Just In
- 10 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 11 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 12 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 12 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಕೋಡಾ ಹೊಸ ಕುಶಾಕ್ ಕಂಪ್ಯಾಕ್ಟ್ ಎಸ್ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ
ಸ್ಕೋಡಾ(Skoda) ಕಂಪನಿಯು ಭಾರತದಲ್ಲಿ ಕುಶಾಕ್ ಕಾರು ಮಾದರಿಯೊಂದಿಗೆ ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಬಿಡುಗಡೆಯ ನಂತರ ಕಂಪನಿಯು ಕುಶಾಕ್ ಕಾರಿನ ಬೆಲೆಯಲ್ಲಿ ಮೂರನೇ ಬಾರಿಗೆ ಹೆಚ್ಚಳ ಮಾಡಿದೆ.
ಕುಶಾಕ್ ಕಾರು ಮಾದರಿಯು ಪ್ರೀಮಿಯಂ ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿದ್ದು, ಹೊಸ ಕಾರು ಇದುವರೆಗೆ ಸುಮಾರು 20 ಸಾವಿರಕ್ಕೂ ಹೆಚ್ಚು ಯುನಿಟ್ಗಳಿಗಾಗಿ ಬುಕ್ಕಿಂಗ್ ಪಡೆದುಕೊಂಡಿದೆ. ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಪ್ರಮುಖ ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಹೊಸ ಬಿಡಿಭಾಗಗಳ ಪರಿಣಾಮ ಕಾರಿನ ಬೆಲೆಯಲ್ಲಿ ಶೇ.1 ರಿಂದ ಶೇ.1.50 ರಷ್ಟು ಹೆಚ್ಚಿಸಲಾಗಿದೆ.
ಸ್ಕೋಡಾ ಕಂಪನಿಯು ಬಿಡುಗಡೆ ಮಾಡಿರುವ ಕುಶಾಕ್ ಕಾರಿನ ಹೊಸ ದರಪಟ್ಟಿಯಲ್ಲಿ ಆರಂಭಿಕ ಆವೃತ್ತಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 10.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.19 ಲಕ್ಷ ಬೆಲೆ ಪಡೆದುಕೊಂಡಿದ್ದು,ಹೊಸ ವರ್ಷ ಮತ್ತು ಸಂಕ್ರಾಂತಿ ಹಬ್ಬದ ವಿಶೇಷವಾಗಿ ಕಾರು ಖರೀದಿಯಲ್ಲಿರುವ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ.
ಹೊಸ ದರ ಪಟ್ಟಿಯಲ್ಲಿ ಕುಶಾಕ್ ಕಾರು ಮಾದರಿಯು ರೂ. 19 ಸಾವಿರದಿಂದ ರೂ. 29 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿದ್ದು, ಹೊಸ ಕಾರು ಕಳೆದ ಜೂನ್ನಲ್ಲಿ ಬಿಡುಗಡೆಯ ನಂತರ ಇದು ಮೂರನೇ ಬಾರಿಗೆ ಬೆಲೆ ಹೆಚ್ಚಳವಾಗಿದೆ.
ಕುಶಾಕ್ ಕಾರು ಪ್ರತಿಸ್ಪರ್ಧಿ ಕಾರುಗಳಲ್ಲೇ ಅತಿಹೆಚ್ಚು ಪ್ರೀಮಿಯಂ ಫೀಚರ್ಸ್ ಮತ್ತು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಹೊಂದಿರುವ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಹೊಸ ಕಾರು ಮಾದರಿಯು ಅತಿ ಕಡಿಮೆ ಅವಧಿಯಲ್ಲಿ 20 ಸಾವಿರ ಬುಕ್ಕಿಂಗ್ ಗುರಿತಲುಪಿದೆ.
ಹೊಸ ಕಾರಿನ ಬುಕ್ಕಿಂಗ್ ಆಧರಿಸಿ ವಿತರಣೆಯನ್ನು ಆರಂಭಿಸಿರುವ ಸ್ಕೋಡಾ ಕಂಪನಿಯು ಇದುವರೆಗೆ ಸುಮಾರು 10 ಸಾವಿರಕ್ಕೂ ಹೆಚ್ಚು ಯುನಿಟ್ಗಳನ್ನು ವಿತರಣೆ ಮಾಡಿದ್ದು, ಕಂಪನಿಯು ಮುಂಬರುವ ದಿನಗಳಲ್ಲಿ ಹೊಸ ಮಾರಾಟ ಮಳಿಗೆಗಳೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.
ಪ್ರತಿಸ್ಪರ್ಧಿಗಳಿಂತಲೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಿರುವ ಕುಶಾಕ್ ಕಾರು ಮಾದರಿಯು ಪ್ರೀಮಿಯಂ ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಕಾರಿನ ಟಾಪ್ ಎಂಡ್ ಮಾದರಿಗೆ ಹೆಚ್ಚಿನ ಮಟ್ಟದ ಬೇಡಿಕೆ ದಾಖಲಾಗಿದೆ.
ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದೆ. ಹೊಸ ಕಾರಿನ ಪ್ರತಿ ವೆರಿಯೆಂಟ್ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್ಜಿ ಗೇರ್ಬಾಕ್ಸ್ ಆಯ್ಕೆ ಹೊಂದಿದ್ದು, ಆಟೋಮ್ಯಾಟಿಕ್ ಮಾದರಿಗಳು ಉತ್ತಮ ಬೇಡಿಕೆ ಹೊಂದಿವೆ.
ಹೊಸ ಕಾರು ಸ್ಕೋಡಾ ಬಟರ್ ಪ್ಲೈ ಗ್ರಿಲ್ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್ಇಡಿ ಹೆಡ್ಲ್ಯಾಂಪ್, ಎಲ್ಇಡಿ ಟೈಲ್ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.
ಕುಶಾಕ್ ಕಾರಿನ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ವಿಶಾಲವಾದ ಕ್ಯಾಬಿನ್ನೊಂದಿಗೆ ವರ್ಚುವಲ್ ಕಾಕ್ಪಿಟ್ ಹೊಂದಿದೆ. ಇದರಲ್ಲಿ ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ಪ್ಲೇ ಸರ್ಪೊಟ್ ಮಾಡುವ 10.1 ಇಂಚಿನ ಇನ್ಟೋಟೈನ್ಮೆಂಟ್ ಸ್ಕ್ರೀನ್ ಸೌಲಭ್ಯವಿದೆ.
ಜೊತೆಗೆ ವೈರ್ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಮಲ್ಟಿ ಫಂಕ್ಷನಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸನ್ರೂಫ್, ಮೈ ಸ್ಕೋಡಾ ಕಾರ್ ಕನೆಕ್ಟ್ ಆ್ಯಪ್, ಸ್ಮಾರ್ಟ್ ಬಾಟಲ್ ಹೋಲ್ಡರ್ ಮತ್ತು ಸ್ಕೋಡಾ ಸೌಂಡ್ ಸಿಸ್ಟಂ ಸೌಲಭ್ಯವಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.
ಇದರೊಂದಿಗೆ ಕಂಪನಿಯು ಕುಶಾಕ್ ಕಾರಿನ ಎಂಟ್ರಿ ಲೆವಲ್ ಮಾದರಿಗಳಲ್ಲಿ ಆಟೋಮ್ಯಾಟಿಕ್ ವರ್ಷನ್ಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ಶೀಘ್ರದಲ್ಲೇ ಹೊಸ ಮಾದರಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಹೊಸ ಕಾರಿನ ಆಕ್ಟಿವಾ ವೆರಿಯೆಂಟ್ನಲ್ಲಿ ಆಟೋಮ್ಯಾಟಿಕ್ ಮಾದರಿಯನ್ನು ಪರಿಚಯಿಸುತ್ತಿದೆ.
ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ತನ್ನ ಕಾರು ಮಾದರಿಗಳಲ್ಲೂ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಒಳಗೊಂಡಿರುವ ಮಾಂಟೆ ಕಾರ್ಲೊ ಎಡಿಷನ್ ಮಾರಾಟ ಹೊಂದಿರುವ ಸ್ಕೋಡಾ ಕಂಪನಿಯು ಇದೀಗ ಹೊಸದಾಗಿ ಮಾರುಕಟ್ಟೆ ಪ್ರವೇಶಿಸಿರುವ ಕುಶಾಕ್ ಮಾದರಿಯಲ್ಲೂ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಎಡಿಷನ್ನಲ್ಲಿ ಸ್ಟ್ಯಾಂಡರ್ಡ್ ಟಾಪ್ ಎಂಡ್ ವೆರಿಯೆಂಟ್ಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಜೊತೆ ಸ್ಪೋರ್ಟಿ ಬ್ಯಾಡ್ಜ್ ಹೊಂದಿರಲಿದೆ.
ಮಾಂಟೆ ಕಾರ್ಲೊ ವಿಶೇಷ ಆವೃತ್ತಿಗಳು ಸ್ಕೋಡಾ ವಿವಿಧ ಕಾರುಗಳಲ್ಲಿ ಸ್ಪೋರ್ಟಿ ಲುಕ್ ಬಯಸುವ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಿದ್ದು, ಇದೀಗ ಕುಶಾಕ್ ಮಾದರಿಯಲ್ಲೂ ಹೊಸ ಎಡಿಷನ್ ಬಿಡುಗಡೆಗೆ ಸಿದ್ದಗೊಂಡಿದೆ.