Just In
- 13 hrs ago
ವ್ಯಾಗನ್ಆರ್ ಕಾರಿಗೆ ಸೆಡ್ಡು ಹೊಡೆಯಲಿದೆ 2022ರ ಕಿಯಾ ರೇ ಫೇಸ್ಲಿಫ್ಟ್
- 13 hrs ago
ಜುಲೈ ಎಲೆಕ್ಟ್ರಿಕ್ ಕಾರುಗಳ ನೋಂದಣಿಯಲ್ಲಿ ಶೇ 3.5 ರಷ್ಟು ಏರಿಕೆ: ಶೇ 90 ರಷ್ಟು ಪಾಲು ಟಾಟಾಗೆ
- 14 hrs ago
30.9 ಕಿ.ಮೀ ಮೈಲೇಜ್ನೊಂದಿಗೆ ಮಾರುತಿ ಸ್ವಿಫ್ಟ್ ಸಿಎನ್ಜಿ ಕಾರು ಬಿಡುಗಡೆ
- 14 hrs ago
ಅತಿ ಕಡಿಮೆ ಅವಧಿಯಲ್ಲಿ ಕಿಯಾ ಸೆಲ್ಟೋಸ್ ಹೊಸ ಮೈಲಿಗಲ್ಲು: ದೇಶದಲ್ಲಿ ದಾಖಲೆಯ ಮಾರಾಟ
Don't Miss!
- News
ಪಂಜಾಬ್: ತ್ರಿವರ್ಣ ಧ್ವಜದ ಮೇಲೆ ಬಿಜೆಪಿ ರಾಜಕೀಯ- ಅಮರಿಂದರ್ ಸಿಂಗ್
- Lifestyle
Today Rashi Bhavishya: ಶನಿವಾರದ ದಿನ ಭವಿಷ್ಯ: ತುಲಾ, ಮೇಷ, ಮಕರ, ಕುಂಭ ರಾಶಿಯ ವ್ಯಾಪಾರಸ್ಥರಿಗೆ ಶುಭ ದಿನ
- Movies
ಅತ್ತ ಪೊಲೀಸ್, ಇತ್ತ ರೌಡಿ ಇಬ್ಬರನ್ನೂ ಎದುರಿಸುತ್ತಿರುವ ಕಂಠಿ!
- Sports
ಮಹಾರಾಜ ಟ್ರೋಫಿ: ಮಯಾಂಕ್ ಶತಕ; 15.4 ಓವರ್ಗಳಲ್ಲಿ 176 ರನ್ ಚಚ್ಚಿ ಗೆದ್ದ ಬೆಂಗಳೂರು ಬ್ಲಾಸ್ಟರ್ಸ್!
- Finance
ಕ್ರಿಪ್ಟೋ ವಹಿವಾಟು: 370 ಕೋಟಿ ರೂಪಾಯಿ ಜಪ್ತಿ ಮಾಡಿದ ಇಡಿ
- Technology
ರೆಡ್ಮಿ K50 ಅಲ್ಟ್ರಾ ಮತ್ತು ಶಿಯೋಮಿ ಪ್ಯಾಡ್ 5 ಪ್ರೊ 12.4 ಬಿಡುಗಡೆ! ವಿಶೇಷತೆ ಏನು?
- Travel
75ನೇ ಸ್ವಾತೊಂತ್ರೋತ್ಸವವನ್ನು ಸ್ಮರಿಸುತ್ತಾ ಸ್ವಾತಂತ್ರ್ಯ ಹೋರಾಟದೊಡನೆ ಸಂಬಂಧವಿರುವ ಭಾರತದ ಈ ಸ್ಮಾರಕಗಳು
- Education
CAT 2022 Preparation Tips : ಕ್ಯಾಟ್ ಪರೀಕ್ಷೆಗೆ ಸಿದ್ಧತೆ ನಡೆಸಲು ಸಲಹೆಗಳು ಇಲ್ಲಿವೆ
ನಿಸ್ಸಾನ್ ಮ್ಯಾಗ್ನೈಟ್ ಕಾರಿನಲ್ಲಿ ವಿಶೇಷ ಬಣ್ಣದ ಆಯ್ಕೆ ಹೊಂದಿರುವ ರೆಡ್ ಎಡಿಷನ್ ಖರೀದಿಗೆ ಬುಕಿಂಗ್ ಶುರು
ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮೂಲಕ ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ನಿಸ್ಸಾನ್ ಕಂಪನಿಯು ಇದುವರೆಗೆ ಬರೋಬ್ಬರಿ 1 ಲಕ್ಷಕ್ಕೂ ಹೆಚ್ಚು ಯುನಿಟ್‌ಗಳಿಗೆ ಬುಕಿಂಗ್ ಪಡೆದುಕೊಂಡಿದೆ. ಹೀಗಾಗಿ ಹೊಸ ಕಾರಿಗಾಗಿ ವಿಶೇಷ ಮಾದರಿಯೊಂದು ಬಿಡುಗಡೆಗೆ ಸಿದ್ದವಾಗುತ್ತಿದ್ದು, ಬಿಡುಗಡೆಯಾಗಲಿರುವ ರೆಡ್ ಎಡಿಷನ್ ಮಾದರಿಗಾಗಿ ಕಂಪನಿಯು ಇದೀಗ ಬುಕಿಂಗ್ ಆರಂಭಿಸಿದೆ.

