ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಆಕರ್ಷಕ ವಿನ್ಯಾಸದ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಜನಪ್ರಿಯ ವಾಹನ ತಯಾರಕ ಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಇಂಡಿಯಾ ತನ್ನ ಹೊಸ ವಿರ್ಟಸ್ ಸೆಡಾನ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು ನಾಳೆ(ಜೂನ್ 09 ) ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಆಕರ್ಷಕ ವಿನ್ಯಾಸದ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರನ್ನು ವೆಂಟೊಗೆ ಬದಲಿಯಾಗಿ ಕಾಂಪ್ಯಾಕ್ಟ್ ಸೆಡಾನ್ ಅನ್ನು ವಿಶೇಷವಾಗಿ ಭಾರತೀಯ ಮಾರುಕಟ್ಟೆಗಾಗಿ ವಿನ್ಯಾಸಗೊಳಿಸಲಾಗಿದೆ. ಈ ಹೊಸ ಕಾರಿನ ಉತ್ಪಾದನೆಯು ಪುಣೆಯಲ್ಲಿರುವ ಕಂಪನಿಯ ಚಕನ್ ಸ್ಥಾವರದಲ್ಲಿ ಇತ್ತೀಚೆಗೆ ಪ್ರಾರಂಭವಾಯಿತು. ಫೋಕ್ಸ್‌ವ್ಯಾಗನ್ ವಿರ್ಟಸ್ ಕಳೆದ ವರ್ಷ ಬಿಡುಗಡೆಯಾ ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿ ನಂತರ ಭಾರತ 2.0 ಯೋಜನೆಯ ಅಡಿಯಲ್ಲಿ ಬಿಡುಗಡೆಯಾಗುವ ಫೋಕ್ಸ್‌ವ್ಯಾಗನ್‌ನ ಎರಡನೇ ಉತ್ಪನ್ನವಾಗಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಆಕರ್ಷಕ ವಿನ್ಯಾಸದ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಫೋಕ್ಸ್‌ವ್ಯಾಗನ್ ವಿರ್ಟಸ್ MQB A0 IN ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ, ಇದು ಬ್ರ್ಯಾಂಡ್‌ನ ಮಾಡ್ಯುಲರ್ ಆರ್ಕಿಟೆಕ್ಚರ್‌ನ ಸ್ಥಳೀಯ ಆವೃತ್ತಿಯಾಗಿದ್ದು, ಭಾರತಕ್ಕಾಗಿ ವಿಶೇಷವಾಗಿ ಅಭಿವೃದ್ಧಿಪಡಿಸಲಾಗಿದೆ. ನಾವು ಈಗಾಗಲೇ ಫೋಕ್ಸ್‌ವ್ಯಾಗನ್ ಟೈಗನ್ ಅನ್ನು ಹೊಂದಿದ್ದೇವೆ, ಇದು ಅದೇ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ, ವಿರ್ಟಸ್ ಅನ್ನು ಕಾಂಪ್ಯಾಕ್ಟ್ ಎಸ್‌ಯುವಿ ಅಡಿಯಲ್ಲಿ ಇರಿಸಲಾಗುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಆಕರ್ಷಕ ವಿನ್ಯಾಸದ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು ಮುಂಭಾಗ ಮಸ್ಕಲರ್ ಲುಕ್ ಅನ್ನು ಹೂಂದಿದ್ದು, ಸಿಂಗಲ್ ಸ್ಲ್ಯಾಟ್ ಗ್ರಿಲ್, ಸುತ್ತಲೂ ಕ್ರೋಮ್ ಗಾರ್ನಿಶ್ ಮತ್ತು ಎಲ್‌ಇಡಿ ಹೆಡ್‌ಲ್ಯಾಂಪ್‌ಗಳನ್ನು ಹೊಂದಿದೆ. ಎಲ್-ಆಕಾರದ ಎಲ್ಇಡಿ ಡಿಆರ್ಎಲ್ ಗಳು ಸ್ಪೋರ್ಟಿಯಾಗಿ ಕಾಣುತ್ತವೆ. ಚೂಪಾದ ಲೈನ್ ಗಳು ಮತ್ತು ಹರಿತವಾದ ವಿನ್ಯಾಸವು ಫೋಕ್ಸ್‌ವ್ಯಾಗನ್ ಕಾರುಗಳ ಸಾಮಾನ್ಯ ಲಕ್ಷಣವಾಗಿದೆ,

