Just In
Don't Miss!
- News
ಪಲ್ಲವಿ ಡೇ ಬಳಿಕ ಮತ್ತೊಬ್ಬ ಯುವ ರೂಪದರ್ಶಿ ಆತ್ಮಹತ್ಯೆ
- Sports
ಮಹಿಳಾ ಟಿ20 ಚಾಲೆಂಜ್: ವೆಲಾಸಿಟಿ ವಿರುದ್ಧ ಗೆದ್ದ ಟ್ರೈಲ್ಬ್ಲೇಜರ್ಸ್, ಆದ್ರೂ ಫೈನಲ್ ಮಿಸ್
- Finance
ಮೇ 26ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
ಬಾಲಕೃಷ್ಣ 107ನೇ ಸಿನಿಮಾದ ಟೈಟಲ್ 'ಜೈ ಬಾಲಯ್ಯ'
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಬಿಡುಗಡೆ! ವಿಶೇಷತೆ ಏನು?
- Lifestyle
ಕಿಚನ್ ಟಿಪ್ಸ್: ಫ್ರಿಡ್ಜ್ನಲ್ಲಿ ಆಹಾರಗಳನ್ನು ಹೀಗೆ ಇಟ್ಟರೆ ಆರೋಗ್ಯಕ್ಕೆ ಕುತ್ತು ಎಚ್ಚರ..!
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಿಶೇಷ ಸೌಲಭ್ಯಗಳನ್ನು ಒಳಗೊಂಡ ಟ್ರೈಬರ್ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದ ರೆನಾಲ್ಟ್
ರೆನಾಲ್ಟ್ ಇಂಡಿಯಾ(Renault India) ಕಂಪನಿಯು ತನ್ನ ಜನಪ್ರಿಯ ಮಿನಿ ಎಂಪಿವಿ ಮಾದರಿಯಾದ ಟ್ರೈಬರ್ ಮಾದರಿಯಲ್ಲಿ ಸೀಮಿತ ಅವಧಿಗಾಗಿ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದ್ದು, ಹೊಸ ಕಾರು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹಲವು ಹೊಸ ಫೀಚರ್ಸ್ ಹೊಂದಿದೆ.

ಟ್ರೈಬರ್ ಮಿನಿ ಎಂಪಿವಿ ಮೂಲಕ ಭಾರತದಲ್ಲಿ ಹೊಸ ದಾಖಲೆ ನಿರ್ಮಿಸಿರುವ ರೆನಾಲ್ಟ್ ಕಂಪನಿಯು 1 ಲಕ್ಷ ಯುನಿಟ್ ಮಾರಾಟ ಗುರಿ ತಲುಪಿದ್ದು, ಹೊಸ ಕಾರಿನ ಮಾರಾಟ ದಾಖಲೆಯ ಸಂಭ್ರಮಕ್ಕಾಗಿ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದೆ. ಲಿಮಿಟೆಡ್ ಎಡಿಷನ್ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 7.24 ಲಕ್ಷ ಆರಂಭಿಕ ಬೆಲೆ ಹೊಂದಿದ್ದು, ಸ್ಟ್ಯಾಂಡರ್ಡ್ ಆರ್‌ಎಕ್ಸ್‌ಟಿ ಮಾದರಿಯನ್ನು ಆಧರಿಸಿದೆ.

ಹೊಸ ಸೀಮಿತ ಆವೃತ್ತಿಯಾದ ಟ್ರೈಬರ್ ಎಲ್ಇ ಆರ್‌ಎಕ್ಸ್‌ಟಿ ರೂಪಾಂತರವು ಮ್ಯಾನುವಲ್ ಮತ್ತು ಎಎಂಟಿ ಎರಡು ಮಾದರಿಗಳಲ್ಲೂ ಖರೀದಿಗೆ ಲಭ್ಯವಿದ್ದು, ಎರಡು ಮಾದರಿಗಳಲ್ಲೂ ಡ್ಯುಯಲ್-ಟೋನ್ ಬಣ್ಣ ಆಯ್ಕೆಗಳಿವೆ.

ಟ್ರೈಬರ್ ಎಲ್ಇ ಆರ್‌ಎಕ್ಸ್‌ಟಿ ರೂಪಾಂತರಗಳು ಮೂನ್‌ಲೈಟ್ ಸಿಲ್ವರ್/ಬ್ಲ್ಯಾಕ್ ರೂಫ್ ಮತ್ತು ಸೀಡರ್ ಬ್ರೌನ್/ಬ್ಲ್ಯಾಕ್ ರೂಫ್ ಆಯ್ಕೆ ಹೊಂದಿದ್ದು, 14 ಇಂಚಿನ ಮಿಶ್ರಲೋಹದ ಚಕ್ರಗಳನ್ನು ಜೋಡಿಸಲಾಗಿದೆ.

ಲಿಮಿಟೆಡ್ ಎಡಿಷನ್‌ನಲ್ಲಿ ರೆನಾಲ್ಟ್ ಕಂಪನಿಯು ಕೇವಲ ಹೊರಭಾಗದಲ್ಲಿ ಮಾತ್ರವಲ್ಲ ಒಳಾಂಗಣ ವಿನ್ಯಾಸದಲ್ಲೂ ಹೊಸ ಫೀಚರ್ಸ್‌ಗಳನ್ನು ನೀಡಿದ್ದು, ಅಕಾಝಾ ಫ್ಯಾಬ್ರಿಕ್ ಅಪ್ಹೋಲ್ಸ್ಟರಿ, ಕಪ್ಪು ಬಾಗಿಲಿನ ಹಿಡಿಕೆಗಳು, ಪಿಯಾನೋ ಬ್ಲ್ಯಾಕ್ ಫಿನಿಶ್ ಜೊತೆಗೆ ಡ್ಯುಯಲ್-ಟೋನ್ ಡ್ಯಾಶ್‌ಬೋರ್ಡ್ ಮತ್ತು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಪಡೆಯುತ್ತದೆ.

ಹೊಸ ಕಾರಿನ ವೈಶಿಷ್ಟ್ಯಗಳ ಕುರಿತು ಹೇಳುವುದಾದರೆ ಇದರಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್, ಡಿಆರ್‌ಎಲ್ ಲ್ಯಾಂಪ್‌ಗಳು, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಗೆ ಸರ್ಪೊಟ್ ಮಾಡುವ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಪುಶ್ ಸ್ಟಾರ್ಟ್/ಸ್ಟಾಪ್ ಬಟನ್ ಸೇರಿದಂತೆ ಹಲವು ಹೊಸ ಸೌಲಭ್ಯವಿವೆ.

ಇನ್ನು ಟ್ರೈಬರ್ ಮಿನಿ ಎಂಪಿವಿಯನ್ನು 2019ರ ಅಗಸ್ಟ್‌ನಲ್ಲಿ ಬಿಡುಗಡೆ ಮಾಡಿದ್ದ ರೆನಾಲ್ಟ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿದ್ದು, 2020ರಲ್ಲಿ ಆಟೋಮ್ಯಾಟಿಕ್ ರೂಪಾಂತರವನ್ನು ಪರಿಚಯಿಸಲಾಗಿತ್ತು.

2021ರಲ್ಲಿ ರೆನಾಲ್ಟ್ ಕಂಪನಿಯು ಹೊಸ ಕಾರಿನಲ್ಲಿ ಡ್ಯುಯಲ್ ಟೋನ್ ಬಣ್ಣ ಆಯ್ಕೆಗಳೊಂದಿಗೆ ನವೀಕರಿಸಿದ ನಂತರ ಕಾರಿನ ಬೇಡಿಕೆ ಮತ್ತಷ್ಟು ಹೆಚ್ಚಳವಾಗಿದ್ದು, ಟ್ರೈಬರ್ ಕಾರು ಕ್ವಿಡ್ ಜೊತೆ ಹಂಚಿಕೊಂಡ CMF-A+ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ.

