Just In
- 9 hrs ago
ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು...
- 11 hrs ago
ಮೇಡ್ ಇನ್ ಇಂಡಿಯಾ ಯುದ್ಧ ವಾಹನಗಳ ಅಬ್ಬರ: ಮತ್ತಷ್ಟು ಬಲಿಷ್ಟಗೊಂಡ ಭಾರತೀಯ ಸೇನೆ!
- 13 hrs ago
ವಾರದ ಸುದ್ದಿಗಳು: ಎಕ್ಸ್‌ಯುವಿ700 ಮಾದರಿಗೆ ಸೇಫರ್ ಚಾಯ್ಸ್ ಪ್ರಶಸ್ತಿ, ಸುರಕ್ಷತೆಯಲ್ಲಿ ಮುಗ್ಗರಿಸಿದ ಕಿಯಾ ಕಾರೆನ್ಸ್..
- 1 day ago
ಶೀಘ್ರದಲ್ಲಿ ಜಾರಿಗೆ ಬರಲಿದೆ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳಿಗೆ ಭಾರತ್ ಎನ್ಸಿಎಪಿ ಕ್ರ್ಯಾಶ್ ಟೆಸ್ಟ್
Don't Miss!
- News
ಶಿವಸೇನೆ-ಬಿಜೆಪಿ ಮೈತ್ರಿ ಸುಳಿವು ಕೊಟ್ಟ ಕರ್ನಾಟಕದ ಸಚಿವ!
- Movies
ತಾಯಿ ಆಗಿಲ್ಲ ಏಕೆ ಎಂದವರಿಗೆ ತಕ್ಕ ಉತ್ತರ ಕೊಟ್ಟ ನಟಿ
- Sports
ಭಾರತ vs ಐರ್ಲೆಂಡ್: ಮೊದಲ ಟಿ20 ಪಂದ್ಯ, ಟಾಸ್ ಗೆದ್ದ ಭಾರತ, Live ಸ್ಕೋರ್, ಆಡುವ ಬಳಗ
- Finance
Gold Rate Today: ನಿಮ್ಮ ನಗರದಲ್ಲಿ ಜೂ.26ರಂದು ಚಿನ್ನದ ಬೆಲೆ ಎಷ್ಟಿದೆ ನೋಡಿ
- Technology
ಬೇರೆಯವರು ನಿಮ್ಮ ನೆಟ್ಫ್ಲಿಕ್ಸ್ ಖಾತೆ ಬಳಸುತ್ತಿದ್ದರೆ ತಿಳಿಯಲು ಹೀಗೆ ಮಾಡಿ?
- Education
PGCIL Recruitment 2022 : 32 ಡೆಪ್ಯುಟಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಜೂನ್ 26 ರಿಂದ ಜುಲೈ 2ರ ವಾರ ಭವಿಷ್ಯ: ಈ ರಾಶಿಯ ವ್ಯಾಪಾರಿಗಳು ಜಾಗರೂಕತೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ
- Travel
ಕರ್ನಾಟಕದಲ್ಲಿರುವ ಈ 5 ಹೆಸರಾಂತ ವಿಷ್ಣುದೇವರ ದೇವಾಲಯಗಳಿಗೆ ಭೇಟಿ ಕೊಟ್ಟು ಧನ್ಯರಾಗಿ!
ಪನೊರಮಿಕ್ ಸನ್‌ರೂಫ್ ಹೊಂದಿರುವ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಿವು!
ಭಾರತದಲ್ಲಿ ಪ್ರಮುಖ ಕಾರು ತಯಾರಕ ಕಂಪನಿಗಳು ತಮ್ಮ ಕಾರು ಉತ್ಪನ್ನಗಳಲ್ಲಿ ಇದೀಗ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಜೋಡಣೆ ಮಾಡುತ್ತಿದ್ದು, ಇತ್ತೀಚೆಗೆ ಸಾಕಷ್ಟು ಜನಪ್ರಿಯತೆ ಹೊಂದುತ್ತಿರುವ ಪನೊರಮಿಕ್ ಸನ್‌ರೂಫ್ ಸೌಲಭ್ಯ ಹೊಂದಿರುವ ಮಧ್ಯಮ ಕ್ರಮಾಂಕದ ಕಾರುಗಳ ಮಾಹಿತಿ ಇಲ್ಲಿದೆ.

