2021ರ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Skoda

ಜನಪ್ರಿಯ ಕಾರು ತಯಾರಕ ಕಂಪನಿಯಾದ ಸ್ಕೋಡಾ ಆಟೋ ಇಂಡಿಯಾ 2021ರ ಡಿಸೆಂಬರ್ ತಿಂಗಳ ಮಾಸಿಕ ಮಾರಾಟ ಮತ್ತು 2021ರ ವಾರ್ಷಿಕ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ವರದಿ ಪ್ರಕಾರ, ಸ್ಕೋಡಾ ಕಂಪನಿಯು ಕಳೆದ ತಿಂಗಳಿನಲ್ಲಿ 3,234 ಯುನಿಟ್‌ಗಳನ್ನು ಮಾರಾಟ ಮಾಡಿದೆ.

2021ರ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Skoda

2021ರ ನವೆಂಬರ್ ತಿಂಗಳಿನಲ್ಲಿ ಸ್ಕೋಡಾ ಕಂಪನಿಯು 2,196 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.47 ಕ್ಕಿಂತ ಹೆಚ್ಚಿನ ಬೆಳವಣಿಗೆಯನ್ನು ಕಂಡಿದೆ. 2020ರ ಡಿಸೆಂಬರ್ ತಿಂಗಳಿನಲ್ಲಿ 1,303 ಯುನಿಟ್‌ಗಳನ್ನು ಮಾರಾಟಗೊಳಿಸಿದ್ದಾರೆ. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಮಾಸಿಕ ಮಾರಾಟದ ಪ್ರಮಾಣದಲ್ಲಿ ವರ್ಷದಿಂದ ವರ್ಷಕ್ಕೆ 148 ಶೇಕಡಾ ಏರಿಕೆಯನ್ನು ಕಂಡಿದ್ದಾರೆ.

2021ರ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Skoda

2021ರ ವರ್ಷಕ್ಕೆ ಸಂಬಂಧಿಸಿದಂತೆ, ಸ್ಕೋಡಾದ ಒಟ್ಟು ಮಾರಾಟವು 23,858 ಯುನಿಟ್‌ಗಳಷ್ಟಿದೆ ಮತ್ತು 2020ರಲ್ಲಿ ಮಾರಾಟವಾದ 10,387 ಕಾರುಗಳಿಗೆ ಹೋಲಿಸಿದರೆ, ಕಂಪನಿಯು ವಾರ್ಷಿಕ ಮಾರಾಟದಲ್ಲಿ 130 ಶೇಕಡಾ ಬೆಳವಣಿಗೆಯನ್ನು ಕಂಡಿದೆ.

2021ರ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Skoda

ಸ್ಕೋಡಾ ಆಟೋ ಇಂಡಿಯಾದ ಬ್ರ್ಯಾಂಡ್ ಡೈರೆಕ್ಟರ್ ಜ್ಯಾಕ್ ಹೊಲಿಸ್ ಮಾತನಾಡಿ, ಸಾಂಕ್ರಾಮಿಕ ಮತ್ತು ಪೂರೈಕೆ ನಿರ್ಬಂಧಗಳ ರೂಪದಲ್ಲಿ ಉದ್ಯಮ ಮತ್ತು ಆರ್ಥಿಕತೆಯನ್ನು ದೊಡ್ಡ ಪ್ರಮಾಣದ ಸವಾಲಿನ ಹೊರತಾಗಿಯೂ, ನಮ್ಮ ವಾರ್ಷಿಕ ಮಾರಾಟದ ಸಂಪುಟಗಳಲ್ಲಿ ನಾವು ಮೂರು-ಅಂಕಿಯ ಬೆಳವಣಿಗೆಯನ್ನು ಸಾಧಿಸಿದ್ದೇವೆ.

2021ರ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Skoda

ನಮ್ಮ ಉತ್ಪನ್ನ ಪ್ರಚಾರಗಳು, ನಾವು ಗ್ರಾಹಕರ ಕೇಂದ್ರಿತತೆಯ ಮೇಲೆ ನಮ್ಮ ತೀಕ್ಷ್ಣವಾದ ಗಮನವನ್ನು ಉಳಿಸಿಕೊಂಡಿದ್ದೇವೆ, ನಮ್ಮ ಗ್ರಾಹಕರ ಟಚ್‌ಪಾಯಿಂಟ್‌ಗಳನ್ನು ದೇಶಾದ್ಯಂತ ವಿಸ್ತರಿಸಿದ್ದೇವೆ. ನಾವು ಇತ್ತೀಚೆಗೆ ಸ್ಲಾವಿಯಾವನ್ನು ಸಹ ಅನಾವರಣಗೊಳಿಸಿದ್ದೇವೆ ಮತ್ತು ಪ್ರೀಮಿಯಂ ಮಿಡ್ ಸೈಡ್ ಸೆಡಾನ್ ಸ್ಕೋಡಾದ ಮಾರಾಟದ ಬೆಳವಣಿಗೆಯನ್ನು ಇನ್ನಷ್ಟು ವೇಗಗೊಳಿಸುತ್ತದೆ ಎಂದು ಹೇಳಿದ್ದಾರೆ.

