ವಿಶೇಷ ಬಣ್ಣದ ಆಯ್ಕೆ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ರೆಡ್ ಎಡಿಷನ್ ಬಿಡುಗಡೆ

ನಿಸ್ಸಾನ್ ಇಂಡಿಯಾ ಕಂಪನಿಯು ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ವಿಶೇಷ ಬಣ್ಣದ ಆಯ್ಕೆ ಹೊಂದಿರುವ ರೆಡ್ ಎಡಿಷನ್ ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಗಳು ಪ್ರಮುಖ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ವಿಶೇಷ ಬಣ್ಣದ ಆಯ್ಕೆ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ರೆಡ್ ಎಡಿಷನ್ ಬಿಡುಗಡೆ

ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮೂಲಕ ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ನಿಸ್ಸಾನ್ ಕಂಪನಿಯು ಇದುವರೆಗೆ ಬರೋಬ್ಬರಿ 1 ಲಕ್ಷಕ್ಕೂ ಹೆಚ್ಚು ಯುನಿಟ್‌ಗಳಿಗೆ ಬುಕಿಂಗ್ ಪಡೆದುಕೊಂಡಿದೆ. ಹೀಗಾಗಿ ಮ್ಯಾಗ್ನೈಟ್ ಮಾದರಿಯಲ್ಲಿ ವಿಶೇಷ ಆವೃತ್ತಿ ಬಿಡುಗಡೆ ಮಾಡಲಾಗಿದ್ದು, ಮ್ನಾಗ್ನೈಟ್ ರೆಡ್ ಎಡಿಷನ್ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7,86,500 ಬೆಲೆ ಹೊಂದಿದೆ.

ವಿಶೇಷ ಬಣ್ಣದ ಆಯ್ಕೆ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ರೆಡ್ ಎಡಿಷನ್ ಬಿಡುಗಡೆ

ಹೊಸ ಮ್ಯಾಗ್ನೈಟ್ ರೆಡ್ ಎಡಿಷನ್ ಮಾದರಿಯು ಪ್ರಮುಖ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ಎಕ್ಸ್‌ವಿ ಮ್ಯಾನುವಲ್ ರೆಡ್ ವೆರಿಯೆಂಟ್ ರೂ. 7,86,500 ಆರಂಭಿಕ ಬೆಲೆ ಹೊಂದಿದ್ದರೆ ಎಕ್ಸ್‌ವಿ ಟರ್ಬೊ ಮ್ಯಾನುವಲ್ ವೆರಿಯೆಂಟ್ ರೂ. 9,24,500 ಬೆಲೆ ಹೊಂದಿದೆ.

ವಿಶೇಷ ಬಣ್ಣದ ಆಯ್ಕೆ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ರೆಡ್ ಎಡಿಷನ್ ಬಿಡುಗಡೆ

ಹಾಗೆಯೇ ಎಕ್ಸ್‌ವಿ ಟರ್ಬೊ ಸಿವಿಟಿ ಟಾಪ್ ಎಂಡ್ ಮಾದರಿಯು ರೂ. 9,99,900 ಬೆಲೆ ಹೊಂದಿದ್ದು, ವಿಶೇಷ ಮಾದರಿಯಲ್ಲಿ ನೀಡಲಾಗಿರುವ ಬಣ್ಣದ ಆಯ್ಕೆಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಭಿನ್ನವಾಗಿ ಕಾಣುವಂತೆ ಮಾಡಿದೆ.

