ಕುಶಾಕ್ ಕಾರು ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಸ್ಕೋಡಾ

ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ಕುಶಾಕ್ ಆವೃತ್ತಿಯಲ್ಲಿ ಪ್ರಮುಖ ಬದಲಾವಣೆಗಳನ್ನು ಪರಿಚಯಿಸಿದ್ದು, ಸ್ಟೈಲ್ ರೂಪಾಂತರದ 2 ಏರ್‌ಬ್ಯಾಗ್ ಹೊಂದಿರುವ ಮಾದರಿಯನ್ನು ಸ್ಥಗಿತಗೊಳಿಸಿದೆ.

ಕುಶಾಕ್ ಕಾರು ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಸ್ಕೋಡಾ

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿಯು ಸದ್ಯ ಮಾರುಕಟ್ಟೆಯಲ್ಲಿ ಆಕ್ಟಿವಾ, ಆಂಬಿಷನ್, ಸ್ಟೈಲ್ ಎನ್ನುವ ಮೂರು ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಕಂಪನಿಯು ಇದೀಗ ಸ್ಟೈಲ್ ಮಾದರಿಯಲ್ಲಿನ ಡ್ಯುಯಲ್ ಏರ್‌ಬ್ಯಾಗ್ ಹೊಂದಿರುವ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿದೆ. ಕಳೆದ ಕೆಲ ತಿಂಗಳ ಹಿಂದೆ ಸ್ಟೈಲ್ ಮಾದರಿಯನ್ನು 6 ಏರ್‌ಬ್ಯಾಗ್ ಸೌಲಭ್ಯದೊಂದಿಗೆ ಉನ್ನತೀಕರಿಸಿದ್ದು, ಡ್ಯುಯಲ್ ಏರ್‌ಬ್ಯಾಗ್ ಮಾದರಿಯ ಮಾರಾಟವನ್ನು ಸ್ಥಗಿತಗೊಳಿಸಿದೆ.

ಕುಶಾಕ್ ಕಾರು ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಸ್ಕೋಡಾ

ಸ್ಕೋಡಾ ಕಂಪನಿಯು ಆರಂಭದಲ್ಲಿ ಸ್ಟೈಲ್ ಮಾದರಿಯನ್ನು ಡ್ಯುಯಲ್ ಏರ್‌ಬ್ಯಾಗ್ ಸೌಲಭ್ಯದೊಂದಿಗೆ ಮಾತ್ರವೇ ಬಿಡುಗಡೆ ಮಾಡಿತ್ತು. ಆದರೆ ಗ್ರಾಹಕರ ಬೇಡಿಕೆ ಮೇರೆಗೆ ಹೈ ಎಂಡ್ ಮಾದರಿಯನ್ನು ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್‌ನೊಂದಿಗೆ ಉನ್ನತೀಕರಿಸಿರುವ ಕಂಪನಿಯು ಡ್ಯುಯಲ್ ಏರ್‌ಬ್ಯಾಗ್ ಹೊಂದಿದ್ದ ಸ್ಟಾಕ್ ಮಾದರಿಯನ್ನು ಇದೀಗ ಅಧಿಕೃತವಾಗಿ ಸ್ಥಗಿತಗೊಳಿಸಿದೆ.

ಕುಶಾಕ್ ಕಾರು ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಸ್ಕೋಡಾ

ಸ್ಟೈಲ್ ಮಾದರಿಯಲ್ಲಿ 6 ಏರ್‌ಬ್ಯಾಗ್ ಸೌಲಭ್ಯದ ಹೊರತಾಗಿ ಆಕ್ಟಿವಾ, ಆಂಬಿಷನ್ ವೆರಿಯೆಂಟ್‌ಗಳಲ್ಲಿ ಡ್ಯುಯಲ್ ಏರ್‌ಬ್ಯಾಗ್ ಹೊಂದಿರುವ ಮಾದರಿಗಳು ಖರೀದಿಗೆ ಲಭ್ಯವಿದ್ದು, ಹೈ ಎಂಡ್ ಮಾದರಿಗಳಲ್ಲಿ ಮಾತ್ರ ಹೆಚ್ಚಿನ ಸುರಕ್ಷತೆ ಒದಗಿಸಲಾಗಿದೆ.

ಕುಶಾಕ್ ಕಾರು ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಸ್ಕೋಡಾ

ಕುಶಾಕ್ ಕಾರು ಮಾದರಿಯು ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿದ್ದು, ಹೊಸ ಕಾರು ಇದುವರೆಗೆ ಸುಮಾರು 25 ಸಾವಿರಕ್ಕೂ ಹೆಚ್ಚು ಯುನಿಟ್‌ಗಳಿಗಾಗಿ ಬುಕ್ಕಿಂಗ್ ಪಡೆದುಕೊಂಡಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.19 ಲಕ್ಷ ಬೆಲೆ ಪಡೆದುಕೊಂಡಿದೆ.

ಕುಶಾಕ್ ಕಾರು ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಸ್ಕೋಡಾ

ಕುಶಾಕ್ ಕಾರು ಪ್ರತಿಸ್ಪರ್ಧಿ ಕಾರುಗಳಲ್ಲೇ ಅತಿಹೆಚ್ಚು ಪ್ರೀಮಿಯಂ ಫೀಚರ್ಸ್ ಮತ್ತು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಹೊಂದಿರುವ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಕಾರಿನ ಟಾಪ್ ಎಂಡ್ ಮಾದರಿಗೆ ಹೆಚ್ಚಿನ ಮಟ್ಟದ ಬೇಡಿಕೆ ದಾಖಲಾಗಿದೆ.

