Just In
Don't Miss!
- News
ಜಾತಿ ನಿಂದನೆ ಪ್ರಕರಣ: ಬಸವರಾಜ ಹೊರಟ್ಟಿ ವಿರುದ್ಧ ತನಿಖಾ ವರದಿ ಸಲ್ಲಿಕೆ
- Sports
ಐರ್ಲೆಂಡ್ನ ಹ್ಯಾರಿ ಟೆಕ್ಟರ್ಗೆ ಬ್ಯಾಟ್ ಗಿಫ್ಟ್ ನೀಡಿದ ಹಾರ್ದಿಕ್ ಪಾಂಡ್ಯ
- Movies
ಸಿಧು ಮೂಸೆವಾಲಾ ಹಾಡಿದ್ದ ಕೊನೆಯ ಹಾಡು ಬಿಡುಗಡೆ ಆದ ಮೂರೇ ದಿನಕ್ಕೆ ಡಿಲೀಟ್!
- Lifestyle
ನಿಮ್ಮಿಬ್ಬರ ಸಂಬಂಧ ಹೀಗಿದ್ದರೆ ಒಟ್ಟಿಗಿದ್ದು ಪಡುವ ನರಕಕ್ಕಿಂತ ಗುಡ್ಬೈ ಹೇಳುವುದೇ ಬೆಸ್ಟ್!
- Finance
ಜೂ.27ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Education
UAS Dharwad Recruitment 2022 : ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ಜು.2ಕ್ಕೆ ನೇರ ಸಂದರ್ಶನ
- Technology
‘ಫಾಸ್ಟ್ಯಾಗ್' ನಲ್ಲಿರುವ ಹಣವನ್ನು ಕದಿಯಬಹುದಾ? ವೈರಲ್ ವೀಡಿಯೊದ ಅಸಲಿಯತೆ ಏನು?
- Travel
ನಾಡ ಹಬ್ಬ ಮೈಸೂರು ದಸರಾ - ನವರಾತ್ರಿ ಉತ್ಸವ 2022
ಭಾರತದಲ್ಲಿ ಶೀಘ್ರವೇ ಬಿಡುಗಡೆಯಾಗಲಿವೆ ಸ್ಕೋಡಾ ಹೊಸ ಎಲೆಕ್ಟ್ರಿಕ್ ಕಾರುಗಳು
ಜೆಕ್ ಕಾರು ಉತ್ಪಾದನಾ ಕಂಪನಿಯಾಗಿರುವ ಸ್ಕೋಡಾ ಆಟೋ ತನ್ನ ಹೊಸ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ ಮೂಲಕ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಮುಂಬರುವ ಕೆಲವೇ ದಿನಗಳಲ್ಲಿ ಭಾರತದಲ್ಲೂ ಹೊಸ ಇವಿ ಕಾರು ಬಿಡುಗಡೆಗೆ ಸಿದ್ದವಾಗುತ್ತಿದೆ.

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ನಿರ್ಣಯದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ.

ಪ್ರಸಕ್ತ ವರ್ಷದಲ್ಲಿ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 8 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, 2022ರ ಅವಧಿಗೆ ಇದು ಇನ್ನಷ್ಟು ಹೆಚ್ಚಳವಾಗಿರಲಿದೆ. ಸ್ಕೋಡಾ ಕಂಪನಿಯು ಸಹ ತನ್ನ ಹೊಸ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯ ಮೂಲಕ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡಿದ್ದು, ಉತ್ಪಾದನಾ ಪ್ರಮಾಣವನ್ನು ಆಧರಿಸಿ ಪೂರೈಕೆ ತೀವ್ರಗೊಳಿಸಿದೆ.

2027 ವೇಳೆಗೆ ಕಂಪನಿಯು ಶೇ.30 ರಷ್ಟು ಕಾರುಗಳಲ್ಲಿ ಎಲೆಕ್ಟ್ರಿಕ್ ಮಾದರಿಗಳನ್ನು ಮಾರಾಟವನ್ನು ಹೊಂದಲು ಯೋಜನೆ ಹೊಂದಿರುವ ಸ್ಕೋಡಾ ಕಂಪನಿಗೆ ಎನ್ಯಾಕ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಇವಿ ಮಾದರಿಗಳನ್ನು ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ಬಿಡುಗಡೆ ಮಾಡಲು ಸಿದ್ದವಾಗುತ್ತಿದೆ.

ಭಾರತದಲ್ಲಿ ಸದ್ಯ ಫೋಕ್ಸ್‌ವ್ಯಾಗನ್ ಜೊತೆಗೂಡಿ ಸಹಭಾಗಿತ್ವ ಯೋಜನೆಯಡಿಯಲ್ಲಿ ಹೊಸ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿರುವ ಸ್ಕೋಡಾ ಕಂಪನಿಯು ಹಲವಾರು ಹೊಸ ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಪೆಟ್ರೋಲ್ ಕಾರುಗಳ ಜೊತೆಗೆ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲಿದೆ.

ಹೊಸ ಎಲೆಕ್ಟ್ರಿಕ್ ಕಾರುಗಳ ಪೈಕಿ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿಯು ಭಾರೀ ನೀರಿಕ್ಷೆ ಹುಟ್ಟುಹಾಕಿದ್ದು, ಇದು ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಮೈಲೇಜ್‌ನಲ್ಲೂ ಗಮನಸೆಳೆಯುತ್ತಿದೆ.

