ಕುಶಾಕ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಪರಿಚಯಿಸಿದ ಸ್ಕೋಡಾ

ಸ್ಕೋಡಾ(Skoda) ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಕುಶಾಕ್(Kushaq) ಮಾದರಿಯಲ್ಲಿ ಹಲವಾರು ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಕಂಪನಿಯು ಹೊಸ ಕಾರಿನಲ್ಲಿ ಈ ಬಾರಿ ಹೊಸ ಸುರಕ್ಷಾ ವೈಶಿಷ್ಟ್ಯತೆಗಳನ್ನು ಒಳಗೊಂಡಿರುವ ಮಧ್ಯಮ ಕ್ರಮಾಂಕದಲ್ಲಿ ಹೊಸ ಆವೃತ್ತಿಯನ್ನು ಬಿಡುಗಡೆ ಮಾಡಿದೆ.

ಕುಶಾಕ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಪರಿಚಯಿಸಿದ ಸ್ಕೋಡಾ

ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿರುವ ಕುಶಾಕ್ ಕಾರು ಮಾದರಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ಕಂಪನಿಯು ಮಧ್ಯಮ ಕ್ರಮಾಂಕದಲ್ಲಿರುವ ಆಂಬಿಷನ್ ಮಾದರಿಯಲ್ಲಿ ಕ್ಲಾಸಿಕ್ ವೆರಿಯೆಂಟ್ ಬಿಡುಗಡೆ ಮಾಡಿದೆ.

ಕುಶಾಕ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಪರಿಚಯಿಸಿದ ಸ್ಕೋಡಾ

ಕುಶಾಕ್ ಆಂಬಿಷನ್ ಕ್ಲಾಸಿಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ಮ್ಯಾನುವಲ್ ಮಾದರಿಗೆ ರೂ. 12.69 ಲಕ್ಷ ಮತ್ತು ಆಟೋಮ್ಯಾಟಿಕ್ ಮಾದರಿಗೆ ರೂ. 14.09 ಲಕ್ಷ ನಿಗದಿಪಡಿಸಿದ್ದು, ಫೋಕ್ಸ್‌ವ್ಯಾಗನ್ ಹೊಸ ಟೈಗುನ್ 1.0 ಹೈಲೈನ್‌ ಮಾದರಿಗೆ ಸಮನಾಗಿ ಈ ಹೊಸ ವೆರಿಯೆಂಟ್ ಸೇರ್ಪಡೆಗೊಳಿಸಲಾಗಿದೆ.

ಕುಶಾಕ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಪರಿಚಯಿಸಿದ ಸ್ಕೋಡಾ

ಆಕ್ಟಿವ್ ಮತ್ತು ಆಂಬಿಷನ್ ನಡುವಿನ ಬೆಲೆ ಅಂತರವನ್ನು ತುಂಬಲು ಹೊಸ ಆಂಬಿಷನ್ ಕ್ಲಾಸಿಕ್ ಬಿಡುಗಡೆ ಮಾಡಿರುವ ಸ್ಕೋಡಾ ಮಾದರಿಯು ಸ್ಟ್ಯಾಂಡರ್ಡ್ ಆಂಬಿಷನ್‌ನಲ್ಲಿರುವ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಇದರಲ್ಲಿ ನೀಡಿಲ್ಲ.

ಕುಶಾಕ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಪರಿಚಯಿಸಿದ ಸ್ಕೋಡಾ

ಹೊಸ ಮಾದರಿಯು ಕುಶಾಕ್ ಸ್ಟ್ಯಾಂಡರ್ಡ್ ಫೀಚರ್ಸ್‌ಗಳೊಂದಿಗೆ 10 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ವೈರ್‌ಲೆಸ್ ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಸ್ಕೋಡಾ ಏರ್-ವೆಂಟ್, ಬೂಟ್ ಲಿಡ್, ವಿಂಡೋ ಲೈನ್‌ ಕ್ರೋಮ್ ಸೇರಿದಂತೆ ಹಲವು ಹೊಸ ಫೀಚರ್ಸ್ ಹೊಂದಿದ್ದರೂ ಆಟೋಮ್ಯಾಟಿಕ್ ಎಸಿ ಮತ್ತು ಡ್ಯುಯಲ್-ಟೋನ್ ಫ್ಯಾಬ್ರಿಕ್ ಸೀಟ್‌ಗಳನ್ನು ನೀಡಿಲ್ಲ.

ಕುಶಾಕ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಪರಿಚಯಿಸಿದ ಸ್ಕೋಡಾ

ಆಂಬಿಷನ್ ಟ್ರಿಮ್‌ನಲ್ಲಿ ಲಭ್ಯವಿರುವ ಡ್ಯುಯಲ್-ಟೋನ್ ಫ್ಯಾಬ್ರಿಕ್ ಸೀಟ್‌ಗಳ ಬದಲಿಗೆ ಈ ಟ್ರಿಮ್‌ನಲ್ಲಿ ಸಾಮಾನ್ಯ ಆಸನಗಳೊಂದಿಗೆ ಸೀಟ್ ಕವರ್‌ಗಳನ್ನು ನೀಡಲಾಗಿದ್ದು, ಹೊಸ ಮಾದರಿಗಳಲ್ಲಿ 1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಮಾತ್ರ ನೀಡಲಾಗಿದೆ.

