Just In
- 47 min ago
ಭಾರತೀಯ ಕಾರುಗಳಿಗೆ ವಿದೇಶಗಳಲ್ಲಿ ಬೇಡಿಕೆ ಹೆಚ್ಚಳ: ಮೇ ತಿಂಗಳಲ್ಲಿ ಅತಿ ಹೆಚ್ಚು ರಫ್ತಾಗಿರುವ ಕಾರುಗಳಿವು!
- 1 hr ago
ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಹೀರೋ ಪ್ಯಾಶನ್ ಎಕ್ಸ್ಟೆಕ್ ಬೈಕ್ ಬಿಡುಗಡೆ
- 1 hr ago
ಪ್ರಯಾಣಿಕ ಕಾರು ಮಾದರಿಗಳಿಗಾಗಿ 5 ಸ್ಟಾರ್ ರೇಟಿಂಗ್ ಹೊಂದಿರುವ ಟೈರ್ ಬಿಡುಗಡೆ ಮಾಡಿದ ಮೈಕೆಲಿನ್
- 3 hrs ago
ಬರೋಬ್ಬರಿ 40 ವೆರಿಯೆಂಟ್ಗಳನ್ನು ಹೊಂದಿರಲಿದೆ ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್
Don't Miss!
- News
ಅಸ್ಸಾಂ ಪ್ರವಾಹ: ಅಸ್ಸಾಂ ಸಿಎಂ ಪರಿಹಾರ ನಿಧಿಗೆ ರಿಲಯನ್ಸ್ ಫೌಂಡೇಶನ್ 25 ಕೋಟಿ ರೂ.
- Sports
T20 ವಿಶ್ವಕಪ್ಗೂ ಮುನ್ನ ಕೊಹ್ಲಿ, ರೋಹಿತ್ ಮತ್ತು ರಾಹುಲ್ನೊಂದಿಗೆ ಆಯ್ಕೆಗಾರರು ಮಾತನಾಡಲಿ: ಸಾಬಾ ಕರೀಂ
- Movies
ಅಖಿಲಾಂಡೇಶ್ವರಿಯನ್ನು ಆಟ ಆಡಿಸಲು ಬಂದ ಅರುಂಧತಿ: ಯಾರೀಕೆ?
- Technology
ಪೊಕೊ F4 5G V/S ಪೊಕೊ F3 GT: ಇವೆರಡರಲ್ಲಿ ಖರೀದಿಗೆ ಯಾವುದು ಬೆಸ್ಟ್?
- Lifestyle
ಅಪಘಾತದಿಂದ ಕ್ಷಣಾರ್ಧದಲ್ಲಿ ಮಗುವಿನ ರಕ್ಷಿಸಿ, ತಾಯಿಯ ಮೊಬೈಲ್ ಪುಡಿ ಮಾಡಿದ ಸೈನಿಕ: ಸೈನಿಕನ ಕಾರ್ಯಕ್ಕೆ ನೆಟ್ಟಿಗರು ಫುಲ್ ಫಿದಾ
- Finance
ಪಿಎಂ ಕಿಸಾನ್ 12ನೇ ಕಂತು: ಶೀಘ್ರ ಈ ಕಾರ್ಯ ಮಾಡಿ
- Education
Vijayapura District Court Recruitment 2022 : 28 ಜವಾನ, ಆದೇಶ ಜಾರಿಕಾರ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
2021-22ರ ಆರ್ಥಿಕ ವರ್ಷದ ಕಾರು ಮಾರಾಟದಲ್ಲಿ ಶೇ.100 ರಷ್ಟು ಬೆಳವಣಿಗೆ ಸಾಧಿಸಿದ ನಿಸ್ಸಾನ್
ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಹೊಸ ಕಾರು ಮಾದರಿಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ನಿಸ್ಸಾನ್ ಕಂಪನಿಯ ಕಾರು ಮಾರಾಟಕ್ಕೆ ಹೊಸ ಮ್ಯಾಗ್ನೈಟ್ ಕಾರು ಮಾದರಿಯು ಹೊಸ ಆಯಾಮ ನೀಡಿದೆ.

2021-22ರ ಆರ್ಥಿಕ ವರ್ಷದಲ್ಲಿ ನಿಸ್ಸಾನ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ 37,678 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಈ ಮೂಲಕ 2020-21ರ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ಶೇ.100 ರಷ್ಟು ಬೆಳವಣಿಗೆ ಸಾಧಿಸಿದೆ. ನಿಸ್ಸಾನ್ ಇಂಡಿಯಾ ಕಂಪನಿಗೆ ಹೊಸ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಹೆಚ್ಚಿನ ಬೇಡಿಕೆ ತಂದುಕೊಟ್ಟಿದ್ದು, ಹೊಸ ಕಾರು ಮಾದರಿಯ ಮೂಲಕ ಕಂಪನಿಯು ಹಲವು ಹೊಸ ಮಾರಾಟ ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ.