ಪನೊರಮಿಕ್ ಸನ್‌ರೂಫ್ ಸೌಲಭ್ಯವು ಕಾರುಗಳ ಪ್ರೀಮಿಯಂ ಹೆಚ್ಚಿಸಲಿದ್ದು, ಕಾರು ಚಾಲನೆ ವೇಳೆ ಉತ್ತಮವಾದ ಹೊರನೋಟವನ್ನು ನೀಡುವುದರ ಜೊತೆಗೆ ಓಪನ್ ಟಾಪ್ ಪ್ರಯಾಣಕ್ಕೂ ಅನುಕೂಲಕರವಾಗುತ್ತದೆ. ಈ ಮೊದಲ ಐಷಾರಾಮಿ ಕಾರುಗಳಲ್ಲಿ ಮಾತ್ರ ಕಂಡುಬರುತ್ತಿದ್ದ ಪನೊರಮಿಕ್ ಸನ್‌ರೂಫ್ ಸೌಲಭ್ಯವು ಇದೀಗ ಮಧ್ಯಮ ಕ್ರಮಾಂಕದ ಕಾರುಗಳಲ್ಲೂ ಸಹ ಜೋಡಣೆ ಮಾಡಲಾಗುತ್ತಿದ್ದು, ಪನೊರಮಿಕ್ ಸನ್‌ರೂಫ್ ಹೊಂದಿರುವ ಪ್ರಮುಖ ಮಧ್ಯಮ ಕ್ರಮಾಂಕದ ಕಾರುಗಳ ಮಾಹಿತಿ ಇಲ್ಲಿದೆ.

ಮಹೀಂದ್ರಾ ಎಕ್ಸ್‌ಯುವಿ700
ಮಧ್ಯಮ ಕ್ರಮಾಂಕದಲ್ಲಿ ಅತ್ಯುತ್ತಮ ಪನೊರಮಿಕ್ ಸೌಲಭ್ಯ ಹೊಂದಿರುವ ಕಾರು ಮಾದರಿ ಎಂದರೆ ಅದು ಮಹೀಂದ್ರಾ ಹೊಸ ಎಕ್ಸ್‌ಯುವಿ700 ಎಸ್‌ಯುವಿ ಎನ್ನಬಹುದು ಈ ಕಾರಿನ ಎಎಕ್ಸ್5 ನಂತದ ಮಾದರಿಗಳಲ್ಲಿ ಪನೊರಮಿಕ್ ಸನ್‌ರೂಫ್ ನೀಡಲಾಗುತ್ತಿದ್ದು, ಇದರ ಜೊತೆಗೆ ಹೊಸ ಕಾರಿನಲ್ಲಿ ಗರಿಷ್ಠ ಸುರಕ್ಷತೆ ನೀಡಿರುವ ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟೆನ್ಸ್ ಟೆಕ್ನಾಲಜಿಯನ್ನು ಸಹ ಜೋಡಿಸಲಾಗಿದೆ.

ಹೊಸ ಎಕ್ಸ್‌ಯುವಿ700 ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.18 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 24.58 ಲಕ್ಷ ಬೆಲೆ ಹೊಂದಿದೆ.

ಹೊಸ ಎಕ್ಸ್‌ಯುವಿ700 ಕಾರು ಮಾದರಿಯನ್ನು ಬಿಡುಗಡೆಗೊಳಿಸಿದ ಮೊದಲ ಎರಡು ದಿನಗಳಲ್ಲಿ 50 ಸಾವಿರ ಯನಿಟ್‌ಗಳಿಗೆ ಬುಕಿಂಗ್ ಪಡೆದುಕೊಂಡಿದ್ದ ಮಹೀಂದ್ರಾ ಕಂಪನಿಯು ಇದುವರೆಗೆ ಒಟ್ಟು 1 ಲಕ್ಷಕ್ಕೂ ಹೆಚ್ಚು ಯುನಿಟ್‌ಗಳಿಗೆ ಬುಕಿಂಗ್ ಸ್ವಿಕರಿಸಿದ್ದು, ಹೊಸ ಕಾರು 2.0-ಲೀಟರ್ ಪೆಟ್ರೋಲ್ ಮತ್ತು 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದೆ.

ಎಂಜಿ ಆಸ್ಟರ್
ಆಸ್ಟರ್ ಎಸ್‌ಯುವಿ ಮಾದರಿಯಲ್ಲಿ ಎಂಜಿ ಮೋಟಾರ್ ಕಂಪನಿಯು ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಾಡುತ್ತಿದ್ದು, ಹೊಸ ಕಾರು ಮಾದರಿಯಲ್ಲಿ ಶಾರ್ಪ್ ವೆರಿಯೆಂಟ್ ಮೇಲಿನ ಎಲ್ಲಾ ಮಾದರಿಗಳಲ್ಲೂ ಪನೊರಮಿಕ್ ಸನ್‌ರೂಫ್ ಹೊಂದಿವೆ.

