Just In
- 12 hrs ago
ಮಂಗಳೂರಿನಲ್ಲಿರುವ ಒಕಿನಾವ ಇವಿ ಸ್ಕೂಟರ್ ಮಾರಾಟ ಮಳಿಗೆಯಲ್ಲಿ ಅಗ್ನಿ ಅವಘಡ
- 12 hrs ago
ಮ್ಯೂಸಿಕಲ್ ಸ್ಕೂಟರ್ನ ವಿಡಿಯೋ ಹಂಚಿಕೊಂಡು "ಭಾರತದಲ್ಲಿ ಮಾತ್ರ" ಎಂದ ಆನಂದ್ ಮಹೀಂದ್ರಾ
- 14 hrs ago
ಕೋಟಿ ಬೆಲೆಯ ಮರ್ಸಿಡಿಸ್ ಜಿಎಲ್ಎಸ್ ಎಸ್ಯುವಿ ಖರೀದಿಸಿದ ನಟ ವರುಣ್ ಧವನ್
- 16 hrs ago
ಮೇ ತಿಂಗಳಿನಲ್ಲಿ 10 ಸಾವಿರಕ್ಕೂ ಹೆಚ್ಚು ಮಾರಾಟ ದಾಖಲಿಸಿದ 8 ಮಾರುತಿ ಸುಜುಕಿ ಕಾರುಗಳು
Don't Miss!
- News
ಜೂನ್ 25ರಂದು ನಿಮ್ಮ ನಗರದಲ್ಲಿ ಎಷ್ಟಿದೆ ಪೆಟ್ರೋಲ್-ಡೀಸೆಲ್ ದರ?
- Lifestyle
Today RashiBhavishya: ಶನಿವಾರದ ದಿನ ಭವಿಷ್ಯ: ವೃಷಭ, ಕುಂಭ, ಮೀನ ರಾಶಿಯ ಉದ್ಯೋಗಿಗಳು ಕಚೇರಿ ಕೆಲಸದ ಮೇಲೆ ಗಮನಹರಿಸಿ
- Sports
ENG vs NZ: ನ್ಯೂಜಿಲೆಂಡ್ ವಿರುದ್ಧ ಸತತ 2ನೇ ಶತಕ ದಾಖಲಿಸಿದ ಜಾನಿ ಬೈಸ್ಟ್ರೋವ್
- Finance
ಈ 220 ಉದ್ಯೋಗಿಗಳಿಗೆ ವಾರ್ಷಿಕ 1 ಕೋಟಿ ರು ಸಂಬಳ, ಯಾವ್ದು ಕಂಪನಿ?
- Movies
ಕಾರ್ತಿಕ್ ಆರ್ಯನ್ಗೆ ಕೋಟಿಗಟ್ಟಲೆ ಮೌಲ್ಯದ ಕಾರು ಉಡುಗೊರೆ ನೀಡಿದ ನಿರ್ಮಾಪಕ!
- Education
CLAT 2022 Result : ಕ್ಲಾಟ್ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲಿ ಪ್ರಕಟ
- Technology
60,000ರೂ.ಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಲ್ಯಾಪ್ಟಾಪ್ಗಳು!
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ಮೇಕ್ ಇನ್ ಇಂಡಿಯಾ ಟಾಟಾ ನೆಕ್ಸಾನ್ ಇವಿ ಬಳಕೆಗೆ ಖುಷಿ ವ್ಯಕ್ತಪಡಿಸಿದ ನೀತಿ ಆಯೋಗದ ಸಿಇಒ
ಇವಿ ವಾಹನಗಳ ಬಳಕೆಯನ್ನು ಉತ್ತೇಜಿಸಲು ದೇಶಾದ್ಯಂತ ಕೇಂದ್ರ ಸರ್ಕಾರದೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಕೂಡಾ ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದು, ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿರುವುದು ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಪರಿಣಾಮವಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡಲಾಗುತ್ತಿರುವುದು ಇವಿ ವಾಹನಗಳ ಬಳಕೆಗೆ ಸಾರ್ವಜನಿಕ ಆದ್ಯತೆ ನೀಡುತ್ತಿದ್ದಾರೆ.

