ಯುರೋಪ್ ಮಾರುಕಟ್ಟೆಗಳಲ್ಲಿ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿಗೆ ಭರ್ಜರಿ ಬೇಡಿಕೆ

ಜೆಕ್ ಕಾರು ಉತ್ಪಾದನಾ ಕಂಪನಿಯಾಗಿರುವ ಸ್ಕೋಡಾ ತನ್ನ ಹೊಸ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ ಮೂಲಕ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಮುಂಬರುವ ಕೆಲವೇ ತಿಂಗಳುಗಳಲ್ಲಿ ಭಾರತದಲ್ಲೂ ಬಿಡುಗಡೆಗೆ ಸಿದ್ದವಾಗುತ್ತಿದೆ.

ಯುರೋಪ್ ಮಾರುಕಟ್ಟೆಗಳಲ್ಲಿ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿಗೆ ಭರ್ಜರಿ ಬೇಡಿಕೆ

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸಲಾಗುತ್ತಿದೆ.

ಯುರೋಪ್ ಮಾರುಕಟ್ಟೆಗಳಲ್ಲಿ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿಗೆ ಭರ್ಜರಿ ಬೇಡಿಕೆ

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ನಿರ್ಣಯದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ.

ಯುರೋಪ್ ಮಾರುಕಟ್ಟೆಗಳಲ್ಲಿ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿಗೆ ಭರ್ಜರಿ ಬೇಡಿಕೆ

ಪ್ರಸಕ್ತ ವರ್ಷದಲ್ಲಿ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 8 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, 2022ರ ಅವಧಿಗೆ ಇದು ಇನ್ನಷ್ಟು ಹೆಚ್ಚಳವಾಗಿರಲಿದೆ.

ಯುರೋಪ್ ಮಾರುಕಟ್ಟೆಗಳಲ್ಲಿ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿಗೆ ಭರ್ಜರಿ ಬೇಡಿಕೆ

ಸ್ಕೋಡಾ ಕಂಪನಿಯು ಸಹ ತನ್ನ ಹೊಸ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯ ಮೂಲಕ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಕಳೆದ ವರ್ಷ 40 ಸಾವಿರ ಯುನಿಟ್‌ಗಳಿಗೆ ಬೇಡಿಕೆ ಪಡೆದುಕೊಂಡಿದ್ದು, ಉತ್ಪಾದನೆಯನ್ನು ಆಧರಿಸಿ ಪೂರೈಕೆ ತೀವ್ರಗೊಳಿಸಿದೆ.

ಯುರೋಪ್ ಮಾರುಕಟ್ಟೆಗಳಲ್ಲಿ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿಗೆ ಭರ್ಜರಿ ಬೇಡಿಕೆ

2025 ವೇಳೆಗೆ ಶೇ.30 ರಷ್ಟು ಕಾರುಗಳಲ್ಲಿ ಎಲೆಕ್ಟ್ರಿಕ್ ಮಾದರಿಗಳ ಮಾರಾಟವನ್ನು ಹೊಂದಲು ಯೋಜನೆ ಹೊಂದಿರುವ ಸ್ಕೋಡಾ ಕಂಪನಿಗೆ ಎನ್ಯಾಕ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಇವಿ ಮಾದರಿಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದೆ.

ಯುರೋಪ್ ಮಾರುಕಟ್ಟೆಗಳಲ್ಲಿ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿಗೆ ಭರ್ಜರಿ ಬೇಡಿಕೆ

ಭಾರತದಲ್ಲಿ ಸದ್ಯ ಫೋಕ್ಸ್‌ವ್ಯಾಗನ್ ಜೊತೆಗೂಡಿ ಸಹಭಾಗಿತ್ವ ಯೋಜನೆಯಡಿಯಲ್ಲಿ ಹೊಸ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿರುವ ಸ್ಕೋಡಾ ಕಂಪನಿಯು ಹಲವಾರು ಹೊಸ ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಪೆಟ್ರೋಲ್ ಕಾರುಗಳ ಜೊತೆಗೆ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲಿದೆ.

ಯುರೋಪ್ ಮಾರುಕಟ್ಟೆಗಳಲ್ಲಿ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿಗೆ ಭರ್ಜರಿ ಬೇಡಿಕೆ

ಹೊಸ ಎಲೆಕ್ಟ್ರಿಕ್ ಕಾರುಗಳ ಪೈಕಿ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿಯು ಭಾರೀ ನೀರಿಕ್ಷೆ ಹುಟ್ಟುಹಾಕಿದ್ದು, ಹೊಸ ಕಾರು ಬಿಡುಗಡೆಗೂ ಎನ್ಯಾಕ್ ಕಾರಿನ ಟೀಸರ್ ಬಿಡುಗಡೆ ಮಾಡಿದೆ. ಜನವರಿ 31ರಂದು ಹೊಸ ಕಾರಿನ ಉತ್ಪಾದನಾ ಮಾದರಿಯು ಅನಾವರಣಗೊಳ್ಳಲಿದ್ದು, ಹೊಸ ಕಾರು ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಯುರೋಪ್ ಮಾರುಕಟ್ಟೆಗಳಲ್ಲಿ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿಗೆ ಭರ್ಜರಿ ಬೇಡಿಕೆ

ಸ್ಕೋಡಾ ಕಂಪನಿಯು ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗಣವಾಗಿ ಯುರೋಪ್‌ನ ಪ್ರಮುಖ ಮಾರುಕಟ್ಟೆಗಳಲ್ಲಿ ಪರಿಚಯಿಸಲಾಗಿರುವ ಎನ್ಯಾಕ್(Enyaq) ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಇದು ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಮೈಲೇಜ್‌ನಲ್ಲೂ ಗಮನಸೆಳೆಯುತ್ತಿದೆ.

