Just In
- 1 hr ago
ಇಂದಿನಿಂದ ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್ ಆರಂಭಿಸಿದ ಮಹೀಂದ್ರಾ
- 2 hrs ago
ಬೈಕ್ ನೀಡಿದ್ದ ಮೊದಲ ದಿನವೇ ಕಣ್ಮರೆಯಾಗಿದ್ದ ಧೋನಿ: ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಶ್ರೀನಿವಾಸನ್
- 2 hrs ago
ನೀವು ಖರೀದಿಸಬಹುದಾದ ಅತ್ಯುತ್ತಮ ಸೆಕೆಂಡ್ ಹ್ಯಾಂಡ್ ಆಟೋಮ್ಯಾಟಿಕ್ ಹ್ಯಾಚ್ಬ್ಯಾಕ್ ಕಾರುಗಳಿವು...
- 4 hrs ago
ಮ್ಯಾಗ್ನೈಟ್ ಕಾರು ಮಾದರಿಯಲ್ಲಿ ಪ್ರಮುಖ ವೆರಿಯೆಂಟ್‌ಗಳನ್ನು ತೆಗೆದುಹಾಕಿದ ನಿಸ್ಸಾನ್
Don't Miss!
- News
ನೂಪುರ್ ವಿರುದ್ಧದ ಸುಪ್ರೀಂ ಹೇಳಿಕೆಗೆ ನಿವೃತ್ತ ನ್ಯಾಯಾಧೀಶರು, ಅಧಿಕಾರಿಗಳ ಆಕ್ಷೇಪ
- Sports
ಈತನ ಹುಚ್ಚುತನದಿಂದ ನಾಲ್ಕನೇ ದಿನ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಮಂಕಾಯಿತು ಎಂದ ಪೀಟರ್ಸನ್!
- Education
SSC CGL Tier 1 2022 Result : ಎಸ್ಎಸ್ಸಿ ಸಿಜಿಎಲ್ ಟಯರ್ 1 ಫಲಿತಾಂಶ ವೀಕ್ಷಿಸುವುದು ಹೇಗೆ ?
- Lifestyle
ನೀವು ಯಾವ ಭಂಗಿಯಲ್ಲಿ ಮಲಗುತ್ತೀರಾ ಅದೇ ಹೇಳುತ್ತೇ ನಿಮ್ಮ ವ್ಯಕ್ತಿತ್ವ ಎಂಥದ್ದು ಅಂತಾ!
- Movies
'ಸ್ಮೋಕಿಂಗ್ ಕಾಳಿ' ಪೋಸ್ಟರ್ ತೆಗೆದುಹಾಕಲು ಕೆನಡಾದ ಭಾರತೀಯ ಹೈಕಮಿಷನ್ ಕೋರಿಕೆ!
- Finance
ಎಲ್ಐಸಿ ಷೇರು ಖರೀದಿಸಲು ಮೋತಿಲಾಲ್ ಓಸ್ವಾಲ್ ಸಲಹೆ
- Technology
ಸಾರ್ವಜನಿಕರೇ ನಿಮ್ಮ ಮನೆ ಮೇಲೆ ಮೊಬೈಲ್ ಟವರ್ ಹಾಕಿಸುವ ಮುನ್ನ ಎಚ್ಚರ?
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆಗೂ ಮುನ್ನ ಕುಶಾಕ್ ಬೆಲೆ ಹೆಚ್ಚಿಸಿದ ಸ್ಕೋಡಾ
ಸ್ಕೋಡಾ ಇಂಡಿಯಾ ಕಂಪನಿಯು ಶೀಘ್ರದಲ್ಲಿಯೇ ಕುಶಾಕ್ ಮಾದರಿಯ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆಗೆ ಸಜ್ಜಾಗುತ್ತಿದ್ದು, ಹೊಸ ಎಡಿಷನ್ ಬಿಡುಗಡೆಗೂ ಮುನ್ನ ಕಂಪನಿಯು ಕುಶಾಕ್ ಬೆಲೆ ಹೆಚ್ಚಿಸಿದೆ.

ಹೊಸ ಕಾರುಗಳ ಉತ್ಪಾದನಾ ವೆಚ್ಚವು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಹೊಸ ವಾಹನಗಳ ಬೆಲೆ ಹೆಚ್ಚಿಸಿದ್ದು, ಸ್ಕೋಡಾ ಕಂಪನಿಯು ಕೂಡಾ ಹೊಸ ಕುಶಾಕ್ ಕಾರಿನ ಬೆಲೆ ಪರಿಷ್ಕರಣೆ ಮಾಡಿದೆ. ಹೊಸ ದರ ಪಟ್ಟಿಯಲ್ಲಿ ಕುಶಾಕ್ ಕಾರು ಮಾದರಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಗರಿಷ್ಠ ರೂ. 70 ಸಾವಿರ ತನಕ ಹೆಚ್ಚಿಸಲಾಗಿದೆ.

ಹೊಸ ದರ ಪಟ್ಟಿಯಲ್ಲಿ ಟೈಗುನ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.79 ಲಕ್ಷ ಬೆಲೆ ಹೊಂದಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಶೇ.1.50 ರಷ್ಟು ದರ ಹೆಚ್ಚಿಸಲಾಗಿದೆ.

