ್ಟಿನ್ ವೈಟ್, ಮಿಡ್‌ನೈಟ್ ಪ್ಲಮ್ ಮತ್ತು ಟ್ರೋಪಿಕಲ್ ಮಿಸ್ಟ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಸಬಹುದು.

ಕೈಗೆಟುಕುವ ಬೆಲೆಯ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಖರೀದಿಗೆ ಬುಕ್ಕಿಂಗ್ ಪ್ರಾರಂಭ

ಹೊಸ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರಿನಲ್ಲಿ ಪರ್ಫಾಮೆನ್ಸ್ ಪ್ರಿಯರಿಗಾಗಿ ಟಾಟಾ ಕಂಪನಿಯು ಸಿಟಿ ಮತ್ತು ಸ್ಪೋರ್ಟ್ ಡ್ರೈವ್ ಮೋಡ್ ನೀಡಿದ್ದು, ಹೊಸ ಕಾರಿನ 19.2 kWh ಬ್ಯಾಟರಿ ಆಯ್ಕೆಯ ಮಾದರಿಯು 60 ಬಿಎಚ್‌ಪಿ ಮತ್ತು 105 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 24 kWh ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿಯು 74 ಬಿಎಚ್‌ಪಿ ಮತ್ತು 114 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಕೈಗೆಟುಕುವ ಬೆಲೆಯ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು ಖರೀದಿಗೆ ಬುಕ್ಕಿಂಗ್ ಪ್ರಾರಂಭ

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ, ನೆಕ್ಸಾನ್ ಮ್ಯಾಕ್ಸ್ ಇವಿ, ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್ಸ್-ಟಿ ಇವಿ ಕಾರುಗಳ ಮೂಲಕ ಉತ್ತಮ ಬೇಡಿಕೆ ಪಡೆದುಕೊಂಡಿದೆ. ಕಂಪನಿಯು ಇತ್ತೀಚೆಗೆ ಗ್ರಾಹಕರ ಬೇಡಿಕೆಯೆಂಂತೆ ಬಜೆಟ್ ಬೆಲೆಯೊಳಗೆ ಹೆಚ್ಚಿನ ಫೀಚರ್ಸ್ ಗಳೊದಿಗೆ ಟಿಯಾಗೋ ಇವಿ ಮಾದರಿಯನ್ನು ಹೊರತಂದಿದೆ. ಇದರಿಂದ ಭಾರತದಲ್ಲಿ ಹೆಚ್ಚಿನ ಗ್ರಾಹಕರ ಗಮನಸೆಳೆಯಬಹುದು ಎಂದು ನಿರೀಕ್ಷಿಸುತ್ತೇವೆ.

Article Published On: Monday, October 10, 2022, 13:31 [IST]
English summary
New tata tiago electric car booking starts price delivery details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+