ಕೈಗೆಟುಕುವ ಬೆಲೆ, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಭಾರತದಲ್ಲಿ ಇಂಧನ ಬೆಲೆಗಳು ದುಬಾರಿಯಾಗಿದೆ. ಏರುತ್ತಿರುವ ಇಂಧನ ಬೆಲೆಗಳನ್ನು ನಿಭಾಯಿಸಲು ಜನರು ಪರ್ಯಾಯ ಆಯ್ಕೆಗಳನ್ನು ಹುಡುಕಲಾರಂಭಿಸಿದ್ದಾರೆ ಮತ್ತು ಇದರ ಪರಿಣಾಮವಾಗಿ ಹೆಚ್ಚಿನ ಜನರು ಈಗ ಎಲೆಕ್ಟ್ರಿಕ್ ಕಾರುಗಳನ್ನು ಸಹ ಪರಿಗಣಿಸುತ್ತಿದ್ದಾರೆ.

ಕೈಗೆಟುಕುವ ಬೆಲೆ, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯನ್ನು ಪಡೆದುಕೊಳ್ಳುತ್ತಿದೆ. ಹೆಚ್ಚಿನ ಗ್ರಾಹಕರು ಎಲೆಕ್ಟ್ರಿಕ್ ಕಾರುಗಳ ಕಡೆ ಮುಖ ಮಾಡುತ್ತಿದ್ದಾರೆ. ಈ ವೇಳೆ ಟಾಟಾ ಕಂಪನಿಯು ಎಲೆಕ್ಟ್ರಿಕ್ ಕಾರುಗಳ ವಿಭಾಗದಲ್ಲಿ ಪಾರುಪತ್ಯ ಮುಂದುವರೆಸಲು ಪ್ರಯತ್ನಿಸುತ್ತಿದೆ. ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳ ವಿಭಾಗದಲ್ಲಿ ಟಾಟಾ ಮೇಲುಗೈಯನ್ನು ಸಾಧಿಸಿದೆ. ಟಾಟಾ ಮೋಟಾರ್ಸ್ ಕಂಪನಿಯು ಸೆಪ್ಟೆಂಬರ್ 28 ರಂದು ಹೊಸ ಟಿಯಾಗೋ ಎಲೆಕ್ಟ್ರಿಕ್ ಕಾರನ್ನು ಅನಾವರಣಗೊಳಿಸಲಿದೆ.

ಕೈಗೆಟುಕುವ ಬೆಲೆ, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಟಾಟಾ ಟಿಗೊರ್ ಇವಿ ಮತ್ತು ನೆಕ್ಸಾನ್ ಇವಿ ಬಿಡುಗಡೆಯ ನಂತರ ಮೂರನೇ ಎಲೆಕ್ಟ್ರಿಕ್ ಮಾದರಿಯಾಗಿ ಟಿಯಾಗೋ ಇವಿಯನ್ನು ಬಿಡುಗಡೆಗೊಳಿಸುತ್ತಿದೆ. ಟಾಟಾ ಟಿಗೊರ್ ಇವಿ ಗಿಂತ ಚಿಕ್ಕದಾದ ಬ್ಯಾಟರಿ ಪ್ಯಾಕ್ ಜೊತೆಗೆ ಸಣ್ಣ ಕಾಸ್ಮೆಟಿಕ್ ಬದಲಾವಣೆಗಳನ್ನು ಪಡೆಯುವ ಸಾಧ್ಯತೆಯಿದೆ.

ಕೈಗೆಟುಕುವ ಬೆಲೆ, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಟಾಟಾ ಮೋಟಾರ್ಸ್ ಕಂಪನಿಯು ಟಿಯಾಗೋ ಎಲೆಕ್ಟ್ರಿಕ್ ಕಾರನ್ನು ಸೆಪ್ಟೆಂಬರ್ 28 ರಂದು ಅನಾವರಣಗೊಳಿಸಲು ಸಜ್ಜಾಗಿದೆ. ಅಧಿಕೃತ ಅನಾವರಣಕ್ಕೆ ಮುಂಚಿತವಾಗಿ, ಟಾಟಾ ಕಂಪನಿಯು ಸೋಷಿಯ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಟಿಯಾಗೋ ಇವಿ ಫೀಚರ್ಸ್ ಗಳನ್ನು ಬಹಿರಂಗಪಡಿಸುವ ಟೀಸರ್ ಚಿತ್ರಗಳನ್ನು ಬಿಡುಗಡೆ ಮಾಡಿದೆ.

