Just In
- 23 min ago
ಮೇಡ್ ಇನ್ ಇಂಡಿಯಾ ಯುದ್ಧ ವಾಹನಗಳ ಅಬ್ಬರ: ಮತ್ತಷ್ಟು ಬಲಿಷ್ಟಗೊಂಡ ಭಾರತೀಯ ಸೇನೆ!
- 2 hrs ago
ವಾರದ ಸುದ್ದಿಗಳು: ಎಕ್ಸ್ಯುವಿ700 ಮಾದರಿಗೆ ಸೇಫರ್ ಚಾಯ್ಸ್ ಪ್ರಶಸ್ತಿ, ಸುರಕ್ಷತೆಯಲ್ಲಿ ಮುಗ್ಗರಿಸಿದ ಕಿಯಾ ಕಾರೆನ್ಸ್..
- 16 hrs ago
ಶೀಘ್ರದಲ್ಲಿ ಜಾರಿಗೆ ಬರಲಿದೆ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳಿಗೆ ಭಾರತ್ ಎನ್ಸಿಎಪಿ ಕ್ರ್ಯಾಶ್ ಟೆಸ್ಟ್
- 17 hrs ago
ಭಾರತದಲ್ಲಿ ಹೊಸ ಕವಾಸಕಿ ನಿಂಜಾ 400 ಸೂಪರ್ಸ್ಪೋರ್ಟ್ ಬೈಕ್ ಬಿಡುಗಡೆ
Don't Miss!
- News
ಶೀಘ್ರವೇ ಭಾರತ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ: ಪಿಯೂಷ್ ಗೋಯಲ್
- Sports
IND vs IRE: ಮೊದಲ ಟಿ20 ಪಂದ್ಯಕ್ಕೂ ಮುನ್ನ ವಿಶ್ವಕಪ್ ಬಗ್ಗೆ ಹಾರ್ದಿಕ್ ಪಾಂಡ್ಯ ಮಹತ್ವದ ಹೇಳಿಕೆ
- Movies
ನವೀನ್ ಸಜ್ಜು ಮೈಸೂರು ಮನೆ ಹೇಗಿದೆ ಗೊತ್ತಾ?
- Technology
LED ಡಿಸ್ಪ್ಲೇ ಹೊಂದಿರುವ ಅತ್ಯುತ್ತಮ ಪವರ್ಬ್ಯಾಂಕ್ಗಳ ಲಿಸ್ಟ್ ಇಲ್ಲಿದೆ!
- Lifestyle
ಜೂನ್ 26 ರಿಂದ ಜುಲೈ 2ರ ವಾರ ಭವಿಷ್ಯ: ಈ ರಾಶಿಯ ವ್ಯಾಪಾರಿಗಳು ಜಾಗರೂಕತೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ
- Finance
ಜೂನ್ 26: ಕಚ್ಚಾತೈಲ ದರ ಚೇತರಿಕೆ, ಭಾರತದಲ್ಲಿ ಇಂಧನ ದರ ಆಗಿಲ್ಲ ಏರಿಕೆ!
- Education
SSC MTS Admit Card 2022 : ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ಸ್ಪೋಟಿ ವಿನ್ಯಾಸ ಮತ್ತು ವಿಶೇಷ ಬಣ್ಣದ ಆಯ್ಕೆ ಹೊಂದಿರುವ ಸ್ಕೋಡಾ ಕುಶಾಕ್ ಮಾಂಟೆ ಕಾರ್ಲೊ ಬಿಡುಗಡೆ
ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಕಂಪ್ಯಾಕ್ಟ್ ಎಸ್‌ಯುವಿ ಕುಶಾಕ್ ಮಾದರಿಯಲ್ಲಿ ಸ್ಪೋರ್ಟಿ ಮಾದರಿಯಾದ ಮಾಂಟೆ ಕಾರ್ಲೊ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15.99 ಲಕ್ಷ ಬೆಲೆ ಹೊಂದಿದೆ.

ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಒಳಗೊಂಡಿರುವ ಮಾಂಟೆ ಕಾರ್ಲೊ ಎಡಿಷನ್‌ಗಳನ್ನು ಈಗಾಗಲೇ ಪ್ರಮುಖ ಕಾರು ಮಾದರಿಗಳಲ್ಲಿ ಮಾರಾಟ ಮಾಡುತ್ತಿರುವ ಸ್ಕೋಡಾ ಕಂಪನಿಯು ಇದೀಗ ಹೊಸದಾಗಿ ಮಾರುಕಟ್ಟೆ ಪ್ರವೇಶಿಸಿರುವ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೂ ಬಿಡುಗಡೆ ಮಾಡಿದ್ದು, ಹೊಸ ಎಡಿಷನ್ ಅನ್ನು ಸಾಮಾನ್ಯ ಮಾದರಿಯ ಟಾಪ್ ಎಂಡ್ ವೆರಿಯೆಂಟ್‌ಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆ ಮಾಡಿದೆ.

ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಹೊಸ ಕಾರು ಮಾದರಿಯು ಆಕರ್ಷಕವಾದ ಗ್ರಾಫಿಕ್ಸ್ ಮತ್ತು ಸ್ಪೋರ್ಟಿ ಬ್ಯಾಡ್ಜ್ ಹೊಂದಿದ್ದು, ಸ್ಕೋಡಾ ವಿವಿಧ ಕಾರುಗಳಲ್ಲಿ ಸ್ಪೋರ್ಟಿ ಲುಕ್ ಬಯಸುವ ಗ್ರಾಹಕರಿಗೆ ಇದು ಉತ್ತಮ ಆಯ್ಕೆಯಾಗಿದೆ.

ಮಾಂಟೆ ಕಾರ್ಲೊ ಆವೃತ್ತಿಯು ಎರಡು ಎಂಜಿನ್ ಆಯ್ಕೆಯೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಗಳನ್ನು ಒಳಗೊಂಡಿದ್ದು, ಆರಂಭಿಕ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.49 ಲಕ್ಷ ಬೆಲೆ ಹೊಂದಿವೆ.
ಕುಶಾಕ್ ಮಾಂಟೆ ಕಾರ್ಲೊ | ಬೆಲೆ |
1.0 ಟಿಎಸ್ಐ ಮ್ಯಾನುವಲ್ | ರೂ. 15.99 ಲಕ್ಷ |
1.0 ಟಿಎಸ್ಐ ಆಟೋಮ್ಯಾಟಿಕ್ | ರೂ. 17.69 ಲಕ್ಷ |
1.5 ಟಿಎಸ್ಐ ಮ್ಯಾನುವಲ್ | ರೂ. 17.89 ಲಕ್ಷ |
1.5 ಟಿಎಸ್ಐ ಡಿಎಸ್‌ಜಿ | ರೂ. 19.49 ಲಕ್ಷ |

ಸ್ಟ್ಯಾಂಡರ್ಡ್ ಕುಶಾಕ್ ಮಾದರಿಗಿಂತ ಮಾಂಟೆ ಕಾರ್ಲೊ ಮಾದರಿಯು ಸುಮಾರು ರೂ.70 ಸಾವಿರದಿಂದ ರೂ. 1 ಲಕ್ಷದಷ್ಟು ಹೆಚ್ಚುವರಿ ಬೆಲೆ ಹೊಂದಿದ್ದು, ಬೆಲೆಗೆ ಅನುಗುಣವಾಗಿ ಹೊಸ ಮಾದರಿಯಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ.

ಮಾಂಟೆ ಕಾರ್ಲೊ ಮಾದರಿಯು ಟೊರ್ನಾಡೊ ರೆಡ್ ಮತ್ತು ಕ್ಯಾಂಡಿ ವೈಟ್ ಎನ್ನುವ ಎರಡು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಬ್ಲ್ಯಾಕ್ಔಟ್ ಫೀಚರ್ಸ್ ಕಾರಿನ ಪ್ರಮುಖ ಆಕರ್ಷಣೆಯಾಗಿದೆ. ಹೊಸ ಕಾರಿನ ಗ್ರಿಲ್, ಬಂಪರ್, ಏರ್ ಇನ್‌ಟೆಕ್, ಫ್ರಂಟ್ ಡಿಫ್ಯೂಸರ್‌ಗಳು ಸ್ಪೋರ್ಟಿ ವಿನ್ಯಾಸವನ್ನು ಹೊಂದಿವೆ.