ವಿಶೇಷ ಬಣ್ಣದ ಆಯ್ಕೆ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ರೆಡ್ ಎಡಿಷನ್ ಬಿಡುಗಡೆ

ಇದರೊಂದಿಗೆ ವಿಶೇಷ ಮಾದರಿಗಳ ಮುಂಭಾಗದ ಗ್ರಿಲ್, ಮುಂಭಾಗದ ಬಂಪರ್ ಕ್ಲಾಡಿಂಗ್, ವೀಲ್ಹ್ ಆರ್ಚ್‌ ಮತ್ತು ಬಾಡಿ ಸೈಡ್ ಕ್ಲಾಡಿಂಗ್‌ನಲ್ಲಿ ರೆಡ್ ಕ್ಲಾಡಿಂಗ್ ನೀಡಲಾಗಿದ್ದು, ಕಾರಿನ ಮೇಲೆ ಬೋಲ್ಡ್ ಗ್ರಾಫಿಕ್ಸ್, ಟೈಲ್ ಡೋರ್ ಗಾರ್ನಿಶ್, ಎಲ್ಇಡಿ ಸ್ಕಫ್ ಪ್ಲೇಟ್ ಮತ್ತು ರೆಡ್ ಎಡಿಷನ್ ಬ್ಯಾಡ್ಜ್ ಪಡೆದುಕೊಂಡಿವೆ.

ವಿಶೇಷ ಬಣ್ಣದ ಆಯ್ಕೆ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ರೆಡ್ ಎಡಿಷನ್ ಬಿಡುಗಡೆ

ವಿಶೇಷ ಆವೃತ್ತಿಯ ಇಂಟಿರಿಯರ್ ಕುರಿತು ಹೇಳುವುದಾದರೇ ಇದರಲ್ಲಿ ಕೆಲವು ಹೊಸ ವೈಶಿಷ್ಟ್ಯತೆಗಳನ್ನು ನೀಡಲಾಗಿದ್ದು, ಇದು ವೈರ್‌ಲೆಸ್ ಚಾರ್ಜರ್ ಮತ್ತು ಆಂಬಿಯೆಂಟ್ ಲೈಟಿಂಗ್ ಅನ್ನು ಒಳಗೊಂಡಿರುತ್ತದೆ. ಜೊತೆಗೆ ಎಕ್ಸ್‌ವಿ ರೂಪಾಂತರದಲ್ಲಿ ವೈಫೈ ಸಂಪರ್ಕದೊಂದಿಗೆ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಲ್ಇಡಿ ಡಿಆರ್‌ಎಲ್‌ಗಳು, 16-ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಸ್ಟಾರ್ಟ್ ಅಸಿಸ್ಟ್ ಸೌಲಭ್ಯಗಳಿವೆ.

ವಿಶೇಷ ಬಣ್ಣದ ಆಯ್ಕೆ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ರೆಡ್ ಎಡಿಷನ್ ಬಿಡುಗಡೆ

ಸದ್ಯ ಮಾರುಕಟ್ಟೆಯಲ್ಲಿ ಮ್ಯಾಗ್ನೈಟ್ ಕಾರು ಮಾದರಿಯು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ಸ್ಟ್ಯಾಂಡರ್ಡ್ ಮಾದರಿಗಳನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.88 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.10.56 ಲಕ್ಷಕ್ಕೆ ಮಾರಾಟಗೊಳಿಸುತ್ತಿದೆ.

ವಿಶೇಷ ಬಣ್ಣದ ಆಯ್ಕೆ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ರೆಡ್ ಎಡಿಷನ್ ಬಿಡುಗಡೆ

2020ರ ಡಿಸೆಂಬರ್ 2ರಂದು ಬಿಡುಗಡೆಯಾಗಿದ್ದ ನಿಸ್ಸಾನ್ ಮಾಗ್ನೈಟ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಫೀಚರ್ಸ್ ಮತ್ತು ಬಜೆಟ್ ಬೆಲೆಯೊಂದಿಗೆ ಉತ್ತಮ ಬೇಡಿಕೆ ಕಾಯ್ದುಕೊಂಡಿದ್ದು, ಹೊಸ ಕಾರು ವಿನೂತನ ವಿನ್ಯಾಸ ಮತ್ತು ಹೊಸ ವೈಶಿಷ್ಟ್ಯತೆಗಳೊಂದಿಗೆ ಕಂಪಾಕ್ಟ್ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆಯುತ್ತಿದೆ.

