ವಿನೂತನ ವೈಶಿಷ್ಟ್ಯತೆಗಳೊಂದಿಗೆ 2022ರ ಮಾರುತಿ ಸುಜುಕಿ ಬಲೆನೊ ಬಿಡುಗಡೆ

ಮಾರುತಿ ಸುಜುಕಿ(Maruti Suzuki) ಕಂಪನಿಯು ತನ್ನ ಜನಪ್ರಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಾದ ಬಲೆನೊ 2022ರ ಮಾದರಿಯನ್ನು ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಗೊಳಿಸಿದ್ದು, ಹೊಸ ಕಾರು ಆಕರ್ಷಕ ಬೆಲೆಯೊಂದಿಗೆ ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿದೆ.

ವಿನೂತನ ವೈಶಿಷ್ಟ್ಯತೆಗಳೊಂದಿಗೆ 2022ರ ಮಾರುತಿ ಸುಜುಕಿ ಬಲೆನೊ ಬಿಡುಗಡೆ

ಹೊಸ ಬಲೆನೊ ಹ್ಯಾಚ್‌ಬ್ಯಾಕ್ ಕಾರು ಮಾದರಿಯು ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.35 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.49 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರು ಮಾದರಿಯು ಈ ಹಿಂದಿನ ಮಾದರಿಯಲ್ಲಿರುವಂತೆ ಎಂಜಿನ್ ಆಯ್ಕೆ ಹೊಂದಿದ್ದರೂ ಪ್ರೀಮಿಯಂ ಫೀಚರ್ಸ್ ಮತ್ತು ಬದಲಾವಣೆಗೊಳಿಸಲಾದ ವಿನ್ಯಾಸವು ಗ್ರಾಹಕರ ಪ್ರಮುಖ ಆಕರ್ಷಣೆಯಾಗಲಿದೆ.

ವಿನೂತನ ವೈಶಿಷ್ಟ್ಯತೆಗಳೊಂದಿಗೆ 2022ರ ಮಾರುತಿ ಸುಜುಕಿ ಬಲೆನೊ ಬಿಡುಗಡೆ

ಬಲೆನೊ ಮಾದರಿಯು ಸಿಗ್ಮಾ, ಡೆಲ್ಟಾ, ಜೆಟಾ ಮತ್ತು ಅಲ್ಫಾ ಎಂಬ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬೆಲೆ ಆಧರಿಸಿ ಹೈ ಎಂಡ್ ಮಾದರಿಯಲ್ಲಿ ಹೆಚ್ಚಿನ ಮಟ್ಟದ ವೈಶಿಷ್ಟ್ಯತೆಗಳನ್ನು ನೀಡಲಾಗಿದೆ.

ಬಲೆನೊ ಮ್ಯಾನುವಲ್ ವರ್ಷನ್ ಎಜಿಎಸ್ ವರ್ಷನ್
ಸಿಗ್ಮಾ ರೂ. 6,35,000
ಡೆಲ್ಟಾ ರೂ. 7,19,000 ರೂ. 7,69,000
ಜೆಟಾ ರೂ. 8,09,000 ರೂ. 8,59,000
ಅಲ್ಫಾ ರೂ. 8,99,000 ರೂ. 9,49,000
ವಿನೂತನ ವೈಶಿಷ್ಟ್ಯತೆಗಳೊಂದಿಗೆ 2022ರ ಮಾರುತಿ ಸುಜುಕಿ ಬಲೆನೊ ಬಿಡುಗಡೆ

ಬಲೆನೊ ಫೇಸ್‌ಲಿಫ್ಟ್ ಮಾದರಿಯ ವಿನ್ಯಾಸದಲ್ಲಿ ಈ ಬಾರಿ ಸಾಕಷ್ಟು ಬದಲಾವಣೆಗೊಂಡಿದ್ದು, ನೆಕ್ಸಾವೆವ್ ಹನಿಕೊಂಬ್ ಗ್ರಿಲ್, ಫ್ಲಾಟರ್ ಕ್ಲಾಮ್‌ಶೆಲ್ ಬಾನೆಟ್ ಮತ್ತು ಪರಿಷ್ಕೃತ ಮುಂಭಾಗದ ಬಂಪರ್ ಜೊತೆಗೆ ದೊಡ್ಡ ಫಾಗ್ ಲ್ಯಾಂಪ್ ಹೌಸಿಂಗ್‌ಗಳನ್ನು ಹೊಂದಿದೆ. ಸೈಡ್ ಪ್ರೊಫೈಲ್ ಹಿಂದಿನ ಮಾದರಿಯಂತೆಯೇ ಕಂಡರೂ ಕ್ರೋಮ್ ಸ್ಟ್ರಿಪ್ ಅನ್ನು ಹೊರತುಪಡಿಸಿ ಈಗ ಕೆಳಗಿನ ವಿಂಡೋ ಲೈನ್‌ನಿಂದ ಹಿಂದಿನ ಕ್ವಾರ್ಟರ್ ಗ್ಲಾಸ್‌ಗೆ ಚಲಿಸುವಂತೆ ವಿನ್ಯಾಸಗೊಳಿಸಲಾಗಿದೆ.