ಕೈಗೆಟುಕುವ ಬೆಲೆ, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಟೀಸರ್ ಚಿತ್ರಗಳ ಪ್ರಕಾರ, ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಕ್ರೂಸ್ ಕಂಟ್ರೋಲ್ ಮತ್ತು ಮಲ್ಟಿ-ಮೋಡ್ ರಿಜೆನ್ ಫಂಕ್ಷನ್‌ನಂತಹ ವೈಶಿಷ್ಟ್ಯಗಳೊಂದಿಗೆ ಸಜ್ಜುಗೊಂಡಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಂನ ಕೆಳಗಿರುವ ಡ್ಯಾಶ್‌ಬೋರ್ಡ್‌ನಲ್ಲಿ ರಿ-ಜನರೇಷನ್ ಮೋಡ್‌ಗಳ ಕಂಟ್ರೋಲ್ ಗಳು ಹೆಚ್ಚಾಗಿ ಅಳವಡಿಸಲಾಗಿದೆ

ಕೈಗೆಟುಕುವ ಬೆಲೆ, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಮೇಲೆ ತಿಳಿಸಲಾದ ವೈಶಿಷ್ಟ್ಯಗಳು ಟಿಗೊರ್ ಇವಿ ನಲ್ಲಿ ಲಭ್ಯವಿಲ್ಲ. ಆದರೆ ಟಿಯಾಗೋ ಇವಿ ಈ ಹೊಸ ವೈಶಿಷ್ಟ್ಯಗಳೊಂದಿಗೆ ಸಜ್ಜುಗೊಂಡಿದೆ. ಗಮನಾರ್ಹವಾಗಿ, ಟಾಟಾ ನೆಕ್ಸಾನ್ ಮತ್ತು ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಎರಡೂ ಈ ಎರಡೂ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಕೈಗೆಟುಕುವ ಬೆಲೆ, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಈ ಟಾಟಾ ಟಿಗೊರ್ ಇವಿ ಗಿಂತ ಚಿಕ್ಕದಾದ ಬ್ಯಾಟರಿ ಪ್ಯಾಕ್ ಜೊತೆಗೆ ಸಣ್ಣ ಕಾಸ್ಮೆಟಿಕ್ ಬದಲಾವಣೆಗಳನ್ನು ಪಡೆಯುವ ಸಾಧ್ಯತೆಯಿದೆ. ಎರಡನೆಯದು 26kWh ಬ್ಯಾಟರಿ ಪ್ಯಾಕ್‌ನೊಂದಿಗೆ ಸಿಂಗಲ್ ಚಾರ್ಜ್‌ನಲ್ಲಿ 306 ಕಿ.ಮೀ ವರೆಗೆ ರೇಂಜ್ ಅನ್ನು ನೀಡುತ್ತದೆ. ಆದರೆ ಟಾಟಾ ಟಿಯಾಗೋ ಇವಿ ಸುಮಾರು 300 ಕಿ.ಮೀ ರೇಂಜ್ ಅನ್ನು ನೀಡುವ ನಿರೀಕ್ಷೆಯಿದೆ ಬ್ಯಾಟರಿ ಪ್ಯಾಕ್‌ನೊಂದಿಗೆ, ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಟಿಗೋರ್ ಇವಿಗಿಂತ ಸ್ವಲ್ಪ ಕಡಿಮೆ ಪವರ್ ಮತ್ತು ಟಾರ್ಕ್ ಅನ್ನು ಉತ್ಪಾದಿಸಬಹುದು.

ಕೈಗೆಟುಕುವ ಬೆಲೆ, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಈ ಟಿಯಾಗೋ ಎಲೆಕ್ಟ್ರಿಕ್ ಕಾರಿನ ರಭಾಗದಲ್ಲಿ ಕೆಲವು ಬದಲಾವಣೆಗಳನ್ನು ಮಾಡಬಹುದು. ಮಾದರಿಯು ಕ್ಲೋಸ್ಡ್ ಗ್ರಿಲ್ ಮತ್ತು ಹೊಸ ಬಣ್ಣದ ಯೋಜನೆಗಳೊಂದಿಗೆ ನೀಲಿ ಮುಖ್ಯಾಂಶಗಳನ್ನು ಹೊಂದಿರಬಹುದು. ಈ ಎಲೆಕ್ಟ್ರಿಕ್ ಕಾರಿನ ವಿನ್ಯಾಸವು ಆಕರ್ಷಕವಾಗಿರಲಿದೆ.