ಬಜೆಟ್ ಬೆಲೆಯ ಎಂಪಿವಿ ಕಾರು ಮಾದರಿಯಲ್ಲೇ ವಿಶೇಷ ಸೌಲಭ್ಯಗಳೊಂದಿಗೆ ಗ್ರಾಹಕರ ಆಕರ್ಷಣೆಗೆ ಕಾರಣವಾಗಿರುವ ರೆನಾಲ್ಟ್ ಟ್ರೈಬರ್ ಕಾರು ಮಾದರಿಯ ಹೊಸ ಆವೃತ್ತಿಯೊಂದಿಗೆ ಮತ್ತಷ್ಟು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿನ ಗ್ರಾಹಕರ ಬೇಡಿಕೆಯೆಂತೆ ಕೆಲವು ಪ್ರಮುಖ ಬದಲಾವಣೆಗಳೊಂದಿಗೆ ಹೊಸ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.69 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8.25 ಲಕ್ಷ ಬೆಲೆ ಪಡೆದುಕೊಂಡಿದೆ.

ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‍ಎಕ್ಸ್‌ಟಿ, ಆರ್‌ಎಕ್ಸ್‌ಜೆಡ್ ಆವೃತ್ತಿಗಳನ್ನು ಹೊಂದಿರುವ ಹೊಸ ಕಾರು ಮೆಟಲ್ ಮಸ್ಟರ್ಟಡ್, ಎಲೆಕ್ಟ್ರಿಕ್ ಬ್ಲ್ಯೂ, ಮೂನ್‍ಲೈಟ್ ಸಿಲ್ವರ್, ಐಸ್ ಕೂಲ್ ವೈಟ್ ಮತ್ತು ಕೆಡರ್ ಬ್ರೌನ್ ಡ್ಯುಯಲ್ ಕಲರ್ ಆಯ್ಕೆಯೊಂದಿಗೆ ಆಕರ್ಷಕ ಲುಕ್ ಪಡೆದುಕೊಂಡಿದೆ.

ಹಾಗೆಯೇ ಹೊಸ ಕಾರಿನ ಹೊರಭಾಗದಲ್ಲಿ ರಿಯರ್ ವ್ಯೂ ಮಿರರ್ ಒಳಗೊಂಡ ಎಲ್ಇಡಿ ಟರ್ನ್ ಇಂಡಿಕೇಟರ್ ಮತ್ತು ಬ್ಲ್ಯಾಕ್ ಔಟ್ ಥೀಮ್ ನೀಡಿರುವುದು ಹೊಸ ಕಾರಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ನೀಡಲಾಗಿದ್ದು, ಕಾರಿನ ಒಳಭಾಗದಲ್ಲಿ ಈ ಬಾರಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಮಲ್ಟಿ ಫಂಕ್ಷನಲ್ ಸ್ಟೀರಿಂಗ್ ವೀಲ್ಹ್ ಜೊತೆಗೆ ಮೌಂಟೆಡ್ ಕಂಟ್ರೋಲ್ ಸೌಲಭ್ಯಗಳನ್ನು ನೀಡಲಾಗಿದೆ.

ಟ್ರೈಬರ್ ಮಿನಿ ಎಂಪಿವಿ ಕಾರಿನಲ್ಲಿ ಸದ್ಯ ನ್ಯಾಚುರಲಿ ಆಸ್ಪೆರೆಟೆಡ್ ಹೊಂದಿರುವ 1.0-ಲೀಟರ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಈ ಎಂಜಿನ್ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 71-ಬಿಎಚ್‌ಪಿ ಮತ್ತು 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಪ್ರತಿ ತಿಂಗಳು ಸರಾಸರಿಯಾಗಿ 3,500 ಯನಿಟ್‌ನಿಂದ 4 ಸಾವಿರ ಯುನಿಟ್ ಮಾರಾಟಗೊಳ್ಳುತ್ತಿರುವ ಹೊಸ ಕಾರು ನಗರಪ್ರದೇಶಗಳಿಂತಲೂ ಹೆಚ್ಚು ಗ್ರಾಮೀಣ ಭಾಗದ ಗ್ರಾಹಕರನ್ನು ಹೆಚ್ಚು ಸೆಳೆಯುತ್ತಿದ್ದು, ಟೈರ್ 2, ಟೈರ್ 3 ನಗರಗಳಲ್ಲಿ ತೆರೆಯಲಾದ ಹೊಸ ಕಾರು ಮಾರಾಟ ಸೌಲಭ್ಯವು ಉತ್ತಮ ಬೇಡಿಕೆ ತಂದುಕೊಡುತ್ತಿದೆ.