ಭಾರತದಲ್ಲಿ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು ಉತ್ಪಾದನೆ ಪ್ರಾರಂಭ
ಜನಪ್ರಿಯ ವಾಹನ ತಯಾರಕ ಸಂಸ್ಥೆಯಾದ ಫೋಕ್ಸ್‌ವ್ಯಾಗನ್ (Volkswagen) ಇಂಡಿಯಾ ತನ್ನ ಹೊಸ ವಿರ್ಟಸ್ ಮಿಡ್ ಸೈಜ್ ಸೆಡಾನ್ ಅನ್ನು ಇತ್ತೀಚೆಗೆ ದೇಶದಲ್ಲಿ ಅನಾವರಣಗೊಳಿಸಿತ್ತು. ಇದೀಗ ಫೋಕ್ಸ್‌ವ್ಯಾಗನ್ ಕಂಪನಿಯು ವಿರ್ಟಸ್ ಸೆಡಾನ್ ಕಾರಿನ ಉತ್ಪಾದನೆಯನ್ನು ಮಹಾರಾಷ್ಟ್ರದ ಔರಂಗಾಬಾದ್ ಘಟಕದಲ್ಲಿ ಪ್ರಾರಂಭಿಸಿದೆ.

ಫೋಕ್ಸ್‌ವ್ಯಾಗನ್ ಕಂಪನಿಯು ಈ ಹೊಸ ವಿರ್ಟಸ್ ಕಾರು ಖರೀದಿಗಾಗಿ ಶಾದ್ಯಂತದ ಅಧಿಕೃತ ಡೀಲರ್‌ಶಿಪ್‌ಗಳಲ್ಲಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದಾರೆ. ಈ ಹೊಸ ಸೆಡಾನ್ ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ಪಾವತಿಸಿ ಬುಕ್ಕಿಂಗ್ ಅನ್ನು ಮಾಡಬಹುದು. ಇನ್ನು ಈ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು ಭಾರತದಲ್ಲಿ 2022ರ ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ. ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು ಎರಡು ಎಂಜಿನ್ ಆಯ್ಕೆಗಳು ಮತ್ತು ಮೂರು ಟ್ರಾನ್ಸ್‌ಮಿಷನ್ ಆಯ್ಕೆಗಳೊಂದಿಗೆ ಬರಲಿದೆ.

ಈ ಹೊಸ ವಿರ್ಟಸ್ ಕಾರು ಡೈನಾಮಿಕ್ ಲೈನ್ ಮತ್ತು ಜಿಟಿ ಲೈನ್‌ನ ಎರಡು ರೂಪಾಂತರಗಳಲ್ಲ ಬಿಡುಗಡೆಯಾಗಲಿದೆ. ಈ ಹೊಸ ಕಾರು ಹೆಚ್ಚಿನ ಫೀಚರ್ಸ್ ಗಳನ್ನು ಸ್ಲಾವಿಯಾದಿಂದ ಎರವಲು ಪಡೆದಿದೆ. ಸ್ಕೋಡಾ ಸ್ಲಾವಿಯಾದಂತೆಯೇ, ಹೊಸ ವಿಡಬ್ಲ್ಯೂ ವಿರ್ಟಸ್ ಬ್ರ್ಯಾಂಡ್‌ನ ಎರಡನೇ ಮಾದರಿಯಾಗಿದ್ದು, ಹೆಚ್ಚು ಸ್ಥಳೀಕರಿಸಿದ MQB A0 IN ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ.

ಉದಯೋನ್ಮುಖ ಮಾರುಕಟ್ಟೆಗಳಿಗೆ ಎಂಟ್ರಿ ಎವೆಲ್ ಮಾದರಿಗಳನ್ನು ಅಭಿವೃದ್ಧಿಪಡಿಸಲು ಎರಡೂ ಕಂಪನಿಗಳು ಈ ಆರ್ಕಿಟೆಕ್ಚರ್ ಅನ್ನು ಬಳಸುತ್ತವೆ. ಇದು ವಿಭಿನ್ನ ವೀಲ್‌ಬೇಸ್‌ನೊಂದಿಗೆ ಹ್ಯಾಚ್‌ಬ್ಯಾಕ್, ಸೆಡಾನ್ ಮತ್ತು ಎಸ್‍ಯುವಿ ಸೇರಿದಂತೆ ವಿವಿಧ ದೇಹ ಶೈಲಿಗಳಿಗೆ ಹೊಂದಿಕೆಯಾಗುವ ಏಕರೂಪದ ಇನ್ನೂ ವೇರಿಯಬಲ್ ಪ್ಲಾಟ್‌ಫಾರ್ಮ್ ಆಗಿದೆ.

