ಸ್ಕೋಡಾ ಹೊಸ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಸ್ಕೋಡಾ(Skoda) ಕಂಪನಿಯು ಭಾರತದಲ್ಲಿ ಕುಶಾಕ್ ಕಾರು ಮಾದರಿಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಬಿಡುಗಡೆಯ ನಂತರ ಕಂಪನಿಯು ಕುಶಾಕ್ ಕಾರಿನ ಬೆಲೆಯಲ್ಲಿ ಮೂರನೇ ಬಾರಿಗೆ ಹೆಚ್ಚಳ ಮಾಡಿದೆ.

ಸ್ಕೋಡಾ ಹೊಸ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಕುಶಾಕ್ ಕಾರು ಮಾದರಿಯು ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿದ್ದು, ಹೊಸ ಕಾರು ಇದುವರೆಗೆ ಸುಮಾರು 20 ಸಾವಿರಕ್ಕೂ ಹೆಚ್ಚು ಯುನಿಟ್‌ಗಳಿಗಾಗಿ ಬುಕ್ಕಿಂಗ್ ಪಡೆದುಕೊಂಡಿದೆ. ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಪ್ರಮುಖ ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಹೊಸ ಬಿಡಿಭಾಗಗಳ ಪರಿಣಾಮ ಕಾರಿನ ಬೆಲೆಯಲ್ಲಿ ಶೇ.1 ರಿಂದ ಶೇ.1.50 ರಷ್ಟು ಹೆಚ್ಚಿಸಲಾಗಿದೆ.

ಸ್ಕೋಡಾ ಹೊಸ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಸ್ಕೋಡಾ ಕಂಪನಿಯು ಬಿಡುಗಡೆ ಮಾಡಿರುವ ಕುಶಾಕ್ ಕಾರಿನ ಹೊಸ ದರಪಟ್ಟಿಯಲ್ಲಿ ಆರಂಭಿಕ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.19 ಲಕ್ಷ ಬೆಲೆ ಪಡೆದುಕೊಂಡಿದ್ದು,ಹೊಸ ವರ್ಷ ಮತ್ತು ಸಂಕ್ರಾಂತಿ ಹಬ್ಬದ ವಿಶೇಷವಾಗಿ ಕಾರು ಖರೀದಿಯಲ್ಲಿರುವ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ.

ಸ್ಕೋಡಾ ಹೊಸ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಹೊಸ ದರ ಪಟ್ಟಿಯಲ್ಲಿ ಕುಶಾಕ್ ಕಾರು ಮಾದರಿಯು ರೂ. 19 ಸಾವಿರದಿಂದ ರೂ. 29 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿದ್ದು, ಹೊಸ ಕಾರು ಕಳೆದ ಜೂನ್‌ನಲ್ಲಿ ಬಿಡುಗಡೆಯ ನಂತರ ಇದು ಮೂರನೇ ಬಾರಿಗೆ ಬೆಲೆ ಹೆಚ್ಚಳವಾಗಿದೆ.

ಸ್ಕೋಡಾ ಹೊಸ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಕುಶಾಕ್ ಕಾರು ಪ್ರತಿಸ್ಪರ್ಧಿ ಕಾರುಗಳಲ್ಲೇ ಅತಿಹೆಚ್ಚು ಪ್ರೀಮಿಯಂ ಫೀಚರ್ಸ್ ಮತ್ತು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಹೊಂದಿರುವ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಹೊಸ ಕಾರು ಮಾದರಿಯು ಅತಿ ಕಡಿಮೆ ಅವಧಿಯಲ್ಲಿ 20 ಸಾವಿರ ಬುಕ್ಕಿಂಗ್‌ ಗುರಿತಲುಪಿದೆ.

ಸ್ಕೋಡಾ ಹೊಸ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಹೊಸ ಕಾರಿನ ಬುಕ್ಕಿಂಗ್ ಆಧರಿಸಿ ವಿತರಣೆಯನ್ನು ಆರಂಭಿಸಿರುವ ಸ್ಕೋಡಾ ಕಂಪನಿಯು ಇದುವರೆಗೆ ಸುಮಾರು 10 ಸಾವಿರಕ್ಕೂ ಹೆಚ್ಚು ಯುನಿಟ್‌ಗಳನ್ನು ವಿತರಣೆ ಮಾಡಿದ್ದು, ಕಂಪನಿಯು ಮುಂಬರುವ ದಿನಗಳಲ್ಲಿ ಹೊಸ ಮಾರಾಟ ಮಳಿಗೆಗಳೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಸ್ಕೋಡಾ ಹೊಸ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಪ್ರತಿಸ್ಪರ್ಧಿಗಳಿಂತಲೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಿರುವ ಕುಶಾಕ್ ಕಾರು ಮಾದರಿಯು ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಕಾರಿನ ಟಾಪ್ ಎಂಡ್ ಮಾದರಿಗೆ ಹೆಚ್ಚಿನ ಮಟ್ಟದ ಬೇಡಿಕೆ ದಾಖಲಾಗಿದೆ.

