ಡೀಲರ್ ಬಳಿ ತಲುಪಿದ ಹೊಸ ಟೊಯೊಟಾ ಗ್ಲಾಂಝಾ ಕಾರು

ಜಪಾನ್ ಮೂಲದ ಕಾರು ತಯಾರಕ ಕಂಪನಿಯಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ತನ್ನ ಇತ್ತೀಚೆಗೆ ನವೀಕರಿಸಿದ ಗ್ಲಾಂಝಾ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಹೊಸ ಟೊಯೊಟಾ ಗ್ಲಾಂಝಾ ಕಾರಿನ ಆರಂಭಿಕ ಬೆಲೆಯು ರೂ.6.39 ಲಕ್ಷವಾಗಿದೆ.

ಡೀಲರ್ ಬಳಿ ತಲುಪಿದ ಹೊಸ ಟೊಯೊಟಾ ಗ್ಲಾಂಝಾ ಕಾರು

ಟೊಯೊಟಾ ಗ್ಲಾಂಝಾ ಕಾರು ಮಾರುತಿ ಸುಜುಕಿ ಬಲೆನೊ ಮಾದರಿಯ ರಿಬ್ಯಾಡ್ಜ್ ಆವೃತ್ತಿಯಾಗಿದೆ. ಓ ಟೊಯೊಟಾ ಕಂಪನಿಯು ಗ್ಲಾಂಝಾ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಖರೀದಿಗಾಗಿ ಆನ್‌ಲೈನ್ ಅಥವಾ ಅಧಿಕೃತ ಡೀಲರ್‌ಶಿಪ್‌ಗಳಲ್ಲಿ ಈಗಾಗಲೇ ಬುಕ್ಕಿಂಗ್ ಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಈ ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ರೂ.11,000 ಟೋಕನ್ ಮೊತ್ತವನ್ನು ಪಾವತಿಸಿ ಹೊಸ ಮಾದರಿಯನ್ನು ಬುಕ್ ಮಾಡಬಹುದು. ಇದೀಗ ಹೊಸ ಟೊಯೊಟಾ ಗ್ಲಾಂಝಾ ಅಧಿಕೃತ ಡೀಲರ್‌ಶಿಪ್‌ಗಳಿಗೆ ತಲುಪಿದೆ.

ಡೀಲರ್ ಬಳಿ ತಲುಪಿದ ಹೊಸ ಟೊಯೊಟಾ ಗ್ಲಾಂಝಾ ಕಾರು

ಈ ಹೊಸ ಟೊಯೊಟಾ ಗ್ಲಾಂಝಾ ಕಾರಿನ ವಿತರಣೆಯು ಈ ತಿಂಗಳ ಕೊನೆಯಲ್ಲಿ ಪ್ರಾರಂಭವಾಗಲಿದೆ. ಈ ಟೊಯೊಟಾ ಗ್ಲಾಂಝಾ ಹೊಸ ಮುಂಭಾಗದ ವಿನ್ಯಾಸದೊಂದಿಗೆ ಬಂದಿದೆ. ಇದು ಟೊಯೊಟಾದ ಜಾಗತಿಕ ಕಾರುಗಳಿಗೆ ಅನುಗುಣವಾಗಿರುತ್ತದೆ. ಇದು ಕ್ಯಾಮ್ರಿ ತರಹದ ಮುಂಭಾಗದ ಗ್ರಿಲ್ ಮತ್ತು ಬಂಪರ್, ಹೊಸ ಕ್ರೋಮ್ ಮತ್ತು ಎಲ್-ಆಕಾರದ ಎಲ್ಇಡಿ ಡಿಆರ್ಎಲ್ (ಡೇಟೈಮ್ ರನ್ನಿಂಗ್ ಲ್ಯಾಂಪ್) ಗಳನು ಒಳಗೊಂಡಿದೆ.