ಈ MQB A0 IN ಪ್ಲಾಟ್‌ಫಾರ್ಮ್ ಉತ್ತಮ ದಕ್ಷತೆ ಮತ್ತು ಕಡಿಮೆ ಉತ್ಪಾದನಾ ವೆಚ್ಚದಲ್ಲಿ ಮೊದಲಿಗಿಂತ ವೇಗವಾಗಿ ಮಾರುಕಟ್ಟೆಗೆ ಹೆಚ್ಚಿನ ಉತ್ಪನ್ನಗಳನ್ನು ಪರಿಚಯಿಸಲು ವಾಹನ ತಯಾರಕರಿಗೆ ಅನುವು ಮಾಡಿಕೊಡುತ್ತದೆ. ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು ದೇಶದಲ್ಲಿ ವೆಂಟೊ ಮಾದರಿಯ ಬದಲಿಯಾಗಿದೆ, ಇದು ಅದರ ಬದಲಿಗಿಂತ ದೊಡ್ಡದಾಗಿದೆ ಮತ್ತು ಸುಸಜ್ಜಿತವಾಗಿದೆ.

ಈ ಹೊಸ ಫೋಕ್ಸ್‌ವ್ಯಾಗನ್ ಸೆಡಾನ್ 4561 ಮಿಮೀ ಉದ್ದ, 1752 ಎಂಎಂ ಅಗಲ ಮತ್ತು 1507 ಎಂಎಂ ಎತ್ತರವನ್ನು 2651 ಎಂಎಂ ವೀಲ್‌ಬೇಸ್ ಅನ್ನು ಹೊಂದಿದೆ. ಈ ಕಾರಿನ ಮುಂಭಾಗದಲ್ಲಿ, ಮಾದರಿಯು ಕ್ರೋಮ್ ಸರೌಂಡ್‌ನೊಂದಿಗೆ ಸಿಂಗಲ್ ಸ್ಲೇಟ್ ಗ್ರಿಲ್, ಎಲ್-ಆಕಾರದ ಎಲ್‌ಇಡಿ ಡಿಆರ್‌ಎಲ್‌ನೊಂದಿಗೆ ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು (ಸ್ಟ್ಯಾಂಡರ್ಡ್) ಮತ್ತು ಎರಡೂ ಬದಿಗಳಲ್ಲಿ ಫಾಗ್ ಲ್ಯಾಂಪ್‌ಗಳೊಂದಿಗೆ ವಿಶಾಲವಾದ ಏರ್ ಡ್ಯಾಮ್ ಅನ್ನು ಹೊಂದಿದೆ.

ಸೈಡ್ ಪ್ರೊಫೈಲ್ ಅನ್ನು ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ಗಳು, ಶಾರ್ಕ್ ಫಿನ್ ಆಂಟೆನಾ, ಕ್ರೋಮ್ ಇನ್ಸರ್ಟ್‌ಗಳೊಂದಿಗೆ ಡೋರ್ ಹ್ಯಾಂಡಲ್‌ಗಳು ಮತ್ತು ಕಾಂಟ್ರಾಸ್ಟ್ ಕಪ್ಪು ORVM ಗಳಿಂದ ಅಲಂಕರಿಸಲಾಗಿದೆ. ಸೆಡಾನ್ ಹಿಂಭಾಗದಲ್ಲಿ ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಹೊಂದಿರುತ್ತದೆ.

