Just In
Don't Miss!
- News
ಪಲ್ಲವಿ ಡೇ ಬಳಿಕ ಮತ್ತೊಬ್ಬ ಯುವ ರೂಪದರ್ಶಿ ಆತ್ಮಹತ್ಯೆ
- Sports
ಮಹಿಳಾ ಟಿ20 ಚಾಲೆಂಜ್: ವೆಲಾಸಿಟಿ ವಿರುದ್ಧ ಗೆದ್ದ ಟ್ರೈಲ್ಬ್ಲೇಜರ್ಸ್, ಆದ್ರೂ ಫೈನಲ್ ಮಿಸ್
- Finance
ಮೇ 26ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
ಬಾಲಕೃಷ್ಣ 107ನೇ ಸಿನಿಮಾದ ಟೈಟಲ್ 'ಜೈ ಬಾಲಯ್ಯ'
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಬಿಡುಗಡೆ! ವಿಶೇಷತೆ ಏನು?
- Lifestyle
ಕಿಚನ್ ಟಿಪ್ಸ್: ಫ್ರಿಡ್ಜ್ನಲ್ಲಿ ಆಹಾರಗಳನ್ನು ಹೀಗೆ ಇಟ್ಟರೆ ಆರೋಗ್ಯಕ್ಕೆ ಕುತ್ತು ಎಚ್ಚರ..!
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸೆಮಿಕಂಡಕ್ಟರ್ ಕೊರತೆ: ಕುಶಾಕ್ ಕಾರಿನ ಪ್ರೀಮಿಯಂ ಫೀಚರ್ಸ್ ಕೈಬಿಟ್ಟ ಸ್ಕೋಡಾ
ಸ್ಕೋಡಾ ಕಂಪನಿಯು ಕುಶಾಕ್ ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಹಲವು ದಾಖಲೆಯನ್ನು ತನ್ನದಾಗಿಸಿಕೊಂಡಿದ್ದು, ಹೊಸ ಕಾರಿನ ಬೇಡಿಕೆಯು ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಕಂಪನಿಗೆ ಸೆಮಿಕಂಡಕ್ಟರ್ ಕೊರತೆ ತೀವ್ರವಾಗಿ ಕಾಡುತ್ತಿದೆ.

ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಎಲೆಕ್ಟ್ರಾನಿಕ್ ಬಿಡಿಭಾಗಗಳ ಕೊರತೆ ಆಟೋ ಉದ್ಯಮಕ್ಕೆ ಭಾರೀ ಹೊಡೆತ ನೀಡುತ್ತಿದ್ದು, ಹೊಸ ತಂತ್ರಜ್ಞಾನ ಪ್ರೇರಿತ ವಾಹನಗಳ ಉತ್ಪಾದನೆಗೆ ಅವಶ್ಯವಾಗಿರುವ ಎಲೆಕ್ಟ್ರಾನಿಕ್ ಚಿಪ್(ಸೆಮಿಕಂಡಕ್ಟರ್) ಕೊರತೆಯು ಜಾಗತಿಕ ಆಟೋ ಉದ್ಯಮದ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತಿದೆ.

ಎಲೆಕ್ಟ್ರಾನಿಕ್ ಚಿಪ್ ಕೊರತೆಯಿಂದಾಗಿ ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ ಪ್ರಮುಖ ವಾಹನ ಉತ್ಪಾದನಾ ಕಂಪನಿಗಳಿಗೂ ಬಿಸಿ ತಟ್ಟಿದ್ದು, ಪ್ರಮುಖ ವಾಹನಗಳ ಉತ್ಪಾದನಾ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವುದು ಆಟೋ ಉತ್ಪಾದನಾ ಕಂಪನಿಗಳ ಆದಾಯಕ್ಕೆ ಹೊಡೆತ ನೀಡುತ್ತದೆ.

ಚೀನಿ ಮಾರುಕಟ್ಟೆಯಿಂದ ಹೆಚ್ಚಿನ ಪ್ರಮಾಣದಲ್ಲಿ ಆಮದುಗೊಳ್ಳುತ್ತಿದ್ದ ಎಲೆಕ್ಟ್ರಾನಿಕ್ ಚಿಪ್ ಪ್ರಮಾಣವನ್ನು ಕಡಿತಗೊಳಿಸುತ್ತಿರುವುದರಿಂದ ಇತರೆ ದೇಶಗಳಲ್ಲಿನ ಉತ್ಪಾದನಾ ಲಭ್ಯತೆ ಆಧರಿಸಿ ಎಲೆಕ್ಟ್ರಾನಿಕ್ ಬಿಡಿಭಾಗಗಳ ಕೊರತೆಯೂ ಹೆಚ್ಚಳವಾಗುತ್ತಿದ್ದು, ಎಲೆಕ್ಟ್ರಾನಿಕ್ ಚಿಪ್ಗಳಿಲ್ಲದೆ ಪ್ರಮುಖ ಕಾರು ಕಂಪನಿಯು ಉತ್ಪಾದನೆಯನ್ನೇ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿವೆ.

