ಕ್ರ್ಯಾಶ್ ಟೆಸ್ಟ್‌ನಲ್ಲಿ 4 ಸ್ಟಾರ್ ರೇಟಿಂಗ್ ಪಡೆದ ರೆನಾಲ್ಟ್ ಕಿಗರ್ ಕಾರು

ಜನಪ್ರಿಯ ಕಾರು ತಯಾರಕ ಕಂಪನಿಯಾದ ರೆನಾಲ್ಟ್ ತನ್ನ ಕಿಗರ್ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಗ್ಲೋಬಲ್ NCAP ಕ್ರ್ಯಾಶ್ ಟೆಸ್ಟ್‌ಗೆ ಒಳಪಡಿಸಿದೆ. ಈ ಕ್ರ್ಯಾಶ್ ಟೆಸ್ಟ್‌ನಲ್ಲಿ ರೆನಾಲ್ಟ್ ಕಿಗರ್ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯು 4-ಸ್ಟಾರ್ ಸುರಕ್ಷತಾ ರೇಟಿಂಗ್ ಅನ್ನು ಪಡೆದುಕೊಂಡಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ 4 ಸ್ಟಾರ್ ರೇಟಿಂಗ್ ಪಡೆದ ರೆನಾಲ್ಟ್ ಕಿಗರ್ ಕಾರು

ಕ್ರ್ಯಾಶ್ ಟೆಸ್ಟ್‌ನಲ್ಲಿ ವಯಸ್ಕ ಪ್ರಯಾಣಿಕರ ರಕ್ಷಣೆಗಾಗಿ ಕಾರು 12.34 ಅಂಕಗಳನ್ನು ಮತ್ತು ಮಕ್ಕಳ ಸುರಕ್ಷತೆಗಾಗಿ 21.05 ಅಂಕಗಳನ್ನು ಗಳಿಸಿದೆ. ಕ್ರ್ಯಾಶ್ ಟೆಸ್ಟ್‌ ವರದಿಯ ಪ್ರಕಾರ, ಕಿಗರ್ ಮುಂಭಾಗದ ಪ್ರಯಾಣಿಕರ ತಲೆ ಮತ್ತು ಕುತ್ತಿಗೆಗೆ ಉತ್ತಮ ರಕ್ಷಣೆ ಯನ್ನು ನೀಡಿದೆ. ಚಾಲಕನ ಎದೆಯು ಕನಿಷ್ಠ ರಕ್ಷಣೆಯನ್ನು ತೋರಿಸಿದೆ ಮತ್ತು ಪ್ರಯಾಣಿಕರ ಎದೆಯು ಸಾಕಷ್ಟು ರಕ್ಷಣೆಯನ್ನು ತೋರಿಸಿದೆ. ಇನ್ನು ಪ್ರಯಾಣಿಕರ ಬಲ ಮೊಣಕಾಲು ಉತ್ತಮ ರಕ್ಷಣೆಯನ್ನು ನೀಡಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ 4 ಸ್ಟಾರ್ ರೇಟಿಂಗ್ ಪಡೆದ ರೆನಾಲ್ಟ್ ಕಿಗರ್ ಕಾರು

3 ವರ್ಷದ ಮಗುವಿನ ಸೀಟಿನ ಡಮ್ಮಿಗೆ ತಲೆಯ ಅತಿಯಾದ ಮುಂದಕ್ಕೆ ಚಲನೆಯನ್ನು ತಡೆಯಲು ಸಾಧ್ಯವಾಗಲಿಲ್ಲ ಮತ್ತು ಎದೆಗೆ ಕಳಪೆ ರಕ್ಷಣೆ ನೀಡಿದೆ. .5 ವರ್ಷ ವಯಸ್ಸಿನ ಡಮ್ಮಿಗೆ ಚೈಲ್ಡ್ ಸೀಟ್ ತಲೆಗೆ ಉತ್ತಮ ರಕ್ಷಣೆ ನೀಡಿತು ಆದರೆ ಎದೆಗೆ ನೀಡಲಾದ ರಕ್ಷಣೆ ದುರ್ಬಲ ಎಂದು ರೇಟ್ ಮಾಡಲಾಗಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ 4 ಸ್ಟಾರ್ ರೇಟಿಂಗ್ ಪಡೆದ ರೆನಾಲ್ಟ್ ಕಿಗರ್ ಕಾರು

ಗ್ಲೋಬಲ್ NCAP ಕ್ರ್ಯಾಶ್ ಟೆಸ್ಟ್‌ ವೇಲೆ ರೆನಾಲ್ಟ್ ಕಿಗರ್ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್, ಸೀಟ್‌ಬೆಲ್ಟ್ ಪ್ರಿ-ಟೆನ್ಷನರ್‌ಗಳು, ಸೀಟ್‌ಬೆಲ್ಟ್ ರಿಮೈಂಡರ್‌ಗಳು ಮತ್ತು ಐಎಸ್‌ಒಫಿಕ್ಸ್‌ಗಳನ್ನು ಹೊಂದಿತ್ತು.

ಕ್ರ್ಯಾಶ್ ಟೆಸ್ಟ್‌ನಲ್ಲಿ 4 ಸ್ಟಾರ್ ರೇಟಿಂಗ್ ಪಡೆದ ರೆನಾಲ್ಟ್ ಕಿಗರ್ ಕಾರು

ಭಾರತದಲ್ಲಿ ಮಾರಾಟವಾಗುತ್ತಿರುವ ರೆನಾಲ್ಟ್ ಕಿಗರ್ ಕಾರಿನ ಬಗ್ಗೆ ಹೇಳುವುದಾದರೆ, ಇದರಲ್ಲಿ 1.0-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಎಂಜಿನ್ ಮತ್ತು 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಸಾಮಾನ್ಯ ಪೆಟ್ರೋಲ್ ಎಂಜಿನ್ 72 ಬಿಹೆಚ್‍ಪಿ ಪವರ್ ಮತ್ತು ಟರ್ಬೋ ಪೆಟ್ರೋಲ್ ಎಂಜಿನ್ 100 ಬಿಜೆಚ್‍ಪಿ ಪವರ್ ಅನ್ನು ಉತ್ಪಾಸುತ್ತದೆ. ಈ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ 4 ಸ್ಟಾರ್ ರೇಟಿಂಗ್ ಪಡೆದ ರೆನಾಲ್ಟ್ ಕಿಗರ್ ಕಾರು

ರೆನಾಲ್ಟ್ ಕಿಗರ್ ಕಾರು ಪ್ರತಿಸ್ಪರ್ಧಿಮಾದರಿಗಳಂತೆ ಹಲವಾರು ಆಕರ್ಷಕ ಫೀಚರ್ಸ್ ಗಳನ್ನು ಒಳಗೊಂಡಿದೆ. ಈ ಕಿಗರ್ ಕಾರಿನಲ್ಲಿ ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್ ಮತ್ತು ರೂಫ್‌ರೈಲ್ಸ್ ಅನ್ನು ಒಳಗೊಂಡಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ 4 ಸ್ಟಾರ್ ರೇಟಿಂಗ್ ಪಡೆದ ರೆನಾಲ್ಟ್ ಕಿಗರ್ ಕಾರು

ಇನ್ನು ಈ ಕಾರಿನಲ್ಲಿ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್ ಹೊಂದಿದ್ದು ಕಾರಿನ ಒಳಭಾಗದಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿರುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಮತ್ತು 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ ಅನ್ನು ಒಳಗೊಂಡಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ 4 ಸ್ಟಾರ್ ರೇಟಿಂಗ್ ಪಡೆದ ರೆನಾಲ್ಟ್ ಕಿಗರ್ ಕಾರು

ಇದರೊಂದಿಗೆ ಈ ಕಾರಿನಲ್ಲಿ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5-ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌‌ರೂಫ್ ಅನ್ನು ಕೂಡ ಹೊಂದಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ 4 ಸ್ಟಾರ್ ರೇಟಿಂಗ್ ಪಡೆದ ರೆನಾಲ್ಟ್ ಕಿಗರ್ ಕಾರು

ಇನ್ನು ರೆನಾಲ್ಟ್ ಇಂಡಿಯಾ ಕಂಪನಿಯು ಭಾರತಕ್ಕೆ ಕಾಲಿಟ್ಟು 10 ವರ್ಷಗಳು ಪೂರ್ತಿಯಾಗಿವೆ. ಈ ರೆನಾಲ್ಟ್ ಕಿಗರ್ ಬಜೆಟ್ ಬೆಲೆಯೊಂದಿಗೆ ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆದುಕೊಂಡಿದೆ. ಹೊಸ ಕಾರಿನ ಮೂಲಕ ರೆನಾಲ್ಟ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ 4 ಸ್ಟಾರ್ ರೇಟಿಂಗ್ ಪಡೆದ ರೆನಾಲ್ಟ್ ಕಿಗರ್ ಕಾರು

