50 ಸಾವಿರ ಯುನಿಟ್ ಉತ್ಪಾದನಾ ಮೈಲಿಗಲ್ಲು ಸಾಧಿಸಿದ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ರೆನಾಲ್ಟ್ ಇಂಡಿಯಾ ಕಂಪನಿಯು ಭಾರತದಲ್ಲಿ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಂಡಿದ್ದು, ಕಂಪನಿಯು ಇದೀಗ ಹೊಸ ಕಾರಿನ ಉತ್ಪಾದನೆಯಲ್ಲಿ 50 ಸಾವಿರ ಯುನಿಟ್ ಉತ್ಪಾದನಾ ಮೈಲಿಗಲ್ಲು ಸಾಧಿಸಿದೆ.

50 ಸಾವಿರ ಯುನಿಟ್ ಉತ್ಪಾದನಾ ಮೈಲಿಗಲ್ಲು ಸಾಧಿಸಿದ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಸತತ ಹಿನ್ನಡೆ ಅನುಭವಿಸಿದ್ದ ರೆನಾಲ್ಟ್ ಕಂಪನಿಗೆ ಹೊಸ ಕಿಗರ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಟ್ಟಿದ್ದು, ಹೊಸ ಕಾರು ಮಾದರಿಯು ಇದೀಗ 50 ಸಾವಿರ ಯುನಿಟ್ ಮಾರಾಟ ಗುರಿತಲುಪುದರ ಜೊತೆಗೆ ವಿಶೇಷ ಸಂದರ್ಭಕ್ಕಾಗಿ ಹೊಸ ಬಣ್ಣದ ಆಯ್ಕೆ ಪಡೆದುಕೊಂಡಿದೆ.

50 ಸಾವಿರ ಯುನಿಟ್ ಉತ್ಪಾದನಾ ಮೈಲಿಗಲ್ಲು ಸಾಧಿಸಿದ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಕಿಗರ್ ಕಾರು ಮಾದರಿಗಾಗಿ ರೆನಾಲ್ಟ್ ಇಂಡಿಯಾ ಕಂಪನಿಯು ಸ್ಟೆಲ್ತ್ ಬ್ಲ್ಯಾಕ್ ಬಣ್ಣದ ಆಯ್ಕೆ ನೀಡಿದ್ದು, ಹೊಸ ಬಣ್ಣದ ಆಯ್ಕೆಯು ಸ್ಪೋರ್ಟಿ ಸ್ಟೈಲ್ ಹೊಂದಿರುವ ಕಿಗರ್ ಮಾದರಿಗೆ ಅತ್ಯುತ್ತಮ ಆಯ್ಕೆಯಾಗಿರಲಿದೆ.

50 ಸಾವಿರ ಯುನಿಟ್ ಉತ್ಪಾದನಾ ಮೈಲಿಗಲ್ಲು ಸಾಧಿಸಿದ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಫೀಚರ್ಸ್‌ಗಳೊಂದಿಗೆ ಕಿಗರ್ ಕಾರು ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 10.62 ಲಕ್ಷ ಬೆಲೆ ಹೊಂದಿದ್ದು, 2022ರ ಮಾದರಿಯು ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಗೊಂಡಿದೆ.

50 ಸಾವಿರ ಯುನಿಟ್ ಉತ್ಪಾದನಾ ಮೈಲಿಗಲ್ಲು ಸಾಧಿಸಿದ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಬಣ್ಣದ ಹೊರತಾಗಿ 2022ರ ಕಿಗರ್ ಮಾದರಿಯಲ್ಲಿ ಈ ಬಾರಿ ಹೊಸ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ನವೀಕರಿಸಿದ ಸ್ಕೀಡ್ ಪ್ಲೇಟ್ ನೀಡಲಾಗಿದ್ದು, ಹೊಸ ಕಾರಿನಲ್ಲಿ ಟರ್ಬೊ ಡಿಕಾಲ್ಸ್‌ಗಳೊಂದಿಗೆ ಬೈಕಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ಮತ್ತು ಒಳಭಾಗದಲ್ಲೂ ಕೆಲವು ಫೀಚರ್ಸ್ ಬದಲಾವಣೆಗೊಳಿಸಲಾಗಿದೆ.

50 ಸಾವಿರ ಯುನಿಟ್ ಉತ್ಪಾದನಾ ಮೈಲಿಗಲ್ಲು ಸಾಧಿಸಿದ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ನೀಡಲು ಒಳಭಾಗದಲ್ಲೂ ಕೆಲವು ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ನೀಡಲಾಗಿದ್ದು, ಹೊಸದಾಗಿ ರೆಡ್ ಪೇಡ್ ಹೊಂದಿರುವ ಡ್ಯಾಶ್ ಬೋರ್ಡ್, ಪಿಎಂ2.5 ಅಡ್ವಾನ್ಸ್ ಏರ್‌ಫಿಲ್ಟರ್, ರೆಡ್ ಆಕ್ಸೆಂಟ್ ಹೊಂದಿರುವ ಸೀಟ್‌ಗಳು ಮತ್ತು ಆಯ್ಕೆ ರೂಪದಲ್ಲಿ ವೈರ್‌ಲೆಸ್ ಸ್ಮಾರ್ಟ್ ‌ಫೋನ್ ಚಾರ್ಜರ್, ಕ್ರೂಸ್ ಕಂಟ್ರೂಲ್ ಸೌಲಭ್ಯಗಳಿವೆ.