ಎಲೆಕ್ಟ್ರಾನಿಕ್ ಚಿಪ್ ಇಲ್ಲದೆ ಕಾರಿನ ಪ್ರಮುಖ ಎಲೆಕ್ಟ್ರಾನಿಕ್ ಸಾಧನಗಳನ್ನು ಜೋಡಿಸಲು ಸಾಧ್ಯವೇ ಇಲ್ಲ ಎನ್ನಬಹುದು. ಹೊಸ ಕಾರಿನಲ್ಲಿರುವ ಡಿಸ್ ಪ್ಲೇ, ಸ್ಪೀಕರ್, ಸ್ಟ್ಯಾಬಿಲಿಟಿ ಕಂಟ್ರೋಲ್, ಲೈಟಿಂಗ್, ಆಟೋ ಫೋಲ್ಡಿಂಗ್ ಒಆರ್ವಿಎಂ ಮತ್ತು ಕಾರ್ ಕನೆಕ್ಟ್ ಫೀಚರ್ಸ್ ಸೇರಿ ಪ್ರಮುಖ ತಾಂತ್ರಿಕ ಸಾಧನಗಳು ಕಾರ್ಯನಿರ್ವಹಿಸಲು ಸೆಮಿ ಕಂಡಕ್ಟರ್ ಅವಶ್ಯವಾಗಿವೆ.

ಕೋವಿಡ್ ಪರಿಣಾಮ ಬಿಡಿಭಾಗಗಳ ಪೂರೈಕೆಯ ಸರಪಳಿಯಲ್ಲಿ ಆಗಿರುವ ಸಮಸ್ಯೆಯೇ ಎಲೆಕ್ಟ್ರಾನಿಕ್ ಚಿಪ್ ಕೊರತೆಗೆ ಪ್ರಮುಖ ಕಾರಣವಾಗಿದ್ದು, ಆಟೋ ಉತ್ಪಾದನಾ ಕಂಪನಿಗಳಿಗೆ ಪೂರೈಕೆಯಾಗಬೇಕಿದ್ದ ಹೆಚ್ಚಿನ ಪ್ರಮಾಣದ ಎಲೆಕ್ಟ್ರಾನಿಕ್ ಚಿಪ್ ಸ್ಟಾಕ್ ಇದೀಗ ಹೆಚ್ಚಿನ ಪ್ರಮಾಣದಲ್ಲಿ ಲ್ಯಾಪ್ಟಾಪ್, ಮೊಬೈಲ್ಗಳು ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನ ಉತ್ಪಾದನೆಗೆ ಹೆಚ್ಚಿನ ಮಟ್ಟದಲ್ಲಿ ಪೂರೈಕೆಯಾಗುತ್ತಿದೆ.

ಹೀಗಾಗಿ ಎಲೆಕ್ಟ್ರಾನಿಕ್ ಚಿಪ್ ಪೂರೈಕೆಯಲ್ಲಿ ಆಗುತ್ತಿರುವ ವಿಳಂಬವು ವಿಶ್ವಾದ್ಯಂತ ಪ್ರಮುಖ ಕಾರು ಕಂಪನಿಗಳಿಗೆ ಹೊಡೆತ ನೀಡುತ್ತಿದ್ದು, ಭಾರತದಲ್ಲೂ ದಿನಂಪ್ರತಿ ಸಾವಿರಾರು ಕಾರುಗಳನ್ನು ಉತ್ಪಾದಿಸುವ ಪ್ರಮುಖ ಕಾರುಗಳ ಉತ್ಪಾದನೆ ಪ್ರಮಾಣದಲ್ಲಿ ಕಳೆದ ಒಂದು ವರ್ಷದಿಂದ ಸತತ ಹಿನ್ನಡೆ ಅನುಭವಿಸುತ್ತಿವೆ.

ಎಲೆಕ್ಟ್ರಾನಿಕ್ ಚಿಪ್ ಅಗತ್ಯ ಪ್ರಮಾಣದ ಸ್ಟಾಕ್ ಇಲ್ಲದಿರುವ ಕಾರಣಕ್ಕೆ ತನ್ನ ಪ್ರಮುಖ ಕಾರು ಉತ್ಪಾದನಾ ಘಟಕಗಳು ಕೇವಲ ಒಂದೇ ಶಿಫ್ಟ್ ಮೂಲಕ ಉತ್ಪಾದನೆಯನ್ನು ಕೈಗೊಳ್ಳುತ್ತಿದ್ದು, ಇದೇ ಕಾರಣಕ್ಕೆ ಫೋಕ್ಸ್ವ್ಯಾಗನ್ ಮತ್ತು ಸ್ಕೋಡಾ ಕಂಪನಿಯು ತಮ್ಮ ಹೊಸ ಕಾರುಗಳಾದ ಕುಶಾಕ್ ಮತ್ತು ಟೈಗುನ್ ಕಾರುಗಳ ಆಟೋ ಫೋಲ್ಡಿಂಗ್ ಒಆರ್ವಿಎಂ ಸೌಲಭ್ಯವನ್ನುತೆಗೆದುಹಾಕಿ ಮ್ಯಾನುವಲ್ ಮಾದರಿಯನ್ನು ಜೋಡಣೆ ಮಾಡಿದೆ.

