ಜನಪ್ರಿಯ ನಿಸ್ಸಾನ್ ಮಾಗ್ನೈಟ್ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್

ಭಾರತೀಯ ಮಾರುಕಟ್ಟೆಯಲ್ಲಿ 2020ರ ಡಿಸೆಂಬರ್ 2ರಂದು ಬಿಡುಗಡೆಯಾಗಿದ್ದ ನಿಸ್ಸಾನ್ ಮಾಗ್ನೈಟ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಫೀಚರ್ಸ್ ಮತ್ತು ಬಜೆಟ್ ಬೆಲೆಯೊಂದಿಗೆ ಉತ್ತಮ ಬೇಡಿಕೆ ಕಾಯ್ದುಕೊಂಡಿದೆ. ಇದೀಗ ನಿಸ್ಸಾನ್ ಕಂಪನಿಯು ವರ್ಷಾಂತ್ಯದಲ್ಲಿ ಹೆಚ್ಚಿನ ಗ್ರಾಹಕರನ್ನು ಸೆಳೆಯಲು ಮಾಗ್ನೈಟ್ ಕಾರಿನ ಮೇಲೆ ಆಪರ್ ಅನ್ನು ಘೋಷಿಸಿದೆ.

ನಿಸ್ಸಾನ್ ಮಾಗ್ನೈಟ್ ಕಾರು ವಿನೂತನ ವಿನ್ಯಾಸ ಮತ್ತು ಹೊಸ ವೈಶಿಷ್ಟ್ಯತೆಗಳೊಂದಿಗೆ ಕಂಪಾಕ್ಟ್ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆಯುತ್ತಿದೆ. ನಿಸ್ಸಾನ್ ಕಂಪನಿಯು ಮಾಗ್ನೈಟ್ ಕಾರಿನ ಮೇಲೆ 15,000 ರೂಪಾಯಿಗಳವರೆಗೆ ವಿನಿಮಯ ಬೋನಸ್ ಅನ್ನು ನೀಡುತ್ತಿದೆ. ಇನ್ನು ರೂ 10,000 ವರೆಗೆ ಕಾರ್ಪೊರೇಟ್ ರಿಯಾಯಿತಿ ಮತ್ತು ರೂ 10,000 ವರೆಗಿನ ಉಚಿತ ಬಿಡಿಭಾಗಗಳು/ನಗದು ರಿಯಾಯಿತಿಯನ್ನು ಕೂಡ ನೀಡಲಾಗಿದೆ. ಈ ಆಪರ್ ಈ ತಿಂಗಳ ಅಂತ್ಯದವರೆಗೂ ಲಭ್ಯವಿರುತ್ತದೆ.

ಜನಪ್ರಿಯ ನಿಸ್ಸಾನ್ ಮಾಗ್ನೈಟ್ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್

ಮ್ಯಾಗ್ನೈಟ್ ಕಾರು ಮಾದರಿಯನ್ನು ನಿಸ್ಸಾನ್ ಕಂಪನಿಯು ಭಾರತದಲ್ಲಿ ನಿರ್ಮಾಣ ಮಾಡಿ ವಿಶ್ವದ ಪ್ರಮುಖ ರಾಷ್ಟ್ರಗಳಿಗೆ ರಫ್ತು ಕೈಗೊಳ್ಳುತ್ತಿದ್ದು, ಭಾರತದಿಂದ ಇಂಡೋನೇಷ್ಯಾ, ದಕ್ಷಿಣ ಆಫ್ರಿಕಾ, ನೇಪಾಳ, ಭೂತಾನ್, ಬಾಂಗ್ಲಾದೇಶ, ಶ್ರೀಲಂಕಾ, ಬ್ರೂನೈ, ಉಗಾಂಡಾ, ಕೀನ್ಯಾ, ಸೀಶೆಲ್ಸ್, ಮೊಜಾಂಬಿಕ್, ಜಾಂಬಿಯಾ, ಮಾರಿಷಸ್, ತಾಂಜಾನಿಯಾ ಮತ್ತು ಇತರ ದೇಶಗಳಿಗೆ ರಫ್ತುಗೊಳಿಸುತ್ತಿದೆ. ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ನಂತರ ಹೊಸ ಕಾರಿನ ಬೇಡಿಕೆ ಮತ್ತಷ್ಟು ಹೆಚ್ಚಳವಾಗಿದೆ.