ಡೀಲರ್ ಬಳಿ ತಲುಪಿದ ಹೊಸ ಟೊಯೊಟಾ ಗ್ಲಾಂಝಾ ಕಾರು

ಟೊಯೊಟಾ ಗ್ಲಾಂಝಾ ಕಾರಿನ ಹಿಂಭಾಗವು ಸ್ವಲ್ಪ ಪರಿಷ್ಕೃತ ಬಂಪರ್ ಮತ್ತು ಟೈಲ್-ಲೈಟ್‌ಗಾಗಿ ಹೊಸ ಇನ್‌ಸರ್ಟ್‌ಗಳೊಂದಿಗೆ ಬರುತ್ತದೆ. ಇದು ಹೊಸದಾಗಿ ವಿನ್ಯಾಸಗೊಳಿಸಲಾದ 16-ಇಂಚಿನ ವ್ಹೀಲ್ ಗಳನ್ನು ಹೊಂದಿದೆ.ಈ ಹೊಸ ಗ್ಲಾಂಝಾ ಕಾರು ರೆಡ್, ಬ್ಲೂ, ಗ್ರೇ, ವೈಟ್ ಮತ್ತು ಸಿಲ್ವರ್ ಬಣ್ಣಗಳನ್ನು ಒಳಗೊಂಡಿದೆ.

ಡೀಲರ್ ಬಳಿ ತಲುಪಿದ ಹೊಸ ಟೊಯೊಟಾ ಗ್ಲಾಂಝಾ ಕಾರು

ಈ ಹೊಸ ಹ್ಯಾಚ್‌ಬ್ಯಾಕ್ ಕ್ಯಾಬಿನ್ ಹೊಸ ಬಲೆನೊ ಮಾದರಿಗೆ ಹೋಲುತ್ತದೆ. ಇದು ಬಲೆನೊದಲ್ಲಿ ನೀಡಲಾಗುವ ಬ್ಲ್ಯಾಕ್ ಮತ್ತು ಬ್ಲೂ ಬಣ್ಣಗಳ ಬದಲಿಗೆ ಬ್ಲ್ಯಾಕ್ ಮತ್ತು ಬೀಜ್ ಬಣ್ಣಗಳ ಯೋಜನೆಯೊಂದಿಗೆ ಬರುತ್ತದೆ. ವೈಶಿಷ್ಟ್ಯಗಳ ವಿಷಯದಲ್ಲಿ, ಹೊಸ ಗ್ಲಾಂಝಾ ಮಲ್ಟಿ-ಫಂಕ್ಷನಲ್ ಲೆದರ್ ಸುತ್ತಿದ ಫ್ಲಾಟ್-ಬಾಟಮ್ ಸ್ಟೀರಿಂಗ್ ವ್ಹೀಲ್, ನವೀಕರಿಸಿದ ಇನ್ಸ್ಟ್ರುಮೆಂಟ್ ಕನ್ಸೋಲ್, ಸೆಂಟರ್ ಕನ್ಸೋಲ್‌ನಲ್ಲಿ ಹೊಸ ಏರ್-ಕಾನ್ ವೆಂಟ್‌ಗಳು ಮತ್ತು ಹಿಂಭಾಗ ಆಟೋಮ್ಯಾಟಿಕ್ ಎಸಿ ಹೊಂದಿದೆ.

ಡೀಲರ್ ಬಳಿ ತಲುಪಿದ ಹೊಸ ಟೊಯೊಟಾ ಗ್ಲಾಂಝಾ ಕಾರು

ಇದರೊಂದಿಗೆ Apple CarPlay ಮತ್ತು Android Auto, ನ್ಯಾವಿಗೇಶನ್ ಮತ್ತು ವಾಯ್ಸ್ ಕಾಮೆಂಡ್ ಗಳೊಂದಿಗೆ ದೊಡ್ಡ 9-ಇಂಚಿನ SmartPlay Pro+ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂನೊಂದಿಗೆ ಬರುತ್ತದೆ. ಹೊಸದು 360-ಡಿಗ್ರಿ ಕ್ಯಾಮೆರಾ, ಹೆಡ್ಸ್-ಅಪ್ ಡಿಸ್ಪ್ಲೇ (HUD), ವಾಯ್ಸ್ ಅಸಿಸ್ಟ್ ಫೈಂಡ್ ಮೈ ಕಾರ್ ವೈಶಿಷ್ಟ್ಯ ಮತ್ತು ರಿಮೋಟ್ ಲಾಕ್ ಮತ್ತು ಅನ್‌ಲಾಕ್ ಕಾರ್ಯಗಳಂತಹ ವೈಶಿಷ್ಟ್ಯಗಳೊಂದಿಗೆ ಕನೆಕ್ಟಿವಿಟಿ ಕಾರ್ ತಂತ್ರಜ್ಞಾನದೊಂದಿಗೆ ಬಂದಿದೆ,