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಆಕರ್ಷಕ ವಿನ್ಯಾಸದ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ವಿರ್ಟಸ್ ಜಿಟಿ ಬ್ಯಾಡ್ಜ್ ಹೊಂದಿರುವ ಪರ್ಫಾಮೆನ್ಸ್ ವೆರಿಯೆಂಟ್ ಅನ್ನು ಹೊಂದಿದೆ. ಈ ಕಾರಿನಲ್ಲಿ 16-ಇಂಚಿನ ಅಲಾಯ್ ವ್ಹೀಲ್ ಗಳು ಕಾರಿನ ಒಟ್ಟಾರೆ ನಿಲುವಿಗೆ ಪೂರಕವಾಗಿವೆ. ಡೋರ್ ಹ್ಯಾಂಡಲ್‌ಗಳು, ಕಾಂಟ್ರಾಸ್ಟ್ ಕಪ್ಪು ORVM ಗಳು ಮತ್ತು ರೂಪ್ ಗಾಗಿ ಕ್ರೋಮ್ ಅನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಆಕರ್ಷಕ ವಿನ್ಯಾಸದ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಇದರೊಂದಿಗೆ ಪ್ರೊಫೈಲ್ ಅನ್ನು ಪೂರ್ಣಗೊಳಿಸಿದಾಗ ಎಲ್ಇಡಿ ಟೈಲ್‌ಲೈಟ್‌ಗಳು, ಬೂಟ್ ಲಿಡ್‌ನಲ್ಲಿ ವಿರ್ಟಸ್ ಬ್ಯಾಡ್ಜ್ ಮತ್ತು ಬೂಟ್-ಮೌಂಟೆಡ್ ನಂಬರ್ ಪ್ಲೇಟ್ ರಿಸೆಸ್ ಕಾರಿನ ಹಿಂಭಾಗವನ್ನು ಆವರಿಸುತ್ತದೆ. ಇನ್ನು ಫೋಕ್ಸ್‌ವ್ಯಾಗನ್ ವಿರ್ಟಸ್ ಸ್ಟ್ಯಾಂಡರ್ಡ್ ವೆರಿಯೆಂಟ್ ಮತ್ತು ಜಿಟಿ ವೇರಿಯಂಟ್ ನಡುವೆ ವಿಭಿನ್ನ ಸ್ಟೈಲಿಂಗ್ ಬಿಟ್‌ಗಳನ್ನು ಕೂಡ ಸೇರಿಸಿದೆ. ಅತ್ಯಂತ ಪ್ರಮುಖವಾದ ಬದಲಾವಣೆಯು ಮುಂಭಾಗದಲ್ಲಿದೆ. ವಿರ್ಟಸ್ ಫಾಸಿಕ ಬ್ಲ್ಯಾಕ್ ಇನಸರ್ಟ್ ಹೊಂದಿದೆ,

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಆಕರ್ಷಕ ವಿನ್ಯಾಸದ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಫೋಕ್ಸ್‌ವ್ಯಾಗನ್ ಕಂಪನಿಯು ಈ ಹೊಸ ವಿರ್ಟಸ್ ಕಾರು ಖರೀದಿಗಾಗಿ ದೇಶಾದ್ಯಂತದ ಅಧಿಕೃತ ಡೀಲರ್‌ಶಿಪ್‌ಗಳಲ್ಲಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದಾರೆ. ಈ ಹೊಸ ಸೆಡಾನ್ ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಆಕರ್ಷಕ ವಿನ್ಯಾಸದ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಇನ್ನು ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು ಎರಡು ಎಂಜಿನ್ ಆಯ್ಕೆಗಳು ಮತ್ತು ಮೂರು ಟ್ರಾನ್ಸ್‌ಮಿಷನ್ ಆಯ್ಕೆಗಳೊಂದಿಗೆ ಬರಲಿದೆ. ಈ ಹೊಸ ವಿರ್ಟಸ್ ಕಾರು ಡೈನಾಮಿಕ್ ಲೈನ್ ಮತ್ತು ಜಿಟಿ ಲೈನ್‌ನ ಎರಡು ರೂಪಾಂತರಗಳಲ್ಲ ಬಿಡುಗಡೆಯಾಗಲಿದೆ. ಈ ಹೊಸ ಕಾರು ಹೆಚ್ಚಿನ ಫೀಚರ್ಸ್ ಗಳನ್ನು ಸ್ಲಾವಿಯಾದಿಂದ ಎರವಲು ಪಡೆದುಕೊಂಡಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಆಕರ್ಷಕ ವಿನ್ಯಾಸದ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು ಒಳಭಾಗದಲ್ಲಿ ಬ್ಲ್ಯಾಕ್ ಮತ್ತು ಬೀಜ್ ಇಂಟೀರಿಯರ್ ಥೀಮ್ ಅನ್ನು ಪಡೆಯುತ್ತದೆ. ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಸ್ಕೋಡಾ ಸ್ಲಾವಿಯಾದಂತೆಯೇ ಇದೆ, ಆದರೆ ನೀವು 10-ಇಂಚಿನ ಟಚ್‌ಸ್ಕ್ರೀನ್ ಅನ್ನು ಸಹ ಪಡೆಯುತ್ತೀರಿ, ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗೆ ಹೊಂದಿಕೆಯಾಗುತ್ತದೆ,

