ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ ಅತಿ ಹೆಚ್ಚು ಮೈಲೇಜ್ ನೀಡುವ ಟೊಯೊಟಾ ಹೈರೈಡರ್

ಇತ್ತೀಚೆಗೆ ಬಿಡುಗಡೆಯಾದ ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನನ್ನು ಸೃಷ್ಟಿಸಿದೆ. ಈ ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‍ಯುವಿಯು ಆಕರ್ಷಕ ವಿನ್ಯಾಸ ಮತ್ತು ಅತ್ಯಾಧುನಿಕ ಫೀಚರ್ಸ್ ಗಳನ್ನು ಹೊಂದಿವೆ.

ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ ಅತಿ ಹೆಚ್ಚು ಮೈಲೇಜ್ ನೀಡುವ ಟೊಯೊಟಾ ಹೈರೈಡರ್

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‍ಯುವಿಯು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಫೋಕ್ಸ್ ವ್ಯಾಗನ್ ಟೈಗನ್, ಸ್ಕೋಡಾ ಕುಶಾಕ್ ಮತ್ತು ಮಾರುತಿ ಗ್ರ್ಯಾಂಡ್ ವಿಟಾರಾ ಮುಂತಾದ ಪ್ರತಿಸ್ಪರ್ಧಿಗಳಿಗೆ ಪೈಪೋಟಿ ನೀಡುತ್ತಿದೆ. ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಕಳೆದ ತಿಂಗಳಲ್ಲಿ ಒಟ್ಟು 1163 ಯುನಿಟ್‌ಗಳನ್ನು ನೋಂದಾಯಿಸಿದೆ ಮತ್ತು ಮುಂಬರುವ ತಿಂಗಳುಗಳಲ್ಲಿ ಸೆಗ್ಮೆಂಟ್-ಪ್ರಮುಖ ಮಾರಾಟ ಅಂಕಿಅಂಶಗಳನ್ನು ನೋಂದಾಯಿಸುವ ನಿರೀಕ್ಷೆಯಿದೆ. ಈ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‍ಯುವಿಯ ಬೆಲೆಯ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.10.45 ಲಕ್ಷವಾಗಿದೆ.

ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ ಅತಿ ಹೆಚ್ಚು ಮೈಲೇಜ್ ನೀಡುವ ಟೊಯೊಟಾ ಹೈರೈಡರ್

ಟೊಯೊಟಾ ಹೈರೈಡರ್ ಎಸ್‍ಯುವಿ ಮಾದರಿಯು ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಪ್ರಮುಖ ಎರಡು ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗಿದೆ. ಹೊಸ ಕಾರಿನಲ್ಲಿರುವ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.48 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.19 ಲಕ್ಷ ಬೆಲೆ ಹೊಂದಿದ್ದರೆ ಸ್ಟ್ರಾಂಗ್ ಹೈಬ್ರಿಡ್ ಮಾದರಿಯು ಆರಂಭಿಕವಾಗಿ ರೂ. 15.11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.99 ಲಕ್ಷ ಬೆಲೆ ಹೊಂದಿದೆ.

ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ ಅತಿ ಹೆಚ್ಚು ಮೈಲೇಜ್ ನೀಡುವ ಟೊಯೊಟಾ ಹೈರೈಡರ್

ಈ ಎಸ್‍ಯುವಿ ಕೆಲವು ವಿಭಿನ್ನ ಫೀಚರ್ಸ್‌ಗಳೊಂದಿಗೆ ಗ್ರ್ಯಾಂಡ್ ವಿಟಾರಾಗಿಂತಲೂ ಹೊಸ ಹೈಡರ್ ಮಾದರಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 3 ಸಾವಿರದಿಂದ ರೂ. 50 ಸಾವಿರದಷ್ಟು ದುಬಾರಿಯಾಗಿದ್ದು, ಸ್ಮಾರ್ಟ್ ಹೈಬ್ರಿಡ್ ಮಾದರಿಯ ಹೈ ಎಂಡ್ ಮಾದರಿಯಲ್ಲಿ ಮಾತ್ರ ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಸೌಲಭ್ಯವನ್ನು ನೀಡಲಾಗಿದೆ.

ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ ಅತಿ ಹೆಚ್ಚು ಮೈಲೇಜ್ ನೀಡುವ ಟೊಯೊಟಾ ಹೈರೈಡರ್

ಮಧ್ಯಮ ಕ್ರಮಾಂಕದ ಕಾರುಗಳಲ್ಲಿ ಸ್ಟ್ರಾಂಗ್ ಹೈಬ್ರಿಡ್ ತಂತ್ರಜ್ಞಾನ ಸೌಲಭ್ಯವನ್ನು ಹೊಂದಿರುವ ಮೊದಲ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಟೊಯೊಟಾ ಹೈರೈಡರ್ ಕಾರು ಮಾದರಿಯು ಇ, ಎಸ್, ಜಿ, ವಿ ವೆರಿಯೆಂಟ್‌ಗಳನ್ನು ಹೊಂದಿದ್ದು, 1.5 ಲೀಟರ್ ಪೆಟ್ರೋಲ್ ಮಾದರಿಯಲ್ಲಿ ವಿವಿಧ ವೆರಿಯೆಂಟ್ ಅನುಗುಣವಾಗಿ ಸ್ಮಾರ್ಟ್ ಹೈಬ್ರಿಡ್ ಮತ್ತು ಸ್ಟ್ರಾಂಗ್ ಹೈಬ್ರಿಡ್ ತಂತ್ರಜ್ಞಾನ ನೀಡಲಾಗಿದೆ.

ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ ಅತಿ ಹೆಚ್ಚು ಮೈಲೇಜ್ ನೀಡುವ ಟೊಯೊಟಾ ಹೈರೈಡರ್

ಸ್ಟ್ರಾಂಗ್ ಹೈಬ್ರಿಡ್ ಮಾದರಿಯಲ್ಲಿರುವ 1.5 ಲೀಟರ್ ಅಟ್ಕಿನ್ಸನ್ ಪೆಟ್ರೋಲ್ ಎಂಜಿನ್ ಅತ್ಯುತ್ತಮ ಇಂಧನ ದಕ್ಷತೆ ಹೊಂದಿದ್ದು, ಇದರಲ್ಲಿರುವ ಸಿಂಗಲ್ ಎಲೆಕ್ಟ್ರಿಕ್ ಮೋಟಾರ್ ಮತ್ತು ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೈಬ್ರಿಡ್ ತಂತ್ರಜ್ಞಾನದ ಪ್ರಮುಖ ತಾಂತ್ರಿಕ ಅಂಶವಾಗಿದೆ.

ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ ಅತಿ ಹೆಚ್ಚು ಮೈಲೇಜ್ ನೀಡುವ ಟೊಯೊಟಾ ಹೈರೈಡರ್

ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಮಾದರಿಯು 87 ಬಿಎಚ್‌ಪಿ ಮತ್ತು 122 ಎನ್ಎಂ ಟಾರ್ಕ್ ಉತ್ಪಾದಿಸಲಿದ್ದಲ್ಲಿ 177.6 ವೊಲ್ಟ್ ಎಲೆಕ್ಟ್ರಿಕ್ ಮೋಟಾರ್ ಸೌಲಭ್ಯದೊಂದಿಗೆ 79 ಬಿಎಚ್‌ಪಿ ಮತ್ತು 141 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಪೆಟ್ರೋಲ್ ಮತ್ತು ಎಲೆಕ್ಟ್ರಿಕ್ ಮೋಟಾರ್ ಒಟ್ಟಾಗಿ ಕಾರ್ಯನಿರ್ವಹಣೆ ಮಾಡುವ ಮೂಲಕ ಪೆಟ್ರೋಲ್ ದಹಿಸುವಿಕೆಯ ಪ್ರಮಾಣವನ್ನು ತಗ್ಗಿಸಲಿದೆ.

ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ ಅತಿ ಹೆಚ್ಚು ಮೈಲೇಜ್ ನೀಡುವ ಟೊಯೊಟಾ ಹೈರೈಡರ್

ಈ ಮೂಲಕ ಎರಡು ತಂತ್ರಜ್ಞಾನಗಳು ಒಟ್ಟಾಗಿ 114 ಬಿಎಚ್‌ಪಿ ಉತ್ಪಾದನೆಯೊಂದಿಗೆ ಇಂಧನ ಕಾರ್ಯಕ್ಷಮತೆ ಕಾಯ್ದುಕೊಳ್ಳುತ್ತದೆ. ಸ್ಟ್ರಾಂಗ್ ಹೈಬ್ರಿಡ್ ತಂತ್ರಜ್ಞಾನ ಹೊಂದಿರುವ ಹೈರೈಡರ್ ವೆರಿಯೆಂಟ್‌ಗಳಲ್ಲಿ ಟೊಯೊಟಾ ಕಂಪನಿಯು ಇ-ಸಿವಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಇದು ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 27.97 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ ಅತಿ ಹೆಚ್ಚು ಮೈಲೇಜ್ ನೀಡುವ ಟೊಯೊಟಾ ಹೈರೈಡರ್

ಇನ್ನು ಸ್ಮಾರ್ಟ್ ಹೈಬ್ರಿಡ್ ಹೈರೈಡರ್‌ನಲ್ಲಿ ಟೊಯೊಟಾ ಕಂಪನಿಯು ಮಾರುತಿ ಸುಜುಕಿಯಿಂದ ಎರವಲು ಪಡೆಯಲಾದ 1.5-ಲೀಟರ್ K15C ಸ್ಮಾರ್ಟ್-ಹೈಬ್ರಿಡ್ ಜೊತೆಗೆ ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್ (ISG) ಒದಗಿಸಲಿದ್ದು, ಇದು ಕೂಡಾ ಉತ್ತಮ ಇಂಧನ ದಕ್ಷತೆಯೊಂದಿಗೆ ಪರ್ಫಾಮೆನ್ಸ್ ಕಾಯ್ದುಕೊಳ್ಳಲು ಸಹಕಾರಿಯಾಗಿದೆ.

ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ ಅತಿ ಹೆಚ್ಚು ಮೈಲೇಜ್ ನೀಡುವ ಟೊಯೊಟಾ ಹೈರೈಡರ್

1.5-ಲೀಟರ್ K15C ಸ್ಮಾರ್ಟ್-ಹೈಬ್ರಿಡ್ ಪೆಟ್ರೋಲ್ ಎಂಜಿನ್ ಅನ್ನು ಈಗಾಗಲೇ ಬ್ರೆಝಾ, ಎಕ್ಸ್‌ಎಲ್6 ಮತ್ತು ಹೊಸ ಎರ್ಟಿಗಾ ಮಾದರಿಗಳಲ್ಲಿಯೂ ನೋಡಬಹುದಾಗಿದೆ. ಸಹಭಾಗಿತ್ವ ಯೋಜನೆಗಾಗಿ ಮಾರುತಿ ಸುಜುಕಿ ಮತ್ತು ಟೊಯೊಟಾ ಕಂಪನಿಗಳು ತಮ್ಮ ಹೊಸ ಮಾದರಿಗಳಿಗಾಗಿ ಬಳಕೆ ಮಾಡಿಕೊಂಡಿವೆ.

ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ ಅತಿ ಹೆಚ್ಚು ಮೈಲೇಜ್ ನೀಡುವ ಟೊಯೊಟಾ ಹೈರೈಡರ್

ಸ್ಮಾರ್ಟ್ ಹೈಬ್ರಿಡ್ ಹೊಂದಿರುವ ಪೆಟ್ರೋಲ್ ಎಂಜಿನ್ ಮಾದರಿಯು 103 ಬಿಎಚ್‌ಪಿ ಮತ್ತು 137 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಿದ್ದು, ಈ ಎಂಜಿನ್‌ನಲ್ಲಿ ಕಂಪನಿಯು 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ನೀಡಿದೆ.

ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ ಅತಿ ಹೆಚ್ಚು ಮೈಲೇಜ್ ನೀಡುವ ಟೊಯೊಟಾ ಹೈರೈಡರ್

ಹಾಗೆಯೇ ಹೊಸ ಎಸ್‍ಯುವಿ ಖರೀದಿ ಮೇಲೆ ಟೊಯೊಟಾ ಕಂಪನಿಯು 3 ವರ್ಷ ಅಥವಾ1,00,000 ಕಿ.ಮೀ ವಾರಂಟಿಯನ್ನು ನೀಡಲಿದ್ದು, ಇದನ್ನು 5 ವರ್ಷ ಅಥವಾ 2,20,000 ಕಿ.ಮೀವರೆಗೆ ವಿಸ್ತರಿಸಬಹುದಾಗಿದೆ. ಜೊತೆಗೆ ಹೊಸ ಕಾರಿನ ಹೈಬ್ರಿಡ್ ಬ್ಯಾಟರಿಗಳ ಮೇಲೆ 8 ವರ್ಷ ಅಥವಾ 1,60,000 ಕಿ.ಮೀ ವಾರಂಟಿಯನ್ನು ಸಹ ನೀಡುತ್ತಿದೆ. ಪ್ರಮುಖ ಪ್ರತಿಸ್ಪರ್ಧಿಗಳಾದ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಫೋಕ್ಸ್‌ವ್ಯಾಗನ್ ಟೈಗುನ್, ಸ್ಕೋಡಾ ಕುಶಾಕ್ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ ಅತಿ ಹೆಚ್ಚು ಮೈಲೇಜ್ ನೀಡುವ ಟೊಯೊಟಾ ಹೈರೈಡರ್

ಸುರಕ್ಷತಾ ವೈಶಿಷ್ಟ್ಯಗಳ ವಿಷಯದಲ್ಲೂ ಗಮನಸೆಳೆಯಲಿರುವ ಅರ್ಬನ್ ಕ್ರೂಸರ್ ಹೈರೈಡರ್ ಕಾರು 6 ಏರ್‌ಬ್ಯಾಗ್‌ಗಳು, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್, ಇಎಸ್‌ಪಿ, ಹಿಲ್-ಹೋಲ್ಡ್ ಅಸಿಸ್ಟ್ ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್ ಅನ್ನು ಪಡೆಯುತ್ತದೆ.

ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ ಅತಿ ಹೆಚ್ಚು ಮೈಲೇಜ್ ನೀಡುವ ಟೊಯೊಟಾ ಹೈರೈಡರ್

ಹೈರೈಡರ್‌ನ ಉನ್ನತ ರೂಪಾಂತರಗಳಲ್ಲಿ ಪನೋರಮಿಕ್ ಸನ್‌ರೂಫ್, 360-ಡಿಗ್ರಿ ಕ್ಯಾಮೆರಾ, ವೈರ್‌ಲೆಸ್ ಚಾರ್ಜರ್, ಪೂರ್ಣ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೆಡ್ಸ್-ಅಪ್ ಡಿಸ್ಪ್ಲೇ, ಕನೆಕ್ಟ್ ಮಾಡಿದ ಕಾರ್ ಟೆಕ್ ಮತ್ತು ಗೂಗಲ್ ಮತ್ತು ಸಿರಿ ಹೊಂದಾಣಿಕೆಯೊಂದಿಗೆ ಧ್ವನಿ ಸಹಾಯದಂತಹ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ.

Most Read Articles

Kannada
Read more on ಟೊಯೊಟಾ toyota
English summary
New toyota urban cruiser hyryder suv first month sales details revealed
Story first published: Saturday, October 8, 2022, 11:29 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X