ಡೀಲರ್ ಬಳಿ ತಲುಪಿದ ಹೊಸ ಟೊಯೊಟಾ ಗ್ಲಾಂಝಾ ಕಾರು

ಹೊಸ ಗ್ಲಾಂಝಾ ಹ್ಯಾಚ್‌ಬ್ಯಾಕ್ ನಲ್ಲಿ ಸುರಕ್ಷೆತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಇದರಲ್ಲಿ ಆರು ಏರ್‌ಬ್ಯಾಗ್‌ಗಳು, ಕ್ರೂಸ್ ಕಂಟ್ರೋಲ್, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎತ್ತರ ಹೊಂದಾಣಿಕೆಯ ಡ್ರೈವರ್ ಸೀಟ್, ಇಬಿಡಿಯೊಂದಿಗೆ ಎಬಿಎಸ್ ಇತ್ಯಾದಿಗಳಂತಹ ಉನ್ನತ-ಮಟ್ಟದ ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ಸಜ್ಜುಗೊಂಡಿದೆ.

ಡೀಲರ್ ಬಳಿ ತಲುಪಿದ ಹೊಸ ಟೊಯೊಟಾ ಗ್ಲಾಂಝಾ ಕಾರು

ಹೊಸ ಗ್ಲಾಂಝಾ ಕಾರಿನಲ್ಲಿ 1.2-ಲೀಟರ್ ಡ್ಯುಯಲ್-ಜೆಟ್ ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಂಟಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಡೀಲರ್ ಬಳಿ ತಲುಪಿದ ಹೊಸ ಟೊಯೊಟಾ ಗ್ಲಾಂಝಾ ಕಾರು

ಟೊಯೊಟಾ 5 ವರ್ಷಗಳು/220,000 ಕಿಮೀ ವರೆಗೆ ವಿಸ್ತೃತ ವಾರಂಟಿಯನ್ನು ಆಯ್ಕೆ ಮಾಡುವ ಆಯ್ಕೆಯೊಂದಿಗೆ 3 ವರ್ಷಗಳು/100,000 ಕಿಮೀ ವಾರಂಟಿಯನ್ನು ನೀಡುತ್ತಿದೆ. ಕಂಪನಿಯು EM60 ಮೂಲಕ ಕೇವಲ 60 ನಿಮಿಷಗಳಲ್ಲಿ ಪಿರಿಯೋಡಿಕ್ ಸರ್ವಿಸ್ ನೀಡುತ್ತದೆ, ಇನ್ನು ರೋಡ್ ಅಸಿಸ್ಟ್ ಪ್ರಯೋಜನಗಳು ಮತ್ತು ಹೆಚ್ಚಿನವುಗಳನ್ನು ಹೊಂದಿವೆ.