ವಿನೂತನ ವೈಶಿಷ್ಟ್ಯತೆಗಳೊಂದಿಗೆ 2022ರ ಮಾರುತಿ ಸುಜುಕಿ ಬಲೆನೊ ಬಿಡುಗಡೆ

ಹಿಂಭಾಗದಲ್ಲಿ ಹೊಸ ಬಲೆನೊ ಹೊಸ ಟೈಲ್‌ಗೇಟ್ ವಿನ್ಯಾಸ, ಹೊಸ ಸಿ-ಆಕಾರದ ಎಲ್‌ಇಡಿ ಟೈಲ್-ಲೈಟ್‌ಗಳು ಮತ್ತು ರಿಪ್ರೊಫೈಲ್ಡ್ ರಿಯರ್ ಬಂಪರ್‌ನೊಂದಿಗೆ ಬಲೆನೊ ಪರ್ಲ್ ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರಾಂಡ್ಯೂರ್ ಗ್ರೇ, ಸೆಲೆಸ್ಟಿಯಲ್ ಬ್ಲೂ, ಓಪ್ಯುಲೆಂಟ್ ರೆಡ್ ಮತ್ತು ಲಕ್ಸ್ ಬೀಜ್ ಎನ್ನುವ ಆರು ಬಣ್ಣಗಳ ಆಯ್ಕೆ ಹೊಂದಿದೆ.

ವಿನೂತನ ವೈಶಿಷ್ಟ್ಯತೆಗಳೊಂದಿಗೆ 2022ರ ಮಾರುತಿ ಸುಜುಕಿ ಬಲೆನೊ ಬಿಡುಗಡೆ

ಹೊಸ ವೈಶಿಷ್ಟ್ಯತೆಗಳಲ್ಲಿ ಮರುವಿನ್ಯಾಸಗೊಳಿಸಲಾದ ಡ್ಯಾಶ್‌ಬೋರ್ಡ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಸಂಪರ್ಕದೊಂದಿಗೆ 9.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಹಿಂದಿನ ಮಾದರಿಗಳಿಂತೆ ಎಸಿ ವೆಂಟ್‌ಗಳು, ಫಾಸ್ಟ್ ಚಾರ್ಜಿಂಗ್ ಯುಎಸ್‌ಬಿ ಪೋರ್ಟ್‌, ಹೆಡ್ ಅಪ್ ಡಿಸ್ಪ್ಲೇ (ಎಚ್‌ಯುಡಿ) ಅನ್ನು ಒಳಗೊಂಡಿದೆ.

ವಿನೂತನ ವೈಶಿಷ್ಟ್ಯತೆಗಳೊಂದಿಗೆ 2022ರ ಮಾರುತಿ ಸುಜುಕಿ ಬಲೆನೊ ಬಿಡುಗಡೆ

ಮಾರುತಿ ಸುಜುಕಿ ಕಂಪನಿಯು ಈ ಬಾರಿ ಹೊಸ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಮಾದರಿಯಲ್ಲಿ ಹೆಚ್ಚಿನ ಸುರಕ್ಷತೆಗೆ ಒತ್ತು ನೀಡಿದ್ದು, ಉನ್ನತ ರೂಪಾಂತರದಲ್ಲಿ ಒಟ್ಟು 6 ಏರ್‌ಬ್ಯಾಗ್‌ಗಳ ಜೊತೆಗೆ ಹಲವು ಸುರಕ್ಷತಾ ಸಾಧನಗಳನ್ನು ನವೀಕರಿಸಿದೆ.

