ಮ್ಯಾಗ್ನೈಟ್ ಕಾರು ಮಾದರಿಯಲ್ಲಿ ಪ್ರಮುಖ ವೆರಿಯೆಂಟ್‌ಗಳನ್ನು ತೆಗೆದುಹಾಕಿದ ನಿಸ್ಸಾನ್

ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಕಾರು ಮಾದರಿಯಾದ ಮ್ಯಾಗ್ನೈಟ್ ಸಬ್ ಕಂಪ್ಯಾಕ್ಟ್ ಎಸ್‌‌ಯುವಿಯಲ್ಲಿ ಸೆಮಿಕಂಡಕ್ಟರ್ ಕೊರತೆಯ ಪರಿಣಾಮ ಹೊಸ ಕಾರಿನ ಪ್ರಮುಖ ವೆರಿಯೆಂಟ್‌ಗಳ ಮಾರಾಟದಲ್ಲಿ ಕೆಲವು ಬದಲಾವಣೆಗಳನ್ನು ಪರಿಚಯಿಸಿದೆ.

ಮ್ಯಾಗ್ನೈಟ್ ಕಾರು ಮಾದರಿಯಲ್ಲಿ ಪ್ರಮುಖ ವೆರಿಯೆಂಟ್‌ಗಳನ್ನು ತೆಗೆದುಹಾಕಿದ ನಿಸ್ಸಾನ್

ಮ್ಯಾಗ್ನೈಟ್ ಕಾರಿನ ಉತ್ಪಾದನೆಯನ್ನು ತೀವ್ರಗೊಳಿಸುವ ಉದ್ದೇಶದಿಂದ ಬೇಡಿಕೆ ಅನುಸಾರವಾಗಿ ಆಟೋಮ್ಯಾಟಿಕ್ ಆವೃತ್ತಿಗಳನ್ನು ಕಡಿತಗೊಳಿಸಲಾಗಿದ್ದು, ಆಟೋಮ್ಯಾಟಿಕ್ ಆವೃತ್ತಿಗಳನ್ನು ಇದೀಗ ಟಾಪ್ ಎಂಡ್ ಮಾದರಿಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ಹೊಸ ಬದಲಾವಣೆಯ ನಂತರ ಎಕ್ಸ್‌ವಿ ಎಕ್ಸಿಕ್ಯೂಟಿವ್ ಟರ್ಬೊ ಮತ್ತು ಎಕ್ಸ್ಎಲ್ ಟರ್ಬೊ ರೂಪಾಂತರಗಳ ಸಿವಿಟಿ ಗೇರ್‌ಬಾಕ್ಸ್ ಅನ್ನು ಸ್ಥಗಿತಗೊಳಿಸಲಾಗಿದೆ.

ಮ್ಯಾಗ್ನೈಟ್ ಕಾರು ಮಾದರಿಯಲ್ಲಿ ಪ್ರಮುಖ ವೆರಿಯೆಂಟ್‌ಗಳನ್ನು ತೆಗೆದುಹಾಕಿದ ನಿಸ್ಸಾನ್

ಇದರ ಜೊತೆಗೆ ಪ್ರಮುಖ ಮಾದರಿಗಳಲ್ಲಿ ಈ ಹಿಂದೆ ನೀಡಲಾಗುತ್ತಿದ್ದ ಸ್ಟ್ಯಾಂಡರ್ಡ್ ಎಲ್ಇಡಿ ಡಿಆರ್‌ಎಲ್‌ಗಳು ಈಗ ಎಕ್ಸ್‌ವಿ ರೂಪಾಂತರದಲ್ಲಿ ಆಯ್ಕೆಯಾಗಿ ಲಭ್ಯವಿದ್ದು, ಪ್ರೀಮಿಯಂ ಫೀಚರ್ಸ್‌ಗಳಿಗೆ ಇದೀಗ ಹೆಚ್ಚುವರಿ ಪಾವತಿ ಮಾಡಬೇಕಾಗುತ್ತದೆ.

