ಬಿಡುಗಡೆಗೂ ಮುನ್ನ ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟ್ ನಡೆಸಿದ ಸ್ಕೋಡಾ ಎನ್ಯಾಕ್ ಇವಿ ಕಾರು

ಜೆಕ್ ಕಾರು ಉತ್ಪಾದನಾ ಕಂಪನಿಯಾಗಿರುವ ಸ್ಕೋಡಾ ಆಟೋ ತನ್ನ ಹೊಸ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ ಮೂಲಕ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

Recommended Video

Skoda Slavia Kannada Review | 1.5 L Turbo-Petrol Engine | Performance, Automatic, Comfort, Handling

ಕಂಪನಿಯು ಮುಂಬರುವ ಕೆಲವೇ ದಿನಗಳಲ್ಲಿ ಭಾರತ ಸೇರಿದಂತೆ ಪ್ರಮುಖ ರಾಷ್ಟ್ರಗಳಲ್ಲಿ ಹೊಸ ಇವಿ ಕಾರುಗಳ ಮಾರಾಟವನ್ನು ವಿಸ್ತರಿಸುತ್ತಿದ್ದು, ಎನ್ಯಾಕ್ iV ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಚಾಲನೆ ನೀಡಿದೆ.

ಬಿಡುಗಡೆಗೂ ಮುನ್ನ ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟ್ ನಡೆಸಿದ ಸ್ಕೋಡಾ ಎನ್ಯಾಕ್ ಇವಿ ಕಾರು

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಇಂಧನ ಚಾಲಿತ ವಾಹನಗಳ ಮಾರಾಟವನ್ನು ತಗ್ಗಿಸಲು ಪರಿಣಾಮಕಾರಿಯಾದ ನಿರ್ಣಯ ಕೈಗೊಳ್ತುತ್ತಿದ್ದು, ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯು ಹೆಚ್ಚಿಸುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಬಿಡುಗಡೆಗೂ ಮುನ್ನ ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟ್ ನಡೆಸಿದ ಸ್ಕೋಡಾ ಎನ್ಯಾಕ್ ಇವಿ ಕಾರು

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ಕಠಿಣ ನಿರ್ಣಯಗಳಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸಾಕಷ್ಟು ಬೆಳವಣಿಗೆ ಸಹ ಕಂಡುಬಂದಿದೆ.

ಬಿಡುಗಡೆಗೂ ಮುನ್ನ ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟ್ ನಡೆಸಿದ ಸ್ಕೋಡಾ ಎನ್ಯಾಕ್ ಇವಿ ಕಾರು

ಕಳೆದ ವರ್ಷ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 8 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, 2022ರ ಅವಧಿಗೆ ಇದು ಇನ್ನಷ್ಟು ಹೆಚ್ಚಳವಾಗಿರಲಿದೆ. ಹೀಗಾಗಿ ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಂಪನಿಯಗಳು ಹೊಸ ಇವಿ ಮಾದರಿಗಳನ್ನು ಬಿಡುಗಡೆ ಮಾಡುತ್ತಿವೆ.

ಬಿಡುಗಡೆಗೂ ಮುನ್ನ ಭಾರತ ದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟ್ ನಡೆಸಿದ ಸ್ಕೋಡಾ ಎನ್ಯಾಕ್ ಇವಿ ಕಾರು

ಸ್ಕೋಡಾ ಆಟೋ ಕಂಪನಿಯು ಸಹ ತನ್ನ ಹೊಸ ಎನ್ಯಾಕ್ iV ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಭಾರತದಲ್ಲೂ ಬಿಡುಗಡೆಗಾಗಿ ಸಿದ್ದವಾಗುತ್ತಿದೆ.

