ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ರೂ.1 ಲಕ್ಷದವರೆಗೆ ಭರ್ಜರಿ ಆಫರ್

ಜನಪ್ರಿಯ ಕಾರು ತಯಾರಕ ಕಂಪನಿಯಾದ ನಿಸ್ಸಾನ್ ಇಂಡಿಯಾ ತನ್ನ ಕಿಕ್ಸ್(Nissan Kicks) ಎಸ್‌ಯುವಿ ಖರೀದಿ ಮೇಲೆ ಭರ್ಜರಿ ಆಫರ್ ಅನ್ನು ಘೋಷಿಸಿದೆ. ನಿಸ್ಸಾನ್ ಕಂಪನಿಯು ತನ್ನ ಕಿಕ್ಸ್ ಎಸ್‍ಯುವಿಯ ಮಾರಾಟವನ್ನು ಹೆಚ್ಚಿಸಲು ಭರ್ಜರಿ ರಿಯಾಯಿತಿಗಳನ್ನು ಘೋಷಿಸಲಾಗಿದೆ.

ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ರೂ.1 ಲಕ್ಷದವರೆಗೆ ಭರ್ಜರಿ ಆಫರ್

ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಕಿಕ್ಸ್ ಎಸ್‍ಯುವಿಯ ಮೇಲೆ ರೂ.1 ಲಕ್ಷದವರೆಗೆ ರಿಯಾಯಿತಿಯನ್ನು ನೀಡಲಾಗಿದೆ. ಇದರಲ್ಲಿ ನಗದು ರಿಯಾಯಿತಿ, ವಿನಿಮಯ ಬೋನಸ್, ಕಾರ್ಪೊರೇಟ್ ರಿಯಾಯಿತಿ ಮತ್ತು ಆನ್‌ಲೈನ್ ಬುಕ್ಕಿಂಗ್ ಕೂಡ ಸೇರಿದೆ. ಈ ರಿಯಾಯಿತಿಗಳು ಈ ತಿಂಗಳ ಅಂತ್ಯದವರೆಗೂ ಲಭ್ಯವಿರುತ್ತದೆ. ಈ ರಿಯಾಯಿತಿಗಳು ರೂಪಾಂತರಗಳು ಮತ್ತು ಸ್ಥಳಗಳಲ್ಲಿ ಬದಲಾಗುತ್ತದೆ. ಸ್ಟಾಕ್ ಇರುವವರೆಗೆ ಅನ್ವಯವಾಗುತ್ತದೆ.

ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ರೂ.1 ಲಕ್ಷದವರೆಗೆ ಭರ್ಜರಿ ಆಫರ್

ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾದ ಪ್ರಕಾರ, ಟರ್ಬೊ ಪೆಟ್ರೋಲ್ ರೂಪಾಂತರದ ಮೇಲೆ ರೂ.1 ಲಕ್ಷದವರೆಗೆ ರಿಯಾಯಿತಿಯನ್ನು ನೀಡಲಾಗಿದೆ. ಅದರಂತೆ 1.3-ಲೀಟರ್ ಆವೃತ್ತಿಗೆ ಈ ತಿಂಗಳು 15,000 ರೂಪಾಯಿಗಳ ನಗದು ರಿಯಾಯಿತಿಯನ್ನು ನೀಡಲಾಗಿದೆ.

ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ರೂ.1 ಲಕ್ಷದವರೆಗೆ ಭರ್ಜರಿ ಆಫರ್

ಇದರಿಂದಿಗೆ 70,000 ರೂಪಾಯಿಗಳ ವಿನಿಮಯ ಬೋನಸ್‌ನೊಂದಿಗೆ ಖರೀದಿಸಬಹುದು. ಆನ್‌ಲೈನ್ ಬುಕಿಂಗ್ ಬೋನಸ್ ಅನ್ನು ರೂ.5,000 ಕ್ಕೆ ನಿಗದಿಪಡಿಸಲಾಗಿದೆ ಮತ್ತು ರೂ 10,000 ಮೌಲ್ಯದ ಕಾರ್ಪೊರೇಟ್ ಪ್ರಯೋಜನಗಳನ್ನು ಸಹ ಪಡೆಯಬಹುದು.

ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ರೂ.1 ಲಕ್ಷದವರೆಗೆ ಭರ್ಜರಿ ಆಫರ್

ಇನ್ನು 1.5-ಲೀಟರ್ ನ್ಯಾಚುರಲ್ ಆಸ್ಪೈರಡ್ ನಿಸ್ಸಾನ್ ಕಿಕ್ಸ್ ಎಸ್‍ಯುವಿಗೆ ರೂ.8,000 ನಗದು ರಿಯಾಯಿತಿ, ರೂ.15,000 ವಿನಿಮಯ ಬೋನಸ್ ಮತ್ತು ರೂ.5,000 ಕಾರ್ಪೊರೇಟ್ ರಿಯಾಯಿತಿಯನ್ನು ನೀಡುತ್ತಿದೆ. ಇನ್ನು ರೂ.2,000 ಗಳವರೆಗೆ ಆನ್‌ಲೈನ್ ಬುಕಿಂಗ್ ಬೋನಸ್ ಅನ್ನು ಸಹ ಡೀಲರ್‌ಶಿಪ್‌ನಿಂದ ಆರಿಸಿಕೊಳ್ಳಬಹುದು.

ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ರೂ.1 ಲಕ್ಷದವರೆಗೆ ಭರ್ಜರಿ ಆಫರ್

ಈ ಆಪರ್ ಗಳು ಈ ತಿಂಗಳ ಅಂತ್ಯದವರೆಗೂ ಮಾತ್ರ ಲಭ್ಯವಿರುತ್ತದೆ. ಅಲ್ಲದೇ ಆಫರ್ ಗಳು ಈ ರೂಪಾಂತರಗಳು ಮತ್ತು ಸ್ಥಳಗಳಲ್ಲಿ ಬದಲಾಗಬಹುದು. ಎನ್‌ಐಸಿ ಸಕ್ರಿಯಗೊಳಿಸಿದ ಡೀಲರ್‌ಶಿಪ್‌ಗಳಲ್ಲಿ ಮಾತ್ರ ವಿನಿಮಯ ಪ್ರಯೋಜನವನ್ನು ಪಡೆಯಬಹುದು ಎಂಬುದನ್ನು ಗಮನಿಸಬೇಕು.

ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ರೂ.1 ಲಕ್ಷದವರೆಗೆ ಭರ್ಜರಿ ಆಫರ್

ಈ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಇದರ ಬೇಸ್ ಸ್ಪೆಕ್ ಎಕ್ಸ್‌ಎಲ್ ಮತ್ತು ಎಕ್ಸ್‌ವಿ ಗಳಲ್ಲಿ 1.5-ಲೀಟರ್ ಹೆಚ್4ಕೆ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 142 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೊಡಿಸಲಾಗಿದೆ.

ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ರೂ.1 ಲಕ್ಷದವರೆಗೆ ಭರ್ಜರಿ ಆಫರ್

ಇನ್ನು ಕಿಕ್ಸ್ ಎಸ್‍ಯುವಿಯ ಮಿಡ್ ಸ್ಪೆಕ್ ಮತ್ತು ಟಾಪ್-ಸ್ಪೆಕ್ ರೂಪಾಂತರಗಳಲ್ಲಿ 1.3 ಲೀಟರ್ ನಾಲ್ಕು-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಒಳಗೊಂಡಿದೆ. ಈ ಎಂಜಿನ್ 156 ಬಿಹೆಚ್‍ಪಿ ಪವರ್ ಮತ್ತು 254 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಸ್ಟ್ಯಾಂಡರ್ಡ್ ಮ್ಯಾನ್ಯುವಲ್ ಗೇರ್‌ಬಾಕ್ಸ್‌ ಅಥವಾ ಬ್ರ್ಯಾಂಡ್‌ನ ಹೊಸ ಎಕ್ಸ್-ಟ್ರೋನಿಕ್ ಸಿವಿಟಿ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ. ನಿಸ್ಸಾನ್ ಸರಣಿಯಲ್ಲಿ ಅತಿ ಹೆಚ್ಚು ಪವರ್‍ ಫುಲ್ ಎಂಜಿನ್ ಅನ್ನು ಕಿಕ್ಸ್ ಎಸ್‍ಯುವಿಯನ್ನು ಒಳಗೊಂಡಿದೆ.

ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ರೂ.1 ಲಕ್ಷದವರೆಗೆ ಭರ್ಜರಿ ಆಫರ್

ಈ ಹೊಸ ನಿಸ್ಸಾನ್ ಕಿಕ್ಸ್ ಎಸ್‍ಯುವಿಯಲ್ಲಿ ಹಲವಾರು ಫೀಚರ್ಸ್ ಗಳನ್ನು ಒಳಗೊಂಡಿವೆ. ಈ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಮಾದರಿಯಲ್ಲಿ ರಿಮೋಟ್ ಎಂಜಿನ್ ಸ್ಟಾರ್ಟ್, ಪುಶ್-ಬಟನ್ ಸ್ಟಾರ್ಟ್ ಮತ್ತು ಐಡಲ್ ಸ್ಟಾರ್ಟ್-ಸ್ಟಾಪ್ ಫೀಚರ್ಸ್ ಗಳನ್ನು ಒಳಗೊಂಡಿವೆ.

ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ರೂ.1 ಲಕ್ಷದವರೆಗೆ ಭರ್ಜರಿ ಆಫರ್

ಇನ್ನು ಈ ಎಸ್‍ಯುವಿಯಲ್ಲಿ ಕ್ರೂಸ್ ಕಂಟ್ರೋಲ್, 'ಅರೌಂಡ್ ವ್ಯೂ ಮಾನಿಟರ್' 360 ಡಿಗ್ರಿ ಕ್ಯಾಮೆರಾ, ಹಿಲ್ ಸ್ಟಾರ್ಟ್ ಅಸಿಸ್ಟ್, ಲೆದರ್ ಸೀಟುಗಳು, ಕಾರ್ನರಿಂಗ್ ಫಾಗ್ ಲ್ಯಾಂಪ್‌ಗಳು, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್‌ಗಳು ಮತ್ತು ವೈಪರ್, ಕ್ರೂಸ್ ಕಂಟ್ರೋಲ್ ಮತ್ತು ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಅನ್ನು ಒಳಗೊಂಡಿದೆ.

ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ರೂ.1 ಲಕ್ಷದವರೆಗೆ ಭರ್ಜರಿ ಆಫರ್

ಇನ್ನು ನಿಸ್ಸಾನ್ ಇಂಡಿಯಾ ಕಂಪನಿಯು ಭಾರತದಲ್ಲಿ ಮ್ಯಾಗ್ನೈಟ್ ಅನ್ನು ಬಿಡುಗಡೆ ಮಾಡಿತು. ಈ ಚಿಕ್ಕ ಕ್ರಾಸ್ಒವರ್ ತ್ವರಿತವಾಗಿ ಭಾರತೀಯ ಮಾರುಕಟ್ಟೆಯನ್ನು ಬಹುಬೇಡಿಕೆಯನ್ನು ಪಡೆದುಕೊಂಡಿತು. ಇದೀಗ ಕಂಪನಿಯು ಮಾರಾಟದ ಕಾರ್ಯಕ್ಷಮತೆಯನ್ನು ಇನ್ನಷ್ಟು ಸುಧಾರಿಸುವ ಸಲುವಾಗಿ ಭಾರತ-ನಿರ್ದಿಷ್ಟ ಮಾದರಿಗಳೊಂದಿಗೆ ಇಲ್ಲಿ ತನ್ನ ಸರಣಿಯನ್ನು ವಿಸ್ತರಿಸಲು ಯೋಜಿಸುತ್ತಿದೆ. ವರದಿಗ:ಅ ಪ್ರಕಾರ, ನಿಸ್ಸಾನ್ ಭಾರತಕ್ಕಾಗಿ ಹೊಸ ಮೂರು-ಸಾಲಿನ ಎಂಪಿವಿಯನ್ನು ಅಭಿವೃದ್ಧಿಪಡಿಸುತ್ತಿದೆ, ಇದರ ಬಗ್ಗೆ ಮಾಹಿತಿಯು ಸದ್ಯಕ್ಕೆ ವಿರಳವಾಗಿದೆ. ಈ ಹೊಸ ಎಂಪಿವಿಯನ್ನು ಕೈಗೆಟುಕುವ ದರದಲ್ಲಿ ಬಿಡುಗಡೆಗೊಳಿಸಬಹುದು ಎಂದು ಹೇಳಲಾಗುತ್ತಿದೆ ಟ್ರೈಬರ್, ನಿಸ್ಸಾನ್ ಮ್ಯಾಗ್ನೈಟ್ ಮತ್ತು ರೆನಾಲ್ಟ್ ಕಿಗರ್‌ಗಳಲ್ಲಿ ಈಗಾಗಲೇ ಬಳಸಲಾಗುತ್ತಿರುವ ಸಿಎಂಎಫ್-ಎ ಪ್ಲಾಟ್‌ಫಾರ್ಮ್‌ ಹೊಸ ಎಂಪಿವಿಯು ಆಧರಿಸಿರುತ್ತದೆ. ಏಕೆಂದರೆ ಹೊಸ ಎಂಪಿವಿ ಟ್ರೈಬರ್‌ಗಿಂತ ದೊಡ್ಡದಾಗಿರುತ್ತದೆ.

ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ರೂ.1 ಲಕ್ಷದವರೆಗೆ ಭರ್ಜರಿ ಆಫರ್

ಕ್ರ್ಯಾಶ್ ಪರೀಕ್ಷೆಯಲ್ಲಿ ಮ್ಯಾಗ್ನೈಟ್ 4 ಸ್ಟಾರ್‌ಗಳನ್ನು ಗಳಿಸಿದೆ ಮತ್ತು ರೆನಾಲ್ಟ್ ಕಿಗರ್‌ಗೆ 4-ಸ್ಟಾರ್ ರೇಟಿಂಗ್ ಅನ್ನು ಗುರಿಯಾಗಿಸಿಕೊಂಡಿದೆ ಎಂದು ಪರಿಗಣಿಸಿ ನಾವು ಅದರಿಂದ ಹೊಸ ಎಂಪಿವಿಯು ಉತ್ತಮ ಕ್ರ್ಯಾಶ್ ಟೆಸ್ಟ್ ರೇಟಿಂಗ್ ಅನ್ನು ನಿರೀಕ್ಷಿಸಬಹುದು. ಪವರ್‌ಟ್ರೇನ್ ಆಯ್ಕೆಗಳು ಮ್ಯಾಗ್ನೈಟ್‌ನಂತೆಯೇ ಇರಬೇಕೆಂದು ನಾವು ನಿರೀಕ್ಷಿಸುತ್ತೇವೆ ಇದರಲ್ಲಿ 1.0 ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಎಂಜಿನ್ ಮತ್ತು 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಬಹುದು. ಇದರಲ್ಲಿ 1.0 ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಎಂಜಿನ್ 72 ಬಿಹೆಚ್‍ಪಿ ಪವರ್ ಮತ್ತು 96 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಟರ್ಬೋಚಾರ್ಜ್ಡ್ ಎಂಜಿನ್ 100 ಬಿಹೆಚ್‍ಪಿ ಪವರ್ ಮತ್ತು 160 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.

ನಿಸ್ಸಾನ್ ಕಿಕ್ಸ್ ಎಸ್‍ಯುವಿ ಖರೀದಿ ಮೇಲೆ ರೂ.1 ಲಕ್ಷದವರೆಗೆ ಭರ್ಜರಿ ಆಫರ್

ಇನ್ನು ನಿಸ್ಸಾನ್ ಕಿಕ್ಸ್ ಪವರ್ ಫುಲ್ ಎಂಜಿನ್ ಮತ್ತು ನೂತನ ಫೀಚರ್ ಗಳನ್ನು ಒಳಗೊಂಡಿರುವ ಎಸ್‍ಯುವಿಯಾಗಿದೆ. ಈ ನಿಸ್ಸಾನ್ ಕಿಕ್ಸ್ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ಎಂಜಿ ಹೆಕ್ಟರ್ ಮತ್ತು ಹ್ಯುಂಡೈ ಕ್ರೆಟಾ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ. ಈ ಭರ್ಜರಿ ರಿಯಾಯಿತಿಯನ್ನು ನೀಡಿರುವುದರಿಂದ ಮಾರಾಟವನ್ನು ಹೆಚ್ಚಿಸಲ ಸಹಾಯವಾಗುತ್ತದೆ.

Most Read Articles

Kannada
English summary
Nissan india announced discounts and benefits for kicks suv in march 2022 details
Story first published: Tuesday, March 22, 2022, 17:25 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X