ಸ್ಕೋಡಾ ಕುಶಾಕ್ ಕಾರು ಮಾದರಿಯ ಆರಂಭಿಕ ಬೆಲೆಯಲ್ಲಿ ಯಾವುದೇ ಬದಲಾವಣೆ ತರದ ಕಂಪನಿಯು ರೂ. 9.99 ಲಕ್ಷ ಬೆಲೆಯನ್ನೇ ಮುಂದುವರಿಸಿದ್ದು, ಮಧ್ಯಮ ಕ್ರಮಾಂಕದ ವೆರಿಯೆಂಟ್‌ಗಳಲ್ಲಿ ರೂ. 20 ಸಾವಿರದಿಂದ ರೂ. 70 ಸಾವಿರದಷ್ಟು ದುಬಾರಿಯಾಗಿದೆ.

ಸ್ಟ್ಯಾಂಡರ್ಡ್ ಕುಶಾಕ್ ಮಾದರಿಯು ಸದ್ಯ ಆಕ್ಟಿವ್, ಆ್ಯಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ಕಂಪನಿಯು ಶೀಘ್ರದಲ್ಲಿಯೇ ಕುಶಾಕ್ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆ ಮಾಡುತ್ತಿದೆ. ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಹೊಸ ಕಾರು ಮಾದರಿಯು ಆಕರ್ಷಕವಾದ ಗ್ರಾಫಿಕ್ಸ್ ಮತ್ತು ಸ್ಪೋರ್ಟಿ ಬ್ಯಾಡ್ಜ್ ಹೊಂದಿರಲಿದ್ದು, ಸ್ಕೋಡಾ ವಿವಿಧ ಕಾರುಗಳಲ್ಲಿ ಸ್ಪೋರ್ಟಿ ಲುಕ್ ಬಯಸುವ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಿದೆ.

ಹೊಸದಾಗಿ ಬಿಡುಗಡೆಯಾಗಲಿರುವ ಮಾಂಟೆ ಕಾರ್ಲೊ ಮಾದರಿಯು ಸ್ಟೈಲ್ ಮಾದರಿಗಿಂತಲೂ ತುಸು ದುಬಾರಿ ಬೆಲೆಯೊಂದಿಗೆ ಹೆಚ್ಚುವರಿಯಾಗಿ ಹೊಸ ಬಣ್ಣದ ಆಯ್ಕೆ ಜೊತೆ ಹೊಸ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪನೋರಮಿಕ್ ಸನ್‌ರೂಫ್, ರೂಫ್ ಲೈನರ್, ರೆಡ್ ಕಾಟ್ರಾಸ್ಟ್ ಸೇರಿದಂತೆ ಮತ್ತಷ್ಟು ಹೊಸ ಫೀಚರ್ಸ್ ಹೊಂದಿರಲಿದೆ.

ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಒಳಗೊಂಡಿರುವ ಮಾಂಟೆ ಕಾರ್ಲೊ ಎಡಿಷನ್‌ಗಳನ್ನು ಈಗಾಗಲೇ ಪ್ರಮುಖ ಕಾರು ಮಾದರಿಗಳಲ್ಲಿ ಮಾರಾಟ ಮಾಡುತ್ತಿರುವ ಸ್ಕೋಡಾ ಕಂಪನಿಯು ಇದೀಗ ಹೊಸದಾಗಿ ಮಾರುಕಟ್ಟೆ ಪ್ರವೇಶಿಸಿರುವ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೂ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಎಡಿಷನ್ ಅನ್ನು ಸಾಮಾನ್ಯ ಮಾದರಿಯ ಟಾಪ್ ಎಂಡ್ ವೆರಿಯೆಂಟ್‌ಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆ ಮಾಡಲಿದೆ.

ಕುಶಾಕ್ ಕಾರು ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಕಳೆದ ತಿಂಗಳು ಕೆಲವು ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಆರಂಭಿಕ ಮಾದರಿಯಲ್ಲಿ ಕೆಲವು ಸ್ಟ್ಯಾಂಡರ್ಡ್ ಫೀಚರ್ಸ್ ಅಳವಡಿಕೆಯೊಂದಿಗೆ ಬೆಲೆ ಹೆಚ್ಚಳ ಮಾಡಲಾಗಿದೆ.

ಹೊಸ ಕುಶಾಕ್ ಕಾರಿನಲ್ಲಿ ಸ್ಕೋಡಾ ಕಂಪನಿಯು 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಹೊಸ ಕಾರು ಸ್ಕೋಡಾ ಬಟರ್ ಪ್ಲೈ ಗ್ರಿಲ್‌ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್‌ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.

ಹೊಸ ಕುಶಾಕ್ ಕಾರಿನ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್ ಹೊಂದಿದೆ. ಇದರಲ್ಲಿ ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 10.1 ಇಂಚಿನ ಇನ್ಟೋಟೈನ್‌ಮೆಂಟ್ ಸ್ಕ್ರೀನ್ ಸೌಲಭ್ಯವಿದೆ.

ಹಾಗೆಯೇ ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಮಲ್ಟಿ ಫಂಕ್ಷನಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸನ್‌ರೂಫ್, ಮೈ ಸ್ಕೋಡಾ ಕಾರ್ ಕನೆಕ್ಟ್ ಆ್ಯಪ್, ಸ್ಮಾರ್ಟ್ ಬಾಟಲ್ ಹೋಲ್ಡರ್ ಮತ್ತು ಸ್ಕೋಡಾ ಸೌಂಡ್ ಸಿಸ್ಟಂ ಸೌಲಭ್ಯವಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಹೊಸ ಕಾರಿನಲ್ಲಿ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಏರ್‌ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.