2021ರ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Skoda

ಮಾರಾಟಕ್ಕೆ ಪ್ರಮುಖ ಕೊಡುಗೆ ನೀಡಿದೆ. ಜೆಕ್ ಕಾರು ತಯಾರಕರು ಹೇಳುವಂತೆ ಕುಶಾಕ್ ಕಂಪನಿಯ ವರ್ಷದ ಒಟ್ಟಾರೆ ಮಾರಾಟದ ಪ್ರಮಾಣಗಳಲ್ಲಿ 60 ಪ್ರತಿಶತಕ್ಕೂ ಹೆಚ್ಚು ಕೊಡುಗೆ ನೀಡಿದೆ. ಸ್ಕೋಡಾ ಕುಶಾಕ್ ಅನ್ನು ಜೂನ್ 2021 ರಲ್ಲಿ ಬಿಡುಗಡೆ ಮಾಡಲಾಯಿತು ಮತ್ತು ಕಂಪನಿಯು ಭಾರತದಲ್ಲಿ 11,173 ಯುನಿಟ್‌ಗಳನ್ನು ಮಾರಾಟ ಮಾಡಿದೆ.

2021ರ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Skoda

ಈ ಕುಶಾಕ್ ಅನ್ನು ಎರಡು ಟರ್ಬೊ ಪೆಟ್ರೋಲ್ ಆಯ್ಕೆಗಳಲ್ಲಿ ನೀಡಲಾಗುತ್ತದೆ. ಮೊದಲನೆಯದು 1.0-ಲೀಟರ್ 4-ಸಿಲಿಂಡರ್ ಟರ್ಬೊ-ಪೆಟ್ರೋಲ್ ಮೋಟರ್ ಎಂಜಿನ್ ಆಗಿದೆ, ಈ ಎಂಜಿನ್ 108 ಬಿಎಚ್‌ಪಿ ಪವರ್ ಮತ್ತು 175 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಎಂಟಿ ಮತ್ತು 6-ಸ್ಪೀಡ್ ಎಟಿಗೆ ಜೋಡಿಸಲಾಗಿದೆ.

2021ರ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Skoda

ಇನ್ನು 1.5-ಲೀಟರ್ 4-ಸಿಲಿಂಡರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಹೊಂದಿದ್ದು, ಈ ಎಂಜಿನ್ 148 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ, ಈ ಎಂಜಿನ್ ಅನ್ನು 6-ಸ್ಪೀಡ್ ಎಂಟಿ ಮತ್ತು 7-ಸ್ಪೀಡ್ ಡಿಎಸ್ಜಿ ಗೇರ್ ಬಾಕ್ಸ್ ಅನ್ನು ಆಯ್ಜಯಾಗಿ ನೀಡಲಾಗಿದೆ,

2021ರ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Skoda

ಸ್ಕೋಡಾ ಕುಶಾಕ್ ಕೈಗೆಟುಕುವ ದರದ ಎಸ್‍ಯುವಿಯಾಗಿದೆ. ಇದರ ಟರ್ಬೊ-ಪೆಟ್ರೋಲ್ ಎಂಜಿನ್ ಮೋಜಿನ್ ಡ್ರೈವಿಂಗ್ ಅನುಭವವನ್ನು ಪಡೆಯಬಹುದು. ಇದರಲ್ಲಿ ಉತ್ತಮ ಪ್ರಮಾಣದ ಟಾರ್ಕ್ ಕೂಡ ಇದೆ. ಉತ್ತಮ ಪವರ್ ಅಂಕಿಅಂಶಗಳ ಹೊರತಾಗಿಯೂ, ಅದರ ಸಕ್ರಿಯ ಸಿಲಿಂಡರ್ ತಂತ್ರಜ್ಞಾನದ ಕಾರಣದಿಂದಾಗಿ ಯೋಗ್ಯ ಮೈಲೇಜ್ ಅನ್ನು ಒದಗಿಸುತ್ತದೆ.