ಜೊತೆಗೆ ನಿಸ್ಸಾನ್ ಇಂಡಿಯಾ ಭಾರತದಿಂದ ಪ್ರಮುಖ ರಾಷ್ಟ್ರಗಳಿಗೆ ಮ್ಯಾಗ್ನೈಟ್ ಕಾರು ಮಾದರಿಯ ರಫ್ತು ಪ್ರಮಾಣವನ್ನು ಹೆಚ್ಚಿಸಿದ್ದು, 2021-22ರ ಆರ್ಥಿಕ ವರ್ಷದಲ್ಲಿ ಕಂಪನಿಯು ಒಟ್ಟು 38,988 ಯನಿಟ್ ರಫ್ತು ಮಾಡುವ ಮೂಲಕ ವಾರ್ಷಿಕ ಬೆಳವಣಿಗೆಯಲ್ಲಿ ಶೇ.20 ರಷ್ಟು ಮುನ್ನಡೆ ಕಾಯ್ದುಕೊಂಡಿದೆ.

ಬಿಎಸ್-6 ಜಾರಿ ನಂತರ ಪ್ರಮುಖ ಕಾರು ಮಾದರಿಗಳ ಮಾರಾಟ ಕೈಬಿಟ್ಟ ನಂತರ ಕಂಪನಿಯು ಸದ್ಯ ಕಿಕ್ಸ್ ಮತ್ತು ಮ್ಯಾಗ್ನೈಟ್ ಮಾದರಿಯನ್ನು ಮಾತ್ರ ಮಾರಾಟ ಮಾಡುತ್ತಿರುವ ನಿಸ್ಸಾನ್ ಇಂಡಿಯಾ ಕಂಪನಿಯು ಕಂಪ್ಯಾಕ್ಟ್ ಎಸ್‌ಯುವಿ ಮಾರಾದಲ್ಲಿ ಮುಂಚೂಣಿ ಸಾಧಿಸುತ್ತಿದೆ.

ಹೊಸ ಮ್ಯಾಗ್ನೈಟ್ ಕಾರು ವಿನೂತನ ವಿನ್ಯಾಸ ಮತ್ತು ಹೊಸ ವೈಶಿಷ್ಟ್ಯತೆಗಳೊಂದಿಗೆ ಕಂಪಾಕ್ಟ್ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆಯುತ್ತಿದ್ದು, ಮೊದಲ ಬಾರಿಗೆ 2020ರ ಡಿಸೆಂಬರ್ 2ರಂದು ಬಿಡುಗಡೆಯಾಗಿದ್ದ ನಿಸ್ಸಾನ್ ಮಾಗ್ನೈಟ್ ಕಾರು ಮಾದರಿಯು ಇದುವರೆಗೆ ಸುಮಾರು 1 ಲಕ್ಷಕ್ಕೂ ಹೆಚ್ಚು ಯುನಿಟ್‌ಗಳಿಗೆ ಬುಕಿಂಗ್ ಪಡೆದುಕೊಂಡಿದೆ.

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದರೂ ಕೂಡಾ ಸತತ ಹಿನ್ನಡೆ ಅನುಭವಿಸಿದ್ದ ನಿಸ್ಸಾನ್ ಕಂಪನಿಗೆ ಮ್ಯಾಗ್ನೈಟ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಹೊಸ ಕಾರು ಭಾರತದಲ್ಲಿ ಮಾತ್ರವಲ್ಲ ವಿದೇಶಿ ಮಾರುಕಟ್ಟೆಗಳಲ್ಲೂ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಮ್ಯಾಗ್ನೈಟ್ ಕಾರು ಮಾದರಿಯನ್ನು ನಿಸ್ಸಾನ್ ಕಂಪನಿಯು ಭಾರತದಲ್ಲಿ ನಿರ್ಮಾಣ ಮಾಡಿ ವಿಶ್ವದ ಪ್ರಮುಖ 15 ರಾಷ್ಟ್ರಗಳಿಗೆ ರಫ್ತು ಕೈಗೊಳ್ಳುತ್ತಿದ್ದು, ಭಾರತದಿಂದ ಇಂಡೋನೇಷ್ಯಾ, ದಕ್ಷಿಣ ಆಫ್ರಿಕಾ, ನೇಪಾಳ, ಭೂತಾನ್, ಬಾಂಗ್ಲಾದೇಶ, ಶ್ರೀಲಂಕಾ, ಬ್ರೂನೈ, ಉಗಾಂಡಾ, ಕೀನ್ಯಾ, ಸೀಶೆಲ್ಸ್, ಮೊಜಾಂಬಿಕ್, ಜಾಂಬಿಯಾ, ಮಾರಿಷಸ್, ತಾಂಜಾನಿಯಾ, ಮಲಾವಿ ದೇಶಗಳಿಗೆ ರಫ್ತುಗೊಳ್ಳುತ್ತಿದೆ.