ಬಿಡುಗಡೆಯಾಗಲಿರುವ ಹೊಸ ನಿಸ್ಸಾನ್ ಮ್ಯಾಗ್ನೈಟ್ ರೆಡ್ ಎಡಿಷನ್ ಆಕರ್ಷಕ ನೋಟದೊಂದಿಗೆ ವಿಭಿನ್ನ ಅವತಾರವನ್ನು ಹೊಂದಿರಲಿದ್ದು, ವಿಶೇಷ ಮಾದರಿಯು ಇದೇ ತಿಂಗಳು 18ರಂದು ಅಧಿಕೃತವಾಗಿ ಬಿಡುಗಡೆಯಾಗಲಿದೆ. ಇದಕ್ಕಾಗಿ ಕಂಪನಿಯು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಬುಕಿಂಗ್ ಆರಂಭಿಸಿದ್ದು, ವಿಶೇಷ ಮಾದರಿಯು ಎಕ್ಸ್‌ವಿ ವೆರಿಯೆಂಟ್ ಆಧರಿಸಿ ನಿರ್ಮಾಣಗೊಂಡಿದೆ.

2020ರ ಡಿಸೆಂಬರ್ 2ರಂದು ಬಿಡುಗಡೆಯಾಗಿದ್ದ ನಿಸ್ಸಾನ್ ಮಾಗ್ನೈಟ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಫೀಚರ್ಸ್ ಮತ್ತು ಬಜೆಟ್ ಬೆಲೆಯೊಂದಿಗೆ ಉತ್ತಮ ಬೇಡಿಕೆ ಕಾಯ್ದುಕೊಂಡಿದ್ದು, ಹೊಸ ಕಾರು ವಿನೂತನ ವಿನ್ಯಾಸ ಮತ್ತು ಹೊಸ ವೈಶಿಷ್ಟ್ಯತೆಗಳೊಂದಿಗೆ ಕಂಪಾಕ್ಟ್ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆಯುತ್ತಿದೆ.

ಹೊಸ ಕಾರು ಭಾರತದಲ್ಲಿ ಮಾತ್ರವಲ್ಲ ವಿದೇಶಿ ಮಾರುಕಟ್ಟೆಗಳಲ್ಲೂ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಮಾದರಿಗಾಗಿ ಕಂಪನಿಯು ಇದೀಗ ವಿಶೇಷ ಬಣ್ಣದ ಆಯ್ಕೆ ಹೊಂದಿರುವ ರೆಡ್ ಎಡಿಷನ್ ಪರಿಚಯಿಸುತ್ತಿದೆ.

