ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (TKM) ಅಧಿಕೃತವಾಗಿ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಬಹುನಿರೀಕ್ಷಿತ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

Recommended Video

Mahindra Scorpio Classic Launched | Price At Rs 11.99 Lakh | Scorpio Classic Vs Scorpio N In Kannada

ಇದೀಗ ಭಾರತ-ಸ್ಪೆಕ್ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿಗಾಗಿ ಬುಕ್ಕಿಂಗ್‌ಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ.

ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿಯನ್ನು ಖರೀದಿಸುವ ಗ್ರಾಹಕರು ರೂ.10 ಲಕ್ಷ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಜಪಾನ್ ಮೂಲದ ಕಾರು ತಯಾರಕ ಕಂಪನಿಯಾದ ಟೊಯೊಟಾ(Toyota) ತನ್ನ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್(Land Cruiser) ಎಸ್‍ಯುವಿಯನ್ನು ಕಳೆದ ವರ್ಷ ಜಾಗತಿಕ ಮಟ್ಟದಲ್ಲಿ ಪರಿಚಯಿಸಿತು. ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಹೊಸ ಸಂಚಲವನ್ನು ಸೃಷ್ಟಿಸುವಲ್ಲಿ ಯಶಸ್ವಿಯಾಗಿದೆ.

ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಈ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿಗೆ ಬಿಡುಗಡೆ ಮಾಡಿದ ಪ್ರತಿಯೊಂದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲೂ ಬೇಡಿಕೆ ಹೆಚ್ಚಿದೆ. ಈ ಬಹುಬೇಡಿಕೆಯ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಗೆ ವೈಟಿಂಗ್ ಪಿರೇಡ್ ಕೆಲವು ದೇಶಗಳಲ್ಲಿ 4 ವರ್ಷಗಳವರೆಗೆ ಇದೆ.

ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿಯು ಮಾಡ್ಯುಲರ್ TNGA-F ಆರ್ಕಿಟೆಕ್ಚರ್‌ನಿಂದ ಆಧಾರವಾಗಿದೆ ಮತ್ತು ಅದರ ಒಟ್ಟಾರೆ ಕರ್ಬ್ ತೂಕವು ಸುಮಾರು 200 ಕಿಲೋಗ್ರಾಂಗಳಷ್ಟು ಕಡಿಮೆಯಾಗಿದೆ. ಹಳೆಯ ಮಾದರಿಗೆ ಹೋಲಿಸಿದರೆ, ಲ್ಯಾಂಡ್ ಕ್ರೂಸರ್ ಎಲ್‌ಸಿ300 ವಿನ್ಯಾಸಕ್ಕೆ ವಿಕಸನೀಯ ಪರಿಷ್ಕರಣೆಯೊಂದಿಗೆ ಬರಲಿದೆ.

ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಈ ಹೊಸ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ನೇರವಾದ ಬಾಡಿ ಪ್ಯಾನೆಲ್‌ಗಳು ಮತ್ತು ಎತ್ತರದ ಕಂಬಗಳನ್ನು ಸ್ಕ್ವೇರ್-ಆಫ್ ವೀಲ್ ಆರ್ಚ್‌ಗಳು ಮತ್ತು ಹೊಸದಾಗಿ ವಿನ್ಯಾಸಗೊಳಿಸಲಾದ 20-ಇಂಚಿನ ಅಲಾಯ್ ವ್ಹೀಲ್ ಗಳನ್ನು ಉಳಿಸಿಕೊಂಡಿದೆ. ಈ ಎಸ್‍ಯುವಿಯ ಕ್ಯಾಬಿನ್ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆ ಮತ್ತು ಸಂಪರ್ಕಿತ ವೈಶಿಷ್ಟ್ಯಗಳೊಂದಿಗೆ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಪಡೆಯುತ್ತದೆ.

ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಹೆಚ್ಚು ಜನಪ್ರಿಯವಾಗಿರುವ ಆಫ್-ರೋಡರ್‌ನ ಸಲಕರಣೆಗಳ ಪಟ್ಟಿಯು ಎಲ್ಲಾ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಮತ್ತು ಹಲವಾರು ಸೌಕರ್ಯ, ಅನುಕೂಲತೆ, ಮನರಂಜನೆ, ಸಹಾಯಕ ಮತ್ತು ಸುರಕ್ಷತೆ ಆಧಾರಿತ ವೈಶಿಷ್ಟ್ಯಗಳನ್ನು ಒಳಗೊಂಡಿರುತ್ತದೆ. ಸೋರಿಕೆಯಾದ ಮಾಹಿತಿಯ ಪ್ರಕಾರ, ಮೂರು ಇಂಟಿರಿಯರ್ ಬಣ್ಣದ ಥೀಮ್‌ಗಳನ್ನು ಒಳಗೊಂಡಿದೆ.

ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಇನ್ನು ಐದು ಬಾಹ್ಯ ಬಣ್ಣಗಳ ಆಯ್ಕೆಯು ಸಹ ಲಭ್ಯವಿರುತ್ತವೆ. ಅವುಗಳೆಂದರೆ ಪ್ರೆಶಿಯಸ್ ವೈಟ್ ಪರ್ಲ್, ಸೂಪರ್ ವೈಟ್, ಡಾರ್ಕ್ ರೆಡ್ ಮೈಕಾ ಮೆಟಾಲಿಕ್, ಆಟಿಟ್ಯೂಡ್ ಬ್ಲ್ಯಾಕ್ ಮತ್ತು ಡಾರ್ಕ್ ಬ್ಲೂ ಮೈಕಾ ಎಂಬ ಬಣ್ಣಗಳಾಗಿವೆ.

ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ, ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಎರಡು ಎಂಜಿನ್ ಆಯ್ಕೆಗಳನ್ನು ಹೊಂದಿದೆ. ಇದು 3.5 ಎಲ್ ವಿ6 ಟ್ವಿನ್-ಟರ್ಬೊ ಪೆಟ್ರೋಲ್ ಮತ್ತು 3.3 ಎಲ್ ವಿ6 ಟ್ವಿನ್-ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಗಳಾಗಿವೆ. ಇದರಲ್ಲಿ 3.5-ಲೀಟರ್ ವಿ6 ಟ್ವಿನ್-ಟರ್ಬೊ ಎಂಜಿನ್ ಅನ್ನು 409 ಬಿಹೆಚ್‍ಪಿ ಪವರ್ ಮತ್ತು 650 ಎನ್ಎಂ ಟಾರ್ಕ್ ಉತ್ಪಾದಿಸತ್ತದೆ.

ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಇದರೊಂದಿಗೆ ಈ ಎಸ್‍ಯುವಿಯಲ್ಲಿ 3.5-ಲೀಟರ್ ವಿ6 ಟ್ವಿನ್-ಟರ್ಬೊ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 409 ಬಿಹೆಚ್‍ಪಿ ಪವರ್ ಮತ್ತು 650 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.ಈ ಎಂಜಿನ್ ನೊಂದಿಗೆ 10-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ಈ ಗೇರ್ ಬಾಕ್ಸ್ ಇಂಧನ ಬಳಕೆ ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಹಿಂದಿನದಕ್ಕಿಂತ ಶೇ.10 ಕಡಿಮೆ ಮಾಡುತ್ತದೆ ಎಂದು ಕಂಪನಿ ಹೇಳಿದೆ,

ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಹೊಸ ಟಿಎನ್‌ಜಿಎ (ಟೊಯೊಟಾ ನ್ಯೂ ಗ್ಲೋಬಲ್ ಆರ್ಕಿಟೆಕ್ಚರ್) ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ ಬ್ರ್ಯಾಂಡ್‌ನ ಮೊದಲ ಬಾಡಿ-ಆನ್-ಫ್ರೇಮ್ ವಾಹನ ಇದಾಗಿದೆ, ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯಲ್ಲಿ ಕೆಲವು ಕಾಸ್ಮೆಟಿಕ್ ಬದಲಾವಣೆಗಳನ್ನು ಮಾಡಲಾಗಿದೆ. ಈ ಬ್ರ್ಯಾಂಡ್‌ನ ಹೊಸ ಪ್ರಮುಖ ಎಸ್‍ಯುವಿ ಹೆಚ್ಚು ಪ್ರಮುಖವಾದ ಗ್ರಿಲ್, ಹೊಸ ಲೈಟಿಂಗ್ ಸೆಟಪ್, ಪರಿಷ್ಕೃತ ಟೈಲ್‌ಗೇಟ್ ಮತ್ತು ಹೊಸದಾಗಿ ವಿನ್ಯಾಸಗೊಳಿಸಲಾದ ಟೈಲ್‌ಲ್ಯಾಂಪ್‌ಗಳನ್ನು ಪಡೆಯುತ್ತದೆ.

ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಲ್ಯಾಂಡ್ ಕ್ರೂಸರ್ ವಿಶ್ವದ ಮೊದಲ ಎಲೆಕ್ಟ್ರಾನಿಕ್ ಕೈನೆಟಿಕ್ ಡೈನಾಮಿಕ್ ಸಸ್ಪೆಂಕ್ಷನ್ ಸಿಸ್ಟಮ್ (ಇ-ಕೆಡಿಎಸ್ಎಸ್) ಅನ್ನು ಒಳಗೊಂಡಿದೆ ಮಲ್ಟಿ-ಟೆರೈನ್ ಮಾನಿಟರ್ ಅನ್ನು ಒಳಗೊಂಡಿರುವ ಬ್ರ್ಯಾಂಡ್‌ನ ಮೊದಲ ಮಾದರಿಯಾಗಿದೆ, ಇನ್ನು ಟೊಯೊಟಾ ಕಂಪನಿಯು ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಆಫ್-ರೋಡ್ ಪರ್ಫಾಮೆನ್ಸ್ ವೀಡಿಯೊವನ್ನು ಇತ್ತೀಚೆಗೆ ಹಂಚಿಕೊಂಡಿತ್ತು. ಈ ವೀಡಿಯೊದಲ್ಲಿ ಲ್ಯಾಂಡ್ ಕ್ರೂಸರ್ ಎಷ್ಟು ಸಮರ್ಥ ಆಫ್-ರೋಡರ್ ಎಂದು ತಿಳಿಯುತ್ತದೆ. ಈ ವೀಡಿಯೋದಲ್ಲಿ ಲ್ಯಾಂಡ್ ಕ್ರೂಸರ್ ಎಸ್‍ಯುವಿ ಬೆಟ್ಟ, ಗುಡ್ಡಗಳ ಜೊತೆಯಲ್ಲಿ ಮರಳಿನಲ್ಲಿ ಸಾಗುವುದನ್ನು ಪ್ರದರ್ಶಿಸಿದ್ದಾರೆ. ಇನ್ನು ಈ ಎಸ್‍ಯುವಿಯು ಜಿಗಿಯುವುದನ್ನು ತೋರಿಸಿದೆ.

ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿಯು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ. ಮುಂದಿನ ದಿನಗಳಲ್ಲಿ ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿಯ ಬಗ್ಗೆ ಹೆಚ್ಚಿನ ಮಾಹಿತಿಗಳು ಬಹಿರಂಗವಾಗಲಿದೆ.

Most Read Articles

Kannada
Read more on ಟೊಯೊಟಾ toyota
English summary
New toyota land cruiser lc300 suv bookings started in india details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X