ಹೊಸ ಕಾರು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.76 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.10.20 ಲಕ್ಷ ಬೆಲೆ ಪಡೆದುಕೊಂಡಿದೆ.

ಬಿಡಿಭಾಗಗಳ ಬೆಲೆ ಹೆಚ್ಚಳ ಹಿನ್ನಲೆಯಲ್ಲಿ ಹೊಸ ಕಾರು ಬಿಡುಗಡೆಯ ನಂತರ ಹಲವು ಬಾರಿ ಬೆಲೆ ಹೆಚ್ಚಳ ಪಡೆದುಕೊಂಡಿದ್ದು, ಬೆಲೆ ಹೆಚ್ಚಳ ನಂತರವು ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಿಂತಲೂ ಕಡಿಮೆ ದರದಲ್ಲಿ ಮಾರಾಟಗೊಳ್ಳುತ್ತಿರುವುದೇ ಈ ಕಾರಿನ ಪ್ರಮುಖ ವೈಶಿಷ್ಟ್ಯತೆಯಾಗಿದೆ.

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ನಂತರ ಹೊಸ ಕಾರಿನ ಬೇಡಿಕೆ ಮತ್ತಷ್ಟು ಹೆಚ್ಚಳವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಗಳೊಂದಿಗೆ ಮಾರಾಟಗೊಳ್ಳುತ್ತಿದೆ.

ಹೊಸ ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ನಿಸ್ಸಾನ್ ಕಂಪನಿಯು ಶೀಘ್ರದಲ್ಲೇ ಮ್ಯಾಗ್ನೈಟ್ ಕಾರಿನ ವಿಶೇಷ ಆವೃತ್ತಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಮ್ಯಾಗ್ನೈಟ್ ಕಾರಿನ ವಿಶೇಷ ಆವೃತ್ತಿಯು 2022ರ ಮಾದರಿಯ ಸ್ಟ್ಯಾಂಡರ್ಡ್ ಟಾಪ್ ಎಂಡ್ ಮಾದರಿಗಳಿಗೆ ಸಮನಾಗಿ ಬಿಡುಗಡೆಯಾಗಲಿದ್ದು, ಹೊಸ ಆವೃತ್ತಿಯು ಸ್ಟ್ಯಾಂಡರ್ಡ್ ಎಕ್ಸ್‌ವಿ ಮಾದರಿಗಿಂತಲೂ ಎಕ್ಸ್‌ವಿ ಎಕ್ಸಿಕ್ಯೂಟಿವ್ ತುಸು ದುಬಾರಿಯಾಗಿರಲಿದೆ.

ನಿಸ್ಸಾನ್ ಕಂಪನಿಯು ಹೊಸ ಎಕ್ಸ್‌ವಿ ಎಕ್ಸಿಕ್ಯೂಟಿವ್ ಮಾದರಿಯಲ್ಲಿ ಸ್ಟ್ಯಾಂಡರ್ಡ್ ಮಾದರಿಗಿಂತಲೂ ಕೆಲವು ಹೆಚ್ಚುವರಿ ಫೀಚರ್ಸ್ ನೀಡಲಿದ್ದು, ಹೊಸ ಆವೃತ್ತಿಯಲ್ಲಿ 16 ಇಂಚಿನ ಡೈಮಂಡ್ ಕಟ್ ಡ್ಯುಯಲ್ ಟೋನ್ ಅಲಾಯ್ ವ್ಹೀಲ್, ಸಿಲ್ವರ್ ಸೈಡ್ ಕ್ಲ್ಯಾಡಿಂಗ್ ಮತ್ತು ಕಾರಿನ ಒಳಭಾಗದಲ್ಲಿ ಕಪ್ ಹೋಲ್ಡರ್‌ಗಳು ಮತ್ತು ಹಿಂಬದಿ ಪ್ರಯಾಣಿಕರಿಗಾಗಿ 60:40 ಅನುಪಾತದಲ್ಲಿ ಮಡಿಕೆ ಮಾಡಬಹುದಾದ ಆಸನ ಸೌಲಭ್ಯವಿದೆ.