ಟೊಯೊಟಾ ಕಂಪನಿಯು ಗ್ಲಾಂಝಾ ಕಾರಿನ ಅಧಿಕೃತ ಟಿವಿಸಿಯನ್ನು ಬಿಡುಗಡೆಗೊಳಿಸಿದೆ. ಇದು ಕಾರಿನ ಒಳಭಾಗವನ್ನು ತೋರಿಸುತ್ತದೆ. ಈ ವಿಡಿಯೋವನ್ನು ಟೊಯೊಟಾ ಇಂಡಿಯಾ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದೆ. ಕಾರು ಹಿಂದಿನ ಆವೃತ್ತಿಗಿಂತ ಭಿನ್ನವಾಗಿ ಕಾಣುತ್ತದೆ. ಈ ಹೊಸ ಟೊಯೊಟಾ ಗ್ಲಾಂಝಾ ಕಾರು ಹೊಸ ಸ್ಪೋರ್ಟಿಯರ್ ವಿನ್ಯಾಸದ ಶೈಲಿಯನ್ನು ಹೊಂದಿದೆ. ಈ ಹೊಸ ಮಾದರಿಯಲ್ಲಿ ಹೊಸ ವೈಶಿಷ್ಟ್ಯಗಳು, ಸುಧಾರಿತ ಸ್ಟೈಲಿಂಗ್ ಮತ್ತು ಸಮರ್ಥ ಎಂಜಿನ್ ಅನ್ನು ಒಳಗೊಂಡಿದೆ. ಹಿಂದಿನ ಗ್ಲಾಂಝಾ ಬಲೆನೊಗೆ ಹೋಲುವಂತಿದ್ದರೆ, ಹೊಸ ಮಾದರಿಯು ವಿಭಿನ್ನ ವಿನ್ಯಾಸದೊಂದಿಗೆ ಬಂದಿದೆ.

ಡೀಲರ್ ಬಳಿ ತಲುಪಿದ ಹೊಸ ಟೊಯೊಟಾ ಗ್ಲಾಂಝಾ ಕಾರು

ಇನ್ನು ಟೊಯೊಟಾ ಕಂಪನಿಯು 2022ರ ಫೆಬ್ರವರಿ ತಿಂಗಳ ಮಾಸಿಕ ಮಾರಾಟ ವರದಿಯನ್ನು ಇತ್ತೀಚೆಗೆ ಬಹಿರಂಗಪಡಿಸಿತ್ತು. ವರದಿಯ ಪ್ರಕಾರ, ಕಳೆದ ತಿಂಗಳು ಟೊಯೊಟಾ ಕಂಪನಿಯು ಒಟ್ಟು 8745 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಟೊಯೊಟಾ ಕಂಪನಿಯು ಕಳೆದ ವರ್ಷ ಇದೇ ತಿಂಗಳಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಒಟ್ಟು 14,075 ಯುನಿಟ್‌ಗಳನ್ನು ಮಾರಾಟ ಮಾಡಿತ್ತು ಮತ್ತು ಆದ್ದರಿಂದ, ಶೇಕಡಾ 37.8 ರಷ್ಟು ಕುಸಿತವನ್ನು ಕಂಡಿದೆ. ಟೊಯೊಟಾ ಗ್ಲಾಂಝಾದಂತಹ ಮಾದರಿಗಳು ಭಾರತದಲ್ಲಿ ಕಂಪನಿಗೆ ಮಾರಾಟದ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಡೀಲರ್ ಬಳಿ ತಲುಪಿದ ಹೊಸ ಟೊಯೊಟಾ ಗ್ಲಾಂಝಾ ಕಾರು

ಟೊಯೊಟಾ ಹೊಸ ಗ್ಲಾಂಝಾಗೆ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ ಇದು 2022ರ ಮಾರುತಿ ಸುಜುಕಿ ಬಲೆನೊದಿಂದ ದೃಶ್ಯಾತ್ಮಕವಾಗಿ ಪ್ರತ್ಯೇಕಿಸುತ್ತದೆ. 2022ರ ಟೊಯೊಟಾ ಗ್ಲಾಂಝಾ ಕಾರು ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಈ ಹೊಸ ಟೊಯೊಟಾ ಗ್ಲಾಂಝಾ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಐ20, ಟಾಟಾ ಆಲ್ಟ್ರೋಜ್, ಹೋಂಡಾ ಜಾಝ್ ಮತ್ತು ಮಾರುತಿ ಸುಜುಕಿ ಬಲೆನೊ ಕಾರುಗಳುಗೆ ಪೈಪೋಟಿ ನೀಡುತ್ತದೆ.

Article Published On: Wednesday, March 23, 2022, 15:26 [IST]
English summary
New toyota glanza started arriving at dealerships detals
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+