ಸೆಮಿಕಂಡಕ್ಟರ್ಗಳ ಕೊರತೆಯಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕಂಪನಿಯ ಸಿಇಒ ಜಾಕ್ ಹೋಲಿಸ್ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ಆಟೋ ಫೋಲ್ಡಿಂಗ್ ಒಆರ್ವಿಎಂ ಹೊರತುಪಡಿಸಿ ಇತರೆ ವೈಶಿಷ್ಟ್ಯಗಳನ್ನು ಉಳಿಸಿಕೊಳ್ಳಲಾಗಿದೆ.

ಇನ್ನು ಸ್ಕೋಡಾ ಕಂಪನಿಯು ಭಾರತದಲ್ಲಿ ಕುಶಾಕ್ ಕಾರು ಮಾದರಿಯೊಂದಿಗೆ ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಬಿಡುಗಡೆಯ ನಂತರ ಕಂಪನಿಯು ಕುಶಾಕ್ ಕಾರಿನ ಬೆಲೆಯಲ್ಲಿ ಮೂರನೇ ಬಾರಿಗೆ ಹೆಚ್ಚಳ ಮಾಡಿದೆ.

ಕುಶಾಕ್ ಕಾರು ಮಾದರಿಯು ಪ್ರೀಮಿಯಂ ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿದ್ದು, ಹೊಸ ಕಾರು ಇದುವರೆಗೆ ಸುಮಾರು 20 ಸಾವಿರಕ್ಕೂ ಹೆಚ್ಚು ಯುನಿಟ್ಗಳಿಗಾಗಿ ಬುಕ್ಕಿಂಗ್ ಪಡೆದುಕೊಂಡಿದೆ. ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಪ್ರಮುಖ ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಹೊಸ ಬಿಡಿಭಾಗಗಳ ಪರಿಣಾಮ ಕಾರಿನ ಬೆಲೆಯಲ್ಲಿ ಶೇ.1 ರಿಂದ ಶೇ.1.50 ರಷ್ಟು ಹೆಚ್ಚಿಸಲಾಗಿದೆ.

ಸ್ಕೋಡಾ ಕಂಪನಿಯು ಬಿಡುಗಡೆ ಮಾಡಿರುವ ಕುಶಾಕ್ ಕಾರಿನ ಹೊಸ ದರಪಟ್ಟಿಯಲ್ಲಿ ಆರಂಭಿಕ ಆವೃತ್ತಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 10.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.19 ಲಕ್ಷ ಬೆಲೆ ಪಡೆದುಕೊಂಡಿದ್ದು,ಹೊಸ ವರ್ಷ ಮತ್ತು ಸಂಕ್ರಾಂತಿ ಹಬ್ಬದ ವಿಶೇಷವಾಗಿ ಕಾರು ಖರೀದಿಯಲ್ಲಿರುವ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ.

ಹೊಸ ದರ ಪಟ್ಟಿಯಲ್ಲಿ ಕುಶಾಕ್ ಕಾರು ಮಾದರಿಯು ರೂ. 19 ಸಾವಿರದಿಂದ ರೂ. 29 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿದ್ದು, ಹೊಸ ಕಾರು ಕಳೆದ ಜೂನ್ನಲ್ಲಿ ಬಿಡುಗಡೆಯ ನಂತರ ಇದು ಮೂರನೇ ಬಾರಿಗೆ ಬೆಲೆ ಹೆಚ್ಚಳವಾಗಿದೆ.

ಕುಶಾಕ್ ಕಾರು ಪ್ರತಿಸ್ಪರ್ಧಿ ಕಾರುಗಳಲ್ಲೇ ಅತಿಹೆಚ್ಚು ಪ್ರೀಮಿಯಂ ಫೀಚರ್ಸ್ ಮತ್ತು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಹೊಂದಿರುವ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಹೊಸ ಕಾರು ಮಾದರಿಯು ಅತಿ ಕಡಿಮೆ ಅವಧಿಯಲ್ಲಿ 20 ಸಾವಿರ ಬುಕ್ಕಿಂಗ್ ಗುರಿತಲುಪಿದೆ.

ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದೆ. ಹೊಸ ಕಾರಿನ ಪ್ರತಿ ವೆರಿಯೆಂಟ್ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್ಜಿ ಗೇರ್ಬಾಕ್ಸ್ ಆಯ್ಕೆ ಹೊಂದಿದ್ದು, ಆಟೋಮ್ಯಾಟಿಕ್ ಮಾದರಿಗಳು ಉತ್ತಮ ಬೇಡಿಕೆ ಹೊಂದಿವೆ.