ಮ್ಯಾಗ್ನೈಟ್ ರೆಡ್ ಎಡಿಷನ್ ಅನ್ನು ನಿಸ್ಸಾನ್ ಕಂಪನಿಯು ಪ್ರಮುಖ ಮೂರು ರೂಪಾಂತರಗಳಲ್ಲಿ ಪರಿಚಯಿಸಲಾಗುತ್ತಿದ್ದು, ಎಕ್ಸ್‌ವಿ ಮ್ಯಾನುವಲ್, ಟರ್ಬೊ ಎಕ್ಸ್‌ವಿ ಮ್ಯಾನುವಲ್ ಮತ್ತು ಟರ್ಬೊ ಎಕ್ಸ್‌ವಿ ಸಿವಿಟಿ ರೂಪಾಂತರಗಳನ್ನು ಹೊಂದಿರಲಿದೆ. ಇದರೊಂದಿಗೆ ಹೊಸ ಕಾರು ಮಾದರಿಯ ಮುಂಭಾಗದ ಗ್ರಿಲ್, ಮುಂಭಾಗದ ಬಂಪರ್ ಕ್ಲಾಡಿಂಗ್, ವೀಲ್ಹ್ ಆರ್ಚ್ ಮತ್ತು ಬಾಡಿ ಸೈಡ್ ಕ್ಲಾಡಿಂಗ್‌ನಲ್ಲಿ ರೆಡ್ ಕ್ಲಾಡಿಂಗ್ ಪಡೆಯುತ್ತದೆ. ಅದೇ ಸಮಯದಲ್ಲಿ ಕಾರಿನ ಮೇಲೆ ಬೋಲ್ಡ್ ಗ್ರಾಫಿಕ್ಸ್, ಟೈಲ್ ಡೋರ್ ಗಾರ್ನಿಶ್, ಎಲ್ಇಡಿ ಸ್ಕಫ್ ಪ್ಲೇಟ್ ಮತ್ತು ರೆಡ್ ಎಡಿಷನ್ ಬ್ಯಾಡ್ಜ್ ಅನ್ನು ನೀಡಲಾಗುತ್ತದೆ.

ವಿಶೇಷ ಆವೃತ್ತಿಯ ಇಂಟಿರಿಯರ್ ಕುರಿತು ಹೇಳುವುದಾದರೇ ಇದರಲ್ಲಿ ಕೆಲವು ಹೊಸ ವೈಶಿಷ್ಟ್ಯಗಳನ್ನು ನೀಡಲಾಗಿದ್ದು, ಇದು ವೈರ್‌ಲೆಸ್ ಚಾರ್ಜರ್ ಮತ್ತು ಆಂಬಿಯೆಂಟ್ ಲೈಟಿಂಗ್ ಅನ್ನು ಒಳಗೊಂಡಿರುತ್ತದೆ. ಜೊತೆಗೆ ಎಕ್ಸ್‌ವಿ ರೂಪಾಂತರದಲ್ಲಿ ವೈಫೈ ಸಂಪರ್ಕದೊಂದಿಗೆ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಲ್ಇಡಿ ಡಿಆರ್‌ಎಲ್‌ಗಳು, 16-ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಸ್ಟಾರ್ಟ್ ಅಸಿಸ್ಟ್ ಸೌಲಭ್ಯಗಳಿವೆ.

ಸದ್ಯ ಮಾರುಕಟ್ಟೆಯಲ್ಲಿ ಮ್ಯಾಗ್ನೈಟ್ ಕಾರು ಮಾದರಿಯು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.88 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.10.56 ಲಕ್ಷ ಬೆಲೆ ಪಡೆದುಕೊಂಡಿದೆ.

ಬಿಡಿಭಾಗಗಳ ಬೆಲೆ ಹೆಚ್ಚಳ ಹಿನ್ನಲೆಯಲ್ಲಿ ಹೊಸ ಕಾರು ಬಿಡುಗಡೆಯ ನಂತರ ಹಲವು ಬಾರಿ ಬೆಲೆ ಹೆಚ್ಚಳ ಪಡೆದುಕೊಂಡಿದ್ದು, ಬೆಲೆ ಹೆಚ್ಚಳ ನಂತರವು ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಿಂತಲೂ ಕಡಿಮೆ ದರದಲ್ಲಿ ಮಾರಾಟಗೊಳ್ಳುತ್ತಿರುವುದೇ ಈ ಕಾರಿನ ಪ್ರಮುಖ ವೈಶಿಷ್ಟ್ಯತೆಯಾಗಿದೆ.

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ನಂತರ ಹೊಸ ಕಾರಿನ ಬೇಡಿಕೆ ಮತ್ತಷ್ಟು ಹೆಚ್ಚಳವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಗಳೊಂದಿಗೆ ಮಾರಾಟಗೊಳ್ಳುತ್ತಿದೆ.

ಹೊಸ ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ವಿಶೇಷ ಆವೃತ್ತಿಗಳು ಕೂಡಾ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಗಳಿವೆ.