ಮ್ಯಾಗ್ನೈಟ್ 7 ಸೀಟರ್ ಮಿನಿ ಎಂಪಿವಿ ಬಿಡುಗಡೆಗೆ ಸಿದ್ದವಾಗುತ್ತಿದೆ ನಿಸ್ಸಾನ್

ನಿಸ್ಸಾನ್ ಕಂಪನಿಯು ತನ್ನ ಹೊಸ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ತನ್ನ ಯಶಸ್ವಿ ಕಾರು ಮಾದರಿಯಲ್ಲಿ 7 ಸೀಟರ್ ಬಿಡುಗಡೆಯ ಯೋಜನೆ ರೂಪಿಸುತ್ತಿದೆ.

ಮ್ಯಾಗ್ನೈಟ್ 7 ಸೀಟರ್ ಮಿನಿ ಎಂಪಿವಿ ಬಿಡುಗಡೆಗೆ ಸಿದ್ದವಾಗುತ್ತಿದೆ ನಿಸ್ಸಾನ್

ಹೌದು, ಭಾರತದಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ನಂತರ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿರುವ ಎಂಪಿವಿ ಕಾರು ಮಾದರಿಗಳಿಗೆ ಹೆಚ್ಚಿನ ಬೇಡಿಕೆ ಇರವುದರಿಂದ ಕಂಪನಿಯು ಹೊಸ 7 ಸೀಟರ್ ಮಾದರಿಯನ್ನು ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಎಂಪಿವಿ ಕಾರನ್ನು ಸಂಪೂರ್ಣವಾಗಿ ಹೊಸ ಪ್ಲ್ಯಾಟ್‌ಫಾರ್ಮ್‌ನಲ್ಲಿ ತರದೆ ಈಗಾಗಲೇ ಮಾರುಕಟ್ಟೆಯಲ್ಲಿ ಯಶಸ್ವಿಯಾಗಿರುವ ಮ್ಯಾಗ್ನೈಟ್ ಮಾದರಿಯಲ್ಲಿಯೇ ಬಿಡುಗಡೆಗಾಗಿ ಎದುರುನೋಡುತ್ತಿದೆ.

ಮ್ಯಾಗ್ನೈಟ್ 7 ಸೀಟರ್ ಮಿನಿ ಎಂಪಿವಿ ಬಿಡುಗಡೆಗೆ ಸಿದ್ದವಾಗುತ್ತಿದೆ ನಿಸ್ಸಾನ್

ಮಿನಿ ಎಂಪಿವಿ ವಿಭಾಗದಲ್ಲಿ ಈಗಾಗಲೇ ರೆನಾಲ್ಟ್ ಟ್ರೈಬರ್ ಮಾದರಿಯು ಉತ್ತಮ ಬೇಡಿಕೆ ಹೊಂದಿರುವ ಹಿನ್ನಲೆಯಲ್ಲಿ ನಿಸ್ಸಾನ್ ಕಂಪನಿಯು ಟ್ರಬರ್ ಮಾದರಿಯಲ್ಲಿಯೇ ಮ್ಯಾಗ್ನೈಟ್ ಆವೃತ್ತಿಯನ್ನು ಬಿಡುಗಡೆಗೆ ಮಾಡುವ ಲೆಕ್ಕಾಚಾರ ಆರಂಭಿಸಿದೆ.

