Just In
- 59 min ago Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- 1 hr ago ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- 2 hrs ago ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- 2 hrs ago ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
Don't Miss!
- Technology Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
- Movies ನಟಿ ಪ್ರೀತಿ ಜಿಂಟಾ ಮದುವೆ ಮುನ್ನವೇ 34 ಮಕ್ಕಳಿಗೆ ತಾಯಿ ಪ್ರೀತಿ ನೀಡಿದ ವಿಷಯ ನಿಮಗೆ ಗೊತ್ತೇ?
- News ರಜನಿಕಾಂತ್, ವಿಜಯ್ ಸೇತುಪಥಿ, ಧನುಷ್.. ಯಾರೆಲ್ಲಾ ವೋಟ್ ಹಾಕಿದ್ರು?
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೆಚ್ಪಿ ಪೆಟ್ರೋಲ್ ಬಂಕ್ಗಳಲ್ಲಿ ಇವಿ ಬ್ಯಾಟರಿ ವಿನಿಮಯ ಕೇಂದ್ರ ತೆರೆದ ರೇಸ್ ಎನರ್ಜಿ
ದೇಶಾದ್ಯಂತ ತೈಲ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗುತ್ತಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಕಳೆದ ತಿಂಗಳಿನಿಂದ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಸರ್ಕಾರದ ಜೊತೆಗೆ ವಿವಿಧ ಖಾಸಗಿ ಕಂಪನಿಗಳು ಸಹ ಇವಿ ವಾಹನ ಪೂರಕವಾದ ಯೋಜನೆಗಳನ್ನು ಜಾರಿಗೆ ತರುತ್ತಿವೆ.
ಇವಿ ವಾಹನಗಳ ಬಳಕೆಯನ್ನು ಉತ್ತೇಜಿಸುವಲ್ಲಿ ಬ್ಯಾಟರಿ ವಿನಿಯಮ ಕೇಂದ್ರಗಳು ಪ್ರಮುಖ ಪಾತ್ರವಹಿಸುತ್ತಿದ್ದು, ತ್ವರಿತವಾಗಿ ಬ್ಯಾಟರಿ ಸೌಲಭ್ಯಗಳನ್ನು ಒದಗಿಸುವ ಬ್ಯಾಟರಿ ವಿನಿಯಮ ಕೇಂದ್ರಗಳ ಮೇಲೆ ಹೆಚ್ಚಿನ ಹೂಡಿಕೆ ಹರಿದುಬರುತ್ತಿದೆ.
ಬ್ಯಾಟರಿ ವಿನಿಯಮ ಕೇಂದ್ರಗಳ ಮೇಲೆ ಸರ್ಕಾರಿ ಸಂಸ್ಥೆಗಳು ಮಾತ್ರವಲ್ಲ ಖಾಸಗಿ ಕಂಪನಿಗಳು ಸಹ ಹೊಸ ಉದ್ಯಮದಲ್ಲಿ ಹೂಡಿಕೆ ಮಾಡುತ್ತಿದ್ದು, ಇತ್ತೀಚೆಗೆ ಹೈದ್ರಾಬಾದ್ನಲ್ಲಿ ಇವಿ ಮೂಲಸೌಕರ್ಯ ನಿರ್ಮಾಣದಲ್ಲಿ ಮುಂಚೂಣಿ ಸಾಧಿಸುತ್ತಿರುವ ರೇಸ್ ಎನರ್ಜಿ ಕಂಪನಿಯು ಬ್ಯಾಟರಿ ವಿನಿಮಯ ಕೇಂದ್ರವನ್ನು ಆರಂಭಿಸಿದೆ.
ಹೊಸ ಇವಿ ಬ್ಯಾಟರಿ ವಿನಿಮಯ ಕೇಂದ್ರಗಳಿಗಾಗಿ ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಯೊಂದಿಗೆ ಪಾಲುದಾರಿಕೆ ಪ್ರಕಟಿಸಿರುವ ರೇಸ್ ಎನರ್ಜಿ ಕಂಪನಿಯು ಹೆಚ್ಪಿ ಪೆಟ್ರೋಲ್ ಬಂಕ್ ಆವರಣದಲ್ಲಿ ನಿರ್ಮಾಣ ಮಾಡಿದೆ.
ರೇಸ್ ಎನರ್ಜಿ ಕಂಪನಿಯು ಆರಂಭಿಕ ಬ್ಯಾಟರಿ ವಿನಿಮಯ ಕೇಂದ್ರವನ್ನು ಹೈದ್ರಾಬಾದ್ನಲ್ಲಿ ತೆರೆದಿದ್ದು, ಮುಂಬರುವ ದಿನಗಳಲ್ಲಿ ಬೃಹತ್ ಯೋಜನೆಯನ್ನು ದೇಶಾದ್ಯಂತ ಪ್ರಮುಖ ನಗರಗಳಿಗೆ ವಿಸ್ತರಿಸಲಿದೆ.