ಬಿಡುಗಡೆಗೂ ಮುನ್ನ ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟ್ ನಡೆಸಿದ ಸ್ಕೋಡಾ ಎನ್ಯಾಕ್ ಇವಿ ಕಾರು

ಭಾರತದಲ್ಲಿ ಇತ್ತೀಚೆಗೆ ಮಧ್ಯಮ ಕ್ರಮಾಂಕದ ಎಸ್‌ಯುವಿಗಳು ವಿಭಾಗದಲ್ಲಿ ಮಾರುಕಟ್ಟೆಯನ್ನು ಪ್ರವೇಶಿಸಿರುವ ಪ್ರಮುಖ ಇವಿ ಕಾರುಗಳ ಹಿನ್ನಲೆಯಲ್ಲಿ ಸ್ಕೋಡಾ ಕಂಪನಿಯು ಹೊಸ ಇವಿ ಮಾದರಿಯ ಬಿಡಗಡೆಗಾಗಿ ಯೋಜನೆ ರೂಪಿಸಿದೆ. 2027 ವೇಳೆಗೆ ಕಂಪನಿಯು ಶೇ.30 ರಷ್ಟು ಕಾರುಗಳಲ್ಲಿ ಎಲೆಕ್ಟ್ರಿಕ್ ಮಾದರಿಗಳನ್ನು ಮಾರಾಟ ಮಾಡುವ ಗುರಿಹೊಂದಿದೆ.

ಬಿಡುಗಡೆಗೂ ಮುನ್ನ ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟ್ ನಡೆಸಿದ ಸ್ಕೋಡಾ ಎನ್ಯಾಕ್ ಇವಿ ಕಾರು

ಸ್ಕೋಡಾ ಕಂಪನಿಗೆ ಎನ್ಯಾಕ್ iV ಎಸ್‌ಯುವಿ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುವ ನೀರಿಕ್ಷೆಯಿದ್ದು, ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಇವಿ ಮಾದರಿಗಳನ್ನು ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ಬಿಡುಗಡೆ ಮಾಡಲು ಸಿದ್ದವಾಗುತ್ತಿದೆ.

ಬಿಡುಗಡೆಗೂ ಮುನ್ನ ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟ್ ನಡೆಸಿದ ಸ್ಕೋಡಾ ಎನ್ಯಾಕ್ ಇವಿ ಕಾರು

ಭಾರತದಲ್ಲಿ ಸದ್ಯ ಫೋಕ್ಸ್‌ವ್ಯಾಗನ್ ಜೊತೆಗೂಡಿ ಸಹಭಾಗಿತ್ವ ಯೋಜನೆಯಡಿಯಲ್ಲಿ ಹೊಸ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿರುವ ಸ್ಕೋಡಾ ಕಂಪನಿಯು ಹಲವಾರು ಹೊಸ ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಪೆಟ್ರೋಲ್ ಕಾರುಗಳ ಜೊತೆಗೆ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲಿದೆ.

ಬಿಡುಗಡೆಗೂ ಮುನ್ನ ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟ್ ನಡೆಸಿದ ಸ್ಕೋಡಾ ಎನ್ಯಾಕ್ ಇವಿ ಕಾರು

ಹೊಸ ಎಲೆಕ್ಟ್ರಿಕ್ ಕಾರುಗಳ ಪೈಕಿ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿಯು ಭಾರೀ ನೀರಿಕ್ಷೆ ಹುಟ್ಟುಹಾಕಿದ್ದು, ಇದು ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಮೈಲೇಜ್‌ನಲ್ಲೂ ಗಮನಸೆಳೆಯುತ್ತಿದೆ.

