ಉತ್ಪಾದನೆ ಮತ್ತು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ನಿಸ್ಸಾನ್ ಮಾಗ್ನೈಟ್

ನಿಸ್ಸಾನ್ ಇಂಡಿಯಾ ಕಂಪನಿಯು ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯ ಬಿಡುಗಡೆಯ ನಂತರ ಹಲವಾರು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಹೊಸ ಕಾರು ಭಾರತದಲ್ಲಿ ಬಿಡುಗಡೆಯಾದ ನಂತರ ಇದುವರೆಗೆ ಬರೋಬ್ಬರಿ 50 ಸಾವಿರ ಯುನಿಟ್ ಉತ್ಪಾದನೆಯೊಂದಿಗೆ 1 ಲಕ್ಷ ಬುಕಿಂಗ್ ಪಡೆದುಕೊಂಡಿದೆ.

ಉತ್ಪಾದನೆ ಮತ್ತು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ನಿಸ್ಸಾನ್ ಮಾಗ್ನೈಟ್

2020ರ ಡಿಸೆಂಬರ್ 2ರಂದು ಬಿಡುಗಡೆಯಾಗಿದ್ದ ನಿಸ್ಸಾನ್ ಮಾಗ್ನೈಟ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಫೀಚರ್ಸ್ ಮತ್ತು ಬಜೆಟ್ ಬೆಲೆಯೊಂದಿಗೆ ಉತ್ತಮ ಬೇಡಿಕೆ ಕಾಯ್ದುಕೊಂಡಿದ್ದು, ಹೊಸ ಕಾರು ವಿನೂತನ ವಿನ್ಯಾಸ ಮತ್ತು ಹೊಸ ವೈಶಿಷ್ಟ್ಯತೆಗಳೊಂದಿಗೆ ಕಂಪಾಕ್ಟ್ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆಯುತ್ತಿದೆ.

ಉತ್ಪಾದನೆ ಮತ್ತು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ನಿಸ್ಸಾನ್ ಮಾಗ್ನೈಟ್

ನಿಸ್ಸಾನ್ ಇಂಡಿಯಾ ಕಂಪನಿಗೆ ಮ್ಯಾಗ್ನೈಟ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಹೊಸ ಕಾರು ಭಾರತದಲ್ಲಿ ಮಾತ್ರವಲ್ಲ ವಿದೇಶಿ ಮಾರುಕಟ್ಟೆಗಳಲ್ಲೂ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಉತ್ಪಾದನೆ ಮತ್ತು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ನಿಸ್ಸಾನ್ ಮಾಗ್ನೈಟ್

ಮ್ಯಾಗ್ನೈಟ್ ಕಾರು ಮಾದರಿಯನ್ನು ನಿಸ್ಸಾನ್ ಕಂಪನಿಯು ಭಾರತದಲ್ಲಿ ನಿರ್ಮಾಣ ಮಾಡಿ ವಿಶ್ವದ ಪ್ರಮುಖ 15 ರಾಷ್ಟ್ರಗಳಿಗೆ ರಫ್ತು ಕೈಗೊಳ್ಳುತ್ತಿದ್ದು, ಭಾರತದಿಂದ ಇಂಡೋನೇಷ್ಯಾ, ದಕ್ಷಿಣ ಆಫ್ರಿಕಾ, ನೇಪಾಳ, ಭೂತಾನ್, ಬಾಂಗ್ಲಾದೇಶ, ಶ್ರೀಲಂಕಾ, ಬ್ರೂನೈ, ಉಗಾಂಡಾ, ಕೀನ್ಯಾ, ಸೀಶೆಲ್ಸ್, ಮೊಜಾಂಬಿಕ್, ಜಾಂಬಿಯಾ, ಮಾರಿಷಸ್, ತಾಂಜಾನಿಯಾ, ಮಲಾವಿ ದೇಶಗಳಿಗೆ ರಫ್ತುಗೊಳಿಸುತ್ತಿದೆ.

ಉತ್ಪಾದನೆ ಮತ್ತು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ನಿಸ್ಸಾನ್ ಮಾಗ್ನೈಟ್

ಹೊಸ ಕಾರು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.84 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.10.56 ಲಕ್ಷ ಬೆಲೆ ಪಡೆದುಕೊಂಡಿದೆ.

ಉತ್ಪಾದನೆ ಮತ್ತು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ನಿಸ್ಸಾನ್ ಮಾಗ್ನೈಟ್

ಬಿಡಿಭಾಗಗಳ ಬೆಲೆ ಹೆಚ್ಚಳ ಹಿನ್ನಲೆಯಲ್ಲಿ ಹೊಸ ಕಾರು ಬಿಡುಗಡೆಯ ನಂತರ ಹಲವು ಬಾರಿ ಬೆಲೆ ಹೆಚ್ಚಳ ಪಡೆದುಕೊಂಡಿದ್ದು, ಬೆಲೆ ಹೆಚ್ಚಳ ನಂತರವು ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಿಂತಲೂ ಕಡಿಮೆ ದರದಲ್ಲಿ ಮಾರಾಟಗೊಳ್ಳುತ್ತಿರುವುದೇ ಈ ಕಾರಿನ ಪ್ರಮುಖ ವೈಶಿಷ್ಟ್ಯತೆಯಾಗಿದೆ.

