ಮೇ 9ರಂದು ಬಿಡುಗಡೆಯಾಗಲಿದೆ ಸ್ಕೋಡಾ ಕುಶಾಕ್ ಮಾಂಟೆ ಕಾರ್ಲೊ ಸ್ಪೆಷಲ್ ಎಡಿಷನ್
ಸ್ಕೋಡಾ(Skoda) ಕಂಪನಿಯು ತನ್ನ ಹೊಸ ಕುಶಾಕ್ ಮಾದರಿಯು ಮೂಲಕ ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಕುಶಾಕ್ ಮಾದರಿಯಲ್ಲಿ ಶೀಘ್ರದಲ್ಲೇ ವಿಶೇಷ ಆವೃತ್ತಿಯೊಂದನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಒಳಗೊಂಡಿರುವ ಮಾಂಟೆ ಕಾರ್ಲೊ ಎಡಿಷನ್‌ಗಳನ್ನು ಈಗಾಗಲೇ ಪ್ರಮುಖ ಕಾರು ಮಾದರಿಗಳಲ್ಲಿ ಮಾರಾಟ ಮಾಡುತ್ತಿರುವ ಸ್ಕೋಡಾ ಕಂಪನಿಯು ಇದೀಗ ಹೊಸದಾಗಿ ಮಾರುಕಟ್ಟೆ ಪ್ರವೇಶಿಸಿರುವ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೂ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಎಡಿಷನ್ ಅನ್ನು ಸಾಮಾನ್ಯ ಮಾದರಿಯ ಟಾಪ್ ಎಂಡ್ ವೆರಿಯೆಂಟ್‌ಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆ ಮಾಡಲಿದೆ.

ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಹೊಸ ಕಾರು ಮಾದರಿಯು ಆಕರ್ಷಕವಾದ ಗ್ರಾಫಿಕ್ಸ್ ಮತ್ತು ಸ್ಪೋರ್ಟಿ ಬ್ಯಾಡ್ಜ್ ಹೊಂದಿರಲಿದ್ದು, ಸ್ಕೋಡಾ ವಿವಿಧ ಕಾರುಗಳಲ್ಲಿ ಸ್ಪೋರ್ಟಿ ಲುಕ್ ಬಯಸುವ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಿದೆ.

ಸ್ಟ್ಯಾಂಡರ್ಡ್ ಕುಶಾಕ್ ಮಾದರಿಯು ಸದ್ಯ ಆಕ್ಟಿವ್, ಆ್ಯಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸದಾಗಿ ಬಿಡುಗಡೆಯಾಗಲಿರುವ ಮಾಂಟೆ ಕಾರ್ಲೊ ಮಾದರಿಯು ಸ್ಟೈಲ್ ಮಾದರಿಗಿಂತಲೂ ತುಸು ದುಬಾರಿ ಬೆಲೆಯೊಂದಿಗೆ ಹೆಚ್ಚುವರಿಯಾಗಿ ಹೊಸ ಬಣ್ಣದ ಆಯ್ಕೆ ಜೊತೆ ಹೊಸ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪನೋರಮಿಕ್ ಸನ್‌ರೂಫ್, ರೂಫ್ ಲೈನರ್, ರೆಡ್ ಕಾಟ್ರಾಸ್ಟ್ ಸೇರಿದಂತೆ ಮತ್ತಷ್ಟು ಹೊಸ ಫೀಚರ್ಸ್ ಹೊಂದಿರಲಿದೆ.

ಹೊಸ ಕುಶಾಕ್ ಕಾರು ಮಾದರಿಯು ಸದ್ಯ ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿದ್ದು, ಹೊಸ ಕಾರು ಇದುವರೆಗೆ ಸುಮಾರು 25 ಸಾವಿರಕ್ಕೂ ಹೆಚ್ಚು ಯುನಿಟ್‌ಗಳಿಗಾಗಿ ಬುಕಿಂಗ್ ಪಡೆದುಕೊಂಡಿದೆ.

ಕುಶಾಕ್ ಕಾರು ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಕಳೆದ ತಿಂಗಳು ಕೆಲವು ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಆರಂಭಿಕ ಮಾದರಿಯಲ್ಲಿ ಕೆಲವು ಸ್ಟ್ಯಾಂಡರ್ಡ್ ಫೀಚರ್ಸ್ ಅಳವಡಿಕೆಯೊಂದಿಗೆ ಬೆಲೆ ಹೆಚ್ಚಳ ಮಾಡಲಾಗಿದೆ.

ಜೊತೆಗೆ ಪ್ರತಿಸ್ಪರ್ಧಿಗಳಿಂತಲೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಲಿರುವ ಕುಶಾಕ್ ಕಾರು ಮಾದರಿಯು ಬೆಲೆ ಏರಿಕೆಯ ನಂತರ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.19 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದೆ.

ಹೊಸ ಕುಶಾಕ್ ಕಾರಿನಲ್ಲಿ ಸ್ಕೋಡಾ ಕಂಪನಿಯು 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಹೊಸ ಕಾರು ಸ್ಕೋಡಾ ಬಟರ್ ಪ್ಲೈ ಗ್ರಿಲ್‌ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್‌ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.

ಹೊಸ ಕುಶಾಕ್ ಕಾರಿನ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್ ಹೊಂದಿದೆ. ಇದರಲ್ಲಿ ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 10.1 ಇಂಚಿನ ಇನ್ಟೋಟೈನ್‌ಮೆಂಟ್ ಸ್ಕ್ರೀನ್ ಸೌಲಭ್ಯವಿದೆ.

ಹಾಗೆಯೇ ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಮಲ್ಟಿ ಫಂಕ್ಷನಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸನ್‌ರೂಫ್, ಮೈ ಸ್ಕೋಡಾ ಕಾರ್ ಕನೆಕ್ಟ್ ಆ್ಯಪ್, ಸ್ಮಾರ್ಟ್ ಬಾಟಲ್ ಹೋಲ್ಡರ್ ಮತ್ತು ಸ್ಕೋಡಾ ಸೌಂಡ್ ಸಿಸ್ಟಂ ಸೌಲಭ್ಯವಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಹೊಸ ಕಾರಿನಲ್ಲಿ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಏರ್‌ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.


Click it and Unblock the Notifications