2021ರ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Skoda

ಇನ್ನು ಸ್ಕೋಡಾ ಕಂಪನಿಯು ತನ್ನ ಹೊಸ ಸ್ಲಾವಿಯಾ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಸ್ಕೋಡಾ ಸ್ಲಾವಿಯಾ(Skoda Slavia) ಮಿಡ್-ಸೈಜ್ ಸೆಡಾನ್ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ.

2021ರ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Skoda

ಕುಶಾಕ್ ಕಾಂಪ್ಯಾಕ್ಟ್ ಎಸ್‍ಯುವಿಗೆ ಇದೇ ಪ್ಲಾಟ್‌ಫಾರ್ಮ್ ಆಧಾರವಾಗಿದೆ. ಹೊಸ ಸ್ಕೋಡಾ ಸ್ಲಾವಿಯಾ ಕಾರು ಜೆಕ್ ಬ್ರ್ಯಾಂಡ್‌ನ ಇತ್ತೀಚಿನ ವಿನ್ಯಾಸ ಶೈಲಿಯನ್ನು ಅನುಸರಿಸುತ್ತದೆ ಮತ್ತು ಇದನ್ನು MQB A0-IN ಪ್ಲಾಟ್‌ಫಾರ್ಮ್‌ನಲ್ಲಿ ನಿರ್ಮಿಸಲಾಗುವುದು, ಈ ಪ್ಲಾಟ್‌ಫಾರ್ಮ್ ವಿವಿಧ ಬಾಡಿಯ ಶೈಲಿಗಳು ಮತ್ತು ಎಂಜಿನ್ ಆಯ್ಕೆಗಳನ್ನು ಸರಿಹೊಂದಿಸಲು ಸಾಕಷ್ಟು ಬಹುಮುಖವಾಗಿದೆ. ಈ ಹೊಸ ಸ್ಕೋಡಾ ಸ್ಲಾವಿಯಾ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದ ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ. ಇನ್ನು ಈ ಹೊಸ ಕಾರಿನ ವಿತರಣೆಯು ಮುಂದಿನ ವರ್ಷದ ಏಪ್ರಿಲ್ ತಿಂಗಳಲ್ಲಿ ಪ್ರಾರಂಭವಾಗುತ್ತದೆ.

2021ರ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Skoda

ಇನ್ನು ಸ್ಕೋಡಾ ತನ್ನ ಬಹುನಿರೀಕ್ಷಿತ 2022ರ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಬಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಸ್ಕೋಡಾ ಕೊಡಿಯಾಕ್ ಎಸ್‍ಯುವಿಯು ಪ್ರಮುಖ ಬದಲಾವಣೆಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ. 2022ರ ಸ್ಕೋಡಾ ಕೊಡಿಯಾಕ್ ಎಸ್‍ಯುವಿಯು 2022ರ ಜನವರಿ 10 ರಂದು ಬಿಡುಗಡೆಯಾಗಲಿದೆ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತದಲ್ಲಿ ಸಂಪೂರ್ಣವಾಗಿ ನಾಕ್ಡ್ ಡೌನ್ (CKD) ಘಟಕವಾಗಿ ನೀಡಲಾಗುವುದು.

2021ರ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Skoda

ಸ್ಕೋಡಾ ಆಟೋ ತನ್ನ ಹೊಸ ಕೊಡಿಯಾಕ್ ಎಸ್‍ಯುವಿಯ ಉತ್ಪಾದನೆಯನ್ನು ಫೋಕ್ಸ್‌ವ್ಯಾಗನ್ ಇಂಡಿಯಾದ ಮಹಾರಾಷ್ಟ್ರದ ಔರಂಗಾಬಾದ್ ಮೂಲದ ಘಟಕದಲ್ಲಿ ಜೋಡಿಸಲಾಗುತ್ತಿದೆರಿನ. ಬಿಎಸ್ 6 ಆವೃತ್ತಿಯು ಟರ್ಬೊ ಪೆಟ್ರೋಲ್ ಎಂಜಿನ್‌ನೊಂದಿಗೆ ಸ್ಟ್ಯಾಂಡರ್ಡ್ ಆಗಿ ಬರುತ್ತಿದೆ. ಇನ್ನು ಈ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯು ಮಾದರಿಯು ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಎಸ್‌ಯುವಿಗಳಲ್ಲಿ ಕೂಡ ಒಂದಾಗಿದೆ.

Most Read Articles

Kannada
Read more on ಸ್ಕೋಡಾ skoda
English summary
Skoda car sales reports triple digit growth in 2021 details
Story first published: Sunday, January 2, 2022, 13:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X