ಸ್ಕೋಡಾ ಕಂಪನಿಯು ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗಣವಾಗಿ ಯುರೋಪ್‌ನ ಪ್ರಮುಖ ಮಾರುಕಟ್ಟೆಗಳಲ್ಲಿ ಪರಿಚಯಿಸಲಾಗಿರುವ ಎನ್ಯಾಕ್(Enyaq) ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಬಹುದು ಎನ್ನಲಾಗಿದ್ದು, ಇನ್ನು ಕೆಲವು ಮಾಹಿತಿಗಳ ಪ್ರಕಾರ ಟಾಟಾ ನೆಕ್ಸಾನ್ ಮತ್ತು ಎಂಜಿ ಜೆಡ್ಎಸ್ ಇವಿ ಮಾದರಿಗಳಿಗೆ ಪೈಪೋಟಿಯಾಗಿ ರೂ. 25 ಲಕ್ಷ ಬೆಲೆ ಅಂತರದಲ್ಲಿ ಹೊಸ ಇವಿ ಕಾರು ಮಾದರಿಯನ್ನು ಬಿಡುಗಡೆ ಮಾಡಬಹುದು ಎನ್ನಲಾಗಿದೆ.

ಎನ್ಯಾಕ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಲು ತುಸು ದುಬಾರಿಯಾಗಿದ್ದು, ದುಬಾರಿ ಕಾರಿನ ಬದಲಾಗಿ ಕುಶಾಕ್ ಮಾದರಿಯನ್ನು ಆಧರಿಸಿ ಹೊಸ ಕಂಪ್ಯಾಕ್ಟ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಬಹುದಾಗಿದ್ದು, ಹೊಸ ಕಾರು ಬಿಡುಗಡೆ ಕುರಿತಂತೆ ಟ್ವಿಟರ್‌ನಲ್ಲಿ ಕಂಪನಿಯ ಸಿಇಒ ಜಾಕ್ ಹೊಲಿಸ್ ಮಾಹಿತಿ ಹಂಚಿಕೊಂಡಿದ್ದಾರೆ.

ಎನ್ಯಾಕ್ ಕಾರು ಬ್ಯಾಟರಿ ಸಾಮರ್ಥ್ಯ ಮತ್ತು ಐಷಾರಾಮಿ ಫೀಚರ್ಸ್‌ಗಳಿಗೆ ಅನುಗುಣವಾಗಿ ಭಾರತದಲ್ಲಿ ರೂ.35 ಲಕ್ಷದಿಂದ ರೂ. 40 ಲಕ್ಷ ಬೆಲೆ ಅಂತರ ಹೊಂದಿರಬಹುದಾಗಿದ್ದು, ಇದಕ್ಕಾಗಿ ಕಂಪನಿಯು ಎನ್ಯಾಕ್ ಬದಲಾಗಿ ಹೊಸ ಮಾದರಿಯನ್ನು ಬಿಡುಗಡೆ ಮಾಡಬಹುದಾಗಿದೆ.

ಹೀಗಾಗಿ ಎಲೆಕ್ಟ್ರಿಕ್ ಕಾರು ಬಿಡುಗಡೆಯ ಶೀಘ್ರದಲ್ಲಿಯೇ ಎನ್ನುವುದರ ಹೊರತಾಗಿ ಹೊಸ ಇವಿ ಕಾರಿನ ಕುರಿತು ಯಾವುದೇ ಮಾಹಿತಿ ಬಿಟ್ಟುಕೊಡದ ಜಾಕ್ ಹೊಲಿಸ್ ಸಿಎನ್‌ಜಿ ಕಾರುಗಳ ಬಿಡುಗಡೆ ಯೋಜನೆ ಕುರಿತಾದ ಪ್ರಶ್ನೆಗೂ ಉತ್ತರಿಸಿದ್ದು, ಸಿಎನ್‌ಜಿ ಪ್ಲ್ಯಾಟ್‌ಫಾರ್ಮ್, ತಂತ್ರಜ್ಞಾನ ಭಾರತದಲ್ಲಿ ಅದು ಹೊರೆಯಾಗಲಿದೆ ಎನ್ನುವ ಮೂಲಕ ಸಿಎನ್‌ಜಿ ಯೋಜನೆಯಿಲ್ಲ ಎಂದಿದ್ದಾರೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತಂತೆ ಈ ಹಿಂದೆಯೂ ಪ್ರಕ್ರಿಯಿಸಿದ್ದ ಸ್ಕೋಡಾ ಕಂಪನಿಯು ಚಾರ್ಜಿಂಗ್ ಮೂಲಭೂತ ಸೌಲಭ್ಯಗಳ ಬೆಳವಣಿಗೆಯ ಆಧಾರದ ಮೇಲೆ ಇವಿ ಕಾರುಗಳ ಪರಿಚಯಿಸುವುದಾಗಿ ಹೇಳಿಕೊಂಡಿತ್ತು.

ಭಾರತದಲ್ಲಿ ಸದ್ಯ ಕೆಲವೇ ಕೆಲವು ನಗರಗಳಲ್ಲಿ ಸಾರ್ವಜನಿಕ ಬಳಕೆಯ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳ ಸೌಲಭ್ಯಗಳಿರುವುದು ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಯು ವಿಳಂಬವಾಗುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದ ಸ್ಕೋಡಾ ಕಂಪನಿಯು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಹೆಚ್ಚುತ್ತಿರುವ ಹಿನ್ನಲೆ ಮುಂಬರುವ ಕೆಲ ವರ್ಷಗಳಲ್ಲಿ ವಿವಿಧ ಇವಿ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆ ರೂಪಿಸಿದೆ.