ವಿನೂತನ ವೈಶಿಷ್ಟ್ಯತೆಗಳೊಂದಿಗೆ 2022ರ ಮಾರುತಿ ಸುಜುಕಿ ಬಲೆನೊ ಬಿಡುಗಡೆ

ಹೆಚ್ಚುವರಿ ಏರ್‌ಬ್ಯಾಗ್ ಸೌಲಭ್ಯದ ಜೊತೆಗೆ ಹೊಸ ಬಲೆನೊದಲ್ಲಿ ಹೊಸ ಸುರಕ್ಷತಾ ವೈಶಿಷ್ಟ್ಯಗಳಲ್ಲಿ ಹಿಲ್ ಹೋಲ್ಡ್ ಅಸಿಸ್ಟ್, ಕ್ರೂಸ್ ಕಂಟ್ರೋಲ್, ಎಬಿಎಸ್, ಕೀ ಲೆಸ್ ಎಂಟ್ರಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಇಎಸ್‌ಪಿ ಮತ್ತು ಇಬಿಡಿ ಸಹ ಸೇರ್ಪಡೆಯಾಗಲಿದ್ದು, ಸುಜುಕಿ ಕಾರ್ ಕನೆಕ್ಟ್ ತಂತ್ರಜ್ಞಾನದಲ್ಲೂ ಸಹ ಸುಧಾರಿತ ವೈಶಿಷ್ಟ್ಯತೆಗಳನ್ನು ಸೇರ್ಪಡೆಗೊಳಿಸಿದೆ.

ವಿನೂತನ ವೈಶಿಷ್ಟ್ಯತೆಗಳೊಂದಿಗೆ 2022ರ ಮಾರುತಿ ಸುಜುಕಿ ಬಲೆನೊ ಬಿಡುಗಡೆ

ಮಾರುತಿ ಸುಜುಕಿ ಕಂಪನಿಯ ಹೊಸ ಸುಜುಕಿ ಕನೆಕ್ಟ್ ಟೆಕ್ನಾಲಜಿ ಮೂಲಕ ಒಂದೇ ಸೂರಿನಡಿ 40ಕ್ಕೂ ಹೆಚ್ಚು ತಾಂತ್ರಿಕ ಸೌಲಭ್ಯಗಳನ್ನು ಸ್ಮಾರ್ಟ್‌ಫೋನ್ ಮೂಲಕವೇ ನಿರ್ವಹಣೆ ಮಾಡಬಹುದಾಗಿದ್ದು, ಅಮೆಜಾನ್ ಅಲೆಕ್ಸಾ ವಾಯ್ಸ್ ಕಮಾಂಡ್ ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದು.

ವಿನೂತನ ವೈಶಿಷ್ಟ್ಯತೆಗಳೊಂದಿಗೆ 2022ರ ಮಾರುತಿ ಸುಜುಕಿ ಬಲೆನೊ ಬಿಡುಗಡೆ

ಜೊತೆಗೆ ತುರ್ತುಸೇವೆಗಳಿಗಾಗಿ ಸುಧಾರಿತ ಟೆಲಿಮ್ಯಾಟಿಕ್ಸ್ ಪರಿಹಾರಗಳನ್ನು ಒಳಗೊಂಡಿರಲಿದ್ದು, ಸುಜುಕಿ ಕಾರ್ ಕನೆಕ್ಟ್ ಫೀಚರ್ಸ್‍ಗಳನ್ನು ಸ್ಮಾರ್ಟ್‌ಫೋನ್ ಅಪ್ಲಿಕೇಷನ್ ಮೂಲಕ ಇಂಧನ ಲಭ್ಯತೆ, ಸಾಗಬಹುದಾದ ದೂರ, ಓಡೋಮೀಟರ್, ಕಾರ್ ಡಯಾಗ್ನೋಸಿಸ್, ಒಳಗೊಂಡಂತೆ ವಿವಿಧ ಮಾಹಿತಿಗಳ ಸಂಪೂರ್ಣ ಡೇಟಾ ಪಡೆದುಕೊಳ್ಳಬಹುದು.

ವಿನೂತನ ವೈಶಿಷ್ಟ್ಯತೆಗಳೊಂದಿಗೆ 2022ರ ಮಾರುತಿ ಸುಜುಕಿ ಬಲೆನೊ ಬಿಡುಗಡೆ

ಕನೆಕ್ಟೆಡ್ ಕಾರ್ ಟೆಕ್ ವೈಶಿಷ್ಟ್ಯದ ಜೊತೆಗೆ ಮಾರುತಿ ಕಂಪನಿಯು ಹೊಸ ಬಲೆನೊದಲ್ಲಿ 9-ಇಂಚಿನ ಡಿಜಿಟಲ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, 360 ಡಿಗ್ರಿ ವ್ಯೂ ಕ್ಯಾಮೆರಾ ಸೇರಿದಂತೆ ಈ ವಿಭಾಗದ ಮೊದಲ ವೈಶಿಷ್ಟ್ಯಗಳನ್ನು ಸಹ ನೀಡುತ್ತದೆ.