ವಿಶೇಷ ಬಣ್ಣದ ಆಯ್ಕೆ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ರೆಡ್ ಎಡಿಷನ್ ಬಿಡುಗಡೆ

ಹೊಸ ಕಾರು ಭಾರತದಲ್ಲಿ ಮಾತ್ರವಲ್ಲ ವಿದೇಶಿ ಮಾರುಕಟ್ಟೆಗಳಲ್ಲೂ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಮಾದರಿಗಾಗಿ ಕಂಪನಿಯು ಇದೀಗ ವಿಶೇಷ ಬಣ್ಣದ ಆಯ್ಕೆ ಹೊಂದಿರುವ ರೆಡ್ ಎಡಿಷನ್ ಪರಿಚಯಿಸಿದೆ.

ವಿಶೇಷ ಬಣ್ಣದ ಆಯ್ಕೆ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ರೆಡ್ ಎಡಿಷನ್ ಬಿಡುಗಡೆ

ಮ್ಯಾಗ್ನೈಟ್ ಕಾರು ಪ್ರತಿಸ್ಪರ್ಧಿ ಮಾದರಿಗಿಂತಲೂ ಕಡಿಮೆ ದರದಲ್ಲಿ ಮಾರಾಟಗೊಳ್ಳುತ್ತಿರುವುದೇ ಈ ಕಾರಿನ ಪ್ರಮುಖ ವೈಶಿಷ್ಟ್ಯತೆಯಾಗಿದ್ದು, ಬಿಡಿಭಾಗಗಳ ಬೆಲೆ ಹೆಚ್ಚಳ ಹಿನ್ನಲೆಯಲ್ಲಿ ಹಲವಾರು ಬಾರಿ ಬೆಲೆ ಹೆಚ್ಚಳ ಪಡೆದುಕೊಂಡಿದ್ದರೂ ಸಹ ಇದರ ಪ್ರತಿಸ್ಪರ್ಧಿ ಮಾದರಿಗಿಂತಲೂ ಕಡಿಮೆಯಿದೆ.

ವಿಶೇಷ ಬಣ್ಣದ ಆಯ್ಕೆ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ರೆಡ್ ಎಡಿಷನ್ ಬಿಡುಗಡೆ

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ನಂತರ ಹೊಸ ಕಾರಿನ ಬೇಡಿಕೆ ಮತ್ತಷ್ಟು ಹೆಚ್ಚಳವಾಗುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಗಳೊಂದಿಗೆ ಮಾರಾಟಗೊಳ್ಳುತ್ತಿದೆ.

ವಿಶೇಷ ಬಣ್ಣದ ಆಯ್ಕೆ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ರೆಡ್ ಎಡಿಷನ್ ಬಿಡುಗಡೆ

ಹೊಸ ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದ್ದು, ರೆಡ್ ಎಡಿಷನ್‌ಗಳಲ್ಲೂ ಎಂಜಿನ್ ಆಯ್ಕೆ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ವಿಶೇಷ ಬಣ್ಣದ ಆಯ್ಕೆ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ರೆಡ್ ಎಡಿಷನ್ ಬಿಡುಗಡೆ

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ವಿಶೇಷ ಬಣ್ಣದ ಆಯ್ಕೆ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ರೆಡ್ ಎಡಿಷನ್ ಬಿಡುಗಡೆ

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ವಿಶೇಷ ಬಣ್ಣದ ಆಯ್ಕೆ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ರೆಡ್ ಎಡಿಷನ್ ಬಿಡುಗಡೆ

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

ವಿಶೇಷ ಬಣ್ಣದ ಆಯ್ಕೆ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ರೆಡ್ ಎಡಿಷನ್ ಬಿಡುಗಡೆ

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ವಿಶೇಷ ಆವೃತ್ತಿಯು ಕೂಡಾ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.

Most Read Articles

Kannada
English summary
Nissan magnite red edition launched in india details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X