ಮ್ಯಾಗ್ನೈಟ್ 7 ಸೀಟರ್ ಮಿನಿ ಎಂಪಿವಿ ಬಿಡುಗಡೆಗೆ ಸಿದ್ದವಾಗುತ್ತಿದೆ ನಿಸ್ಸಾನ್

ಆದರೆ ಮ್ಯಾಗ್ನೈಟ್ ಆಧರಿಸಿ 7 ಸೀಟರ್ ಮಾದರಿಯು ಸಾಕಷ್ಟು ಸ್ಥಳಾವಕಾಶ ಪಡೆದುಕೊಳ್ಳದಿರುವ ಹಿನ್ನಲೆಯಲ್ಲಿ ಅದು ಮಾರುಕಟ್ಟೆಯಲ್ಲಿ ಹಿನ್ನಡೆ ಕಾರಣವಾಗಬಹುದು ಎನ್ನುವ ಲೆಕ್ಕಾಚಾರ ಕೂಡಾ ಮಾಡಲಾಗುತ್ತಿದ್ದು, ಇನ್ನು ಮಾಹಿತಿ ಪ್ರಕಾರ ಮ್ಯಾಗ್ನೈಟ್ 7 ಸೀಟರ್ ಮಾದರಿಯನ್ನು ನಿಸ್ಸಾನ್ ಕಂಪನಿಯು ಭಾರತದಲ್ಲಿ ಉತ್ಪಾದನೆ ಮಾಡಿ ಇಂಡೋನೇಷ್ಯಾ ಮತ್ತು ಆಫ್ರಿಕಾ ರಾಷ್ಟ್ರಗಳಿಗೆ ರಫ್ತು ಮಾಡಬಹುದಾಗಿದೆ ಎನ್ನಲಾಗಿದೆ.

ಮ್ಯಾಗ್ನೈಟ್ 7 ಸೀಟರ್ ಮಿನಿ ಎಂಪಿವಿ ಬಿಡುಗಡೆಗೆ ಸಿದ್ದವಾಗುತ್ತಿದೆ ನಿಸ್ಸಾನ್

ಒಟ್ಟಿನಲ್ಲಿ ನಿಸ್ಸಾನ್ ಕಂಪನಿಯು ಮ್ಯಾಗ್ನೈಟ್ ಆಧರಿಸಿ ಮಿನಿ 7 ಸೀಟರ್ ಎಂಪಿವಿ ಮಾದರಿಯನ್ನು ಬಿಡುಗಡೆ ಮಾಡುವುದು ಖಚಿತವಾಗಿದ್ದು, ಹೊಸ ಕಾರಿನ ಉತ್ಪಾದನಾ ಆವೃತ್ತಿಯ ಅನಾವರಣದ ನಂತರವಷ್ಟೇ ಹೊಸ ಕಾರಿನ ಮತ್ತಷ್ಟು ಮಾಹಿತಿಗಳು ಲಭ್ಯವಾಗಲಿವೆ ಎನ್ನಬಹುದು.

ಮ್ಯಾಗ್ನೈಟ್ 7 ಸೀಟರ್ ಮಿನಿ ಎಂಪಿವಿ ಬಿಡುಗಡೆಗೆ ಸಿದ್ದವಾಗುತ್ತಿದೆ ನಿಸ್ಸಾನ್

ಇನ್ನು ನಿಸ್ಸಾನ್ ಕಂಪನಿಯು ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಿದ ನಂತರ ಹಲವಾರು ದಾಖಲೆಗಳಿಗೆ ಕಾರಣವಾಗಿದೆ.

ಮ್ಯಾಗ್ನೈಟ್ 7 ಸೀಟರ್ ಮಿನಿ ಎಂಪಿವಿ ಬಿಡುಗಡೆಗೆ ಸಿದ್ದವಾಗುತ್ತಿದೆ ನಿಸ್ಸಾನ್

2020ರ ಡಿಸೆಂಬರ್ 2ರಂದು ಬಿಡುಗಡೆಯಾಗಿದ್ದ ಮಾಗ್ನೈಟ್ ಕಾರು ಮಾದರಿಯು ಇದುವರೆಗೆ ಸುಮಾರು 90 ಸಾವಿರ ಹೆಚ್ಚು ಯುನಿಟ್‌ಗಳಿಗೆ ಬುಕಿಂಗ್ ಪಡೆದುಕೊಂಡಿದ್ದು, ಹೊಸ ಕಾರು ವಿನೂತನ ವಿನ್ಯಾಸ ಮತ್ತು ವೈಶಿಷ್ಟ್ಯತೆಗಳೊಂದಿಗೆ ಕಂಪಾಕ್ಟ್ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆಯುತ್ತಿದೆ.