ವಿನೂತನ ವೈಶಿಷ್ಟ್ಯತೆಗಳೊಂದಿಗೆ 2022ರ ಮಾರುತಿ ಸುಜುಕಿ ಬಲೆನೊ ಬಿಡುಗಡೆ

ಎಂಜಿನ್ ಮತ್ತು ಪರ್ಫಾಮೆನ್ಸ್

ಹೊಸ ಕಾರಿನಲ್ಲಿ ಮಾರುತಿ ಸುಜುಕಿ ಕಂಪನಿಯು 1.2 ಲೀಟರ್ ಡ್ಯುಯಲ್ ಜೆಟ್ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, 1.2 ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಮತ್ತು 5 ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 90 ಬಿಎಚ್‌ಪಿ ಮತ್ತು 115 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ವಿನೂತನ ವೈಶಿಷ್ಟ್ಯತೆಗಳೊಂದಿಗೆ 2022ರ ಮಾರುತಿ ಸುಜುಕಿ ಬಲೆನೊ ಬಿಡುಗಡೆ

ಹೊಸ ಕಾರಿನಲ್ಲಿ ಮಾರುತಿ ಸುಜುಕಿ ಈ ಬಾರಿ 4 ಸ್ಪೀಡ್ ಆಟೋ ಕನ್ವರ್ಟ್ ಗೇರ್‌ಬಾಕ್ಸ್ ಬದಲಾಗಿ 5-ಸ್ಪೀಡ್ ಆಟೋಮ್ಯಾಟಿಕ್ ಸಿವಿಟಿ ಗೇರ್‌ಬಾಕ್ಸ್ ಆಯ್ಕೆ ನೀಡಿದ್ದು, ಹೊಸ ಕಾರು ಪ್ರತಿ ಲೀಟರ್ ಪೆಟ್ರೋಲ್‌ಗೆ 22.35 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ವಿನೂತನ ವೈಶಿಷ್ಟ್ಯತೆಗಳೊಂದಿಗೆ 2022ರ ಮಾರುತಿ ಸುಜುಕಿ ಬಲೆನೊ ಬಿಡುಗಡೆ

ಇದರ ಜೊತೆಗೆ ಹೊಸದಾಗಿ ಹೊಸ ಸಸ್ಷೆಷನ್ ಸೆಟಪ್‌ನೊಂದಿಗೆ ಹೈ ಎಂಡ್ ಮಾದರಿಯಲ್ಲಿ 14 ಇಂಚಿನ ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಜೋಡಿಸಿದ್ದು, 16 ಇಂಚಿನ ಅಲಾಯ್ ವ್ಹೀಲ್, ಅರ್ಕಾಮಿಸ್ ಸರೌಂಡ್ ಸೌಂಡ್ ಸಿಸ್ಟಂ ಸೌಲಭ್ಯವು ಕಾರು ಚಾಲನೆಯನ್ನು ಮತ್ತಷ್ಟು ಅರಾಮದಾಯಕಗೊಳಿಸುತ್ತದೆ.

ವಿನೂತನ ವೈಶಿಷ್ಟ್ಯತೆಗಳೊಂದಿಗೆ 2022ರ ಮಾರುತಿ ಸುಜುಕಿ ಬಲೆನೊ ಬಿಡುಗಡೆ

ಕಂಪನಿಯು ಸದ್ಯ ಹೊಸ ಕಾರು ಮಾದರಿಗಳಲ್ಲಿ ಪೆಟ್ರೋಲ್, ಸ್ಮಾರ್ಟ್ ಹೈಬ್ರಿಡ್ ಹೊಂದಿರುವ ಪೆಟ್ರೋಲ್ ಮತ್ತು ಸಿಎನ್‌ಜಿ ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದು, ಸ್ಮಾರ್ಟ್ ಹೈಬ್ರಿಡ್ ಪೆಟ್ರೋಲ್ ಮಾದರಿಗಳ ಮೂಲಕ ಡೀಸೆಲ್ ಕಾರುಗಳಲ್ಲಿದ್ದ ಮೈಲೇಜ್ ಪ್ರಮಾಣವನ್ನು ಒದಗಿಸಲು ಯತ್ನಿಸಿರುವ ಮಾರುತಿ ಸುಜುಕಿ ಕಂಪನಿಯು ಸಿಎನ್‌ಜಿ ಮಾದರಿಗಳ ಮೇಲೆ ಹೆಚ್ಚಿನ ಗಮನಹರಿಸಿದೆ.

Article Published On: Wednesday, February 23, 2022, 13:45 [IST]
English summary
Newmaruti baleno launched in india at 6 35 lakh details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+