ಕೈಗೆಟುಕುವ ಬೆಲೆ, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಬೆಲೆಗೆ ಸಂಬಂಧಿಸಿದಂತೆ, ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರಿನ ಬೆಲೆಯು ಸುಮಾರು 10 ಲಕ್ಷ ರೂ (ಎಕ್ಸ್ ಶೋ ರೂಂ) ವೆಚ್ಚವಾಗಲಿದೆ. ಈ ಬೆಲೆಯಲ್ಲಿ ಬಿಡುಗಡೆಯಾದರೆ, ಇದು ದೇಶದ ಅತ್ಯಂತ ಕೈಗೆಟುಕುವ ಎಲೆಕ್ಟ್ರಿಕ್ ಕಾರ್ ಆಗುತ್ತದೆ. ಪ್ರಸ್ತುತ, ಟಿಗೋರ್ ಇವಿ ರೂ.12.49 ಲಕ್ಷ - ರೂ 13.64 ಲಕ್ಷ (ಎಲ್ಲಾ, ಎಕ್ಸ್ ಶೋ ರೂಂ ದೆಹಲಿ) ಬೆಲೆಯ ವ್ಯಾಪ್ತಿಯಲ್ಲಿ ಲಭ್ಯವಿರುತ್ತದೆ,

ಕೈಗೆಟುಕುವ ಬೆಲೆ, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಟಾಟಾ ಮೋಟಾರ್ಸ್ 2026ರ ಮಾರ್ಚ್ ವೇಳೆಗೆ 10 ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯನ್ನು ಪ್ರಕಟಿಸಿದೆ. ಈ ಯೋಜನೆಯು ಹೊಸ ವಾಹನ ಫ್ಲಾಟ್ ಫಾರ್ಮ್ ಮತ್ತು ಸಂಬಂಧಿತ ತಂತ್ರಜ್ಞಾನ ಮತ್ತು ಮೂಲಸೌಕರ್ಯಕ್ಕಾಗಿ ಸುಮಾರು $2 ಬಿಲಿಯನ್ ಹೂಡಿಕೆಯನ್ನು ಮಾಡಲಿದೆ.

ಕೈಗೆಟುಕುವ ಬೆಲೆ, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಭವಿಷ್ಯದ ಟಾಟಾ ಎಲೆಕ್ಟ್ರಿಕ್ ಕಾರುಗಳು ಕನಿಷ್ಠ 500 ಕಿಮೀ ರೇಂಜ್ ಮತ್ತು ಹೆಚ್ಚಿನ ಪ್ರೇಕ್ಷಕರನ್ನು ಗುರಿಯಾಗಿಸಲು ಸುಧಾರಿತ ತಂತ್ರಜ್ಞಾನದ ವೈಶಿಷ್ಟ್ಯಗಳನ್ನು ಹೊಂದಿರುತ್ತದೆ. ಕಂಪನಿಯು ತನ್ನ ವಾರ್ಷಿಕ ಇವಿಗಳ ಉತ್ಪಾದನೆಯನ್ನು ಈ ಆರ್ಥಿಕ ವರ್ಷದಲ್ಲಿ 80,000 ಯುನಿಟ್‌ಗಳಿಗೆ ಹೆಚ್ಚಿಸುವ ಗುರಿಯನ್ನು ಹೊಂದಿದೆ. ಇನ್ನು ಟಾಟಾ ಟಿಯಾಗೊ ಇವಿ ಅನ್ನು ಮೊದಲು 2018 ಆಟೋ ಎಕ್ಸ್‌ಪೋದಲ್ಲಿ ಪರಿಚಯಿಸಲಾಯಿತು. ಆದರೆ ಈ ಕಾರನ್ನು ಹಿಂದೆ ಇಟ್ಟುಕೊಂಡು,

ಕೈಗೆಟುಕುವ ಬೆಲೆ, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಕಂಪನಿಯು ಮೊದಲು ನೆಕ್ಸನ್ ಇವಿ ಮತ್ತು ಟಿಗೋರ್ ಇವಿಯನ್ನು ಬಿಡುಗಡೆ ಮಾಡಿತು. ಇದೀಗ ಮಾರುಕಟ್ಟೆಯಲ್ಲಿ ಕೈಗೆಟುಕುವ ಬೆಲೆಯ ಎಲೆಕ್ಟ್ರಿಕ್ ಕಾರಿನ ಬೇಡಿಕೆಯನ್ನು ನೋಡಿ, ಟಾಟಾ ಅದನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ. ಸದ್ಯಕ್ಕೆ, ಟಾಟಾ ಮೋಟಾರ್ಸ್ ಟಿಯಾಗೊ ಇವಿಯ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ. ಆದರೆ ಇದು ಕಂಪನಿಯ ಅಗ್ಗದ ಎಲೆಕ್ಟ್ರಿಕ್ ಕಾರು ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಟಾಟಾ ಮೋಟಾರ್ಸ್ ಹ್ಯಾಚ್‌ಬ್ಯಾಕ್‌ಗಳು, ಸೆಡಾನ್‌ಗಳು ಮತ್ತು ಎಸ್‍ಯುವಿಗಳಲ್ಲಿ ಎಲ್ಲಾ ಮೂರು ವಿಭಾಗಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲು ಬಯಸುತ್ತದೆ. ಟಿ