ಸ್ಕೋಡಾ ಹೊಸ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದೆ. ಹೊಸ ಕಾರಿನ ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, ಆಟೋಮ್ಯಾಟಿಕ್ ಮಾದರಿಗಳು ಉತ್ತಮ ಬೇಡಿಕೆ ಹೊಂದಿವೆ.

ಸ್ಕೋಡಾ ಹೊಸ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಹೊಸ ಕಾರು ಸ್ಕೋಡಾ ಬಟರ್ ಪ್ಲೈ ಗ್ರಿಲ್‌ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್‌ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.

ಸ್ಕೋಡಾ ಹೊಸ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಕುಶಾಕ್ ಕಾರಿನ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್‌ ಹೊಂದಿದೆ. ಇದರಲ್ಲಿ ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 10.1 ಇಂಚಿನ ಇನ್ಟೋಟೈನ್‌ಮೆಂಟ್ ಸ್ಕ್ರೀನ್ ಸೌಲಭ್ಯವಿದೆ.

ಸ್ಕೋಡಾ ಹೊಸ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಜೊತೆಗೆ ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಮಲ್ಟಿ ಫಂಕ್ಷನಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸನ್‌ರೂಫ್, ಮೈ ಸ್ಕೋಡಾ ಕಾರ್ ಕನೆಕ್ಟ್ ಆ್ಯಪ್, ಸ್ಮಾರ್ಟ್ ಬಾಟಲ್ ಹೋಲ್ಡರ್ ಮತ್ತು ಸ್ಕೋಡಾ ಸೌಂಡ್ ಸಿಸ್ಟಂ ಸೌಲಭ್ಯವಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಸ್ಕೋಡಾ ಹೊಸ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಇದರೊಂದಿಗೆ ಕಂಪನಿಯು ಕುಶಾಕ್ ಕಾರಿನ ಎಂಟ್ರಿ ಲೆವಲ್ ಮಾದರಿಗಳಲ್ಲಿ ಆಟೋಮ್ಯಾಟಿಕ್ ವರ್ಷನ್‌ಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ಶೀಘ್ರದಲ್ಲೇ ಹೊಸ ಮಾದರಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಹೊಸ ಕಾರಿನ ಆಕ್ಟಿವಾ ವೆರಿಯೆಂಟ್‌ನಲ್ಲಿ ಆಟೋಮ್ಯಾಟಿಕ್ ಮಾದರಿಯನ್ನು ಪರಿಚಯಿಸುತ್ತಿದೆ.

ಸ್ಕೋಡಾ ಹೊಸ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ತನ್ನ ಕಾರು ಮಾದರಿಗಳಲ್ಲೂ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಒಳಗೊಂಡಿರುವ ಮಾಂಟೆ ಕಾರ್ಲೊ ಎಡಿಷನ್ ಮಾರಾಟ ಹೊಂದಿರುವ ಸ್ಕೋಡಾ ಕಂಪನಿಯು ಇದೀಗ ಹೊಸದಾಗಿ ಮಾರುಕಟ್ಟೆ ಪ್ರವೇಶಿಸಿರುವ ಕುಶಾಕ್ ಮಾದರಿಯಲ್ಲೂ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಎಡಿಷನ್‌ನಲ್ಲಿ ಸ್ಟ್ಯಾಂಡರ್ಡ್ ಟಾಪ್ ಎಂಡ್ ವೆರಿಯೆಂಟ್‌ಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಜೊತೆ ಸ್ಪೋರ್ಟಿ ಬ್ಯಾಡ್ಜ್ ಹೊಂದಿರಲಿದೆ.

ಸ್ಕೋಡಾ ಹೊಸ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆಯಲ್ಲಿ ಭಾರೀ ಹೆಚ್ಚಳ

ಮಾಂಟೆ ಕಾರ್ಲೊ ವಿಶೇಷ ಆವೃತ್ತಿಗಳು ಸ್ಕೋಡಾ ವಿವಿಧ ಕಾರುಗಳಲ್ಲಿ ಸ್ಪೋರ್ಟಿ ಲುಕ್ ಬಯಸುವ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಿದ್ದು, ಇದೀಗ ಕುಶಾಕ್ ಮಾದರಿಯಲ್ಲೂ ಹೊಸ ಎಡಿಷನ್ ಬಿಡುಗಡೆಗೆ ಸಿದ್ದಗೊಂಡಿದೆ.

Most Read Articles

Kannada
English summary
Skoda india hiked kushaq price up to 29000 details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X