ಕುಶಾಕ್ ಕಾರು ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಸ್ಕೋಡಾ

ಪ್ರತಿಸ್ಪರ್ಧಿಗಳಿಂತಲೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಿರುವ ಕುಶಾಕ್ ಕಾರು ಮಾದರಿಯು ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದೆ.

ಕುಶಾಕ್ ಕಾರು ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಸ್ಕೋಡಾ

ಹೊಸ ಕಾರಿನ ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, ಆಟೋಮ್ಯಾಟಿಕ್ ಮಾದರಿಗಳು ಉತ್ತಮ ಬೇಡಿಕೆ ಹೊಂದಿವೆ.

ಕುಶಾಕ್ ಕಾರು ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಸ್ಕೋಡಾ

ಹೊಸ ಕಾರು ಸ್ಕೋಡಾ ಬಟರ್ ಪ್ಲೈ ಗ್ರಿಲ್‌ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್‌ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.

ಕುಶಾಕ್ ಕಾರು ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಸ್ಕೋಡಾ

ಕುಶಾಕ್ ಕಾರಿನ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್‌ ಹೊಂದಿದೆ. ಇದರಲ್ಲಿ ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 10.1 ಇಂಚಿನ ಇನ್ಟೋಟೈನ್‌ಮೆಂಟ್ ಸ್ಕ್ರೀನ್ ಸೌಲಭ್ಯವಿದೆ.

ಕುಶಾಕ್ ಕಾರು ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಸ್ಕೋಡಾ

ಜೊತೆಗೆ ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಮಲ್ಟಿ ಫಂಕ್ಷನಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸನ್‌ರೂಫ್, ಮೈ ಸ್ಕೋಡಾ ಕಾರ್ ಕನೆಕ್ಟ್ ಆ್ಯಪ್, ಸ್ಮಾರ್ಟ್ ಬಾಟಲ್ ಹೋಲ್ಡರ್ ಮತ್ತು ಸ್ಕೋಡಾ ಸೌಂಡ್ ಸಿಸ್ಟಂ ಸೌಲಭ್ಯವಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಕುಶಾಕ್ ಕಾರು ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಸ್ಕೋಡಾ

ಇದರೊಂದಿಗೆ ಕಂಪನಿಯು ಕುಶಾಕ್ ಕಾರಿನ ಎಂಟ್ರಿ ಲೆವಲ್ ಮಾದರಿಗಳಲ್ಲಿ ಆಟೋಮ್ಯಾಟಿಕ್ ವರ್ಷನ್‌ಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ಶೀಘ್ರದಲ್ಲೇ ಹೊಸ ಮಾದರಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಹೊಸ ಕಾರಿನ ಆಕ್ಟಿವಾ ವೆರಿಯೆಂಟ್‌ನಲ್ಲಿ ಆಟೋಮ್ಯಾಟಿಕ್ ಮಾದರಿಯನ್ನು ಪರಿಚಯಿಸುತ್ತಿದೆ.

ಕುಶಾಕ್ ಕಾರು ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಸ್ಕೋಡಾ

ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ತನ್ನ ಕಾರು ಮಾದರಿಗಳಲ್ಲೂ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಒಳಗೊಂಡಿರುವ ಮಾಂಟೆ ಕಾರ್ಲೊ ಎಡಿಷನ್ ಮಾರಾಟ ಹೊಂದಿರುವ ಸ್ಕೋಡಾ ಕಂಪನಿಯು ಇದೀಗ ಹೊಸದಾಗಿ ಮಾರುಕಟ್ಟೆ ಪ್ರವೇಶಿಸಿರುವ ಕುಶಾಕ್ ಮಾದರಿಯಲ್ಲೂ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಎಡಿಷನ್‌ನಲ್ಲಿ ಸ್ಟ್ಯಾಂಡರ್ಡ್ ಟಾಪ್ ಎಂಡ್ ವೆರಿಯೆಂಟ್‌ಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಜೊತೆ ಸ್ಪೋರ್ಟಿ ಬ್ಯಾಡ್ಜ್ ಹೊಂದಿರಲಿದೆ.

ಕುಶಾಕ್ ಕಾರು ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಸ್ಕೋಡಾ

ಮಾಂಟೆ ಕಾರ್ಲೊ ವಿಶೇಷ ಆವೃತ್ತಿಗಳು ಸ್ಕೋಡಾ ವಿವಿಧ ಕಾರುಗಳಲ್ಲಿ ಸ್ಪೋರ್ಟಿ ಲುಕ್ ಬಯಸುವ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಿದ್ದು, ಇದೀಗ ಕುಶಾಕ್ ಮಾದರಿಯಲ್ಲೂ ಹೊಸ ಎಡಿಷನ್ ಬಿಡುಗಡೆಗೆ ಸಿದ್ದಗೊಂಡಿದೆ.

More from DriveSpark

Article Published On: Wednesday, February 9, 2022, 13:35 [IST]
English summary
Skoda kushaq style variant with 2 airbags discontinued details
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+