ಕೈಗೆಟುಕುವ ಬೆಲೆ, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಟಿಗೊರ್ ಇವಿ ಮತ್ತು ನೆಕ್ಸಾನ್ ಇವಿ ಈಗಾಗಲೇ ಸೆಡಾನ್ ಮತ್ತು ಎಸ್‍ಯುವಿವಿಭಾಗದಲ್ಲಿ ಲಭ್ಯವಿದ್ದು, ಕಂಪನಿಯ ಮುಂದಿನ ಎಲೆಕ್ಟ್ರಿಕ್ ಕಾರು ಹ್ಯಾಚ್‌ಬ್ಯಾಕ್ ಆಗಲಿದೆ ಎಂಬ ನಿರೀಕ್ಷೆ ಹೆಚ್ಚಾಗಿದೆ. ಮಾಹಿತಿಯ ಪ್ರಕಾರ, ಟಾಟಾದ ಮುಂದಿನ ಎಲೆಕ್ಟ್ರಿಕ್ ಕಾರು ಕೂಡ ಜಿಪ್ಟ್ರಾನ್ ತಂತ್ರಜ್ಞಾನವನ್ನು ಆಧರಿಸಿದೆ. ಕಂಪನಿಯ ಜಿಪ್ಟ್ರಾನ್ ಪ್ಲಾಟ್‌ಫಾರ್ಮ್ ಈ ಹಿಂದೆ ಬಳಸಲಾಗುತ್ತಿರುವ ಎಕ್ಸ್‌ಪ್ರೆಸ್-ಟಿ ಪ್ಲಾಟ್‌ಫಾರ್ಮ್‌ಗಿಂತ ಹೆಚ್ಚು ಆಧುನಿಕ ಮತ್ತು ಸುಧಾರಿತವಾಗಿದೆ. ಟಾಟಾ ಟಿಯಾಗೊ ಮತ್ತು ಟಿಯಾಗೊ ಇವಿ ವಿನ್ಯಾಸದಲ್ಲಿ ಹೆಚ್ಚಿನ ವ್ಯತ್ಯಾಸವಿರುವುದಿಲ್ಲ. ಟಿಯಾಗೊ ಇವಿ ಅನ್ನು ಸಿಗ್ನೇಚರ್ ಟೀಲ್ ಬ್ಲೂ ಮತ್ತು ಡೇಟೋನಾ ಗ್ರೇ ಬಣ್ಣಗಳಲ್ಲಿ ಲಭ್ಯವಾಗುವಂತೆ ಮಾಡಬಹುದು.

ಕೈಗೆಟುಕುವ ಬೆಲೆ, ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಟಿಯಾಗೋ ಎಲೆಕ್ಟ್ರಿಕ್ ಕಾರು

ಕಂಪನಿಯು ತನ್ನ ಎಲೆಕ್ಟ್ರಿಕ್ ವಾಹನಗಳಲ್ಲಿ ಈ ಎರಡೂ ಬಣ್ಣಗಳನ್ನು ಪ್ರಮಾಣಿತವಾಗಿ ಬಳಸುತ್ತಿದೆ. ಇದಲ್ಲದೆ, ಕಾರಿನಲ್ಲಿ ಅನೇಕ ಸ್ಥಳಗಳಲ್ಲಿ ನೀಲಿ ಆಕ್ಸೆಂಟ್‌ಗಳನ್ನು ಸಹ ಬಳಸಲಾಗುವುದು. ಇತ್ತೀಚಿನ ಅಪ್‌ಡೇಟ್‌ನಲ್ಲಿ, ಪುಣೆ ಮೂಲದ ವಾಹನ ತಯಾರಕರು ಹೊಸ ಮತ್ತು ಹೆಚ್ಚು ಶಕ್ತಿಶಾಲಿ 2.2 ಲೀಟರ್ ಡೀಸೆಲ್ ಎಂಜಿನ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ,

Most Read Articles

Kannada
English summary
New tata tiago electric car teased revealed features details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X