ಮ್ಯಾಗ್ನೈಟ್ ಕಾರು ಮಾದರಿಯಲ್ಲಿ ಪ್ರಮುಖ ವೆರಿಯೆಂಟ್‌ಗಳನ್ನು ತೆಗೆದುಹಾಕಿದ ನಿಸ್ಸಾನ್

ಮತ್ತೊಂದು ಪ್ರಮುಖ ಬದಲಾವಣೆಯೆಂದರೆ ಹೊಸ ಕಾರಿನ ಎಲ್‌ಇಡಿ ಬೈ-ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಇದು ಎಸ್‌ಯುವಿಯ ಯಾವುದೇ ರೂಪಾಂತರದಲ್ಲೂ ಲಭ್ಯವಿಲ್ಲ. ಇಂದಿನಿಂದ ಇವುಗಳನ್ನು ಟಾಪ್-ಎಂಡ್ ರೂಪಾಂತರದಲ್ಲಿ ಮಾತ್ರ ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿ ಆಯ್ಕೆ ಮಾಡಬಹುದಾಗಿದೆ.

ಮ್ಯಾಗ್ನೈಟ್ ಕಾರು ಮಾದರಿಯಲ್ಲಿ ಪ್ರಮುಖ ವೆರಿಯೆಂಟ್‌ಗಳನ್ನು ತೆಗೆದುಹಾಕಿದ ನಿಸ್ಸಾನ್

ಜಾಗತಿಕ ಮಾರುಕಟ್ಟೆಯಲ್ಲಿ ಭಾರೀ ಸಮಸ್ಯೆಗೆ ಕಾರಣವಾಗಿರುವ ಚಿಪ್ ಪೂರೈಕೆ ಕೊರತೆಯೇ ಆಟೋ ಉತ್ಪಾದನಾ ವಲಯದಲ್ಲಿನ ಬೆಲೆ ಏರಿಕೆಯ ಜೊತೆಗೆ ಹಲವು ತಾಂತ್ರಿಕ ಸೌಲಭ್ಯಗಳ ಕಡಿತಕ್ಕೆ ಪ್ರಮುಖ ಕಾರಣವಾಗಿದ್ದು, ನಿಸ್ಸಾನ್ ಮಾತ್ರವಲ್ಲ ಹಲವು ಕಾರು ಕಂಪನಿಗಳು ಚಿಪ್ ಪೂರೈಕೆ ಆಧರಿಸಿ ಉತ್ಪಾದನಾ ಪ್ರಮಾಣವನ್ನು ನಿರ್ಧರಿಸುತ್ತಿವೆ.

ಮ್ಯಾಗ್ನೈಟ್ ಕಾರು ಮಾದರಿಯಲ್ಲಿ ಪ್ರಮುಖ ವೆರಿಯೆಂಟ್‌ಗಳನ್ನು ತೆಗೆದುಹಾಕಿದ ನಿಸ್ಸಾನ್

ನಿಸ್ಸಾನ್ ಇಂಡಿಯಾ ಕಂಪನಿಯು ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯ ಬಿಡುಗಡೆಯ ನಂತರ ಹಲವಾರು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಹೊಸ ಕಾರು ಭಾರತದಲ್ಲಿ ಬಿಡುಗಡೆಯಾದ ನಂತರ ಇದುವರೆಗೆ ಬರೋಬ್ಬರಿ 55 ಸಾವಿರ ಯುನಿಟ್ ಉತ್ಪಾದನೆಯೊಂದಿಗೆ 1 ಲಕ್ಷಕ್ಕಿಂತಲೂ ಹೆಚ್ಚಿನ ಮಟ್ಟದ ಬುಕಿಂಗ್ ಪಡೆದುಕೊಂಡಿದೆ.

ಮ್ಯಾಗ್ನೈಟ್ ಕಾರು ಮಾದರಿಯಲ್ಲಿ ಪ್ರಮುಖ ವೆರಿಯೆಂಟ್‌ಗಳನ್ನು ತೆಗೆದುಹಾಕಿದ ನಿಸ್ಸಾನ್

2020ರ ಡಿಸೆಂಬರ್ 2ರಂದು ಬಿಡುಗಡೆಯಾಗಿದ್ದ ನಿಸ್ಸಾನ್ ಮಾಗ್ನೈಟ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಫೀಚರ್ಸ್ ಮತ್ತು ಬಜೆಟ್ ಬೆಲೆಯೊಂದಿಗೆ ಉತ್ತಮ ಬೇಡಿಕೆ ಕಾಯ್ದುಕೊಂಡಿದ್ದು, ಹೊಸ ಕಾರು ವಿನೂತನ ವಿನ್ಯಾಸ ಮತ್ತು ಹೊಸ ವೈಶಿಷ್ಟ್ಯತೆಗಳೊಂದಿಗೆ ಕಂಪಾಕ್ಟ್ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆಯುತ್ತಿದೆ.