ಉತ್ಪಾದನೆ ಮತ್ತು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ನಿಸ್ಸಾನ್ ಮಾಗ್ನೈಟ್

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ನಂತರ ಹೊಸ ಕಾರಿನ ಬೇಡಿಕೆ ಮತ್ತಷ್ಟು ಹೆಚ್ಚಳವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಗಳೊಂದಿಗೆ ಮಾರಾಟಗೊಳ್ಳುತ್ತಿದೆ.

ಉತ್ಪಾದನೆ ಮತ್ತು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ನಿಸ್ಸಾನ್ ಮಾಗ್ನೈಟ್

ಹೊಸ ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

ಉತ್ಪಾದನೆ ಮತ್ತು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ನಿಸ್ಸಾನ್ ಮಾಗ್ನೈಟ್

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಉತ್ಪಾದನೆ ಮತ್ತು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ನಿಸ್ಸಾನ್ ಮಾಗ್ನೈಟ್

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ಉತ್ಪಾದನೆ ಮತ್ತು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ನಿಸ್ಸಾನ್ ಮಾಗ್ನೈಟ್

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

ಉತ್ಪಾದನೆ ಮತ್ತು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ನಿಸ್ಸಾನ್ ಮಾಗ್ನೈಟ್

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ನಿಸ್ಸಾನ್ ಕಂಪನಿಯು ಶೀಘ್ರದಲ್ಲೇ ಮ್ಯಾಗ್ನೈಟ್ ಕಾರಿನ ವಿಶೇಷ ಆವೃತ್ತಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಉತ್ಪಾದನೆ ಮತ್ತು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ನಿಸ್ಸಾನ್ ಮಾಗ್ನೈಟ್

ಮ್ಯಾಗ್ನೈಟ್ ಕಾರು ಮಾದರಿಯು ಭಾರತದಲ್ಲಿ ಬಿಡುಗಡೆಯಾಗಿ ಕಳೆದ ಡಿಸೆಂಬರ್‌ಗೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದು, ಹೊಸ ಕಾರು ಬಿಡುಗಡೆಯ ಮೊದಲ ವರ್ಷದ ಸಂಭ್ರಮಕ್ಕಾಗಿ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಮ್ಯಾಗ್ನೈಟ್ ಎಕ್ಸ್‌ವಿ ಎಕ್ಸಿಕ್ಯೂಟಿವ್ ಮಾದರಿಯನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಉತ್ಪಾದನೆ ಮತ್ತು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ನಿಸ್ಸಾನ್ ಮಾಗ್ನೈಟ್

ಮ್ಯಾಗ್ನೈಟ್ ಕಾರಿನ ವಿಶೇಷ ಆವೃತ್ತಿಯು 2022ರ ಮಾದರಿಯ ಸ್ಟ್ಯಾಂಡರ್ಡ್ ಟಾಪ್ ಎಂಡ್ ಮಾದರಿಗಳಿಗೆ ಸಮನಾಗಿ ಬಿಡುಗಡೆಯಾಗಲಿದ್ದು, ಹೊಸ ಆವೃತ್ತಿಯು ಸ್ಟ್ಯಾಂಡರ್ಡ್ ಎಕ್ಸ್‌ವಿ ಮಾದರಿಗಿಂತಲೂ ಎಕ್ಸ್‌ವಿ ಎಕ್ಸಿಕ್ಯೂಟಿವ್ ತುಸು ದುಬಾರಿಯಾಗಿರಲಿದೆ.

ಉತ್ಪಾದನೆ ಮತ್ತು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ನಿಸ್ಸಾನ್ ಮಾಗ್ನೈಟ್

ನಿಸ್ಸಾನ್ ಕಂಪನಿಯು ಹೊಸ ಎಕ್ಸ್‌ವಿ ಎಕ್ಸಿಕ್ಯೂಟಿವ್ ಮಾದರಿಯಲ್ಲಿ ಸ್ಟ್ಯಾಂಡರ್ಡ್ ಮಾದರಿಗಿಂತಲೂ ಕೆಲವು ಹೆಚ್ಚುವರಿ ಫೀಚರ್ಸ್ ನೀಡಲಿದ್ದು, ಹೊಸ ಆವೃತ್ತಿಯಲ್ಲಿ 16 ಇಂಚಿನ ಡೈಮಂಡ್ ಕಟ್ ಡ್ಯುಯಲ್ ಟೋನ್ ಅಲಾಯ್ ವ್ಹೀಲ್, ಸಿಲ್ವರ್ ಸೈಡ್ ಕ್ಲ್ಯಾಡಿಂಗ್ ಮತ್ತು ಕಾರಿನ ಒಳಭಾಗದಲ್ಲಿ ಕಪ್ ಹೋಲ್ಡರ್‌ಗಳು ಮತ್ತು ಹಿಂಬದಿ ಪ್ರಯಾಣಿಕರಿಗಾಗಿ 60:40 ಅನುಪಾತದಲ್ಲಿ ಮಡಿಕೆ ಮಾಡಬಹುದಾದ ಆಸನ ಸೌಲಭ್ಯವಿದೆ.

More from DriveSpark

Article Published On: Thursday, June 2, 2022, 17:07 [IST]
English summary
Nissan magnite receives 100 000 plus customer bookings details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+