ಈ ಫೋಕ್ಸ್‌ವ್ಯಾಗನ್ ವಿರ್ಟಸ್ ಜಿಟಿ ಲೈನ್ ಟ್ರಿಮ್‌ನಲ್ಲಿ ಲಭ್ಯವಿರುತ್ತದೆ ಅದು ಮುಂಭಾಗದ ಫೆಂಡರ್‌ಗಳಲ್ಲಿ 'GT' ಬ್ಯಾಡ್ಜಿಂಗ್ ಅನ್ನು ಹೊಂದಿರುತ್ತದೆ. ಫೋಕ್ಸ್‌ವ್ಯಾಗನ್ ವಿರ್ಟಸ್ ಸೆಡಾನ್ ಕಾರನ್ನು ವೈಲ್ಡ್ ಚೆರ್ರಿ ರೆಡ್, ಕ್ಯಾಂಡಿ ವೈಟ್, ಕಾರ್ಬನ್ ಸ್ಟೀಲ್ ಗ್ರೇ, ಕರ್ಕುಮಾ ಯೆಲ್ಲೋ, ರಿಫ್ಲೆಕ್ಸ್ ಸಿಲ್ವರ್ ಮತ್ತು ರೈಸಿಂಗ್ ಬ್ಲೂ ಮೆಟಾಲಿಕ್ ಎಂಬ ಆರು ಬಣ್ಣದ ಆಯ್ಕೆಗಳಲ್ಲಿ ನೀಡಲಾಗುವುದು.

ಈ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರಿನಲ್ಲಿ ವೈರ್‌ಲೆಸ್ Android Auto ಮತ್ತು Apple CarPlay ಸಂಪರ್ಕದೊಂದಿಗೆ 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ನೊಂದಿಗೆ ಬರುತ್ತದೆ. ಇದು ಸಂಪೂರ್ಣ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ವೆಂಟಿಲೇಟೆಡ್ ಫ್ರಂಟ್ ಲೆದರ್ ಸೀಟ್‌ಗಳು, 8-ಸ್ಪೀಕರ್‌ಗಳ ಆಡಿಯೊ ಸಿಸ್ಟಮ್, ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್, ಕನೆಕ್ಟಿವಿಟಿ ಕಾರ್ ಟೆಕ್ನಾಲಜಿ, ಎಲೆಕ್ಟ್ರಿಕ್ ಸನ್‌ರೂಫ್, ಕ್ರೂಸ್ ಕಂಟ್ರೋಲ್, ಕೀಲೆಸ್ ಎಂಟ್ರಿ ಮತ್ತು ಹಲವಾರು ಇತರ ಪೀಚರ್ಸ್ ಗಳನ್ನು ಒಳಗೊಂಡಿದೆ,

ಈ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರಿನ ಸುರಕ್ಷತಾ ಕಿಟ್‌ನಲ್ಲಿ ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್, ಆರು ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ (ಇಎಸ್‌ಸಿ), ಎಲೆಕ್ಟ್ರಾನಿಕ್ ಡಿಫರೆನ್ಷಿಯಲ್ ಸಿಸ್ಟಮ್ (ಇಡಿಎಸ್), ಮಲ್ಟಿ ಡಿಫರೆನ್ಷಿಯಲ್ ಬ್ರೇಕ್‌ಗಳು, ರಿಯರ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಐಸೊಫಿಕ್ಸ್ ಚೈಲ್ಡ್ ಸೀಟ್ ಮೌಂಟ್‌ಗಳುನ್ನು ಒಳಗೊಂಡಿವೆ,

ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರಿನಲ್ಲಿ 1.0 ಲೀಟರ್, 3-ಸಿಲಿಂಡರ್ TSI ಮತ್ತು 1.5 ಲೀಟರ್, 4-ಸಿಲಿಂಡರ್ TSI ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ಗಳನ್ನು ಹೊಂದಿವೆ. ಇದರಲ್ಲಿ 1.0 ಲೀಟರ್ ಎಂಜಿನ್ 115 ಬಿಹೆಚ್‍ಪಿ ಪವರ್ ಮತ್ತು 178 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನ್ವಾಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳೊಂದಿಗೆ ಬರುತ್ತದೆ.

ಇನ್ನು 1.5 ಲೀಟರ್ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ 6-ಸ್ಪೀಡ್ ಮ್ಯಾನುವಲ್ ಅಥವಾ 7-ಸ್ಪೀಡ್ DSG ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ,

ಈ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದ ಮೇ ತಿಂಗಳಿನಲ್ಲಿ ಪ್ರವೇಶಿಸಲಿದೆ. ಈ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಮಿಡ್ ಸೈಜ್ ಸೆಡಾನ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೋಂಡಾ ಸಿಟಿ, ಹ್ಯುಂಡೈ ವೆರ್ನಾ ಮತ್ತು ಮಾರುತಿ ಸಿಯಾಜ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications








