Just In
- 1 hr ago
ವಾರದ ಸುದ್ದಿಗಳು: ಎಕ್ಸ್ಯುವಿ700 ಮಾದರಿಗೆ ಸೇಫರ್ ಚಾಯ್ಸ್ ಪ್ರಶಸ್ತಿ, ಸುರಕ್ಷತೆಯಲ್ಲಿ ಮುಗ್ಗರಿಸಿದ ಕಿಯಾ ಕಾರೆನ್ಸ್..
- 15 hrs ago
ಶೀಘ್ರದಲ್ಲಿ ಜಾರಿಗೆ ಬರಲಿದೆ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳಿಗೆ ಭಾರತ್ ಎನ್ಸಿಎಪಿ ಕ್ರ್ಯಾಶ್ ಟೆಸ್ಟ್
- 16 hrs ago
ಭಾರತದಲ್ಲಿ ಹೊಸ ಕವಾಸಕಿ ನಿಂಜಾ 400 ಸೂಪರ್ಸ್ಪೋರ್ಟ್ ಬೈಕ್ ಬಿಡುಗಡೆ
- 17 hrs ago
ಭಾರತೀಯ ಕಾರುಗಳಿಗೆ ವಿದೇಶಗಳಲ್ಲಿ ಬೇಡಿಕೆ ಹೆಚ್ಚಳ: ಮೇ ತಿಂಗಳಲ್ಲಿ ಅತಿ ಹೆಚ್ಚು ರಫ್ತಾಗಿರುವ ಕಾರುಗಳಿವು!
Don't Miss!
- News
ಕಬ್ಬನ್ ಪಾರ್ಕ್ನಲ್ಲಿ ನಾಯಿಗಳ ವಾಯುವಿಹಾರಕ್ಕೆ ನಿಷೇಧ ಹೇರಿದ ಸರ್ಕಾರ
- Movies
ನವೀನ್ ಸಜ್ಜು ಮೈಸೂರು ಮನೆ ಹೇಗಿದೆ ಗೊತ್ತಾ?
- Technology
LED ಡಿಸ್ಪ್ಲೇ ಹೊಂದಿರುವ ಅತ್ಯುತ್ತಮ ಪವರ್ಬ್ಯಾಂಕ್ಗಳ ಲಿಸ್ಟ್ ಇಲ್ಲಿದೆ!
- Lifestyle
ಜೂನ್ 26 ರಿಂದ ಜುಲೈ 2ರ ವಾರ ಭವಿಷ್ಯ: ಈ ರಾಶಿಯ ವ್ಯಾಪಾರಿಗಳು ಜಾಗರೂಕತೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ
- Finance
ಜೂನ್ 26: ಕಚ್ಚಾತೈಲ ದರ ಚೇತರಿಕೆ, ಭಾರತದಲ್ಲಿ ಇಂಧನ ದರ ಆಗಿಲ್ಲ ಏರಿಕೆ!
- Sports
Ind vs Eng: ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಕೊರೊನಾ ವೈರಸ್
- Education
SSC MTS Admit Card 2022 : ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ನಿಸ್ಸಾನ್ ಮತ್ತು ರೆನಾಲ್ಟ್ ಪ್ರಮುಖ ಕಾರುಗಳ ಬೆಲೆಯಲ್ಲಿ ರೂ.50 ಸಾವಿರದಷ್ಟು ದುಬಾರಿ
ಹೆಚ್ಚುತ್ತಿರುವ ಆಟೋ ಬಿಡಿಭಾಗಗಳ ನಿರ್ವಹಣಾ ವೆಚ್ಚ ಸರಿದೂಗಿಸಲು ಪ್ರಮುಖ ವಾಹನ ಉತ್ಪಾದನಾ ಕಂಪನಿಗಳು ತಮ್ಮ ಹೊಸ ವಾಹನಗಳ ಬೆಲೆಗಳನ್ನು ಹೆಚ್ಚಿಸುತ್ತಿದ್ದು, ರೆನಾಲ್ಟ್ ಮತ್ತು ನಿಸ್ಸಾನ್ ಕಂಪನಿಗಳು ಸಹ ತಮ್ಮ ಪ್ರಮುಖ ಕಾರು ಮಾದರಿಗಳ ಬೆಲೆಯಲ್ಲಿ ಹೆಚ್ಚಳ ಮಾಡಿವೆ.

ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಉತ್ಪಾದನಾ ವೆಚ್ಚವನ್ನು ಸರಿದೂಗಿಸಲ ದರ ಹೆಚ್ಚಿಸಲಾಗುತ್ತಿದೆ. ನಿರಂತರ ಬೆಲೆ ಏರಿಕೆ ಪರಿಣಾಮ ಹೊಸ ವಾಹನಗಳ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದ್ದು, ಕಳೆದ ಜನವರಿಯಲ್ಲಿ ದರ ಹೆಚ್ಚಿಸಿದ್ದ ಪ್ರಮುಖ ವಾಹನ ಉತ್ಪಾದನಾ ಕಂಪನಿಯು ಇದೀಗ ವರ್ಷದಲ್ಲಿ ಎರಡನೇ ಬಾರಿಗೆ ದರ ಹೆಚ್ಚಿಸಿವೆ.

ಏಪ್ರಿಲ್ 1ರಿಂದ ಅನ್ವಯಿಸುವಂತೆ ಎರಡನೇ ಹಂತದ ಬೆಲೆ ಏರಿಕೆ ಘೋಷಣೆ ಮಾಡಲಾಗಿದ್ದು, ಭಾರತದಲ್ಲಿ ಸಹಭಾಗಿತ್ವ ಯೋಜನೆ ಅಡಿ ಕಾರು ಉತ್ಪಾದನೆ ಕೈಗೊಳ್ಳುತ್ತಿರುವ ರೆನಾಲ್ಟ್ ಮತ್ತು ನಿಸ್ಸಾನ್ ಕಂಪನಿಗಳು ಸಹ ತನ್ನ ಕಾರುಗಳ ಬೆಲೆಯನ್ನು ಹೆಚ್ಚಿಸಿವೆ.

ಹೊಸ ದರ ಪಟ್ಟಿಯಲ್ಲಿ ರೆನಾಲ್ಟ್ ನಿರ್ಮಾಣದ ಕಿಗರ್ ಮಾದರಿಯು ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ ರೂ. 1 ಸಾವಿರದಿಂದ ರೂ. 49 ಸಾವಿರ ತನಕ ದರ ಹೆಚ್ಚಳ ಪಡೆದುಕೊಂಡಿದ್ದು, ದರ ಹೆಚ್ಚಳ ನತರ ಕಿಗರ್ ಕಾರಿನ ಬೆಲೆಯು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.84 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 10.39 ಲಕ್ಷ ಬೆಲೆ ಪಡೆದುಕೊಂಡಿದೆ.

ಹೊಸ ದರಪಟ್ಟಿ ಮತ್ತೊಂದು ಪ್ರಮುಖ ಕಾರು ಮಾದರಿಯಾದ ರೆನಾಲ್ಟ್ ಟ್ರೈಬರ್ ಮಿನಿ ಎಂಪಿವಿ ಕಾರು ಮಾದರಿಯು ಸಹ ಹೆಚ್ಚಿನ ಮಟ್ಟದ ದರ ಏರಿಕೆ ಪಡೆದುಕೊಂಡಿದ್ದು, ಟ್ರೈಬರ್ ಕಾರು ಮಾದರಿಯು ಪ್ರತಿ ಮಾದರಿಗಳ ಮೇಲೂ ರೂ. 7 ಸಾವಿರದಷ್ಟು ಬೆಲೆ ಪಡೆದುಕೊಂಡಿದೆ.

ಟ್ರೈಬರ್ ಕಾರು ಮಾದರಿಯು ಒಂದೇ ಪೆಟ್ರೋಲ್ ಎಂಜಿನ್ ಆಯ್ಕೆಯ ಮೂಲಕ ಸಾಮಾನ್ಯ ಮತ್ತು ಟರ್ಬೊ ಆಯ್ಕೆಗಳನ್ನು ಹೊಂದಿದ್ದು, ದರ ಹೆಚ್ಚಳದ ನಂತರ ಟ್ರೈಬರ್ ಕಾರು ಮಾದರಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 5.76 ಲಕ್ಷದಿಂದ ಟಾಪ್ ಎಂಡ್ ಮಾದರಿಯು 8.32 ಲಕ್ಷ ಬೆಲೆ ಹೊಂದಿದೆ.

ಇನ್ನು ರೆನಾಲ್ಟ್ ಮತ್ತು ನಿಸ್ಸಾನ್ ಕಂಪನಿಗಳ ಸಹಭಾಗಿತ್ವ ಯೋಜನೆ ಅಡಿ ಅಭಿವೃದ್ದಿಗೊಂಡಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ಸಹ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಹೊಸ ದರಪಟ್ಟಿಯಲ್ಲಿ ಮ್ಯಾಗ್ನೈಟ್ ಕಾರು ಮಾದರಿಯು ತುಸು ದುಬಾರಿಯಾಗಿ ಪರಿಣಮಿಸಿದೆ.

ಹೊಸ ದರಪಟ್ಟಿಯಲ್ಲಿ ನಿಸ್ಸಾನ್ ಟ್ರೈಬರ್ ಕಾರು ಮಾದರಿಯು ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ ರೂ.2 ಸಾವಿರದಿಂದ ರೂ. 31 ಸಾವಿರ ತನಕ ಬೆಲೆ ಹೆಚ್ಚಳ ಪಡೆದುಕೊಂಡಿದ್ದು, ಹೊಸ ಕಾರು ಕಳೆದ ಕೆಲ ತಿಂಗಳಿನಲ್ಲಿ ಸಾಕಷ್ಟು ದುಬಾರಿ ಮಾದರಿಯಾಗಿ ಗುರುತಿಸಿಕೊಂಡಿದೆ.

ಕಳೆದ ಕೆಲವು ತಿಂಗಳುಗಳಲ್ಲಿ ಹೊಸ ವಾಹನಗಳ ಬೆಲೆಯು ಸಾಕಷ್ಟು ಏರಿಕೆಯಾಗಿದ್ದು, ಈ ಹಿಂದೆ ಪ್ರತಿ ಆರು ತಿಂಗಳಿಗೆ ಒಂದು ಬಾರಿದ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ವಾಹನ ಉತ್ಪಾದನಾ ಕಂಪನಿಗಳು ಇದೀಗ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ದರ ಹೆಚ್ಚಿಸುತ್ತಿವೆ.

ಹೊಸ ವಾಹನಗಳ ದರ ಹೆಚ್ಚಳಕ್ಕೆ ಪ್ರಮುಖ ಕಾರಣಗಳಲ್ಲಿ ಸೆಮಿಕಂಡಕ್ಟರ್ ಕೊರೆತೆ ಪ್ರಮುಖವಾಗಿದ್ದು, ಹೊಸ ಕಾರಿನ ಬೇಡಿಕೆಯು ಹೆಚ್ಚಿರುವ ಸಂದರ್ಭದಲ್ಲಿಯೇ ಆಟೋ ಕಂಪನಿಗಳಿಗೆ ಸೆಮಿಕಂಡಕ್ಟರ್ ಕೊರತೆಯು ತೀವ್ರವಾಗಿ ಕಾಡುತ್ತಿದೆ.

ಕೋವಿಡ್ ನಂತರ ಆರ್ಥಿಕ ಬೆಳವಣಿಗೆ ಸುಧಾರಿಸುತ್ತಿರುವುದರಿಂದ ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಇಂತಹ ಸಂದರ್ಭದಲ್ಲೇ ಎಲೆಕ್ಟ್ರಾನಿಕ್ ಬಿಡಿಭಾಗಗಳ ಕೊರತೆ ಆಟೋ ಉದ್ಯಮಕ್ಕೆ ಭಾರೀ ಹೊಡೆತ ನೀಡುತ್ತಿದೆ. ಹೊಸ ತಂತ್ರಜ್ಞಾನ ಪ್ರೇರಿತ ವಾಹನಗಳ ಉತ್ಪಾದನೆಗೆ ಅವಶ್ಯವಾಗಿರುವ ಎಲೆಕ್ಟ್ರಾನಿಕ್ ಚಿಪ್(ಸೆಮಿಕಂಡಕ್ಟರ್) ಕೊರತೆಯು ಜಾಗತಿಕ ಆಟೋ ಉದ್ಯಮದ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತಿದೆ.

ಎಲೆಕ್ಟ್ರಾನಿಕ್ ಚಿಪ್ ಕೊರತೆಯಿಂದಾಗಿ ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ ಪ್ರಮುಖ ವಾಹನ ಉತ್ಪಾದನಾ ಕಂಪನಿಗಳಿಗೂ ಬಿಸಿ ತಟ್ಟಿದ್ದು, ಪ್ರಮುಖ ವಾಹನಗಳ ಉತ್ಪಾದನಾ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವುದು ಆಟೋ ಉತ್ಪಾದನಾ ಕಂಪನಿಗಳ ಆದಾಯಕ್ಕೆ ಹೊಡೆತ ನೀಡುತ್ತದೆ.

ಚೀನಿ ಮಾರುಕಟ್ಟೆಯಿಂದ ಹೆಚ್ಚಿನ ಪ್ರಮಾಣದಲ್ಲಿ ಆಮದುಗೊಳ್ಳುತ್ತಿದ್ದ ಎಲೆಕ್ಟ್ರಾನಿಕ್ ಚಿಪ್ ಪ್ರಮಾಣವನ್ನು ಕಡಿತಗೊಳಿಸಿರುವುದರಿಂದ ಇತರೆ ದೇಶಗಳಲ್ಲಿನ ಉತ್ಪಾದನಾ ಲಭ್ಯತೆ ಆಧರಿಸಿ ಎಲೆಕ್ಟ್ರಾನಿಕ್ ಬಿಡಿಭಾಗಗಳ ಕೊರತೆಯೂ ಹೆಚ್ಚಳವಾಗುತ್ತಿದ್ದು, ಎಲೆಕ್ಟ್ರಾನಿಕ್ ಚಿಪ್ಗಳಿಲ್ಲದೆ ಪ್ರಮುಖ ಕಾರು ಕಂಪನಿಯು ಉತ್ಪಾದನೆಯನ್ನೇ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿವೆ.

ಎಲೆಕ್ಟ್ರಾನಿಕ್ ಚಿಪ್ ಇಲ್ಲದೆ ಕಾರಿನ ಪ್ರಮುಖ ಎಲೆಕ್ಟ್ರಾನಿಕ್ ಸಾಧನಗಳನ್ನು ಜೋಡಿಸಲು ಸಾಧ್ಯವೇ ಇಲ್ಲ ಎನ್ನಬಹುದು. ಹೊಸ ಕಾರಿನಲ್ಲಿರುವ ಡಿಸ್ ಪ್ಲೇ, ಸ್ಪೀಕರ್, ಸ್ಟ್ಯಾಬಿಲಿಟಿ ಕಂಟ್ರೋಲ್, ಲೈಟಿಂಗ್ ಕಂಟ್ರೋಲ್, ಆಟೋ ಫೋಲ್ಡಿಂಗ್ ಒಆರ್ವಿಎಂ, ಡಿಜಿಟಲ್ ಕೀ ಮತ್ತು ಕಾರ್ ಕನೆಕ್ಟ್ ಫೀಚರ್ಸ್ ಸೇರಿ ಪ್ರಮುಖ ತಾಂತ್ರಿಕ ಸಾಧನಗಳು ಕಾರ್ಯನಿರ್ವಹಿಸಲು ಸೆಮಿ ಕಂಡಕ್ಟರ್ ಅವಶ್ಯವಾಗಿವೆ.

ಕೋವಿಡ್ ಪರಿಣಾಮ ಬಿಡಿಭಾಗಗಳ ಪೂರೈಕೆಯ ಸರಪಳಿಯಲ್ಲಿ ಆಗಿರುವ ಸಮಸ್ಯೆಯೇ ಎಲೆಕ್ಟ್ರಾನಿಕ್ ಚಿಪ್ ಕೊರತೆಗೆ ಪ್ರಮುಖ ಕಾರಣವಾಗಿದ್ದು, ಆಟೋ ಉತ್ಪಾದನಾ ಕಂಪನಿಗಳಿಗೆ ಪೂರೈಕೆಯಾಗಬೇಕಿದ್ದ ಹೆಚ್ಚಿನ ಪ್ರಮಾಣದ ಎಲೆಕ್ಟ್ರಾನಿಕ್ ಚಿಪ್ ಸ್ಟಾಕ್ ಇದೀಗ ಹೆಚ್ಚಿನ ಪ್ರಮಾಣದಲ್ಲಿ ಲ್ಯಾಪ್ಟಾಪ್, ಮೊಬೈಲ್ಗಳು ಹಾಗೂ ಇತರೆ ಎಲೆಕ್ಟ್ರಾನಿಕ್ ಸಾಧನ ಉತ್ಪಾದನೆಗೆ ಹೆಚ್ಚಿನ ಮಟ್ಟದಲ್ಲಿ ಪೂರೈಕೆಯಾಗುತ್ತಿದೆ.

ಹೀಗಾಗಿ ಎಲೆಕ್ಟ್ರಾನಿಕ್ ಚಿಪ್ ಪೂರೈಕೆಯಲ್ಲಿ ಆಗುತ್ತಿರುವ ವಿಳಂಬವು ವಿಶ್ವಾದ್ಯಂತ ಪ್ರಮುಖ ಕಾರು ಕಂಪನಿಗಳಿಗೆ ಹೊಡೆತ ನೀಡುತ್ತಿದ್ದು, ಭಾರತದಲ್ಲೂ ದಿನಂಪ್ರತಿ ಸಾವಿರಾರು ಕಾರುಗಳನ್ನು ಉತ್ಪಾದಿಸುವ ಪ್ರಮುಖ ಕಂಪನಿಗಳ ಕಾರುಗಳ ಉತ್ಪಾದನೆಗೆ ಸಾಕಷ್ಟು ಹೊಡೆತ ನೀಡಿದೆ.