ಇಂಧನ ಚಾಲಿತ ವಾಹನಗಳ ಬಳಕೆಯನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ವ್ಯಯಕ್ತಿಕ ಬಳಕೆಯ ವಾಹನಗಳು ಮಾತ್ರವಲ್ಲದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಇಲಾಖೆಗಳು ಕೂಡಾ ತಮ್ಮ ಅಧಿಕೃತ ವಾಹನಗಳನ್ನು ಡೀಸೆಲ್ ಮಾದರಿಗಳಿಗೆ ಬದಲಾಗಿ ಎಲೆಕ್ಟ್ರಿಕ್ ಮಾದರಿಗಳನ್ನು ಅಳವಡಿಸಿಕೊಳ್ಳುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚುತ್ತಿರುವ ಬೇಡಿಕೆ ಮತ್ತು ಬಳಕೆಯಿಂದಾಗುವ ಲಾಭಾಂಶಗಳ ಕುರಿತು ನೀತಿ(NITI) ಆಯೋಗದ ಸಿಇಒ ಅಮಿತಾಬ್ ಕಾಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮ್ಮ ಅಧಿಕೃತ ಟ್ವಿಟರ್‌ನಲ್ಲಿ ನೆಕ್ಸಾನ್ ಇವಿ ಚಿತ್ರವನ್ನು ಪೋಸ್ಟ್ ಮಾಡಿ ಹೊಸ ಇವಿ ಕಾರು ಬಳಕೆಯ ಅನುಭವವನ್ನು ಹಂಚಿಕೊಂಡಿದ್ದಾರೆ.

ಅಮಿತಾಬ್ ಕಾಂತ್ ಅವರು ಟಾಟಾ ಮೋಟಾರ್ಸ್ ನಿರ್ಮಾಣದ ನೆಕ್ಸಾನ್ ಇವಿ ಮಾದರಿಯನ್ನು ಅಧಿಕೃತ ಕಾರು ಮಾದರಿಯಾಗಿ ಬಳಕೆ ಮಾಡುತ್ತಿದ್ದು, ನಯವಾದ ಮತ್ತು ಆರಾಮದಾಯಕವಾದ ಸವಾರಿಯೊಂದಿಗೆ ಇಂಧನ ಚಾಲಿತ ಮಾದರಿಗಳಿಂತಲೂ ಅತಿ ಕಡಿಮೆ ಖರ್ಚುಗಳೊಂದಿಗೆ ಮಾಲೀಕತ್ವದ ಹೊರೆ ಕಡಿಮೆ ಮಾಡಲಿದೆ ಎನ್ನುವ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಜೊತಗೆ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ಎಲೆಕ್ಟ್ರಿಕ್ ವಾಹನಗಳತ್ತ ಸಾಗುವ ವೇಗವನ್ನು ಹೆಚ್ಚಿಸಬೇಕಿದೆ ಎನ್ನುವ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದಲ್ಲದೆ ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಇಲಾಖೆಗಳು ಈಗಾಗಲೇ ಹಂತ-ಹಂತವಾಗಿ ಇವಿ ಕಾರುಗಳನ್ನು ಅಳವಡಿಸಿಕೊಳ್ಳುತ್ತಿದ್ದು, ಈ ವರ್ಷಾಂತ್ಯಕ್ಕೆ ಇವಿ ವಾಹನಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ನೀರಿಕ್ಷೆಯಿದೆ.

ಇನ್ನು ಇವಿ ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ನೆಕ್ಸಾನ್ ಇವಿ ಮಾದರಿಯು 2019ರಲ್ಲಿ ಮೊದಲ ಬಿಡುಗಡೆಯಾದ ನಂತರ ಹಲವಾರು ಹೊಸ ಬದಲಾವರಣೆಗಳೊಂದಿಗೆ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದು, ಬಿಡುಗಡೆಯ ನಂತರ ನೆಕ್ಸಾನ್ ಇವಿ ಇದುವರೆಗೆ ಸುಮಾರು 14 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಂತಾಗಿದೆ.

ದಿನೇ ದಿನೇ ದುಬಾರಿಯಾಗುತ್ತಿರುವ ಇಂಧನಗಳ ಬೆಲೆ ಪರಿಣಾಮ ಹೊಸ ವಾಹನ ಖರೀದಿ ಯೋಜನೆಯಲ್ಲಿರುವ ಗ್ರಾಹಕರು ಇವಿ ವಾಹನ ಖರೀದಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಇವಿ ವಾಹನಗಳ ಮಾರಾಟವು ಇನ್ನಷ್ಟು ಹೆಚ್ಚಳವಾಗುವ ನೀರಿಕ್ಷೆಯಿವೆ.

ನೆಕ್ಸಾನ್ ಇವಿ ಮೂಲಕ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲಿಯೇ 2022ರ ನೆಕ್ಸಾನ್ ಇವಿ ಆವೃತ್ತಿಯನ್ನು ಹಲವು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆ ಮಾಡಲು ಸಿದ್ದಗೊಳ್ಳುತ್ತಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿ ಮಾದರಿಗಿಂತಲೂ ಹೆಚ್ಚಿನ ಮೈಲೇಜ್‌ನೊಂದಿಗೆ ಹೆಚ್ಚುವರಿ ಫೀಚರ್ಸ್ ಪಡೆದುಕೊಳ್ಳಲಿದೆ.

ಸದ್ಯ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳಿವೆ. ನೆಕ್ಸಾನ್ ಇವಿ ಕಾರಿನಲ್ಲಿ 95kW ಎಲೆಕ್ಟ್ರಿಕ್ ಮೋಟಾರ್ ಮತ್ತು 30kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಅಳವಡಿಸಲಾಗಿದ್ದು, 2020ರ ಆವೃತ್ತಿಯು 40kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಬಹುದಾಗಿದೆ.

ಎಆರ್‌ಎಐ ಸಂಸ್ಥೆಯು ಪ್ರಮಾಣಿಕರಿಸದಂತೆ 30kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿರುವ ನೆಕ್ಸಾನ್ ಇವಿ ಕಾರು ಇಕೋ ಡ್ರೈವ್ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, 2022ರ ಆವೃತ್ತಿಯಲ್ಲಿ ಮೈಲೇಜ್ ರೇಂಜ್ ಪ್ರಮಾಣವು ಪ್ರತಿ ಚಾರ್ಜ್ 400 ಕಿ.ಮೀ ಗೆ ಹೆಚ್ಚಳವಾಗುವ ಸಾಧ್ಯತೆಗಳಿವೆ.

ನೆಕ್ಸಾನ್ ಇವಿ ಮಾದರಿಯಲ್ಲಿ ಹೆಚ್ಚಿನ ಮೈಲೇಜ್ ರೇಂಜ್ ಹೊಂದಿರುವ ಮಾದರಿಗಾಗಿ ಹೆಚ್ಚಿನ ಬೇಡಿಕೆ ಹರಿದುಬರುತ್ತಿದ್ದು, ಕಂಪನಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್ ಸಿದ್ದಪಡಿಸಿದೆ.

ಜೊತೆಗೆ ನೆಕ್ಸಾನ್ ಇವಿ ಕಾರಿನ ಎಲೆಕ್ಟ್ರಿಕ್ ಮೋಟಾರ್ ಉನ್ನತೀಕರಿಸುವ ಮೂಲಕ ಕಾರಿನ ಪರ್ಫಾಮೆನ್ಸ್ ಹೆಚ್ಚಿಸಲಾಗುತ್ತಿದ್ದು, ಉನ್ನತೀಕರಿಸಿದ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ 7 ಬಿಎಚ್‌ಪಿ ಹೆಚ್ಚುವರಿ ಶಕ್ತಿ ಪೂರೈಕೆಯೊಂದಿಗೆ ಕಾರಿನ ಕಾರ್ಯಕ್ಷಮತೆಯನ್ನು ಸುಧಾರಿಸಲು ಸಹಕಾರಿಯಾಗಲಿದೆ.