ಗ್ರಾಹಕರ ಬೇಡಿಕೆಯೆಂತೆ ಮ್ಯಾಗ್ನೈಟ್ ಕಾರು ಹಲವು ರೂಪಂತರಗಳಲ್ಲಿ ಮಾರಾಟಗೊಳ್ಳುತ್ತಿದೆ. ಈ ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0 ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0 ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ. 1.0 ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 70 ಬಿಎಚ್‌ಪಿ ಪವರ್ ಮತ್ತು 9 ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ.

1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 100 ಬಿಎಚ್‌ಪಿ ಪವರ್ ಮತ್ತು 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಇದರೊಂದಿಗೆ ಈ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ. ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್ ಮತ್ತು ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್ ಅನ್ನು ಹೊಂದಿದೆ.

ಇದರೊಂದಿಗೆ ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ. ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದೆ. ಇನ್ನು ಭಾರತದಲ್ಲಿ ನಿಸ್ಸಾನ್ ಪ್ರಯಾಣವು ಯಾವಾಗಲೂ ಹೋರಾಟಗಳಿಂದ ತುಂಬಿದೆ. ನಿಸ್ಸಾನ್ ಸರಣಿಯಲ್ಲಿರುವ ಮಾರಾಟದ ಅಂಕಿಅಂಶಗಳಿಗೆ ಬಂದಾಗ ಅವರ ಪ್ರತಿಸ್ಪರ್ಧಿಗಳ ಎದುರು ಹಿಂದೆ ಇದೆ. ಪ್ರಸ್ತುತ ನಿಸ್ಸಾನ್ ಮೋಟಾರ್ ಇಂಡಿಯಾ ಸ್ವಲ್ಪಮಟ್ಟಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಒಮ್ಮೆ ನಿಸ್ಸಾನ್ ಸ್ಥಗಿತದ ಅಂಚಿನಲ್ಲಿತ್ತು,

ಆದರೆ ಮ್ಯಾಗ್ನೈಟ್ ಕಾರಿನ ಬಿಡುಗಡೆಯ ಬಳಿಕ ಸ್ಥಿರವಾಗಿದೆ. ಮ್ಯಾಗ್ನೈಟ್ ಅನ್ನು ಭಾರತದಲ್ಲಿ ನಿಸ್ಸಾನ್ ಅಸ್ತಿತ್ವವನ್ನು ಉಳಿಸಿದ ವಾಹನ ಎಂದು ಉದ್ಯಮ ತಜ್ಞರು ಶ್ಲಾಘಿಸುತ್ತಾರೆ. ಇದೀಗ ನಿಸ್ಸಾನ್ ಇಂಡಿಯಾ ಇಂದು ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ತನ್ನ ಮೂರು ಜಾಗತಿಕ ಎಸ್‍ಯುವಿಗಳನ್ನು ಪ್ರದರ್ಶಿಸಿದ್ದಾರೆ. ಇದು ನಿಸ್ಸಾನ್ ಎಕ್ಸ್-ಟ್ರಯಲ್, ನಿಸ್ಸಾನ್ ಕಶ್ಕೈ ಮತ್ತು ನಿಸ್ಸಾನ್ ಜೂಕ್ ಎಂಬ ಎಸ್‍ಯುವಿಗಳಾಗಿವೆ. ಭವಿಷ್ಯದ ಕಾರ್ಯಸಾಧ್ಯತೆಗಾಗಿ ಭಾರತದಲ್ಲಿ ನಿಸ್ಸಾನ್ ಎಕ್ಸ್-ಟ್ರಯಲ್ ಮತ್ತು ನಿಸ್ಸಾನ್ ಕಶ್ಕೈ ಎಸ್‍ಯುವಿಗಳನ್ನು ಪರೀಕ್ಷಿಸಲು ಪ್ರಾರಂಭಿಸುತ್ತದೆ ಎಂದು ಕಾರು ತಯಾರಕರು ದೃಢಪಡಿಸಿದ್ದಾರೆ.

Most Read Articles

Kannada
English summary
Nissan magnite attracts discounts in december 2022 details
Story first published: Tuesday, December 20, 2022, 6:40 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X