ಮ್ಯಾಗ್ನೈಟ್ 7 ಸೀಟರ್ ಮಿನಿ ಎಂಪಿವಿ ಬಿಡುಗಡೆಗೆ ಸಿದ್ದವಾಗುತ್ತಿದೆ ನಿಸ್ಸಾನ್

ಮ್ಯಾಗ್ನೈಟ್ ಕಾರು ಮಾದರಿಯನ್ನು ನಿಸ್ಸಾನ್ ಕಂಪನಿಯು ಭಾರತದಲ್ಲಿಯೇ ನಿರ್ಮಾಣ ಮಾಡಿ ವಿಶ್ವದ ಪ್ರಮುಖ 15 ರಾಷ್ಟ್ರಗಳಿಗೆ ರಫ್ತು ಕೈಗೊಳ್ಳುತ್ತಿದ್ದು, ಭಾರತದಿಂದ ಇಂಡೋನೇಷ್ಯಾ, ದಕ್ಷಿಣ ಆಫ್ರಿಕಾ, ನೇಪಾಳ, ಭೂತಾನ್, ಬಾಂಗ್ಲಾದೇಶ, ಶ್ರೀಲಂಕಾ, ಬ್ರೂನೈ, ಉಗಾಂಡಾ, ಕೀನ್ಯಾ, ಸೀಶೆಲ್ಸ್, ಮೊಜಾಂಬಿಕ್, ಜಾಂಬಿಯಾ, ಮಾರಿಷಸ್, ತಾಂಜಾನಿಯಾ, ಮಲಾವಿ ದೇಶಗಳಿಗೆ ರಫ್ತುಗೊಳ್ಳುತ್ತಿದೆ.

ಮ್ಯಾಗ್ನೈಟ್ 7 ಸೀಟರ್ ಮಿನಿ ಎಂಪಿವಿ ಬಿಡುಗಡೆಗೆ ಸಿದ್ದವಾಗುತ್ತಿದೆ ನಿಸ್ಸಾನ್

ಹೊಸ ಕಾರು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.76 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.10.15 ಲಕ್ಷ ಬೆಲೆ ಪಡೆದುಕೊಂಡಿದೆ.

ಮ್ಯಾಗ್ನೈಟ್ 7 ಸೀಟರ್ ಮಿನಿ ಎಂಪಿವಿ ಬಿಡುಗಡೆಗೆ ಸಿದ್ದವಾಗುತ್ತಿದೆ ನಿಸ್ಸಾನ್

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ನಂತರ ಹೊಸ ಕಾರಿನ ಬೇಡಿಕೆ ಮತ್ತಷ್ಟು ಹೆಚ್ಚಳವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಗಳೊಂದಿಗೆ ಮಾರಾಟಗೊಳ್ಳುತ್ತಿದೆ.

ಮ್ಯಾಗ್ನೈಟ್ 7 ಸೀಟರ್ ಮಿನಿ ಎಂಪಿವಿ ಬಿಡುಗಡೆಗೆ ಸಿದ್ದವಾಗುತ್ತಿದೆ ನಿಸ್ಸಾನ್

ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

ಮ್ಯಾಗ್ನೈಟ್ 7 ಸೀಟರ್ ಮಿನಿ ಎಂಪಿವಿ ಬಿಡುಗಡೆಗೆ ಸಿದ್ದವಾಗುತ್ತಿದೆ ನಿಸ್ಸಾನ್

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಮ್ಯಾಗ್ನೈಟ್ 7 ಸೀಟರ್ ಮಿನಿ ಎಂಪಿವಿ ಬಿಡುಗಡೆಗೆ ಸಿದ್ದವಾಗುತ್ತಿದೆ ನಿಸ್ಸಾನ್

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ಮ್ಯಾಗ್ನೈಟ್ 7 ಸೀಟರ್ ಮಿನಿ ಎಂಪಿವಿ ಬಿಡುಗಡೆಗೆ ಸಿದ್ದವಾಗುತ್ತಿದೆ ನಿಸ್ಸಾನ್

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

ಮ್ಯಾಗ್ನೈಟ್ 7 ಸೀಟರ್ ಮಿನಿ ಎಂಪಿವಿ ಬಿಡುಗಡೆಗೆ ಸಿದ್ದವಾಗುತ್ತಿದೆ ನಿಸ್ಸಾನ್

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ನಿಸ್ಸಾನ್ ಕಂಪನಿಯು ಶೀಘ್ರದಲ್ಲೇ ಮ್ಯಾಗ್ನೈಟ್ ಕಾರಿನ ವಿಶೇಷ ಆವೃತ್ತಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

Most Read Articles

Kannada
English summary
Nissan considered to launch magnite 7 seater details
Story first published: Tuesday, March 15, 2022, 13:09 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X