ಮ್ಯಾಗ್ನೈಟ್ ಕಾರು ಮಾದರಿಯಲ್ಲಿ ಪ್ರಮುಖ ವೆರಿಯೆಂಟ್‌ಗಳನ್ನು ತೆಗೆದುಹಾಕಿದ ನಿಸ್ಸಾನ್

ನಿಸ್ಸಾನ್ ಇಂಡಿಯಾ ಕಂಪನಿಗೆ ಮ್ಯಾಗ್ನೈಟ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಹೊಸ ಕಾರು ಭಾರತದಲ್ಲಿ ಮಾತ್ರವಲ್ಲ ವಿದೇಶಿ ಮಾರುಕಟ್ಟೆಗಳಲ್ಲೂ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ. ಹೊಸ ಕಾರು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.87 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 10.56 ಲಕ್ಷ ಬೆಲೆ ಪಡೆದುಕೊಂಡಿದೆ.

ಮ್ಯಾಗ್ನೈಟ್ ಕಾರು ಮಾದರಿಯಲ್ಲಿ ಪ್ರಮುಖ ವೆರಿಯೆಂಟ್‌ಗಳನ್ನು ತೆಗೆದುಹಾಕಿದ ನಿಸ್ಸಾನ್

ಬಿಡಿಭಾಗಗಳ ಬೆಲೆ ಹೆಚ್ಚಳ ಹಿನ್ನಲೆಯಲ್ಲಿ ಹೊಸ ಕಾರು ಬಿಡುಗಡೆಯ ನಂತರ ಹಲವು ಬಾರಿ ಬೆಲೆ ಹೆಚ್ಚಳ ಪಡೆದುಕೊಂಡಿದ್ದು, ಬೆಲೆ ಹೆಚ್ಚಳ ನಂತರವು ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಿಂತಲೂ ಕಡಿಮೆ ದರದಲ್ಲಿ ಮಾರಾಟಗೊಳ್ಳುತ್ತಿರುವುದೇ ಈ ಕಾರಿನ ಪ್ರಮುಖ ವೈಶಿಷ್ಟ್ಯತೆಯಾಗಿದೆ.

ಮ್ಯಾಗ್ನೈಟ್ ಕಾರು ಮಾದರಿಯಲ್ಲಿ ಪ್ರಮುಖ ವೆರಿಯೆಂಟ್‌ಗಳನ್ನು ತೆಗೆದುಹಾಕಿದ ನಿಸ್ಸಾನ್

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ನಂತರ ಹೊಸ ಕಾರಿನ ಬೇಡಿಕೆ ಮತ್ತಷ್ಟು ಹೆಚ್ಚಳವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಗಳೊಂದಿಗೆ ಮಾರಾಟಗೊಳ್ಳುತ್ತಿದೆ.

ಮ್ಯಾಗ್ನೈಟ್ ಕಾರು ಮಾದರಿಯಲ್ಲಿ ಪ್ರಮುಖ ವೆರಿಯೆಂಟ್‌ಗಳನ್ನು ತೆಗೆದುಹಾಕಿದ ನಿಸ್ಸಾನ್

ಹೊಸ ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

ಮ್ಯಾಗ್ನೈಟ್ ಕಾರು ಮಾದರಿಯಲ್ಲಿ ಪ್ರಮುಖ ವೆರಿಯೆಂಟ್‌ಗಳನ್ನು ತೆಗೆದುಹಾಕಿದ ನಿಸ್ಸಾನ್

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಮ್ಯಾಗ್ನೈಟ್ ಕಾರು ಮಾದರಿಯಲ್ಲಿ ಪ್ರಮುಖ ವೆರಿಯೆಂಟ್‌ಗಳನ್ನು ತೆಗೆದುಹಾಕಿದ ನಿಸ್ಸಾನ್

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ಮ್ಯಾಗ್ನೈಟ್ ಕಾರು ಮಾದರಿಯಲ್ಲಿ ಪ್ರಮುಖ ವೆರಿಯೆಂಟ್‌ಗಳನ್ನು ತೆಗೆದುಹಾಕಿದ ನಿಸ್ಸಾನ್

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

Most Read Articles

Kannada
English summary
Nissan india discontinued magnite selected variants and features detail
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X