ಬಿಡುಗಡೆಗೂ ಮುನ್ನ ಭಾರತ ದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟ್ ನಡೆಸಿದ ಸ್ಕೋಡಾ ಎನ್ಯಾಕ್ ಇವಿ ಕಾರು

ಸ್ಕೋಡಾ ಕಂಪನಿಯು ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗಣವಾಗಿ ಯುರೋಪ್‌ನ ಪ್ರಮುಖ ಮಾರುಕಟ್ಟೆಗಳಲ್ಲಿ ಪರಿಚಯಿಸಲಾಗಿರುವ ಎನ್ಯಾಕ್ iV(Enyaq iV) ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಬಹುದು ಎನ್ನಲಾಗಿದ್ದು, ಹೊಸ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 35 ಲಕ್ಷದಿಂದ ರೂ. 40 ಲಕ್ಷ ಬೆಲೆ ಅಂತರದಲ್ಲಿ ಹೊಸ ಇವಿ ಕಾರು ಮಾದರಿಯನ್ನು ಬಿಡುಗಡೆ ಮಾಡಬಹುದು ಎನ್ನಲಾಗಿದೆ.

ಬಿಡುಗಡೆಗೂ ಮುನ್ನ ಭಾರತದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟ್ ನಡೆಸಿದ ಸ್ಕೋಡಾ ಎನ್ಯಾಕ್ ಇವಿ ಕಾರು

ಎನ್ಯಾಕ್ iV ಕಾರು ಮಾದರಿಯು ಬ್ಯಾಟರಿ ಸಾಮರ್ಥ್ಯ ಮತ್ತು ಐಷಾರಾಮಿ ಫೀಚರ್ಸ್‌ಗಳಿಗೆ ಅನುಗುಣವಾಗಿ ಪ್ರಮುಖ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಹೊಸ ಕಾರಿನಲ್ಲಿ ಫೀಚರ್ಸ್ ಗ್ರಾಹಕರನ್ನು ಸೆಳೆಯಲಿವೆ.

ಬಿಡುಗಡೆಗೂ ಮುನ್ನ ಭಾರತ ದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟ್ ನಡೆಸಿದ ಸ್ಕೋಡಾ ಎನ್ಯಾಕ್ ಇವಿ ಕಾರು

ಹೊಸ ಕಾರು ವಿವಿಧ ರೇಂಜ್ ಹೊಂದಿರುವ ಎರಡು ಮಾದರಿಯ ಬ್ಯಾಟರಿ ಆಯ್ಕೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ತೀವ್ರ ಸ್ಪರ್ಧೆ ಹೊಂದಿರುವ ಫೋಕ್ಸ್‌ವ್ಯಾಗನ್ ಐಡಿ 4 ಮಾದರಿಗೆ ಸಮನಾಗಿ ಹೊಸ ಕಾರು ಗ್ರಾಹಕರನ್ನು ಸೆಳೆಯಲಿದೆ.

ಬಿಡುಗಡೆಗೂ ಮುನ್ನ ಭಾರತ ದಲ್ಲಿ ಮೊದಲ ಬಾರಿಗೆ ರೋಡ್ ಟೆಸ್ಟ್ ನಡೆಸಿದ ಸ್ಕೋಡಾ ಎನ್ಯಾಕ್ ಇವಿ ಕಾರು

ಹೊಸ ಎಲೆಕ್ಟ್ರಿಕ್ ಕಾರು ಪ್ರತಿ ಚಾರ್ಜ್‌ಗೆ ಆರಂಭಿಕ ಆವೃತ್ತಿಯು 389ಕಿ.ಮೀ, ಮಧ್ಯಮ ಕ್ರಮಾಂಕದ ಕಾರು ಮಾದರಿಯು 509 ಕಿ.ಮೀ ಮತ್ತು ಟಾಪ್ ಎಂಡ್ ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 459ಕಿ.ಮೀ ಮೈಲೇಜ್ ರೇಂಜ್‌ನೊಂದಿಗೆ ಮೊದಲೆರಡು ಮಾದರಿಗಿಂತಲೂ ಉತ್ತಮ ಪರ್ಫಾಮೆನ್ಸ್ ಹೊಂದಿದೆ.

More from DriveSpark

Article Published On: Monday, August 22, 2022, 14:25 [IST]
English summary
Skoda enyaq iv spotted testing in india first time
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+