ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಉನ್ನತೀಕರಣಗೊಂಡ ಸ್ಕೋಡಾ ಕುಶಾಕ್ ಆಕ್ಟಿವ್

ಸ್ಕೋಡಾ ಕಂಪನಿ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಉತ್ತಮ ಬೇಡಿಕೆ ದಾಖಲಿಸುತ್ತಿದ್ದು, ಕಂಪನಿಯು ಇತ್ತೀಚೆಗೆ ಆಕ್ಟಿವಾ ಬೆಸ್ ವೆರಿಯೆಂಟ್‌ನಲ್ಲಿ ಕೆಲವು ಹೊಸ ಸುರಕ್ಷಾ ಸೌಲಭ್ಯಗಳನ್ನು ನವೀಕರಿಸಿದೆ.

ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಉನ್ನತೀಕರಣಗೊಂಡ ಸ್ಕೋಡಾ ಕುಶಾಕ್ ಆಕ್ಟಿವ್

ಕುಶಾಕ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳ ಬೆಲೆಗೆ ಅನುಗುಣವಾಗಿ ಈಗಾಗಲೇ ಹಲವಾರು ಫೀಚರ್ಸ್‌ಗಳಿದ್ದರೂ ಆಕ್ಟಿವಾ ಬೆಸ್ ವೆರಿಯೆಂಟ್‌ನಲ್ಲೂ ಲಭ್ಯವಾಗುವಂತೆ ಇದೀಗ ಕಂಪನಿಯು ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಮತ್ತು ಹೆಡ್‌ಲೈನರ್ ಸೌಲಭ್ಯಗಳನ್ನು ಜೋಡಿಸಲಾಗಿದೆ. ಹೊಸ ಫೀಚರ್ಸ್ ನಂತರವು ಕಾರಿನ ಬೆಲೆಯಲ್ಲಿ ಬದಲಾವಣೆ ಮಾಡಿಲ್ಲವಾದರೂ ಮುಂಬರುವ ದಿನಗಳಲ್ಲಿ ಕುಶಾಕ್ ಕಾರಿನ ಎಲ್ಲಾ ಮಾದರಿಗಳ ಬೆಲೆ ಹೆಚ್ಚಳ ಸುಳಿವು ನೀಡಿದೆ.

ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಉನ್ನತೀಕರಣಗೊಂಡ ಸ್ಕೋಡಾ ಕುಶಾಕ್ ಆಕ್ಟಿವ್

ಸೆಮಿಕಂಡಕ್ಟರ್ ಕೊರತೆಯ ಪರಿಣಾಮ ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಹಿನ್ನಲೆಯಲ್ಲಿ ಕಂಪನಿಯು ಶೀಘ್ರದಲ್ಲಿಯೇ ಕುಶಾಕ್ ಕಾರಿನ ಬೆಲೆ ಹೆಚ್ಚಿಸುವ ಸಾಧ್ಯತೆಗಳಿದ್ದು, ಈ ತಿಂಗಳಾಂತ್ಯವರೆಗೆ ಕಾರು ಖರೀದಿಸುವ ಗ್ರಾಹಕರಿಗೆ ಪ್ರಸ್ತುತ ಬೆಲೆಗಳೇ ಅನ್ವಯಿಸಲಿವೆ.

ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಉನ್ನತೀಕರಣಗೊಂಡ ಸ್ಕೋಡಾ ಕುಶಾಕ್ ಆಕ್ಟಿವ್

ಮುಂಬರುವ ಸೆಪ್ಟೆಂಬರ್ ಆರಂಭದಿಂದ ಬೆಲೆ ಹೆಚ್ಚಳವಾಗುವ ಸಾಧ್ಯತೆಗಳಿದ್ದು, ಹೆಚ್ಚುತ್ತಿರುವ ಬೆಲೆಗಳ ಪರಿಣಾಮ ಕಾರು ಮಾಲೀಕತ್ವವು ಮತ್ತಷ್ಟು ದುಬಾರಿಯಾಗಲಿದೆ. ಈ ವರ್ಷದ ಆರಂಭದಿಂದ ಸ್ಕೋಡಾ ಕಂಪನಿಯು ಸಹ ತನ್ನ ಪ್ರಮುಖ ಕಾರುಗಳ ಬೆಲೆಯಲ್ಲಿ ಈಗಾಗಲೇ ಎರಡು ಬಾರಿ ದರ ಹೆಚ್ಚಳ ಮಾಡಿದ್ದು, ಬೆಲೆ ಹೆಚ್ಚಳಕ್ಕೂ ಮುನ್ನ ಕಂಪನಿಯು ಬೆಸ್ ವೆರಿಯೆಂಟ್‌ನಲ್ಲಿ ಕೆಲವು ಹೊಸ ಸುರಕ್ಷಾ ಫೀಚರ್ಸ್ ಜೋಡಣೆ ಮಾಡಿದೆ.

ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಉನ್ನತೀಕರಣಗೊಂಡ ಸ್ಕೋಡಾ ಕುಶಾಕ್ ಆಕ್ಟಿವ್

ಸದ್ಯ ಮಾರುಕಟ್ಟೆಯಲ್ಲಿ ಸೆಮಿಕಂಡಕ್ಟರ್ ಕೊರತೆಯ ಸಮಸ್ಯೆಯು ಸ್ಕೋಡಾ ಕಂಪನಿಗೆ ಮಾತ್ರವಲ್ಲ ಬಹುತೇಕ ಎಲ್ಲಾ ಕಾರು ಕಂಪನಿಗಳು ಸೆಮಿಕಂಡಕ್ಟರ್ ಕೊರತೆಯನ್ನು ಎದುರಿಸುತ್ತಿದ್ದು, ಹೊಸ ಕಾರುಗಳಿಗೆ ಬೇಡಿಕೆಯಿದ್ದರೂ ಸೆಮಿಕಂಡಕ್ಟರ್ ಪೂರೈಕೆಯಲ್ಲಿನ ವಿಳಂಬವು ಕಾರು ಉತ್ಪಾದನೆ ಮೇಲೆ ಪರಿಣಾಮ ಬೀರುತ್ತಿದೆ.v

ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಉನ್ನತೀಕರಣಗೊಂಡ ಸ್ಕೋಡಾ ಕುಶಾಕ್ ಆಕ್ಟಿವ್

ಇದೇ ಕಾರಣಕ್ಕೆ ಸ್ಕೋಡಾ ಕಂಪನಿಯು ಕುಶಾಕ್ ಮಾದರಿಯಲ್ಲಿನ ಪ್ರಮುಖ ವೆರಿಯೆಂಟ್‌ಗಳಲ್ಲಿನ ಫೀಚರ್ಸ್ ಬದಲಾವಣೆಗೊಳಿಸಿ ಹೊಸ ವೆರಿಯೆಂಟ್ ಬಿಡುಗಡೆ ಮಾಡಲಾಗುತ್ತಿದ್ದು, ಕಳೆದ ತಿಂಗಳು ಕಂಪನಿಯು ಕುಶಾಕ್ ಟಾಪ್ ಎಂಡ್ ಮಾದರಿಯಾದ 1.0 ಟಿಎಸ್ಐ ಸ್ಟೈಲ್ ಮಾದರಿಯನ್ನು ಆಧರಿಸಿ ಹೊಸ ಟಿಎಸ್ಐ ಸ್ಟೈಲ್ ಎನ್ಎಸ್ಆರ್ ವೆರಿಯೆಂಟ್ ಬಿಡುಗಡೆ ಮಾಡಿತ್ತು.

ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಉನ್ನತೀಕರಣಗೊಂಡ ಸ್ಕೋಡಾ ಕುಶಾಕ್ ಆಕ್ಟಿವ್

ಕುಶಾಕ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಆಕ್ಟಿವ್, ಆ್ಯಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಕಾರು ಆರಂಭಿಕವಾಗಿ ರೂ. 11.29 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.49 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದೆ.

ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಉನ್ನತೀಕರಣಗೊಂಡ ಸ್ಕೋಡಾ ಕುಶಾಕ್ ಆಕ್ಟಿವ್

ಹೊಸ ಕುಶಾಕ್ ಕಾರಿನಲ್ಲಿ ಸ್ಕೋಡಾ ಕಂಪನಿಯು 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಉನ್ನತೀಕರಣಗೊಂಡ ಸ್ಕೋಡಾ ಕುಶಾಕ್ ಆಕ್ಟಿವ್

ಹೊಸ ಕಾರು ಸ್ಕೋಡಾ ಬಟರ್ ಪ್ಲೈ ಗ್ರಿಲ್‌ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್‌ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.

ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಉನ್ನತೀಕರಣಗೊಂಡ ಸ್ಕೋಡಾ ಕುಶಾಕ್ ಆಕ್ಟಿವ್

ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಹೊಸ ಕಾರಿನಲ್ಲಿ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಏರ್‌ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಉನ್ನತೀಕರಣಗೊಂಡ ಸ್ಕೋಡಾ ಕುಶಾಕ್ ಆಕ್ಟಿವ್

ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಮಾಂಟೆ ಕಾರ್ಲೊ ಎಡಿಷನ್ ಮಾದರಿಯು ಆಕರ್ಷಕವಾದ ಗ್ರಾಫಿಕ್ಸ್ ಮತ್ತು ಸ್ಪೋರ್ಟಿ ಬ್ಯಾಡ್ಜ್ ಹೊಂದಿದ್ದು, ಸ್ಕೋಡಾ ವಿವಿಧ ಕಾರುಗಳಲ್ಲಿ ಸ್ಪೋರ್ಟಿ ಲುಕ್ ಬಯಸುವ ಗ್ರಾಹಕರಿಗೆ ಇದು ಉತ್ತಮ ಆಯ್ಕೆಯಾಗಿದೆ.

ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಉನ್ನತೀಕರಣಗೊಂಡ ಸ್ಕೋಡಾ ಕುಶಾಕ್ ಆಕ್ಟಿವ್

ಸ್ಟ್ಯಾಂಡರ್ಡ್ ಕುಶಾಕ್ ಮಾದರಿಗಿಂತ ಮಾಂಟೆ ಕಾರ್ಲೊ ಮಾದರಿಯು ಸುಮಾರು ರೂ.70 ಸಾವಿರದಿಂದ ರೂ. 1 ಲಕ್ಷದಷ್ಟು ಹೆಚ್ಚುವರಿ ಬೆಲೆ ಹೊಂದಿದ್ದು, ಬೆಲೆಗೆ ಅನುಗುಣವಾಗಿ ಹೊಸ ಮಾದರಿಯಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ.

ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಉನ್ನತೀಕರಣಗೊಂಡ ಸ್ಕೋಡಾ ಕುಶಾಕ್ ಆಕ್ಟಿವ್

ಹೊಸ ಕಾರಿನ ಒಳಭಾಗವು ಕೂಡಾ ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚು ಆಕರ್ಷಕವಾಗಿದ್ದು, ಬ್ಲ್ಯಾಕ್ ಮತ್ತು ರೂಬಿ ರೆಡ್ ಮೆಟಾಲಿಕ್ ಹೊಂದಿರುವ ಡ್ಯುಯಲ್ ಟೋನ್ ಇಂಟಿರಿಯರ್, ರೆಡ್ ಆಕ್ಸೆಂಟ್‌ಗಳು, ಡ್ಯುಯಲ್ ಟೋನ್ ಆಸನ‌ಗಳು, ರೆಡ್ ಆಂಬಿಯೆಂಟ್, ಅಲ್ಯುಮಿನಿಯಂ ಪೆಡಲ್ಸ್‌ನೊಂದಿಗೆ ರೆಡ್ ಥಿಮ್ಸ್ ಐಷಾರಾಮಿ ಲುಕ್ ನೀಡಲಿದೆ.

ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಉನ್ನತೀಕರಣಗೊಂಡ ಸ್ಕೋಡಾ ಕುಶಾಕ್ ಆಕ್ಟಿವ್

ಕುಶಾಕ್ ಕಾರು ಪ್ರತಿಸ್ಪರ್ಧಿ ಕಾರುಗಳಲ್ಲೇ ಅತಿಹೆಚ್ಚು ಪ್ರೀಮಿಯಂ ಫೀಚರ್ಸ್ ಮತ್ತು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಹೊಂದಿರುವ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಹೊಸ ಕಾರು ಮಾದರಿಯು ಅತಿ ಕಡಿಮೆ ಅವಧಿಯಲ್ಲಿ ಇದುವರೆಗೆ ಸುಮಾರು 30 ಸಾವಿರ ಯುನಿಟ್ ಮಾರಾಟಗೊಂಡಿದೆ.

Most Read Articles

Kannada
Read more on ಸ್ಕೋಡಾ skoda
English summary
Skoda kushaq active variant updated with some safety features
Story first published: Wednesday, August 17, 2022, 21:16 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X