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಸ್ಟೈಲ್, ಸೂಪರ್, ಸ್ಮಾರ್ಟ್, ಸ್ಯಾವಿ ಮತ್ತು ಶಾರ್ಪ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.98 ಲಕ್ಷದಿಂದ ರೂ. 17.73 ಬೆಲೆ ಹೊಂದಿರುವ ಆಸ್ಟರ್ ಕಾರಿನಲ್ಲಿ ಎಡಿಎಎಸ್ ಸೇರಿದಂತೆ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳಿವೆ.

ಟಾಟಾ ಸಫಾರಿ
ಪನೊರಮಿಕ್ ಸನ್‌ರೂಫ್ ಹೊಂದಿರುವ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲಿ ಟಾಟಾ ಸಫಾರಿ ಕೂಡಾ ಒಂದಾಗಿದ್ದು, ಎಕ್ಸ್‌ಟಿ ವೆರಿಯೆಂಟ್ ನಂತರ ಎಲ್ಲಾ ಮಾದರಿಗಳಲ್ಲೂ ಸನ್‌ರೂಫ್ ಸೌಲಭ್ಯವನ್ನು ನೀಡುತ್ತಿದೆ.

ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಅಡ್ವೆಂಚರ್ ಪೆರಸೊನಾ ಮಾದರಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ಕಾರಿನಲ್ಲಿ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ. ಫ್ರಂಟ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 15.25 ಲಕ್ಷದಿಂದ ರೂ. 23.46 ಲಕ್ಷ ಬೆಲೆ ಹೊಂದಿದೆ.

ಹ್ಯುಂಡೈ ಕ್ರೆಟಾ
ಹ್ಯುಂಡೈ ಕಂಪನಿಯು ತನ್ನ ನ್ಯೂ ಜನರೇಷನ್ ಕ್ರೆಟಾ ಮಾದರಿಯಲ್ಲಿ ಪನೊರಮಿಕ್ ಸನ್‌ರೂಫ್ ಸೌಲಭ್ಯವನ್ನು ನೀಡುತ್ತಿದ್ದು, ಎಸ್ಎಕ್ಸ್ ನಂತರದ ಎಲ್ಲಾ ವೆರಿಯೆಂಟ್‌ಗಳಲ್ಲೂ ಈ ಸೌಲಭ್ಯವಿದೆ.

ನ್ಯೂ ಜನರೇಷನ್ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಎಮಿಷನ್ ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿ ಹೊಂದಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.27 ಲಕ್ಷದಿಂದ ರೂ.18.02 ಲಕ್ಷ ಬೆಲೆ ಹೊಂದಿದೆ.

ಎಂಜಿ ಹೆಕ್ಟರ್
ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಮಧ್ಯಮ ಕ್ರಮಾಂಕದ ಕಾರುಗಳಲ್ಲಿ ಹೆಕ್ಟರ್ ಎಸ್‌ಯುವಿ ಕೂಡಾ ಪ್ರಮುಖವಾಗಿದ್ದು, ಎಂಜಿ ಕಂಪನಿಯ ಹೆಕ್ಟರ್ ಮಾದರಿಯಲ್ಲಿ ಶಾರ್ಪ್ ನಂತರದ ಎಲ್ಲಾ ವೆರಿಯೆಂಟ್‌ಗಳಲ್ಲೂ ಸನ್‌ರೂಫ್ ಸೌಲಭ್ಯವನ್ನು ನೀಡುತ್ತಿದೆ.

ಹೊಸ ಕಾರಿನಲ್ಲಿ ಗ್ರಾಹಕರು ತಮ್ಮಅಗತ್ಯಕ್ಕೆ ಅನುಗುಣವಾಗಿ 1.5 ಲೀಟರ್ ಪೆಟ್ರೋಲ್ ಮತ್ತು 2.0 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಮಾಡಬಹುದಾಗಿದ್ದು, ಅತ್ಯುತ್ತಮ ಮೈಲೇಜ್ ಜೊತೆ ಪರ್ಫಾಮೆನ್ಸ್ ಮಾದರಿಯಾಗಿರುವ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳಿವೆ.

ಇದರೊಂದಿಗೆ ಎಂಜಿ ಕಂಪನಿಯು ಹೆಕ್ಟರ್ ಪ್ಲಸ್ ಮಾದರಿಯಲ್ಲೂ ಸಹ ಆಯ್ದ ಮಾದರಿಗಳಲ್ಲಿ ಪನೊರಮಿಕ್ ಸನ್‌ರೂಫ್ ಆಯ್ಕೆ ನೀಡುತ್ತಿದ್ದು, ಪನೊರಮಿಕ್ ಸನ್‌ರೂಫ್ ಸೌಲಭ್ಯ ಕಾರಿನ ಪ್ರಯಾಣಕ್ಕೆ ಮತ್ತಷ್ಟು ಹೊಸ ಅನುಭವ ನೀಡುತ್ತದೆ ಎನ್ನಬಹುದು.