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಆಕರ್ಷಕ ವಿನ್ಯಾಸದ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಇದರೊಂದಿಗೆ ವೆಂಟಿಲೇಟೆಡ್ ಫ್ರಂಟ್ ಲೆದರ್ ಸೀಟ್‌ಗಳು, 8-ಸ್ಪೀಕರ್‌ಗಳ ಆಡಿಯೊ ಸಿಸ್ಟಮ್, ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್, ಕನೆಕ್ಟಿವಿಟಿ ಕಾರ್ ಟೆಕ್ನಾಲಜಿ, ಎಲೆಕ್ಟ್ರಿಕ್ ಸನ್‌ರೂಫ್, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಹಲವಾರು ಇತರ ಪೀಚರ್ಸ್ ಗಳನ್ನು ಕೂಡ ಹೊಂದಿವೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಆಕರ್ಷಕ ವಿನ್ಯಾಸದ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಈ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು ದೇಶದಲ್ಲಿ ವೆಂಟೊ ಮಾದರಿಯ ಬದಲಿಯಾಗಿದೆ, ಇದು ಅದರ ಬದಲಿಗಿಂತ ದೊಡ್ಡದಾಗಿದೆ ಮತ್ತು ಸುಸಜ್ಜಿತವಾಗಿದೆ. ಈ ಹೊಸ ಫೋಕ್ಸ್‌ವ್ಯಾಗನ್ ಸೆಡಾನ್ 4561 ಮಿಮೀ ಉದ್ದ, 1752 ಎಂಎಂ ಅಗಲ ಮತ್ತು 1507 ಎಂಎಂ ಎತ್ತರವನ್ನು 2651 ಎಂಎಂ ವೀಲ್‌ಬೇಸ್‌ ಅನ್ನು ಒಳಗೊಂಡಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಆಕರ್ಷಕ ವಿನ್ಯಾಸದ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಫೋಕ್ಸ್‌ವ್ಯಾಗನ್ ವಿರ್ಟಸ್ ಕಾಂಪ್ಯಾಕ್ಟ್ ಸೆಡಾನ್ ಎರಡು ಎಂಜಿನ್ ಆಯ್ಕೆಗಳನ್ನು ಪಡೆಯುತ್ತದೆ. ಇದರಲ್ಲಿ 1.0 ಲೀಟರ್ TSI ಪೆಟ್ರೋಲ್ ಎಂಜಿನ್ 113 ಬಿಹೆಚ್‍ಪಿ ಪವರ್ ಮತ್ತು 178 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಅಥವಾ ಆಯ್ಕೆಯ 6-ಸ್ಪೀಡ್ ಟಾರ್ಕ್ ಕರ್ನ್ವಾಟರ್ ಅನ್ನು ಪಡೆಯುತ್ತದೆ. ಇನ್ನು 1.5 ಲೀಟರ್ TSI ಪೆಟ್ರೋಲ್ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 7-ಸ್ಪೀಡ್ DSG ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ,

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಆಕರ್ಷಕ ವಿನ್ಯಾಸದ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಫೋಕ್ಸ್‌ವ್ಯಾಗನ್ ಕಂಪನಿಯು ವಿರ್ಟಸ್ ಕಾರಿನ ಸುರಕ್ಷತೆಗಾಗಿ ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್, ಆರು ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ (ಇಎಸ್‌ಸಿ), ಎಲೆಕ್ಟ್ರಾನಿಕ್ ಡಿಫರೆನ್ಷಿಯಲ್ ಸಿಸ್ಟಮ್ (ಇಡಿಎಸ್), ಮಲ್ಟಿ ಡಿಫರೆನ್ಷಿಯಲ್ ಬ್ರೇಕ್‌ಗಳು, ರಿಯರ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಐಸೊಫಿಕ್ಸ್ ಚೈಲ್ಡ್ ಸೀಟ್ ಮೌಂಟ್‌ಗಳನ್ನು ನೀಡಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಆಕರ್ಷಕ ವಿನ್ಯಾಸದ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಈ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾಂಪ್ಯಾಕ್ಟ್ ಸೈಜ್ ಸೆಡಾನ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೋಂಡಾ ಸಿಟಿ, ಹ್ಯುಂಡೈ ವೆರ್ನಾ ಮತ್ತು ಮಾರುತಿ ಸಿಯಾಜ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಆಕರ್ಷಕ ವಿನ್ಯಾಸದ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರು ಆಕರ್ಷಕ ವಿನ್ಯಾಸ ಮತ್ತು ಅತ್ಯಾಧುನಿಕ ಫೀಚರ್ಸ್ ಗಳೊಂದಿಗೆ ನಾಳೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ. ಪರ್ಪಾಮೆನ್ಸ್ ಪ್ರಿಯರಿಗಾಗಿ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರಿನ ಜಿಟಿ ಪರ್ಪಾಮೆನ್ಸ್ ವೆರಿಯೆಂಟ್ ಲಭ್ಯವಿರಲಿದೆ.

More from DriveSpark

Article Published On: Wednesday, June 8, 2022, 15:35 [IST]
English summary
New volkswagen virtus will be launch tomorrow in india read to find more details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+