ಹೊಸ ಬ್ಯಾಟರಿ ವಿನಿಯಮ ಕೇಂದ್ರದಿಂದಾಗಿ ಸಾಮಾನ್ಯ ಚಾರ್ಜರ್ ಮೂಲಕ ಚಾರ್ಜ್ ಮಾಡಲು ಆಗಬಹುದಾದ ಸಮಯ ವ್ಯರ್ಥವನ್ನು ತಡೆಯಲು ಇದು ಸಹಕಾರಿಯಾಗಿದ್ದು, ಕೇವಲ ಎರಡು ನಿಮಿಷಗಳಲ್ಲಿ ಬ್ಯಾಟರಿಯನ್ನು ಬದಲಾಯಿಸಿಕೊಳ್ಳಬಹುದು.
ಬ್ಯಾಟರಿ ವಿನಿಮಯಕ್ಕಾಗಿ ರೇಸ್ ಎನರ್ಜಿ ಕಂಪನಿಯು ಬಳಕೆದಾರರಿಗೆ ಪ್ರತ್ಯೇಕವಾಗಿ ಆ್ಯಪ್ ಕೂಡಾ ಬಿಡುಗಡೆ ಮಾಡಿದ್ದು, ಆ್ಯಪ್ ಮೂಲಕವೇ ಬ್ಯಾಟರಿ ವಿನಿಯಮ ಕೇಂದ್ರಗಳ ಮಾಹಿತಿ, ಬ್ಯಾಟರಿ ಲಭ್ಯತೆ ಸೇರಿದಂತೆ ಬ್ಯಾಟರಿ ರೀಚಾರ್ಜ್ ದರ ಪಾವತಿಯನ್ನು ಸಹ ಆ್ಯಪ್ ಮೂಲಕವೇ ಪಾವತಿ ಮಾಡಬಹುದಾಗಿದೆ.
ಬ್ಯಾಟರಿ ವಿನಿಯಮ ಕೇಂದ್ರಗಳಲ್ಲಿ ಬ್ಯಾಟರಿ ರೇಂಜ್ ಆಧಾರದ ಮೇಲೆ ಇಂತಿಷ್ಟು ಪ್ರಮಾಣದ ದರ ಪಾವತಿಸಿಬೇಕಿದ್ದು, ವಿವಿಧ ಮಾದರಿಯ ಬ್ಯಾಟರಿ ಮಾದರಿಗಳಿಗೆ ಅನುಗುಣವಾಗಿ ಬ್ಯಾಟರಿ ಸೌಲಭ್ಯವನ್ನು ಬದಲಿಸಿಕೊಳ್ಳಬಹುದಾಗಿದೆ.
ಹೀಗಾಗಿ ಪೆಟ್ರೋಲ್ ಬಂಕ್ಗಳ ಮಾದರಿಯಲ್ಲಿ ಬ್ಯಾಟರಿ ವಿನಿಯಮ ಕೇಂದ್ರಗಳನ್ನು ಹೆಚ್ಚಿಸಲು ಮುಂದಾಗಿರುವ ಪ್ರಮುಖ ಕಂಪನಿಗಳು ಚಾರ್ಜಿಂಗ್ ನಿಲ್ದಾಣಗಳ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಹೆಚ್ಚಿಸಲು ಮುಂದಾಗುತ್ತಿವೆ.
ಬ್ಯಾಟರಿ ವಿನಿಮಯದ ವೇಳೆ ಗ್ರಾಹಕರು ತಮ್ಮ ಬಳಿಯಿರುವ ಚಾರ್ಜ್ ಖಾಲಿಯಾಗಿರುವ ಬ್ಯಾಟರಿಯನ್ನು ವಿನಿಮಯ ಕೇಂದ್ರಗಳಿಗೆ ಹಿಂದಿರುಗಿಸುವ ಮೂಲಕ ಚಾರ್ಜ್ ಮಾಡಲಾದ ಬ್ಯಾಟರಿ ಪಡೆದುಕೊಳ್ಳುವ ವ್ಯವಸ್ಥೆ ಇದಾಗಿದ್ದು, ಹೊಸ ಸೌಲಭ್ಯವು ಚಾರ್ಜಿಂಗ್ ಸಮಯವನ್ನು ಉಳಿಸುವ ಮೂಲಕ ಬ್ಯಾಟರಿ ಖಾಲಿಯಾದ ತಕ್ಷಣವೇ ಮತ್ತೊಂದು ಬ್ಯಾಟರಿ ಪಡೆದುಕೊಳ್ಳಲು ಸಹಕಾರಿಯಾಗುತ್ತದೆ.
ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಈಗಾಗಲೇ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ಕೂಡಾ ಚಾಲನೆ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಬ್ಯಾಟರಿ ವಿನಿಯಮ ಕೇಂದ್ರಗಳನ್ನು ನಾವು ನೋಡಬಹುದಾಗಿದೆ.
ಇನ್ನು ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗಿದೆ.
ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.
ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ರಾಜ್ಯಗಳ ಮಟ್ಟದಲ್ಲೂ ವಿವಿಧ ರಾಜ್ಯ ಸರ್ಕಾರಗಳು ಸಹ ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು ಕೇಂದ್ರ ಫೇಮ್ 2 ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಕೂಡಾ ಹೊಸ ಇವಿ ನೀತಿ ಘೋಷಣೆ ಮಾಡುತ್ತಿವೆ.