ಯುರೋಪ್ ಮಾರುಕಟ್ಟೆಗಳಲ್ಲಿ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿಗೆ ಭರ್ಜರಿ ಬೇಡಿಕೆ

ಹೊಸ ಎಲೆಕ್ಟ್ರಿಕ್ ಕಾರು ಪ್ರತಿ ಚಾರ್ಜ್‌ಗೆ ಆರಂಭಿಕ ಆವೃತ್ತಿಯು 389ಕಿ.ಮೀ, ಮಧ್ಯಮ ಕ್ರಮಾಂಕದ ಕಾರು ಮಾದರಿಯು 509 ಕಿ.ಮೀ ಮತ್ತು ಟಾಪ್ ಎಂಡ್ ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 459ಕಿ.ಮೀ ಮೈಲೇಜ್ ರೇಂಜ್‌ನೊಂದಿಗೆ ಮೊದಲೆರಡು ಮಾದರಿಗಿಂತಲೂ ಉತ್ತಮ ಪರ್ಫಾಮೆನ್ಸ್ ಹೊಂದಿದೆ.

ಯುರೋಪ್ ಮಾರುಕಟ್ಟೆಗಳಲ್ಲಿ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿಗೆ ಭರ್ಜರಿ ಬೇಡಿಕೆ

ಹೊಸ ಕಾರಿನಲ್ಲಿ ಟಾಪ್ ಸ್ಪೀಡ್ ಅನ್ನು ಪ್ರತಿ ಗಂಟೆಗೆ 179ಕಿ.ಮೀ ಸಿಮಿತಗೊಳಿಸಲಾಗಿದ್ದು, ಫಾಸ್ಟ್ ಚಾರ್ಜಿಂಗ್ ಸೌಲಭ್ಯದ ಮೂಲಕ ಕೇವಲ 38 ನಿಮಿಷಗಳಲ್ಲಿ ಶೇ.80 ರಷ್ಟು ಚಾರ್ಜಿಂಗ್ ಪಡೆದುಕೊಳ್ಳಬಹುದಾಗಿದೆ.

ಯುರೋಪ್ ಮಾರುಕಟ್ಟೆಗಳಲ್ಲಿ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿಗೆ ಭರ್ಜರಿ ಬೇಡಿಕೆ

ಎನ್ಯಾಕ್ ಕಾರು ಬ್ಯಾಟರಿ ಸಾಮರ್ಥ್ಯ ಮತ್ತು ಐಷಾರಾಮಿ ಫೀಚರ್ಸ್‌ಗಳಿಗೆ ಅನುಗುಣವಾಗಿ ಹೊಸ ಕಾರು ಆರಂಭಿಕವಾಗಿ ಭಾರತೀಯ ಮಾರುಕಟ್ಟೆಯಲ್ಲಿ ರೂ.35 ಲಕ್ಷದಿಂದ ರೂ. 40 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದ್ದು, ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ತೀವ್ರ ಸ್ಪರ್ಧೆ ಹೊಂದಿರುವ ಫೋಕ್ಸ್‌ವ್ಯಾಗನ್ ಐಡಿ 4 ಮಾದರಿಗೆ ಸಮನಾಗಿ ಹೊಸ ಕಾರು ಗ್ರಾಹಕರನ್ನು ಸೆಳೆಯಲಿದೆ.

ಯುರೋಪ್ ಮಾರುಕಟ್ಟೆಗಳಲ್ಲಿ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿಗೆ ಭರ್ಜರಿ ಬೇಡಿಕೆ

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತಂತೆ ಈ ಹಿಂದೆಯೂ ಪ್ರಕ್ರಿಯಿಸಿದ್ದ ಸ್ಕೋಡಾ ಕಂಪನಿಯು ಚಾರ್ಜಿಂಗ್ ಮೂಲಭೂತ ಸೌಲಭ್ಯಗಳ ಬೆಳವಣಿಗೆಯ ಆಧಾರದ ಮೇಲೆ ಇವಿ ಕಾರುಗಳ ಪರಿಚಯಿಸುವುದಾಗಿ ಹೇಳಿಕೊಂಡಿತ್ತು.

ಯುರೋಪ್ ಮಾರುಕಟ್ಟೆಗಳಲ್ಲಿ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿಗೆ ಭರ್ಜರಿ ಬೇಡಿಕೆ

ಭಾರತದಲ್ಲಿ ಸದ್ಯ ಕೆಲವೇ ಕೆಲವು ನಗರಗಳಲ್ಲಿ ಸಾರ್ವಜನಿಕ ಬಳಕೆಯ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳ ಸೌಲಭ್ಯಗಳಿರುವುದು ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಯು ವಿಳಂಬವಾಗುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದ ಸ್ಕೋಡಾ ಕಂಪನಿಯು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಹೆಚ್ಚುತ್ತಿರುವ ಹಿನ್ನಲೆ ಮುಂಬರುವ ಕೆಲ ವರ್ಷಗಳಲ್ಲಿ ವಿವಿಧ ಇವಿ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆ ರೂಪಿಸಿದೆ.

Most Read Articles

Kannada
Read more on ಸ್ಕೋಡಾ skoda
English summary
Skoda enyaq iv ev getting huge demand in europe details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X