ಕುಶಾಕ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಪರಿಚಯಿಸಿದ ಸ್ಕೋಡಾ

1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ನಲ್ಲಿ ಗ್ರಾಹಕರು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್-ಕನ್ವರ್ಟರ್ ಸ್ವಯಂಚಾಲಿತ ಗೇರ್‌ಬಾಕ್ಸ್ ಎರಡರ ಆಯ್ಕೆಯನ್ನು ನೀಡಿದ್ದು, ಗ್ರಾಹಕರು ತಮ್ಮ ಆಯ್ಕೆಗೆ ಅನುಗುಣವಾಗಿ ಇದೀಗ ಬಜೆಟ್ ಮಾದರಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ನೀಡಿದೆ.

ಕುಶಾಕ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಪರಿಚಯಿಸಿದ ಸ್ಕೋಡಾ

ಇನ್ನು ಸ್ಕೋಡಾ ಕಂಪನಿಯು ಕುಶಾಕ್ ಮಾದರಿಯಲ್ಲಿ ಶೀಘ್ರದಲ್ಲೇ ಮತ್ತೊಂದು ವಿಶೇಷ ಆವೃತ್ತಿಯೊಂದನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಒಳಗೊಂಡಿರುವ ಮಾಂಟೆ ಕಾರ್ಲೊ ಎಡಿಷನ್‌ ಮುಂದಿನ ತಿಂಗಳು 9ರಂದು ಬಿಡುಗಡೆಯಾಗಲಿದೆ.

ಕುಶಾಕ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಪರಿಚಯಿಸಿದ ಸ್ಕೋಡಾ

ಹೊಸ ಎಡಿಷನ್‌ ಅನ್ನು ಸಾಮಾನ್ಯ ಮಾದರಿಯ ಟಾಪ್ ಎಂಡ್ ವೆರಿಯೆಂಟ್‌ಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆ ಮಾಡಲಿದ್ದು, ಸ್ಕೋಡಾ ವಿವಿಧ ಕಾರುಗಳಲ್ಲಿ ಸ್ಪೋರ್ಟಿ ಲುಕ್ ಬಯಸುವ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಿದೆ.

ಕುಶಾಕ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಪರಿಚಯಿಸಿದ ಸ್ಕೋಡಾ

ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಹೊಸ ಕಾರು ಮಾದರಿಯು ಆಕರ್ಷಕವಾದ ಗ್ರಾಫಿಕ್ಸ್ ಮತ್ತು ಸ್ಪೋರ್ಟಿ ಬ್ಯಾಡ್ಜ್ ಹೊಂದಿರಲಿದ್ದು, ಸ್ಟೈಲ್ ಮಾದರಿಗಿಂತಲೂ ತುಸು ದುಬಾರಿ ಬೆಲೆಯೊಂದಿಗೆ ಹೆಚ್ಚುವರಿಯಾಗಿ ಹೊಸ ಬಣ್ಣದ ಆಯ್ಕೆ ಜೊತೆ ಹೊಸ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪನೋರಮಿಕ್ ಸನ್‌ರೂಫ್, ರೂಫ್ ಲೈನರ್, ರೆಡ್ ಕಾಟ್ರಾಸ್ಟ್ ಸೇರಿದಂತೆ ಮತ್ತಷ್ಟು ಹೊಸ ಫೀಚರ್ಸ್ ಹೊಂದಿರಲಿದೆ.

ಕುಶಾಕ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಪರಿಚಯಿಸಿದ ಸ್ಕೋಡಾ

ಸ್ಟ್ಯಾಂಡರ್ಡ್ ಕುಶಾಕ್ ಮಾದರಿಯು ಸದ್ಯ ಆಕ್ಟಿವ್, ಆ್ಯಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಕಾರು ಆರಂಭಿಕವಾಗಿ ರೂ. 10.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.19 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದೆ.

ಕುಶಾಕ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಪರಿಚಯಿಸಿದ ಸ್ಕೋಡಾ

ಹೊಸ ಕುಶಾಕ್ ಕಾರಿನಲ್ಲಿ ಸ್ಕೋಡಾ ಕಂಪನಿಯು 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಕುಶಾಕ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಪರಿಚಯಿಸಿದ ಸ್ಕೋಡಾ

ಹೊಸ ಕಾರು ಸ್ಕೋಡಾ ಬಟರ್ ಪ್ಲೈ ಗ್ರಿಲ್‌ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್‌ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.

ಕುಶಾಕ್ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಪರಿಚಯಿಸಿದ ಸ್ಕೋಡಾ

ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಹೊಸ ಕಾರಿನಲ್ಲಿ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಏರ್‌ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

Most Read Articles

Kannada
Read more on ಸ್ಕೋಡಾ skoda
English summary
Skoda india launched kushaq ambition classic variant at rs 12 69 lakhs
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X