ರೆನಾಲ್ಟ್ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿಯು ಮಾದರಿಯು ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಲಭ್ಯವಿದೆ. ರೆನಾಲ್ಟ್ ಕಿಗರ್ ಮತ್ತು ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಒಂದೇ ಪ್ಲ್ಯಾಟ್‌ಫಾರ್ಮ್ ಅಭಿವೃದ್ದಿಗೊಳ್ಳುವುದರ ವಿಭಿನ್ನ ಗ್ರಾಹಕರನ್ನು ಸೆಳೆಯಲ್ಲಿ ಯಶಸ್ವಿಯಾಗುತ್ತಿವೆ. ಇನ್ನು ಶೀಘ್ರದಲ್ಲೇ ಮೇಡ್ ಇನ್-ಇಂಡಿಯಾ ಕಿಗರ್ ಕಾರು ಸಾರ್ಕ್ ಪ್ರದೇಶದ ಇತರ ದೇಶಗಳಲ್ಲಿಯೂ ಲಭ್ಯವಾಗಲಿದೆ. ನೇಪಾಳದಲ್ಲಿ ರೆನಾಲ್ಟ್ ಕಿಗರ್ ಗ್ರಾಹಕರಿಗೆ ಬ್ರ್ಯಾಂಡ್‌ನ ಡೀಲರ್ - ಅಡ್ವಾನ್ಸ್ಡ್ ಆಟೋಮೊಬೈಲ್ಸ್ ಪ್ರೈವೇಟ್ ಲಿಮಿಟೆಡ್ ಮೂಲಕ ಲಭ್ಯವಿದೆ. ಇದು ವೈಶಾಲ್ ಗ್ರೂಪ್‌ನ ಒಂದು ಭಾಗವಾಗಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ 4 ಸ್ಟಾರ್ ರೇಟಿಂಗ್ ಪಡೆದ ರೆನಾಲ್ಟ್ ಕಿಗರ್ ಕಾರು

ಭಾರತದಿಂದಲೇ ರೆನಾಲ್ಟ್ ಕಂಪನಿಯು ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ವಿವಿಧ ಕಾರು ಮಾದರಿಗಳ ರಫ್ತು ಕೈಗೊಳ್ಳುತ್ತಿದ್ದು, ಇದೀಗ ಕಿಗರ್ ಮಾದರಿಯೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುತ್ತಿವೆ. ಇನ್ನು ರೆನಾಲ್ಟ್ ಇಂಡಿಯಾ ತನ್ನ ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲನ್ನು ಕಳೆದ ತಿಂಗಳು ಸಾಧಿಸಿದೆ. ರೆನಾಲ್ಟ್ ಇಂಡಿಯಾ ಕಂಪನಿಯು ಕಾರುಗಳ ರಫ್ತಿನಲ್ಲಿ ಒಂದು ಲಕ್ಷ ಯುನಿಟ್‌ಗಳ ಮೈಲಿಗಲ್ಲನ್ನು ಸಾಧಿಸುವ ಮೂಲಕ 2022ರ ಹೊಸ ವರ್ಷವನ್ನು ನೂತನ ಮೈಲಿಗಲ್ಲು ಹಿಡುತ್ತಾ ಪ್ರಾರಂಭಿಸಿದ್ದಾರೆ. ರೆನಾಲ್ಟ್ ಇಂಡಿಯಾ ಕಂಪನಿಯು ಸಾರ್ಕ್, ಏಷ್ಯಾ ಪೆಸಿಫಿಕ್, ಇಂಡಿಯನ್ ಓಷಿಯಾನಿಕ್ ಪ್ರದೇಶ, ದಕ್ಷಿಣ ಆಫ್ರಿಕಾ ಮತ್ತು ಪೂರ್ವ ಆಫ್ರಿಕಾದಾದ್ಯಂತ 14 ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ವಾಹನ ತಯಾರಕರು ಅದರ ಕಾರುಗಳನ್ನು ರಫ್ತು ಮಾಡುತ್ತಾರೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ 4 ಸ್ಟಾರ್ ರೇಟಿಂಗ್ ಪಡೆದ ರೆನಾಲ್ಟ್ ಕಿಗರ್ ಕಾರು

ರೆನಾಲ್ಟ್ ಕಂಪನಿಯು ತನ್ನ ಕ್ವಿಡ್, ಟ್ರೈಬರ್ ಮತ್ತು ಕಿಗರ್ ಅನ್ನು ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ರಫ್ತು ಮಾಡುವ ಭಾರತದಲ್ಲಿ ತಯಾರಿಸಿದ ರೆನಾಲ್ಟ್ ಕಾರುಗಳಾಗಿವೆ, ರೆನಾಲ್ಟ್ ತನ್ನ ಗ್ರೂಪ್ ಪಾಲುದಾರ ನಿಸ್ಸಾನ್ ಸಹಯೋಗದೊಂದಿಗೆ ತನ್ನ ಕಾರುಗಳನ್ನು ಒರಗಡಂ ಮೂಲದ ಉತ್ಪಾದನಾ ಘಟಕದಲ್ಲಿ ಉತ್ಪಾದಿಸಲಾಗುತ್ತಿದೆ.

Article Published On: Tuesday, February 15, 2022, 20:06 [IST]
English summary
Renault kiger gets 4 star safety rating in ncap crash test details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+