50 ಸಾವಿರ ಯುನಿಟ್ ಉತ್ಪಾದನಾ ಮೈಲಿಗಲ್ಲು ಸಾಧಿಸಿದ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಇದರ ಹೊರತಾಗಿ ಹೊಸ ಕಾರಿನ ಈ ಹಿಂದಿನ ಮಾದರಿಯಲ್ಲಿ ತಾಂತ್ರಿಕ ಅಂಶಗಳು ಮತ್ತು ಎಂಜಿನ್ ಆಯ್ಕೆಯನ್ನು ಮುಂದುವರಿಸಲಾಗಿದ್ದು, ಹೊಸ ಕಾರಿನಲ್ಲಿ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದೆ.

50 ಸಾವಿರ ಯುನಿಟ್ ಉತ್ಪಾದನಾ ಮೈಲಿಗಲ್ಲು ಸಾಧಿಸಿದ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಎರಡು ಎಂಜಿನ್ ಮಾದರಿಗಳಲ್ಲೂ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

50 ಸಾವಿರ ಯುನಿಟ್ ಉತ್ಪಾದನಾ ಮೈಲಿಗಲ್ಲು ಸಾಧಿಸಿದ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಿಗರ್ ಕಾರು ಮಾದರಿಯು ಪರ್ಫಾಮೆನ್ಸ್ ಜೊತೆಗೆ ಎಆರ್‌ಎಐ ಟೆಸ್ಟಿಂಗ್‌ನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ 20.5 ಕಿ.ಮೀ ಗರಿಷ್ಠ ಇಂಧನ ದಕ್ಷತೆ ಹೊಂದಿದ್ದು, ಹೊಸ ಕಾರಿನ 1.0 ಲೀಟರ್ ಟರ್ಬೊ ಮ್ಯಾನುವಲ್ ಮಾದರಿಯು ಹೆಚ್ಚಿನ ಮಟ್ಟದ ಮೈಲೇಜ್ ಹಿಂದಿರುಗಿಸಲಿದೆ.

50 ಸಾವಿರ ಯುನಿಟ್ ಉತ್ಪಾದನಾ ಮೈಲಿಗಲ್ಲು ಸಾಧಿಸಿದ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಕಿಗರ್ ಕಾರಿನ ಮತ್ತೊಂದು ಎಂಜಿನ್ ಮಾದರಿಯಾದ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮ್ಯಾನುವಲ್ ಕೂಡಾ ಉತ್ತಮ ಇಂಧನ ದಕ್ಷತೆ ಹೊಂದಿದ್ದು, ಒಂದೇ ಪ್ಲ್ಯಾಟ್‌ಫಾರ್ಮ್ ಹಂಚಿಕೊಂಡಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ರೆನಾಲ್ಟ್ ಕಿಗರ್ ಮಾದರಿಯಲ್ಲೇ ಪ್ರಮುಖ ತಾಂತ್ರಿಕ ಅಂಶಗಳನ್ನು ಹಂಚಿಕೊಂಡಿದೆ.

50 ಸಾವಿರ ಯುನಿಟ್ ಉತ್ಪಾದನಾ ಮೈಲಿಗಲ್ಲು ಸಾಧಿಸಿದ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಪ್ರತಿಸ್ಪರ್ಧಿ ಮಾದರಿಗಳಾದ ಕಿಯಾ ಸೊನೆಟ್, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಹೋಂಡಾ ಡಬ್ಲ್ಯುಆರ್-ವಿ ಮಾದರಿಗಳಿಂತಲೂ ಕಿಗರ್ ಮತ್ತು ಮ್ಯಾಗ್ನೈಟ್ ಕಾರುಗಳು ಇಂಧನ ದಕ್ಷತೆಯಲ್ಲಿ ಮುಂಚೂಣಿಯಲ್ಲಿದ್ದು, ಕಿಗರ್ ಮತ್ತು ಮ್ಯಾಗ್ನೈಟ್ ಕಾರುಗಳು ಬೆಲೆಯಲ್ಲೂ ಕೂಡಾ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಅತಿ ಕಡಿಮೆ ಬೆಲೆ ಹೊಂದಿವೆ.

50 ಸಾವಿರ ಯುನಿಟ್ ಉತ್ಪಾದನಾ ಮೈಲಿಗಲ್ಲು ಸಾಧಿಸಿದ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಕಿಗರ್ ಕಾರು ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಕಿಗರ್ ಕಾರು ಮಾದರಿಯು ಆಕರ್ಷಕ ಬೆಲೆಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆಯುತ್ತಿದೆ.

50 ಸಾವಿರ ಯುನಿಟ್ ಉತ್ಪಾದನಾ ಮೈಲಿಗಲ್ಲು ಸಾಧಿಸಿದ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹಾಗೆಯೇ ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.

50 ಸಾವಿರ ಯುನಿಟ್ ಉತ್ಪಾದನಾ ಮೈಲಿಗಲ್ಲು ಸಾಧಿಸಿದ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರಿನಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

Most Read Articles

Kannada
English summary
Renault kiger compact suv crosses 50000 production milestone in india
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X