ಜೊತೆಗೆ ಹೊಸ ಕಾರಿನ ರೂಫ್ ಕಾರ್ಬನ್ ಸ್ಟ್ರಿಲ್ ಪೇಟಿಂಗ್ ಸೌಲಭ್ಯವನ್ನು ಪಡೆದುಕೊಂಡಿದ್ದು, ಸ್ಕೋಡಾ ಜನಪ್ರಿಯ ಸ್ಪೋರ್ಟ್ ಕಾರು ಸೂಪರ್ಬ್ ವಿಆರ್‌ಎಸ್ ಮಾದರಿಯಲ್ಲಿರುವಂತೆ ಹೊಸ ಕಾರಿನಲ್ಲಿ 17 ಇಂಚಿನ ವೆಗಾ ಅಲಾಯ್ ವ್ಹೀಲ್ ಜೋಡಣೆ ಮಾಡಲಿದೆ.

ಇದರೊಂದಿಗೆ ಹೊಸ ಕಾರಿನ ಫೆಂಡರ್ ಮೇಲೆ ಮಾಂಟೆ ಕಾರ್ಲೊ ಬ್ಯಾಡ್ಜಿಂಗ್ ನೀಡಲಾಗಿದ್ದು, ಫ್ರಂಟ್ ಡಿಸ್ಕ್ ಬ್ರೇಕ್‌ನಲ್ಲಿ ರೆಡ್ ಕ್ಯಾಲಿಪರ್, ಡ್ಯುಯಲ್ ಟೋನ್ ಟೈಲ್‌ಗೇಟ್ ಸ್ಪಾಯ್ಲರ್ ಸೇರಿದಂತೆ ಹಲವಾರು ಸ್ಪೋರ್ಟಿ ವಿನ್ಯಾಸಗಳನ್ನು ಹೊಂದಿದೆ.

ಇನ್ನು ಹೊಸ ಕಾರಿನ ಒಳಭಾಗವು ಕೂಡಾ ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚು ಆಕರ್ಷಕವಾಗಿದ್ದು, ಬ್ಲ್ಯಾಕ್ ಮತ್ತು ರೂಬಿ ರೆಡ್ ಮೆಟಾಲಿಕ್ ಹೊಂದಿರುವ ಡ್ಯುಯಲ್ ಟೋನ್ ಇಂಟಿರಿಯರ್, ರೆಡ್ ಆಕ್ಸೆಂಟ್‌ಗಳು, ಡ್ಯುಯಲ್ ಟೋನ್ ಆಸನಗಳು, ರೆಡ್ ಆಂಬಿಯೆಂಟ್, ಅಲ್ಯುಮಿನಿಯಂ ಪೆಡಲ್ಸ್‌ನೊಂದಿಗೆ ರೆಡ್ ಥಿಮ್ಸ್ ಐಷಾರಾಮಿ ಲುಕ್ ನೀಡಲಿದೆ.

ಇದರೊಂದಿಗೆ ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆ ಎಂಜಿನ್ ಆಯ್ಕೆ ನೀಡಲಾಗಿದ್ದು, 1.0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದೆ.

ಹೊಸ ಕಾರಿನ ಎರಡು ಮಾದರಿಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.

ಹೊಸ ಕಾರಿನಲ್ಲಿ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಆರು ಏರ್‌ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಸ್ಟ್ಯಾಂಡರ್ಡ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.79 ಲಕ್ಷ ಬೆಲೆ ಹೊಂದಿದ್ದು, ಇದೀಗ ಹೊಸದಾಗಿ ಬಿಡುಗಡೆ ಮಾಡಲಾಗಿರುವ ಮಾಂಟೆ ಕಾರ್ಲೊ ತುಸು ದುಬಾರಿ ಬೆಲೆಯೊಂದಿಗೆ ಮಾರಾಟಗೊಳ್ಳಲಿದೆ.